ನೀವು ಹೊಸ ವಿವೋ ಫೋನ್‌ ಖರೀದಿ ಮಾಡಬೇಕೆ?..ಹಾಗಿದ್ರೆ, ತಡ ಮಾಡಬೇಡಿ!

|

ವಿವೋ ಮೊಬೈಲ್‌ ಸಂಸ್ಥೆಯು ಭಿನ್ನ ಸರಣಿಯಲ್ಲಿ ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಆ ಪೈಕಿ ವಿವೋ V23e ಮತ್ತು ವಿವೋ Y21T ಸ್ಮಾರ್ಟ್‌ಫೋನ್ ಹಲವು ಫೀಚರ್ಸ್‌ಗಳಿಂದ ಗಮನ ಸೆಳೆದಿದೆ. ಬಜೆಟ್‌ ಪ್ರೈಸ್‌ ಟ್ಯಾಗ್‌ ಹೊಂದಿರುವ ವಿವೋ V23e ಮತ್ತು ವಿವೋ Y21T ಸ್ಮಾರ್ಟ್‌ಫೋನ್‌ಗಳ ಬೆಲೆಯಲ್ಲಿ ಈಗ ದಿಢೀರ್ ಬೆಲೆ ಇಳಿಕೆ ಕಂಡಿದೆ. ಹಾಗೆಯೇ ಹೆಚ್ಚುವರಿಯಾಗಿ 2,500 ರೂ. ಗಳ ರಿಯಾಯಿತಿ ಸಹ ಸಿಗಲಿದೆ.

ಕಾಣಿಸಿಕೊಂಡಿದೆ

ವಿವೋ V23e ಮತ್ತು ವಿವೋ Y21T ಸ್ಮಾರ್ಟ್‌ಫೋನ್‌ಗಳ ಬೆಲೆಯಲ್ಲಿ ಭರ್ಜರಿ ಇಳಿಕೆ ಆಗಿದೆ. ಬೆಲೆ ಇಳಿಕೆಯ ಬಳಿಕ ವಿವೋ V23e ಫೋನ್‌ ಬೇಸ್ ವೇರಿಯಂಟ್ 24,999 ರೂ. ಬೆಲೆಯಲ್ಲಿ ಕಾಣಿಸಿಕೊಂಡಿದೆ. ಹಾಗೆಯೇ ವಿವೋ Y21T ಸ್ಮಾರ್ಟ್‌ಫೋನ್‌ ಬೇಸ್ ವೇರಿಯಂಟ್ 15,499 ರೂ. ಪ್ರೈಸ್‌ ಟ್ಯಾಗ್‌ನಲ್ಲಿ ಕಾಣಿಸಿಕೊಂಡಿದೆ. ಇದರೊಂದಿಗೆ ಹೆಚ್ಚುವರಿಯಾಗಿ ಬ್ಯಾಂಕ್‌ ಕೊಡುಗೆಗಳು ಸಹ ದೊರೆಯುತ್ತವೆ.

ಸಾಮರ್ಥ್ಯದಲ್ಲಿ

ವಿವೋ V23e ಮತ್ತು ವಿವೋ Y21T ಈ ಎರಡು ಸ್ಮಾರ್ಟ್‌ಫೋನ್‌ಗಳು ಟ್ರಿಪಲ್‌ ಕ್ಯಾಮೆರಾ ರಚನೆಯನ್ನು ಒಳಗೊಂಡಿದ್ದು, ಎರಡು ಫೋನ್‌ಗಳ ಮುಖ್ಯ ಕ್ಯಾಮೆರಾವು 50 ಮೆಗಾ ಪಿಕ್ಸಲ್‌ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಉಳಿದಂತೆ ಕೆಲವು ಫೀಚರ್ಸ್‌ಗಳಲ್ಲಿ ಭಿನ್ನತೆಗಳಿವೆ. ಹಾಗಾದರೇ ವಿವೋ V23e ಮತ್ತು ವಿವೋ Y21T ಸ್ಮಾರ್ಟ್‌ಫೋನ್‌ಗಳ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ವಿವೋ V23e 5G : ಡಿಸ್‌ಪ್ಲೇ ಮತ್ತು ಪ್ರೊಸೆಸರ್‌

ವಿವೋ V23e 5G : ಡಿಸ್‌ಪ್ಲೇ ಮತ್ತು ಪ್ರೊಸೆಸರ್‌

ವಿವೋ V23e 5G ಸ್ಮಾರ್ಟ್‌ಫೋನ್‌ 6.44 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಇನ್ನು ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 810 SoC ಪ್ರೊಸೆಸರ್‌ ಬಲವನ್ನು ಪಡೆದಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 12 ನಲ್ಲಿ ಫನ್‌ಟಚ್‌ OS 12 ಬೆಂಬಲಿಸಲಿದೆ. ಹಾಗೆಯೇ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೈಕ್ರೊ ಎಸ್‌ಡಿ ಕಾರ್ಡ್ ಮೂಲಕ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ವಿವೋ V23e 5G : ಕ್ಯಾಮೆರಾ ಮತ್ತು ಬ್ಯಾಟರಿ, ಇತರೆ

ವಿವೋ V23e 5G : ಕ್ಯಾಮೆರಾ ಮತ್ತು ಬ್ಯಾಟರಿ, ಇತರೆ

ವಿವೋ V23e 5G ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಸೆನ್ಸಾರ್‌ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್‌ ಹೊಂದಿದೆ. ಇದಲ್ಲದೆ ಆಟೋಫೋಕಸ್ ಲೆನ್ಸ್‌ ಹೊಂದಿರುವ 44 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್‌ 4,050mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 44W ಫ್ಲ್ಯಾಶ್‌ಚಾರ್ಜ್ ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, ಡ್ಯುಯಲ್-ಬ್ಯಾಂಡ್ Wi-Fi, ಬ್ಲೂಟೂತ್ v5.1, GPS/ A-GPS ಮತ್ತು USB ಟೈಪ್-C ಪೋರ್ಟ್ ಬೆಂಬಲಿಸಲಿದೆ. ಇದಲ್ಲದೆ ಅಂಡರ್ ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್‌ ಅನ್ನು ಹೊಂದಿದೆ.

ವಿವೋ Y21T: ಡಿಸ್‌ಪ್ಲೇ ಮತ್ತು ಪ್ರೊಸೆಸರ್‌

ವಿವೋ Y21T: ಡಿಸ್‌ಪ್ಲೇ ಮತ್ತು ಪ್ರೊಸೆಸರ್‌

ವಿವೋ Y21T ಸ್ಮಾರ್ಟ್‌ಫೋನ್‌ 1080 × 2408 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಒಳಗೊಂಡ 6.58 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್‌ ಅನ್ನು ಬೆಂಬಲಿಸಲಿದೆ. ಇದಲ್ಲದೆ ಬ್ಲೂ ಲೈಟ್‌ ಅನ್ನು ಫಿಲ್ಟರ್ ಮಾಡಲು ಡಿಸ್‌ಪ್ಲೇಯಲ್ಲಿ "ಐ ಪ್ರೊಟೆಕ್ಷನ್ ಮೋಡ್" ಅನ್ನು ಸಹ ಸೇರಿಸಲಾಗಿದೆ. ಜೊತೆಗೆ ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಸ್ನಾಪ್‌ಡ್ರಾಗನ್ 680 SoC ಅನ್ನು ಒಳಗೊಂಡಿದೆ. ಇದು ವಿವೋ ಕಂಪನಿಯ ಫನ್‌ಟಚ್ ಓಎಸ್ 12 ಜೊತೆಗೆ ಆಂಡ್ರಾಯ್ಡ್ 11 ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 4GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ ವರ್ಚುವಲ್‌ RAM ವಿಸ್ತರಣೆ ಮಾಡುವ ಅವಕಾಶವನ್ನು ಸಹ ಪಡೆದಿದೆ.

ವಿವೋ Y21T: ಕ್ಯಾಮೆರಾ ಮತ್ತು ಬ್ಯಾಟರಿ

ವಿವೋ Y21T: ಕ್ಯಾಮೆರಾ ಮತ್ತು ಬ್ಯಾಟರಿ

ವಿವೋ Y21T ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಕ್ಯಾಮೆರಾ ಮತ್ತು ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಸಹ ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇನ್ನು ಕ್ಯಾಮರಾ ಅಪ್ಲಿಕೇಶನ್ ವೈಯಕ್ತಿಕಗೊಳಿಸಿದ ಪೋರ್ಟ್ರೇಟ್ ಮೋಡ್, ಸೂಪರ್ HDR ಮತ್ತು ಸೂಪರ್ ನೈಟ್ ಮೋಡ್‌ನಂತಹ ಮೋಡ್‌ಗಳೊಂದಿಗೆ ಬರುತ್ತದೆ. ಜೊತೆಗೆ ಈ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು ಯುಎಸ್‌ಬಿ ಟೈಪ್-ಸಿ ಮೂಲಕ 18W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.

Best Mobiles in India

English summary
Vivo V23e, Y21T Get Price Cut in India: Check New Price and Offers.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X