ಸದ್ಯದಲ್ಲೇ ಭಾರತಕ್ಕೆ ಎಂಟ್ರಿ ನೀಡಲಿದೆ ವಿವೋ V25 5G ಸ್ಮಾರ್ಟ್‌ಫೋನ್!
ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ವಿವೋ ಕಂಪೆನಿ ತನ್ನ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ಭಾರತದ ಮಾರುಕಟ್ಟೆಯಲ್ಲಿ ಹೊಸ ವಿವೋ V25 5G ಸ್ಮಾರ್ಟ್‌ಫೋನ್ ಪರಿಚಯಿಸಲು ಸಿದ್ಧತೆ ನಡೆಸಿದೆ. ಈ ಸ್ಮಾರ್ಟ್‌ಫೋನ್ ಫ್ಲಿಪ್‌ಕಾರ್ಟ್ ಬಿಗ್ ಬಿಲಿಯನ್ ಡೇಸ್ ಸೇಲ್ ಸಮಯದಲ್ಲಿ ಬಿಡುಗಡೆಯಾಗುವ ಸಾಧ್ಯತೆಯಿದೆ.

ಹೌದು, ವಿವೋ ಕಂಪೆನಿ ತನ್ನ ಹೊಸ ವಿವೋ V25 5G ಸ್ಮಾರ್ಟ್‌ಫೋನ್ ಲಾಂಚ್ ಮಾಡಲು ವೇದಿಕೆ ಸಿದ್ದಪಡಿಸಿದೆ. ಈ ಸ್ಮಾರ್ಟ್‌ಫೋನ್ ಭಾರತದಲ್ಲಿ ಶೀಘ್ರದಲ್ಲೇ ಬಿಡುಗಡೆ ಆಗಲಿದೆ. ಇನ್ನು ಈ ಸ್ಮಾರ್ಟ್‌ಫೋನ್ 6.44 ಇಂಚಿನ AMOLED ಡಿಸ್ಪ್ಲೇಯನ್ನು ಹೊಂದಿದೆ. ಇನ್ನು ಸ್ಮಾರ್ಟ್‌ಫೋನ್ ಡಿಸ್‌ಪ್ಲೇ ವಾಟರ್-ಡ್ರಾಪ್ ನಾಚ್ ವಿನ್ಯಾಸವನ್ನು ಹೊಂದಿದೆ. ಇದು 90Hz ಹೆಚ್ಚಿನ ರಿಫ್ರೆಶ್ ರೇಟ್ ಬೆಂಬಲವನ್ನು ಕೂಡ ಹೊಂದಿದೆ ಎನ್ನಲಾಗಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ವಿಶೇಷತೆ ಏನಿರಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ರಚನೆ ಹೇಗಿದೆ?
ವಿವೋ V25 5G ಸ್ಮಾರ್ಟ್‌ಫೋನ್ 1080 x 2404 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.44 ಇಂಚಿನ ಅಮೋಲೆಡ್ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 90Hz ರಿಫ್ರೇಶ್ ರೇಟ್ ಅನ್ನು ಬೆಂಬಲಿಸಲಿದೆ. ಇದು HDR10+ ಹೊಂದಿದ್ದು 84.7% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಪಡೆದಿದೆ. ಇನ್ನು ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಒಳಗೊಂಡಿದೆ.

ಪ್ರೊಸೆಸರ್ ಬಲವೇನು?
ಈ ಸ್ಮಾರ್ಟ್‌ಫೋನ್ 6nm ಮೀಡಿಯಾ ಟೆಕ್ ಡೈಮೆನ್ಸಿಟಿ 900 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಆಂಡ್ರಾಯ್ಡ್ 12 OS ಬೆಂಬಲವನ್ನು ಹೊಂದಿದೆ. ಹಾಗೆಯೇ 8GB RAM ಮತ್ತು 128GB ಇಂಟರ್ ಸ್ಟೋರೇಜ್ ಅನ್ನು ಹೊಂದಿದೆ. ಇದರಲ್ಲಿ ಮೆಮೊರಿ ಕಾರ್ಡ್ ಮೂಲಕ ಸ್ಟೋರೇಜ್ ಸಾಮರ್ಥ್ಯ ವಿಸ್ತರಿಸುವುದಕ್ಕೆ ಅವಕಾಶ ನೀಡಲಾಗಿಲ್ಲ ಎನ್ನಲಾಗಿದೆ.

ಕ್ಯಾಮೆರಾ ಸೆಟ್‌ಅಪ್ ಎಷ್ಟಿರಲಿದೆ?
ಇದು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್ಅಪ್ ಅನ್ನು ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್ ಅಲ್ಟ್ರಾ ವೈಡ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಕ್ಯಾಮೆರಾವನ್ನು ಹೊಂದಿರಲಿದೆ. ಇದಲ್ಲದೆ 50 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ
ಈ ಸ್ಮಾರ್ಟ್‌ಫೋನ್ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿರಲಿದೆ. ಇದು 44W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ವೈಫೈ, ಬ್ಲೂಟೂತ್ ಅನ್ನು ಬೆಂಬಲಿಸಲಿದೆ. ಇದಲ್ಲದೆ ಆಕ್ಸಿಲೆರೋಮೀಟರ್, ಪ್ರಾಕ್ಸಿಮಿಟಿ ಸೆನ್ಸಾರ್, ಗ್ಯಾವಿಟಿ ಸೆನ್ಸಾರ್ ಅನ್ನು ಹೊಂದಿರಲಿದೆ ಎಂದು ನಿರೀಕ್ಷಿಸಲಾಗಿದೆ.

ಬೆಲೆ ಮತ್ತು ಲಭ್ಯತೆ
ಈ ಸ್ಮಾರ್ಟ್‌ಫೋನ್ ಲಾಂಚ್ ಡೇಟ್ ಇನ್ನು ಕೂಡ ಅಧಿಕೃತವಾಗಿಲ್ಲ. ಆದರೆ ಈ ಸ್ಮಾರ್ಟ್‌ಫೋನ್ ಫ್ಲಿಪ್‌ಕಾರ್ಟ್ ಬಿಗ್ ಬಿಲಿಯನ್ ಡೇಸ್ ಸೇಲ್‌ನಲ್ಲಿ ಸೇಲ್ ಆಗೋದು ಪಕ್ಕಾ ಆಗಿದೆ. ಆದರಿಂದ ಶೀಘ್ರದಲ್ಲೇ ಈ ಸ್ಮಾರ್ಟ್‌ಫೋನ್ ಮಾರುಕಟ್ಟೆಗೆ ಎಂಟ್ರಿ ನೀಡಲಿದೆ.

ಇದಲ್ಲದೆ ವಿವೋ ಕಂಪೆನಿ ಇತ್ತೀಚಿಗೆ ಭಾರತದಲ್ಲಿ ತನ್ನ ಹೊಸ ವಿವೋ Y35 ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ. ಈ ಮೂಲಕ ತನ್ನ Y ಸರಣಿಯ ಸ್ಮಾರ್ಟ್‌ಫೋನ್ ಪೋರ್ಟ್‌ಫೋಲಿಯೊವನ್ನು ವಿಸ್ತರಿಸಿದೆ. ಈ ಸ್ಮಾರ್ಟ್‌ಫೋನ್ ಪ್ರೀಮಿಯಂ ವಿನ್ಯಾಸ ಮತ್ತು ಲುಕ್ ಅನ್ನು ಒಳಗೊಂಡಿದೆ. ಇದು ಸ್ನಾಪ್‌ಡ್ರಾಗನ್ 680 ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಜೊತೆಗೆ 44W ಫ್ಲ್ಯಾಷ್ ಚಾರ್ಜ್ ಬೆಂಬಲಿಸುವ 5000mAh ಸಾಮರ್ಥ್ಯದ ಬ್ಯಾಟರಿ ಒಳಗೊಂಡಿದೆ. ಇದು ವಿಸ್ತೃತ 8GB RAM ಅನ್ನು ಹೊಂದಿದೆ. ಎಲೆಕ್ಟ್ರಾನಿಕ್ ಇಮೇಜ್ ಸ್ಟೆಬಿಲೈಸೇಶನ್ ನೊಂದಿಗೆ ಸೆಟ್ ಮಾಡಲಾದ 50MP ಸೂಪರ್ ನೈಟ್ ಕ್ಯಾಮೆರಾವನ್ನು ಹೊಂದಿದೆ.


Click it and Unblock the Notifications








