ವಿವೋ V23e ಫೋನಿಗೆ ಈಗ ಭರ್ಜರಿ ರಿಯಾಯಿತಿ!.ಮೇ 10 ಆಫರ್‌ ಮುಕ್ತಾಯ!

|

ಭಾರತದಲ್ಲಿ ವಿವೋ ಸಂಸ್ಥೆಯು ಭಿನ್ನ ಶ್ರೇಣಿಯ ಫೋನ್‌ಗಳನ್ನು ಲಾಂಚ್ ಮಾಡಿದ್ದು, ಆ ಪೈಕಿ ವಿವೋ ಸಂಸ್ಥೆಯ V ಸರಣಿಯ ಸ್ಮಾರ್ಟ್‌ಫೋನ್‌ಗಳು ಹೆಚ್ಚು ಗಮನ ಸೆಳೆದಿವೆ. ಸಂಸ್ಥೆಯು ಈ ವರ್ಷದ ಆರಂಭದಲ್ಲಿ ಬಿಡುಗಡೆ ಮಾಡಿರುವ ವಿವೋ V23e ಫೋನಿಗೆ ವಿಶೇಷ 5000ರೂ. ಕ್ಯಾಶ್‌ಬ್ಯಾಕ್ ರಿಯಾಯಿತಿಯನ್ನು ಘೋಷಿಸಿದೆ. ವಿವೋ V23e ಸ್ಮಾರ್ಟ್‌ಫೋನ್ 8GB + 128GB ಸ್ಟೋರೇಜ್ ವೇರಿಯಂಟ್ ಆಯ್ಕೆಯನ್ನು ಪಡೆದಿದೆ.

ವಿವೋ V23e ಫೋನಿಗೆ ಈಗ ಭರ್ಜರಿ ರಿಯಾಯಿತಿ!.ಮೇ 10 ಆಫರ್‌ ಮುಕ್ತಾಯ!

ಹೌದು, ವಿವೋ ಸಂಸ್ಥೆಯು ತನ್ನ ವಿವೋ V23e ಫೋನಿಗೆ 5000ರೂ. ಕ್ಯಾಶ್‌ಬ್ಯಾಕ್ ರಿಯಾಯಿತಿ ತಿಳಿಸಿದೆ. ಗ್ರಾಹಕರು ಐಸಿಐಸಿಐ ಬ್ಯಾಂಕ್, ಎಸ್‌ಬಿಐ ಅಥವಾ ಐಡಿಎಫ್‌ಸಿ ಬ್ಯಾಂಕ್ ಕಾರ್ಡ್‌ಗಳನ್ನು ಬಳಸಿಕೊಂಡು ಈ ಫೋನ್ ಖರೀದಿಸಿದರೆ, 5000ರೂ. ರಿಯಾಯಿತಿಯನ್ನು ಪಡೆಯಬಹುದು. ಇನ್ನು ಈ ಕ್ಯಾಶ್‌ಬ್ಯಾಕ್‌ ಕೊಡುಗೆಯು ಇದೇ ಮೇ 10ರ ವರೆಗೆ ಮಾತ್ರ ಲಭ್ಯ ಇರಲಿದೆ. ಹಾಗಾದರೇ ವಿವೋ V23e ಫೋನಿನ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ವಿವೋ V23e 5G ಸ್ಮಾರ್ಟ್‌ಫೋನ್‌ 6.44 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು 1,080 x 2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯ ವನ್ನು ಒಳಗೊಂಡಿದೆ. ಇನ್ನು ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಪಡೆದುಕೊಂಡಿದೆ.

ಪ್ರೊಸೆಸರ್‌ ಯಾವುದು?
ವಿವೋ V23e 5G ಸ್ಮಾರ್ಟ್‌ಫೋನ್‌ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 810 SoC ಪ್ರೊಸೆಸರ್‌ ಬಲವನ್ನು ಪಡೆದಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 12 ನಲ್ಲಿ ಫನ್‌ಟಚ್‌ OS 12 ಬೆಂಬಲಿಸಲಿದೆ. ಹಾಗೆಯೇ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೈಕ್ರೊ ಎಸ್‌ಡಿ ಕಾರ್ಡ್ ಮೂಲಕ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ವಿವೋ V23e ಫೋನಿಗೆ ಈಗ ಭರ್ಜರಿ ರಿಯಾಯಿತಿ!.ಮೇ 10 ಆಫರ್‌ ಮುಕ್ತಾಯ!

ಕ್ಯಾಮೆರಾ ವಿಶೇಷ
ವಿವೋ V23e 5G ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಸೆನ್ಸಾರ್‌ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್‌ ಹೊಂದಿದೆ. ಇದಲ್ಲದೆ ಆಟೋಫೋಕಸ್ ಲೆನ್ಸ್‌ ಹೊಂದಿರುವ 44 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ
ವಿವೋ ವಿ23e 5G ಸ್ಮಾರ್ಟ್‌ಫೋನ್‌ 4,050mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 44W ಫ್ಲ್ಯಾಶ್‌ಚಾರ್ಜ್ ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, ಡ್ಯುಯಲ್-ಬ್ಯಾಂಡ್ Wi-Fi, ಬ್ಲೂಟೂತ್ v5.1, GPS/ A-GPS ಮತ್ತು USB ಟೈಪ್-C ಪೋರ್ಟ್ ಬೆಂಬಲಿಸಲಿದೆ. ಇದಲ್ಲದೆ ಅಕ್ಸಿಲೆರೊಮೀಟರ್, ಆಂಬಿಯೆಂಟ್ ಲೈಟ್ ಸೆನ್ಸರ್, ಗೈರೊಸ್ಕೋಪ್, ಮ್ಯಾಗ್ನೆಟೋಮೀಟರ್ ಮತ್ತು ಪ್ರಾಕ್ಸಿಮಿಟಿ ಸೆನ್ಸಾರ್‌ ಹೊಂದಿದೆ. ಇದಲ್ಲದೆ ಅಂಡರ್ ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್‌ ಅನ್ನು ಹೊಂದಿದೆ.

ಬೆಲೆ ಮತ್ತು ಲಭ್ಯತೆ
ಭಾರತದಲ್ಲಿ ವಿವೋ V23e 5G ಫೋನ್ 8GB + 128GB ಸ್ಟೋರೇಜ್ ಆಯ್ಕೆಯನ್ನು ಹೊಂದಿದೆ. ಈ ಫೋನ್ 25,990 ರೂ. ಬೆಲೆಯನ್ನು ಹೊಂದಿದೆ. ಸದ್ಯದ ಕ್ಯಾಶ್‌ಬ್ಯಾಕ್ ಕೊಡುಗೆಯಲ್ಲಿ ಈ ಫೋನ್ ಅನ್ನು 20,990ರೂ. ಗಳಿಗೆ ಖರೀದಿಸಬಹುದಾಗಿದೆ. ಇನ್ನು ಈ ಫೋನ್ ಎರಡು ಬಣ್ಣಗಳಲ್ಲಿ ಲಭ್ಯವಿದ್ದು, ಅವು ಕ್ರಮವಾಗಿ ಮಿಡ್ನೈಟ್ ಬ್ಲೂ ಮತ್ತು ಸನ್ಶೈನ್ ಗೋಲ್ಡ್ ಆಗಿವೆ.

Best Mobiles in India

English summary
Vivo V23e 5G Offer: Rs. 5000 Cashback with select Bank Cards.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X