ವಿವೋ V23e ಸ್ಮಾರ್ಟ್‌ಫೋನ್‌ ಅನಾವರಣ! ಆಕರ್ಷಕ ಫೀಚರ್ಸ್‌!

|

ಸ್ಮಾರ್ಟ್‌ಫೋನ್‌ ಕ್ಯಾಮೆರಾಗಳಲ್ಲಿ ವಿಶೇಷ ಫೀಚರ್ಸ್‌ಗಳನ್ನು ನೀಡುವಲ್ಲಿ ವಿವೋ ಕಂಪೆನಿ ಪ್ರಸಿದ್ಧಿ ಪಡೆದಿದೆ. ತನ್ನ ವೈವಿಧ್ಯಮಯ ಕ್ಯಾಮೆರಾ ಫೀಚರ್ಸ್‌ಗಳಿಂದಾಗಿ ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ತನ್ನದೇ ಆದ ಸ್ಥಾನವನ್ನು ಹೊಂದಿದೆ. ಈಗಾಗಲೇ ಅನೇಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ವಿವೋ ಕಪೆನಿ ತನ್ನ ಹೊಸ ವಿವೋ V23e ಸ್ಮಾರ್ಟ್‌ಫೋನ್‌ ಅನ್ನು ಅಧಿಕೃತವಾಗಿ ಅನಾವರಣಗೊಳಿಸಿದೆ. ಈ ಸ್ಮಾರ್ಟ್‌ಫೋನ್‌ 60Hz ರಿಫ್ರೆಶ್ ರೇಟ್‌ ಹೊಂದಿರುವ ಡಿಸ್‌ಪ್ಲೇ ಹೊಂದಿದೆ.

ವಿವೋ

ಹೌದು, ವಿವೋ ಕಂಪೆನಿ ಹೊಸ ವಿವೋ V23e ಸ್ಮಾರ್ಟ್‌ಫೋನ್‌ ಅನ್ನು ವಿಯೆಟ್ನಾಂನಲ್ಲಿ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಅನಾವರಣ ಮಾಡಿದೆ. ಈ ಸ್ಮಾರ್ಟ್‌ಫೋನ್‌ ಅಲ್ಟ್ರಾ-ಸ್ಲಿಮ್ ವಿನ್ಯಾಸ, ಗ್ಲಾಸ್ ಬ್ಯಾಕ್ ಮತ್ತು ಪ್ಲಾಸ್ಟಿಕ್ ಸೈಡ್ ಫ್ರೇಮ್‌ಗಳೊಂದಿಗೆ ಬರುತ್ತದೆ. ಇದು ಮೀಡಿಯಾಟೆಕ್‌ ಹಿಲಿಯೋ G96 ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಜೊತೆಗೆ 4050mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ವಿವೋ V23e ಸ್ಮಾರ್ಟ್‌ಫೋನ್ 2,400 x 1,080 ಪಿಕ್ಸೆಲ್‌ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.44-ಇಂಚಿನ ಫುಲ್‌ HD+ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ AMOLED ಡಿಸ್ಪ್ಲೇ ಆಗಿದ್ದು, ಸ್ಟ್ಯಾಂಡರ್ಡ್ 60Hz ರಿಫ್ರೆಶ್ ರೇಟ್‌ ಅನ್ನು ಒಳಗೊಂಡಿದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ಈ ಸ್ಮಾರ್ಟ್‌ಫೋನ್‌ ಮೀಡಿಯಾಟೆಕ್‌ ಹಿಲಿಯೋ G96 ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿದೆ. ಇದು ಆಂಡ್ರಾಯ್ಡ್‌ 11 ಆಧಾರಿತ FunTouch 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ.

ಕ್ಯಾಮೆರಾ ವಿಶೇಷ

ಕ್ಯಾಮೆರಾ ವಿಶೇಷ

ವಿವೋ V23e ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌ f/1.79 ಲೆನ್ಸ್‌ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್-ಆಂಗಲ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಅನ್ನು ಒಳಗೊಂಡಿದೆ. ಇದರ ಜೊತೆಗೆ 50 ಮೆಗಾಪಿಕ್ಸೆಲ್ ಸೆನ್ಸಾರ್‌ f/2.0 ಲೆನ್ಸ್‌ ಒಳಗೊಂಡಿರುವ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ. ಇನ್ನು ಈ ರಿಯರ್‌ ಕ್ಯಾಮೆರಾದಲ್ಲಿ ಐ ಫೋಕಸ್, ನೈಟ್ ಮೋಡ್, ಪೋರ್ಟ್ರೇಟ್ ಎರೇಸರ್, ಲೈವ್ ಫೋಟೋ, ಎಆರ್ ಸ್ಟಿಕ್ಕರ್ ಮತ್ತು ಸ್ಲೋ-ಮೋಷನ್‌ನಂತಹ ಫೀಚರ್ಸ್‌ಗಳನ್ನು ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಇನ್ನು ಈ ಸ್ಮಾರ್ಟ್‌ಫೋನ್ 4050mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 44W ವೇಗದ ಚಾರ್ಜಿಂಗ್‌ ಬೆಂಬಲಿಸಲಿದೆ. ಇದರ ಮೂಲಕ ಕೇವಲ 30 ನಿಮಿಷಗಳಲ್ಲಿ 69% ಚಾರ್ಜ್ ಮಾಡಲು ರೇಟ್ ಮಾಡಲಾಗಿದೆ. ಇನ್ನು ಕನನೆಕ್ಟಿವಿಟಿ ಆಯ್ಕೆಗಳಲ್ಲಿ ವೈ-ಫೈ, ಬ್ಲೂಟೂತ್ 5.2, ಯುಎಸ್‌ಬಿ ಟೈಪ್-ಸಿ ಮತ್ತು ಜಿಪಿಎಸ್ ಬೆಂಬಲಿಸಲಿದೆ. ಡಿಸ್ಪ್ಲೇ ಒಳಗೆ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಅನ್ನು ಒದಗಿಸಲಾಗುವುದು ಎನ್ನಲಾಗಿದೆ. ಇದು ಲೈಟ್ ಸೆನ್ಸರ್, ಗ್ರಾವಿಟಿ ಸೆನ್ಸರ್, ಜಿರೋಸ್ಕೋಪ್ ಅಂಡ್ ಕಂಪಾಸ್ ಸೆನ್ಸಾರ್‌ ಹೊಂದಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ವಿಯೆಟ್ನಾಂನಲ್ಲಿ ವಿವೋ V23e ಸ್ಮಾರ್ಟ್‌ಫೋನ್‌ ಬೆಲೆಯನ್ನು 8,490,000 VND (ಸುಮಾರು ರೂ 28,000) ಗೆ ನಿಗದಿಪಡಿಸಲಾಗಿದೆ. ಈ ಡಿವೈಸ್‌ ಸಿಂಗಲ್‌ 8GB RAM ರೂಪಾಂತರದಲ್ಲಿ 128GB ಆಂತರಿಕ ಸಂಗ್ರಹಣೆಯೊಂದಿಗೆ ಲಭ್ಯವಾಗಲಿದೆ. ಇದು ಮೂನ್ಲೈಟ್ ಶ್ಯಾಡೋ (ಕಪ್ಪು) ಮತ್ತು ನೀಲಿ ಗುಲಾಬಿ ಕಲರ್‌ ಆಯ್ಕೆಯಲ್ಲಿ ಬರಲಿದೆ.

ವಿವೋ X70ಪ್ರೊ ಸ್ಮಾರ್ಟ್‌ಫೋನ್‌

ಇನ್ನು ಇತ್ತೀಚಿಗೆ ಭಾರತದಲ್ಲಿ ವಿವೋ X70ಪ್ರೊ ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಲಾಗಿತ್ತು. ಈ ಸ್ಮಾರ್ಟ್‌ಫೋನ್‌ 6.56 ಇಂಚಿನ ಫುಲ್ ಹೆಚ್‌ಡಿ ಪ್ಲಸ್‌ AMOLED ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್‌ ಹೊಂದಿದ್ದು, HDR10 ಬೆಂಬಲವನ್ನು ಹೊಂದಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 1200 SoC ಪ್ರೊಸೆಸರ್‌ ಬೆಂಬಲವನ್ನು ಪಡೆದುಕೊಂಡಿದೆ. ಹಾಗೆಯೇ ಈ ಫೋನ್‌ 8GB RAM ಮತ್ತು 128GB ಇಂಟರ್‌ ಸ್ಟೋರೇಜ್ ಅನ್ನು ಹೊಂದಿದೆ. ಇದು ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೋನಿ IMX766V ಅಲ್ಟ್ರಾ-ಸೆನ್ಸಿಂಗ್ ಗಿಂಬಲ್ ಕ್ಯಾಮೆರಾವನ್ನು ಒಳಗೊಂಡಿದೆ. ಎರಡು ಮತ್ತು ಮೂರನೇ ಕ್ಯಾಮೆರಾ 12 ಮೆಗಾಪಿಕ್ಸೆಲ್ ಸೆನ್ಸರ್‌ ಹೊಂದಿದೆ. ಮೂರನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಪೆರಿಸ್ಕೋಪ್ ಲೆನ್ಸ್ ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 4,450mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 44W ಫ್ಲ್ಯಾಶ್ ಚಾರ್ಜ್ ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಭಾರತದಲ್ಲಿ ವಿವೋ X70 ಪ್ರೊ ಸ್ಮಾರ್ಟ್‌ಫೋನ್‌ 8GB+256GB ಸ್ಟೋರೇಜ್ ರೂಪಾಂತರಕ್ಕೆ 49,990ರೂ. ಮತ್ತು 12GB+256GB ಸ್ಟೋರೇಜ್ ರೂಪಾಂತರಕ್ಕೆ 52,990ರೂ ಬೆಲೆ ಹೊಂದಿದೆ.

Best Mobiles in India

English summary
Vivo V23e is expected to launch soon. It will sport a 6.44-inch Full-HD+ AMOLED display with a screen resolution of 1080x2400 pixels.to know more visit to kannada.gizbot.com.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X