Vivo: ವಿವೋದ ಈ ದುಬಾರಿ ಬೆಲೆಯ ಫೋನ್‌ಗೆ 28% ರಿಯಾಯಿತಿ.. 108MP ಕ್ಯಾಮೆರಾ
ವಿವೋದ ಸ್ಮಾರ್ಟ್‌ಫೋನ್‌ಗಳಿಗೆ (Vivo smartphone) ಭಾರತದಲ್ಲಿ ದೊಡ್ಡ ಮಟ್ಟದ ಬೇಡಿಕೆ ಇದೆ. ಈ ನಡುವೆ ವಿವೋ ಸಹ ಹೊಸ ಹೊಸ ಫೋನ್‌ಗಳನ್ನು ಅನಾವರಣ ಮಾಡಿಕೊಂಡು ಬಂದಿದೆ. ಈ ಎಲ್ಲಾ ಬೆಳವಣಿಗೆ ನಡುವೆ ಪ್ರಮುಖ ಇ-ಕಾಮರ್ಸ್ ಸೈಟ್‌ವೊಂದರಲ್ಲಿ ವಿವೋದ ಪ್ರಮುಖ ಫೋನ್‌ಗೆ ರಿಯಾಯಿತಿ ಘೋಷಣೆ ಮಾಡಲಾಗಿದೆ.
ಹೌದು, ವಿವೋ ಫೋನ್‌ಗಳು ಹೆಚ್ಚು ಸೇಲ್ ಆಗುತ್ತಿದ್ದಂತೆ ಅವುಗಳಿಗೆ ವಿವಿಧ ರೀತಿಯಲ್ಲಿ ಆಫರ್ ಸಹ ನೀಡಲಾಗುತ್ತಿದೆ. ಈ ಆಫರ್ ವಿಭಾಗದಲ್ಲಿ ವಿವೋ V23 ಪ್ರೊ 5G (Vivo V23 Pro 5G) ಸ್ಮಾರ್ಟ್‌ಫೋನ್‌ಗೆ ವಿಶೇಷ ಆಫರ್ ನೀಡಲಾಗಿದೆ. ಈ ಫೋನ್ 108MP ಕ್ಯಾಮೆರಾ ಆಯ್ಕೆ ಪಡೆದಿದ್ದು, 8 GB RAM ಆಯ್ಕೆಯೊಂದಿಗೆ ಉತ್ತಮ ರೀತಿಯಲ್ಲಿ ಕೆಲಸ ಮಾಡಲಿದೆ. ಹಾಗಿದ್ರೆ, ಈ ಸ್ಮಾರ್ಟ್‌ಫೋನ್‌ನ ಆಫರ್ ಬೆಲೆ ವಿವರ ಹಾಗೂ ಇದರ ಪ್ರಮುಖ ಫೀಚರ್ಸ್ ಏನು ಅನ್ನೋದನ್ನು ಈ ಲೇಖನದಲ್ಲಿ ತಿಳಿಸಿಕೊಡಲಾಗಿದೆ ಓದಿರಿ.

ವಿವೋ V23 ಪ್ರೊ 5G ಸ್ಮಾರ್ಟ್‌ಫೋನ್ ಆಫರ್: ಈ ಫೋನ್ 41,990ರೂ.ಗಳ ಸಾಮಾನ್ಯ ಬೆಲೆ ಹೊಂದಿದ್ದು, ನೀವೀಗ ಇದನ್ನು 29,849 ರೂ.ಗಳಿಗೆ ಕೊಂಡುಕೊಳ್ಳಬಹುದಾಗಿದೆ. ಯಾಕೆಂದರೆ ಈ ಫೋನ್‌ಗೆ ಪ್ರಮುಖ ಇ-ಕಾಮರ್ಸ್ ಸೈಟ್ ಆಗಿರುವ ಫ್ಲಿಪ್‌ಕಾರ್ಟ್ 28% ರಿಯಾಯಿತಿ ಘೋಷಣೆ ಮಾಡಲಾಗಿದೆ. ಇದರಿಂದ ಭಾರೀ ಹಣ ಉಳಿತಾಯ ಮಾಡಬಹುದಾಗಿದೆ.
ಇದರೊಂದಿಗೆ ಈ ಫೋನ್ ಖರೀದಿ ಮೇಲೆ 699 ರೂ.ಗಳ ಮೌಲ್ಯದ FreebieSpotify ಪ್ರೀಮಿಯಂ ಪ್ರಯೋಜನ ಸಿಗಲಿದೆ. ಇದರೊಂದಿಗೆ ಈ ಫೋನ್ ಖರೀದಿಸಿ ನಂತರ ಎಸಿ ಖರೀದಿ ಮಾಡಲು ಮುಂದಾದರೆ ಅದರ ಮೇಲೂ ಹೆಚ್ಚುವರಿ ಆಫರ್ ನೀಡಲಾಗುತ್ತದೆ. ನಿಮಗೆ ಇಷ್ಟು ಹಣ ನೀಡಿ ಖರೀದಿ ಮಾಡಲು ಆಗುವುದಿಲ್ಲ ಎಂದರೆ ಇಎಮ್‌ಐ ಆಯ್ಕೆಯನ್ನೂ ಸಹ ನೀಡಲಾಗಿದ್ದು, ಪರಿಣಾಮ ನೀವು ತಿಂಗಳಿಗೆ 1,050 ರೂ.ಗಳನ್ನು ಪಾವತಿ ಮಾಡಿದ್ರೆ ಸಾಕು.

ವಿವೋ V23 ಪ್ರೊ 5G ಸ್ಮಾರ್ಟ್‌ಫೋನ್ ಡಿಸ್‌ಪ್ಲೇ ಮಾಹಿತಿ: ಈ ಸ್ಮಾರ್ಟ್‌ಫೋನ್ 6.56 ಇಂಚಿನ ಅಮೋಲೆಡ್ ಡಿಸ್‌ಪ್ಲೇ ಆಯ್ಕೆ ಪಡೆದಿದ್ದು, 1080 x 2376 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ ಉತ್ತಮವಾಗಿದೆ. ಅಲ್ಲದೆ 90Hz ರಿಫ್ರೆಶ್ ರೇಟ್ ಹಾಗೂ HDR10+, 398 ಪಿಪಿಐ ಸಾಂದ್ರತೆಯೊಂದಿಗೆ ಈ ಡಿಸ್‌ಪ್ಲೇ ಶ್ಕಾಟ್ ಕ್ಸೆನ್ಸೇಶನ್ ಎ ಗ್ಲಾಸ್ ರಕ್ಷಣೆ ಪಡೆದಿದೆ.
ವಿವೋ V23 ಪ್ರೊ 5G ಸ್ಮಾರ್ಟ್‌ಫೋನ್ ಪ್ರೊಸೆಸರ್ ವಿವರ: ಇನ್ನು ಈ ಫೋನ್ ಮೀಡಿಯಾಟೆಕ್ ಡೈಮೆನ್ಸಿಟಿ 1200 (6 nm) ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದ್ದು, ಆಂಡ್ರಾಯ್ಡ್ 12, ಫನ್‌ಟಚ್ 12 ಓಎಸ್ ಅನ್ನು ರನ್ ಮಾಡಲಿದೆ. ಇದರೊಂದಿಗೆ ಮಾಲಿ-G77 MC9 ಗ್ರಾಫಿಕ್ಸ್ ಕಾರ್ಡ್ ಬೆಂಬಲದೊಂದಿಗೆ ಉತ್ತಮವಾಗಿ ಕೆಲಸ ಮಾಡಲಿದ್ದು, 8GB RAM ಹಾಗೂ 128GB ಇಂಟರ್ ಸ್ಟೋರೇಜ್ ಆಯ್ಕೆ ಪಡೆದಿದೆ.
ವಿವೋ V23 ಪ್ರೊ 5G ಸ್ಮಾರ್ಟ್‌ಫೋನ್ ಕ್ಯಾಮೆರಾ ರಚನೆ: ಇನ್ನು ಈ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಹೊಂದಿದೆ. ಅದರಲ್ಲಿ 108 ಮೆಗಾಪಿಕ್ಸೆಲ್‌ನ ಮುಖ್ಯ ಕ್ಯಾಮೆರಾ, 8 ಮೆಗಾಪಿಕ್ಸೆಲ್‌ನ ಅಲ್ಟ್ರಾವೈಡ್, 2 ಮೆಗಾಪಿಕ್ಸೆಲ್‌ನ ಮ್ಯಾಕ್ರೋ ಸೆನ್ಸರ್ ಅನ್ನು ಈ ಫೋನ್ ಪಡೆದಿದೆ. ಸೆಲ್ಫಿ ಹಾಗೂ ವಿಡಿಯೋ ಕರೆಗಾಗಿ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ, 8 ಮೆಗಾಪಿಕ್ಸೆಲ್‌ನ ಅಲ್ಟ್ರಾವೈಡ್ ಕ್ಯಾಮೆರಾ ಇದ್ದು, ಡ್ಯುಯಲ್-ಎಲ್ಇಡಿ ಫ್ಲ್ಯಾಶ್, ಹೆಚ್‌ಡಿಆರ್, ಪನೋರಮಾ ಫೀಚರ್ಸ್ ಅನ್ನು ಪಡೆಯಬಹುದಾಗಿದೆ.

ವಿವೋ V23 ಪ್ರೊ 5G ಸ್ಮಾರ್ಟ್‌ಫೋನ್ ಬ್ಯಾಟರಿ ಹಾಗೂ ಇತರೆ: ಈ ಸ್ಮಾರ್ಟ್‌ಫೋನ್ 4300 mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, ಇದು 44W ವೈರ್ಡ್ ಚಾರ್ಜಿಂಗ್ ಬೆಂಬಲ ಪಡೆದಿದೆ. ಈ ಮೂಲಕ 30 ನಿಮಿಷಗಳಲ್ಲಿ 1-63% ಬ್ಯಾಟರಿ ಭರ್ತಿ ಆಗಲಿದೆ. ಉಳಿದಂತೆ ಈ ಫೋನ್ ವೈ-ಫೈ 802.11 a/b/g/n/ac, ಡ್ಯುಯಲ್-ಬ್ಯಾಂಡ್, ವೈ-ಫೈ ಡೈರೆಕ್ಟ್,
ಬ್ಲೂಟೂತ್ ಆವೃತ್ತಿ 5.2, A2DP, LE, aptX HD, ಯುಎಸ್‌ಬಿ ಟೈಪ್-ಸಿ ಸೇರಿದಂತೆ ಅನೇಕ ಕನೆಕ್ಟಿವಿಟಿ ಫೀಚರ್ಸ್ ಪಡೆದುಕೊಂಡಿದೆ.


Click it and Unblock the Notifications








