Home
ಸುದ್ದಿಜಾಲ

ಭರ್ಜರಿ ಡಿಸ್ಕೌಂಟ್‌ನಲ್ಲಿ ವಿವೋ V23e 5G ಖರೀದಿಸಲು ಇದು ಸಕಾಲ!

ಜನಪ್ರಿಯ ವಿವೋ ಮೊಬೈಲ್‌ ಸಂಸ್ಥೆಯು V ಸರಣಿಯಲ್ಲಿ ಹಲವು ಬಜೆಟ್‌ ದರದ ಫೋನ್‌ಗಳನ್ನು ಪರಿಚಯಿಸಿದೆ. ಆ ಪೈಕಿ ವಿವೋ V23e 5G ಫೀಚರ್ಸ್‌ ಹಾಗೂ ಪ್ರೈಸ್ ಟ್ಯಾಗ್‌ನಿಂದ ಗ್ರಾಹಕರನ್ನು ಆಕರ್ಷಿಸಿದೆ. ಆದರೆ ಈ ಸ್ಮಾರ್ಟ್‌ಫೋನ್‌ ಇದೀಗ ರಿಲಯನ್ಸ್‌ ಡಿಜಿಟಲ್‌ ಇ ಕಾಮರ್ಸ್‌ ತಾಣದಲ್ಲಿ ಭರ್ಜರಿ ಡಿಸ್ಕೌಂಟ್‌ ಪಡೆದಿದ್ದು, ಗ್ರಾಹಕರು ಖುಷಿ ಪಡುವಂತೆ ಮಾಡಿದೆ.

ಹೌದು, ವಿವೋ ತನ್ನ ಸ್ಯಾಮ್‌ಸಂಗ್‌ ವಿವೋ V23e 5G ಸ್ಮಾರ್ಟ್‌ಫೋನ್‌ ರಿಲಯನ್ಸ್‌ ಡಿಜಿಟಲ್‌ ಆನ್‌ಲೈನ್‌ ತಾಣದಲ್ಲಿ ಈಗ 14% ರಷ್ಟು ಡಿಸ್ಕೌಂಟ್‌ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಈ ಸ್ಮಾರ್ಟ್‌ಫೋನ್ 128GB ಸ್ಟೋರೇಜ್‌ನ ವೇರಿಯಂಟ್‌ 28,990ರೂ. ಗಳ ಬೆಲೆಯನ್ನು ಹೊಂದಿದ್ದು, ಈಗ ಗ್ರಾಹಕರು 24,999ರೂ. ಗಳ ರಿಯಾಯಿತಿ ಪ್ರೈಸ್‌ ಟ್ಯಾಗ್‌ನಲ್ಲಿ ಖರೀದಿ ಮಾಡಬಹುದಾಗಿದೆ.

ಭರ್ಜರಿ ಡಿಸ್ಕೌಂಟ್‌ನಲ್ಲಿ ವಿವೋ V23e 5G ಖರೀದಿಸಲು ಇದು ಸಕಾಲ!

ವಿವೋ V23e 5G ಸ್ಮಾರ್ಟ್‌ಫೋನ್‌ 4,050mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 44W ಫ್ಲ್ಯಾಶ್‌ಚಾರ್ಜ್ ಚಾರ್ಜಿಂಗ್ ಸೌಲಭ್ಯವನ್ನು ಬೆಂಬಲಿಸುತ್ತದೆ. ಇನ್ನು ಈ ಸ್ಮಾರ್ಟ್‌ಫೋನ್ ಮಿಡ್‌ನೈಟ್ ಬ್ಲೂ ಮತ್ತು ಸನ್‌ಶೈನ್ ಗೋಲ್ಡ್ ಕಲರ್‌ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಫೀಚರ್ಸ್‌ ಪಡೆದಿದೆ ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಭರ್ಜರಿ ಡಿಸ್ಕೌಂಟ್‌ನಲ್ಲಿ ವಿವೋ V23e 5G ಖರೀದಿಸಲು ಇದು ಸಕಾಲ!

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ : ವಿವೋ V23e 5G ಸ್ಮಾರ್ಟ್‌ಫೋನ್‌ 6.44 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಇನ್ನು ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಪಡೆದುಕೊಂಡಿದೆ.

ಪ್ರೊಸೆಸರ್‌ ಯಾವುದು : ವಿವೋ V23e 5G ಸ್ಮಾರ್ಟ್‌ಫೋನ್‌ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 810 SoC ಪ್ರೊಸೆಸರ್‌ ಬಲವನ್ನು ಪಡೆದಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 12 ನಲ್ಲಿ ಫನ್‌ಟಚ್‌ OS 12 ಬೆಂಬಲಿಸಲಿದೆ. ಹಾಗೆಯೇ 8 GB RAM ಮತ್ತು 128 GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೈಕ್ರೊ ಎಸ್‌ಡಿ ಕಾರ್ಡ್ ಮೂಲಕ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿಶೇಷ : ವಿವೋ V23e 5G ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಸೆನ್ಸಾರ್‌ ಮತ್ತು ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್‌ ಹೊಂದಿದೆ. ಇದಲ್ಲದೆ ಆಟೋಫೋಕಸ್ ಲೆನ್ಸ್‌ ಹೊಂದಿರುವ 44 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಭರ್ಜರಿ ಡಿಸ್ಕೌಂಟ್‌ನಲ್ಲಿ ವಿವೋ V23e 5G ಖರೀದಿಸಲು ಇದು ಸಕಾಲ!

ಬ್ಯಾಟರಿ ಮತ್ತು ಇತರೆ : ವಿವೋ ವಿ23e 5G ಸ್ಮಾರ್ಟ್‌ಫೋನ್‌ 4,050mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 44W ಫ್ಲ್ಯಾಶ್‌ಚಾರ್ಜ್ ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, ಡ್ಯುಯಲ್-ಬ್ಯಾಂಡ್ Wi-Fi, ಬ್ಲೂಟೂತ್ v5.1, GPS/ A-GPS ಮತ್ತು USB ಟೈಪ್-C ಪೋರ್ಟ್ ಬೆಂಬಲಿಸಲಿದೆ. ಇದಲ್ಲದೆ ಅಕ್ಸಿಲೆರೊಮೀಟರ್, ಆಂಬಿಯೆಂಟ್ ಲೈಟ್ ಸೆನ್ಸರ್, ಗೈರೊಸ್ಕೋಪ್, ಮ್ಯಾಗ್ನೆಟೋಮೀಟರ್ ಮತ್ತು ಪ್ರಾಕ್ಸಿಮಿಟಿ ಸೆನ್ಸಾರ್‌ ಹೊಂದಿದೆ. ಇದಲ್ಲದೆ ಅಂಡರ್ ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್‌ ಅನ್ನು ಹೊಂದಿದೆ.

ಮೆಮೊರಿ ಮತ್ತು ಕಲರ್ ಆಯ್ಕೆ : ಭಾರತದಲ್ಲಿ ವಿವೋ V23e 5G ಸ್ಮಾರ್ಟ್‌ಫೋನ್‌ 8GB + 128GB ಸ್ಟೋರೇಜ್‌ನ ಸಿಂಗಲ್ ವೇರಿಯಂಟ್‌ ಆಯ್ಕೆ ಪಡೆದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಮಿಡ್‌ನೈಟ್ ಬ್ಲೂ ಮತ್ತು ಸನ್‌ಶೈನ್ ಗೋಲ್ಡ್ ಕಲರ್‌ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ.

Best Mobiles in India

English summary
Vivo V23e 5G available at Amazing Discount Price on Reliance Digital: Check offer price, specifications and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+