Home
ಸುದ್ದಿಜಾಲ

ವಿವೋ V23e 5G ಸ್ಮಾರ್ಟ್‌ಫೋನ್‌ ಬಿಡುಗಡೆ! ಬೆಲೆ ಎಷ್ಟು?

ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ವಿವೋ ಕಂಪೆನಿ ವಿಶೇಷವಾದ ಸ್ಥಾನವನ್ನು ಪಡೆದುಕೊಂಡಿದೆ. ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳ ಪರಿಚಯಿಸಿ ತನ್ನ ಸ್ಥಾನವನ್ನು ಭದ್ರಪಡಿಸಿಕೊಂಡಿದೆ. ಸದ್ಯ ಇದೀಗ ಭಾರತದ ಮಾರುಕಟ್ಟೆಯಲ್ಲಿ ಹೊಸ ವಿವೋ V23e 5G ಸ್ಮಾರ್ಟ್‌ಫೋನ್‌ ಲಾಂಚ್‌ ಮಾಡಿದೆ. ಈ ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 810 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಜೊತೆಗೆ 4,050mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ.

ವಿವೋ V23e 5G

ಹೌದು, ವಿವೋ ಕಂಪೆನಿ ತನ್ನ ಹೊಸ ವಿವೋ V23e 5G ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದೆ. ಇದು 6.44 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್‌ ಹಿಂಬದಿಯಲ್ಲಿ ತ್ರಿವಳಿ ಕ್ಯಾಮೆರಾವನ್ನು ಒಳಗೊಂಡಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ವಿವೋ V23e 5G ಸ್ಮಾರ್ಟ್‌ಫೋನ್‌ 6.44 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಇನ್ನು ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಪಡೆದುಕೊಂಡಿದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ಈ ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 810 SoC ಪ್ರೊಸೆಸರ್‌ ಬಲವನ್ನು ಪಡೆದಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 12 ನಲ್ಲಿ ಫನ್‌ಟಚ್‌ OS 12 ಬೆಂಬಲಿಸಲಿದೆ. ಹಾಗೆಯೇ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೈಕ್ರೊ ಎಸ್‌ಡಿ ಕಾರ್ಡ್ ಮೂಲಕ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿಶೇಷ

ಕ್ಯಾಮೆರಾ ವಿಶೇಷ

ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಸೆನ್ಸಾರ್‌ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್‌ ಹೊಂದಿದೆ. ಇದಲ್ಲದೆ ಆಟೋಫೋಕಸ್ ಲೆನ್ಸ್‌ ಹೊಂದಿರುವ 44 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ವಿವೋ ವಿ23e 5G ಸ್ಮಾರ್ಟ್‌ಫೋನ್‌ 4,050mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 44W ಫ್ಲ್ಯಾಶ್‌ಚಾರ್ಜ್ ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, ಡ್ಯುಯಲ್-ಬ್ಯಾಂಡ್ Wi-Fi, ಬ್ಲೂಟೂತ್ v5.1, GPS/ A-GPS ಮತ್ತು USB ಟೈಪ್-C ಪೋರ್ಟ್ ಬೆಂಬಲಿಸಲಿದೆ. ಇದಲ್ಲದೆ ಅಕ್ಸಿಲೆರೊಮೀಟರ್, ಆಂಬಿಯೆಂಟ್ ಲೈಟ್ ಸೆನ್ಸರ್, ಗೈರೊಸ್ಕೋಪ್, ಮ್ಯಾಗ್ನೆಟೋಮೀಟರ್ ಮತ್ತು ಪ್ರಾಕ್ಸಿಮಿಟಿ ಸೆನ್ಸಾರ್‌ ಹೊಂದಿದೆ. ಇದಲ್ಲದೆ ಅಂಡರ್ ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್‌ ಅನ್ನು ಹೊಂದಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಭಾರತದಲ್ಲಿ ವಿವೋ V23e 5G ಸ್ಮಾರ್ಟ್‌ಫೋನ್‌ ಸಿಂಗಲ್ 8GB + 128GB ಸ್ಟೋರೇಜ್ ರೂಪಾಂತರಕ್ಕೆ 25,990ರೂ. (MRP 28,990ರೂ)ಬೆಲೆ ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಮಿಡ್‌ನೈಟ್ ಬ್ಲೂ ಮತ್ತು ಸನ್‌ಶೈನ್ ಗೋಲ್ಡ್ ಕಲರ್‌ ಆಯ್ಕೆಗಳಲ್ಲಿ ಬರುತ್ತದೆ. ಇನ್ನು ಈ ಸ್ಮಾರ್ಟ್‌ಫೋನ್ ವಿವೋ ಇಂಡಿಯಾ ಇ-ಸ್ಟೋರ್ ಮೂಲಕ ಮತ್ತು ಎಲ್ಲಾ ಪ್ರಮುಖ ಚಿಲ್ಲರೆ ಅಂಗಡಿಗಳಲ್ಲಿ ಖರೀದಿಸಲು ಲಭ್ಯವಿದೆ. ಈ ಲಾಂಚ್‌ ಆಫರ್‌ನಲ್ಲಿ ICICI ಬ್ಯಾಂಕ್ ಕ್ರೆಡಿಟ್ ಕಾರ್ಡ್ ಅಥವಾ EMI ವಹಿವಾಟುಗಳನ್ನು ಬಳಸುವ ಗ್ರಾಹಕರಿಗೆ 10% ರಷ್ಟು ಕ್ಯಾಶ್‌ಬ್ಯಾಕ್ ಅನ್ನು ಒಳಗೊಂಡಿರುತ್ತದೆ.

Best Mobiles in India

English summary
Vivo V23e 5G comes with a 20:9 AMOLED display and triple rear cameras.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+