ಬಿಡುಗಡೆ ಆಗಿದೆ 'ವಿವೋ V21s' ಸ್ಮಾರ್ಟ್‌ಫೋನ್!..ಸೆಲ್ಫಿ ಪ್ರಿಯರು ಫುಲ್ ಖುಷ್!
ವಿವೋ ಮೊಬೈಲ್ ಸಂಸ್ಥೆಯು ಭಿನ್ನ ಶ್ರೇಣಿಯ ಫೋನ್‌ಗಳ ಮೂಲಕ ದೇಶಿಯ ಮಾರುಕಟ್ಟೆಯಲ್ಲಿ ಸದ್ದು ಮಾಡಿದೆ. ಮುಖ್ಯವಾಗಿ ಕ್ಯಾಮೆರಾ ಹಾಗೂ ಅಧಿಕ ಬ್ಯಾಟರಿ ಬ್ಯಾಕ್ಅಪ್ ಫೀಚರ್ಸ್‌ಗಳಿಂದ ಗ್ರಾಹಕರನ್ನು ಸ್ಮಾರ್ಟ್‌ಫೋನ್‌ಗಳಿಂದ ಕಂಪೆನಿ ಜನಪ್ರಿಯ ಪಡೆದಿದೆ. ಈಗಾಗಲೇ ವಿವೋ ಸಂಸ್ಥೆಯ ಹಲವು ಸ್ಮಾರ್ಟ್‌ಫೋನ್‌ಗಳು ಗ್ರಾಹಕರ ಗಮನ ಸೆಳೆದಿವೆ. ಇದೀಗ ವಿವೋ ಸಂಸ್ಥೆಯು ನೂತನವಾಗಿ ವಿವೋ V21s ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದೆ.

ಹೌದು, ವಿವೋ ಕಂಪೆನಿಯು ಮಾರುಕಟ್ಟೆಗೆ ಹೊಸದಾಗಿ ವಿವೋ V21s ಸ್ಮಾರ್ಟ್‌ಫೋನ್ ಅನ್ನು ಪರಿಚಯಿಸಿದೆ. ಈ ಸ್ಮಾರ್ಟ್‌ಫೋನ್ 90Hz ರಿಫ್ರೆಶ್ ರೇಟ್ ಹೊಂದಿದ್ದು, ಮೀಡಿಯಾ ಟೆಕ್ ಡೈಮೆನ್ಸಿಟಿ 800 ಪ್ರೊಸೆಸರ್ ಅನ್ನು ಒಳಗೊಂಡಿದೆ. ಜೊತೆಗೆ ಟ್ರಿಪಲ್ ಕ್ಯಾಮೆರಾ ರಚನೆಯನ್ನು ಪಡೆದಿದ್ದು, ಮುಖ್ಯ ಕ್ಯಾಮೆರಾವು 64 ಮೆಗಾ ಪಿಕ್ಸಲ್ ಸಾಮರ್ಥ್ಯದಲ್ಲಿದೆ. ಇನ್ನು ಈ ಫೋನ್ ಡಾರ್ಕ್ ಬ್ಲೂ ಮತ್ತು ಕಲರ್‌ಫುಲ್ ಬಣ್ಣಗಳ ಆಯ್ಕೆಯಲ್ಲಿ ಲಭ್ಯ. ಹಾಗಾದರೆ ವಿವೋ V21s ಸ್ಮಾರ್ಟ್‌ಫೋನ್ ಇತರೆ ಯಾವೆಲ್ಲಾ ಫೀಚರ್ಸ್ ಪಡೆದಿದೆ ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ವಿವೋ V21s ಸ್ಮಾರ್ಟ್‌ಫೋನ್ 6.44 ಇಂಚಿನ ಫುಲ್ ಹೆಚ್‌ಡಿ ಪ್ಲಸ್ AMOLED ಡಿಸ್‌ಪ್ಲೇ ಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 2,404 x 1,080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯ ವನ್ನು ಪಡೆದುಕೊಂಡಿದೆ. ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಅನ್ನು ಬೆಂಬಲಿಸಲಿದ್ದು, HDR10+ ಸೌಲಭ್ಯವನ್ನು ಒಳಗೊಂಡಿದೆ. ಜೊತೆಗೆ ಇನ್ ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್ ಅನ್ನು ಪಡೆದಿದೆ.

ಪ್ರೊಸೆಸರ್ ಕಾರ್ಯವೈಖರಿ ಏನು?
ವಿವೋ V21s ಸ್ಮಾರ್ಟ್‌ಫೋನ್ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 800 ಪ್ರೊಸೆಸರ್ ಅನ್ನು ಒಳಗೊಂಡಿದೆ. ಹಾಗೆಯೇ ಈ ಫೋನ್ ಫನ್‌ಟಚ್ OS 12 ಬೆಂಬಲಿತ ಆಂಡ್ರಾಯ್ಡ್ 12 ಓಎಸ್ ನಲ್ಲಿ ಕಾರ್ಯನಿರ್ವಹಿಸುತ್ತದೆ. ಜೊತೆಗೆ 4GB RAM ಮತ್ತು 8GB RAM ಹಾಗೂ 128GB ವೇರಿಯಂಟ್ ಆಯ್ಕೆಗಳನ್ನು ಈ ಫೋನ್ ಪಡೆದಿದೆ.

ಕ್ಯಾಮೆರಾ ಸೆಟ್‌ಅಪ್ ಯಾವುದು?
ವಿವೋ V21s ಸ್ಮಾರ್ಟ್‌ಫೋನ್ ತ್ರಿವಳಿ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದ್ದು, ಅನ್ನು ಒಳಗೊಂಡಿದೆ. ಎರಡನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದ್ದು, ಇದಲ್ಲದೆ ಮೂರನೇ ಕ್ಯಾಮೆರಾವು 2 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಇನ್ನು ಸೆಲ್ಫಿ ಕ್ಯಾಮೆರಾವು 44 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯವನ್ನು ಹೊಂದಿದೆ. ಇದ್ರೊಂದಿಗೆ ಎಲ್‌ಇಡಿ ಫ್ಲ್ಯಾಶ್ ಸೌಲಭ್ಯವನ್ನು ಪಡೆದಿದೆ. ಸ

ಬ್ಯಾಟರಿ ಬ್ಯಾಕ್‌ಅಪ್ ಎಷ್ಟಿದೆ?
ವಿವೋ V21s ಸ್ಮಾರ್ಟ್‌ಫೋನ್ 4,000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 33W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್-ಸಿಮ್, 5G, ವೈಫೈ, ಬ್ಲೂಟೂತ್ 5.1, NFC, GPS ಮತ್ತು USB ಟೈಪ್ C ಪೋರ್ಟ್ ಸೇರಿವೆ. ಹಾಗೆಯೇ ಸ್ಮಾರ್ಟ್‌ಫೋನ್ 177ಗ್ರಾಂ ತೂಕ ಪಡೆದಿದ್ದು, 159.68 X 73.90 X 7.39mm ಸುತ್ತಳತೆ ಹೊಂದಿದೆ.

ಬೆಲೆ ಮತ್ತು ಲಭ್ಯತೆ
ವಿವೋ V21s ಸ್ಮಾರ್ಟ್‌ಫೋನ್ ಥೈವಾನ್‌ನಲ್ಲಿ NTD 11,490 (ಭಾರತದಲ್ಲಿ ಅಂದಾಜು 30,000ರೂ.) ಆಗಿದೆ. ಇನ್ನು ಈ ಫೋನ್ ಡಾರ್ಕ್ ಬ್ಲೂ ಮತ್ತು ಕಲರ್‌ಫುಲ್ ಬಣ್ಣಗಳ ಆಯ್ಕೆಯಲ್ಲಿ ಲಭ್ಯ.


Click it and Unblock the Notifications








