Just In
Don't Miss
- News
ಸರಕಾರಿ ಡಿಜಿಟಲ್ ಕರೆನ್ಸಿ: ಅಳೆದು ತೂಗುತ್ತಿರುವ ಆರ್ಬಿಐ
- Sports
"ಇಂಥಾ ಆಟಗಾರರು, ಇಂಥಾ ಅಭಿಮಾನಿಗಳಿಂದಾಗಿ ಹೆಮ್ಮೆಯಾಗುತ್ತಿದೆ": ಸೋತ ಬಳಿಕ ಆರ್ಸಿಬಿ ನಾಯಕನ ಭಾವುಕ ಮಾತು!
- Finance
ಕಾರು, ಬೈಕು ಖರೀದಿಗೆ ಮುನ್ನ ಗಮನಿಸಿ, ಜೂನ್ 1ರಿಂದ ವಿಮೆ ಮೊತ್ತ ಏರಿಕೆ
- Movies
'ಪಾರು' ಸೀರಿಯಲ್ ನಟಿ ಸುಶ್ಮಿತಾ ರಾಮಕಲಾ ಸಿಕ್ಕಾಪಟ್ಟೆ ಸ್ಟೈಲಿಶ್!
- Lifestyle
ಈ 16 ಔಷಧಿಗಳನ್ನು ಪ್ರಿಸ್ಕ್ರಿಪ್ಷನ್ ಇಲ್ಲದೆ ಖರೀದಿಸಬಹುದು: ಸದ್ಯದಲ್ಲಿಯೇ ಬರಲಿದೆ ಈ ನಿಯಮ
- Automobiles
ಹೊಸ ಟ್ರಯಂಫ್ ಟೈಗರ್ 1200 ಅಡ್ವೆಂಚರ್ ಬೈಕ್ ವಿಶೇಷತೆಗಳು
- Education
KCET 2022 Syllabus : 2022ರ ಸಿಇಟಿ ಪರೀಕ್ಷೆಯ ಪಠ್ಯಕ್ರಮ ರಿಲೀಸ್
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಭಾರತದಲ್ಲಿ ವಿವೋ V23 5G ಮತ್ತು ವಿವೋ V23 ಪ್ರೊ 5G ಸ್ಮಾರ್ಟ್ಫೋನ್ ಬಿಡುಗಡೆ!
ಭಾರತದ ಸ್ಮಾರ್ಟ್ಫೋನ್ ಮಾರುಕಟ್ಟೆಯಲ್ಲಿ ವಿವೋ ಕಂಪೆನಿ ಭಿನ್ನ ಮಾದರಿಯ ಸ್ಮಾರ್ಟ್ಫೋನ್ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್ಫೋನ್ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ವಿವೋ V23 5G ಮತ್ತು ವಿವೋ V23 ಪ್ರೊ 5G ಸ್ಮಾರ್ಟ್ಫೋನ್ ಅನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಇನ್ನು ಈ ಎರಡು ಸ್ಮಾರ್ಟ್ಫೋನ್ಗಳು ಫ್ಲೋರೈಟ್ ಎಜಿ ಗ್ಲಾಸ್ ಬ್ಯಾಕ್ ಅನ್ನು ಹೊಂದಿದ್ದು, ಸೂರ್ಯನ ಬೆಳಕಿನಲ್ಲಿ ಅಲ್ಟ್ರಾ ವೈಲೆಟ್ ರೇಸ್ ಬಿದ್ದಾಗ ಕಲರ್ ಬದಲಾಯಿಸುತ್ತದೆ ಎಂದು ಹೇಳಲಾಗಿದೆ.

ಹೌದು, ವಿವೋ ಕಂಪೆನಿ ಭಾರತದಲ್ಲಿ ಹೊಸ ವಿವೋ V23 5G ಮತ್ತು ವಿವೋ V23 ಪ್ರೊ 5G ಅನ್ನು ಸ್ಮಾರ್ಟ್ಫೋನ್ ಲಾಂಚ್ ಮಾಡಿದೆ. ಇದರಲ್ಲಿ ವಿವೋ V23 5G ಸ್ಮಾರ್ಟ್ಫೋನ್ ಮೀಡಿಯಾಟೆಕ್ ಡೈಮೆನ್ಸಿಟಿ 920 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ. ಆದರೆ ವಿವೋ V23 ಪ್ರೊ 5G ಸ್ಮಾರ್ಟ್ಫೋನ್ ಮೀಡಿಯಾಟೆಕ್ ಡೈಮೆನ್ಸಿಟಿ 1200 SOC ಪ್ರೊಸೆಸರ್ ಸಾಮರ್ಥ್ಯವನ್ನು ಒಳಗೊಂಡಿದೆ. ಇನ್ನು ಈ ಎರಡು ಸ್ಮಾರ್ಟ್ಫೋನ್ಗಳು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಒಳಗೊಂಡಿದೆ ಎನ್ನಲಾಗಿದೆ. ಇನ್ನುಳಿದಂತೆ ಈ ಸ್ಮಾರ್ಟ್ಫೋನ್ಗಳ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ವಿವೋ V23 5G ಸ್ಮಾರ್ಟ್ಫೋನ್
ವಿವೋ V23 5G ಸ್ಮಾರ್ಟ್ಫೋನ್ 1,080x2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.44 ಇಂಚಿನ ಫುಲ್ HD+ ಅಮೋಲೆಡ್ ಡಿಸ್ಪ್ಲೇಯನ್ನು ಹೊಂದಿದೆ. ಇದು ಮೀಡಿಯಾಟೆಕ್ ಡೈಮೆನ್ಸಿಟಿ 920SoC ಪ್ರೊಸೆಸರ್ ಬಲವನ್ನು ಪಡೆದಿದ್ದು, ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 12GB RAM ಮತ್ತು 256GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಒಳಗೊಂಡಿದೆ. ಇನ್ನು ಈ ಸ್ಮಾರ್ಟ್ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್ f/1.89 ಲೆನ್ಸ್ ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ವೈಡ್ ಆಂಗಲ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್ f/2.4 ಅಪರ್ಚರ್ ಲೆನ್ಸ್ ಹೊಂದಿದೆ. ಇದಲ್ಲದೆ ಈ ಫೋನ್ 50 ಮೆಗಾಪಿಕ್ಸೆಲ್ ಸೆನ್ಸಾರ್ ಮತ್ತು 8 ಮೆಗಾಪಿಕ್ಸೆಲ್ ವೈಡ್ ಆಂಗಲ್ ಸೆನ್ಸಾರ್ ಸಾಮರ್ಥ್ಯ ಡ್ಯುಯೆಲ್ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. 4,200mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 44W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.

ವಿವೋ V23 ಪ್ರೊ 5G ಸ್ಮಾರ್ಟ್ಫೋನ್
ವಿವೋ V23 ಪ್ರೊ 5G ಸ್ಮಾರ್ಟ್ಫೋನ್ 1,080x2,376 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.56-ಇಂಚಿನ ಫುಲ್ HD+ ಡಿಸ್ಪ್ಲೇಯನ್ನು ಹೊಂದಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 1200 SoC ಪ್ರೊಸೆಸರ್ ಬಲವನ್ನು ಪಡೆದಿದ್ದು, ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 12GB RAM ಮತ್ತು 256GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಒಳಗೊಂಡಿದೆ. ಇನ್ನು ಈ ಸ್ಮಾರ್ಟ್ಫೋನ್ ಕೂಡ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸೆನ್ಸಾರ್ ಎಫ್/1.88 ಲೆನ್ಸ್ ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ವೈಡ್ ಆಂಗಲ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್ f/2.4 ಅಪರ್ಚರ್ ಲೆನ್ಸ್ ಹೊಂದಿದೆ. ಇದಲ್ಲದೆ ಈ ಫೋನ್ 50 ಮೆಗಾಪಿಕ್ಸೆಲ್ ಸೆನ್ಸಾರ್ ಮತ್ತು 8 ಮೆಗಾಪಿಕ್ಸೆಲ್ ವೈಡ್ ಆಂಗಲ್ ಸೆನ್ಸಾರ್ ಸಾಮರ್ಥ್ಯ ಡ್ಯುಯೆಲ್ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ ಈ ಸ್ಮಾರ್ಟ್ಫೋನ್ 4,300mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 44W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, ಡ್ಯುಯಲ್-ಬ್ಯಾಂಡ್ Wi-Fi, USB ಟೈಪ್-C, USB OTG ಮತ್ತು ಬ್ಲೂಟೂತ್ v5.2 ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ
ಭಾರತದಲ್ಲಿ ವಿವೋ V23 5G ಸ್ಮಾರ್ಟ್ಫೋನ್ 8GB RAM + 128GB ಸ್ಟೋರೇಜ್ ರೂಪಾಂತರದ ಆಯ್ಕೆಗೆ 29,990ರೂ. ಬೆಲೆ ಹೊಂದಿದೆ. ಇದರ 12GB RAM + 256GB ಸ್ಟೋರೇಜ್ ರೂಪಾಂತರದ ಬೆಲೆ 34,990ರೂ.ಆಗಿದೆ. ಇನ್ನು ವಿವೋ V23 ಪ್ರೊ 5G ಸ್ಮಾರ್ಟ್ಫೋನ್ 8GB RAM + 128GB ಸ್ಟೋರೇಜ್ ರೂಪಾಂತರಕ್ಕೆ 38,990ರೂ. ಮತ್ತು 12GB + 256GB ಸ್ಟೋರೇಜ್ ರೂಪಾಂತರಕ್ಕಾಗಿ 43,990ರೂ. ಬೆಲೆ ಹೊಂದಿದೆ. ಇನ್ನು ಎರಡು ಸ್ಮಾರ್ಟ್ಫೋನ್ಗಳು ಸ್ಟಾರ್ಡಸ್ಟ್ ಬ್ಲಾಕ್ ಮತ್ತು ಸನ್ಶೈನ್ ಗೋಲ್ಡ್ ಬಣ್ಣದ ಆಯ್ಕೆಗಳಲ್ಲಿ ಲಭ್ಯವಿದೆ. ಇದು ವಿವೋ ಕಂಪೆನಿಯ ಅಧಿಕೃತ ವೆಬ್ಸೈಟ್, ಫ್ಲಿಪ್ಕಾರ್ಟ್ ಮತ್ತು ಆಫ್ಲೈನ್ ರಿಟೇಲ್ ಸ್ಟೋರ್ ಮೂಲಕ ಖರೀದಿಸಲು ಲಭ್ಯವಿರುತ್ತವೆ. ಇದರಲ್ಲಿ ವಿವೋ V23 5G ಜನವರಿ 19 ರಿಂದ ಖರೀದಿಸಲು ಲಭ್ಯವಿರುತ್ತದೆ. ಆದರೆ ವಿವೋ V23 ಪ್ರೊ 5G ಜನವರಿ 13 ರಿಂದ ಖರೀದಿಗೆ ಲಭ್ಯವಾಗಲಿದೆ.
-
54,535
-
1,19,900
-
54,999
-
86,999
-
49,975
-
49,990
-
20,999
-
1,04,999
-
44,999
-
64,999
-
20,699
-
49,999
-
11,499
-
54,999
-
7,999
-
8,980
-
17,091
-
10,999
-
34,999
-
39,600
-
25,750
-
33,590
-
27,760
-
44,425
-
13,780
-
1,25,000
-
45,990
-
1,35,000
-
82,999
-
17,999