ಬಹು ನಿರೀಕ್ಷಿತ ವಿವೋ V25 ಸ್ಮಾರ್ಟ್‌ಫೋನ್‌ ಬಿಡುಗಡೆ! ಆಕರ್ಷಕ ಕ್ಯಾಮೆರಾ ಫೀಚರ್ಸ್‌!

|

ವಿವೋ ಕಂಪೆನಿಯ ಸ್ಮಾರ್ಟ್‌ಫೋನ್‌ಗಳಿಗೆ ಭಾರತದ ಮಾರುಕಟ್ಟೆಯಲ್ಲಿ ಭಾರಿ ಬೇಡಿಕೆ ಇದೆ. ಕ್ಯಾಮೆರಾ ಕೇಂದ್ರಿತ ಫೀಚರ್ಸ್‌ಗಳಿಂದ ವಿವೋ ಸ್ಮಾರ್ಟ್‌ಫೋನ್‌ಗಳು ಸಾಕಷ್ಟು ಗಮನಸೆಳೆದಿವೆ. ಸದ್ಯ ಇದೀಗ ವಿವೋ ಕಂಪೆನಿ ಭಾರತದಲ್ಲಿ ತನ್ನ ಬಹು ನಿರೀಕ್ಷಿತ ವಿವೋ V25 5G ಸ್ಮಾರ್ಟ್‌ಫೋನ್‌ ಪರಿಚಯಿಸಿದೆ. ಇದು 8GB RAM + 128GB ಮತ್ತು 12GB RAM + 256GB ಸ್ಟೋರೇಜ್‌ ಸಾಮರ್ಥ್ಯದ ಎರಡು ವೇರಿಯೆಂಟ್‌ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಫ್ಲಿಪ್‌ಕಾರ್ಟ್ ಬಿಗ್ ಬಿಲಿಯನ್ ಡೇಸ್ ಸೇಲ್ 2022 ರಲ್ಲಿ ಮಾರಾಟವಾಗಲಿದೆ.

ವಿವೋ

ಹೌದು, ವಿವೋ ಕಂಪೆನಿ ಭಾರತದಲ್ಲಿ ತನ್ನ ಹೊಸ ವಿವೋ V25 ಸ್ಮಾರ್ಟ್‌ಫೋನ್‌ ಲಾಂಚ್‌ ಮಾಡಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 900 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಜೊತೆಗೆ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್‌ ಇನ್-ಡಿಸ್‌ಪ್ಲೇ ಫಿಂಗರ್‌ಪ್ರಿಂಟ್‌ ಸೆನ್ಸಾರ್‌ ಅನ್ನು ಹೊಂದಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ಗಳನ್ನು ಹೊಂದಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ ಹೇಗಿದೆ?

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ ಹೇಗಿದೆ?

ವಿವೋ V25 ಸ್ಮಾರ್ಟ್‌ಫೋನ್‌ 6.44 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1080 x 2404 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿದೆ. ಇದು 20:9 ರಚನೆಯ ಅನುಪಾತವನ್ನು ಹೊಂದಿದ್ದು, 409 ಪಿಪಿಐ ಪಿಕ್ಸೆಲ್ ಸಾಂದ್ರತೆಯನ್ನು ಒಳಗೊಂಡಿದೆ. ಇನ್ನು ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಬೆಂಬಲಿಸಲಿದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ವಿವೋ V25 ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 900 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಆಂಡ್ರಾಯ್ಡ್‌ 12 ಬೆಂಬಲದೊಂದಿಗೆ ರನ್‌ ಆಗಲಿದೆ. ಹಾಗೆಯೇ 8GB RAM + 128GB ಮತ್ತು 12GB RAM + 256GB ಸ್ಟೋರೇಜ್‌ ಸಾಮರ್ಥ್ಯ ಎರಡು ವೇರಿಯೆಂಟ್‌ ಆಯ್ಕೆಗಳಲ್ಲಿ ಬರಲಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಬಳಸಿ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಿಕೊಳ್ಳುವುದಕ್ಕೆ ಕೂಡ ಅವಕಾಶವನ್ನು ನೀಡಲಾಗಿದೆ.

ಕ್ಯಾಮೆರಾ ಸೆಟ್‌ಅಪ್‌ ಏನಿದೆ?

ಕ್ಯಾಮೆರಾ ಸೆಟ್‌ಅಪ್‌ ಏನಿದೆ?

ವಿವೋ V25 ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64ಮೆಗಾಪಿಕ್ಸೆಲ್‌ ಸೆನ್ಸಾರ್‌ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್‌ ಅಲ್ಟ್ರಾ-ವೈಡ್-ಆಂಗಲ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಮ್ಯಾಕ್ರೋ ಸೆನ್ಸಾರ್‌ ಅನ್ನು ಹೊಂದಿದೆ. ಇನ್ನು ಹಿಂಭಾಗದ ಕ್ಯಾಮೆರಾಗಳು ನೈಟ್‌ ಮೋಡ್, ಪೋರ್ಟ್ರೇಟ್, ಸೂಪರ್-ಮ್ಯಾಕ್ರೋ, ಹೈ ರೆಸಲ್ಯೂಶನ್, ಪನೋರಮಾ, ಲೈವ್ ಫೋಟೋ, ಸ್ಲೋ ಮೋಷನ್, ಟೈಮ್ ಲ್ಯಾಪ್ಸ್, ಪ್ರೊ, ಎಆರ್ ಸ್ಟಿಕ್ಕರ್‌ಗಳು, ವ್ಲಾಗ್ ಮೂವಿ ಫೀಚರ್ಸ್‌ ಅನ್ನು ಹೊಂದಿದೆ. ಇದಲ್ಲದೆ 50 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ವಿವೋ V25 ಸ್ಮಾರ್ಟ್‌ಫೋನ್‌ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 44W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, ಬ್ಲೂಟೂತ್ 5.2, ಡ್ಯುಯಲ್-ಬ್ಯಾಂಡ್ Wi-Fi, GPS ಮತ್ತು ಚಾರ್ಜಿಂಗ್ ಮತ್ತು ಡೇಟಾ ಸಿಂಕ್‌ಗಾಗಿ USB ಟೈಪ್-C ಪೋರ್ಟ್ ಅನ್ನು ಬೆಂಬಲಿಸಲಿದೆ. ಇದು ಭದ್ರತೆಗಾಗಿ ಇನ್-ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್‌ ಅನ್ನು ಹೊಂದಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ವಿವೋ V25 ಸ್ಮಾರ್ಟ್‌ಫೋನ್‌ ಭಾರತದಲ್ಲಿ 8GB RAM + 128GB ಮಾದರಿಗೆ 27,999ರೂ. ಬೆಲೆ ಹೊಂದಿದೆ. ಆದರೆ 12GB RAM + 256GB ಆವೃತ್ತಿಗೆ 31,999ರೂ. ಬೆಲೆ ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಸರ್ಫಿಂಗ್ ಬ್ಲೂ ಮತ್ತು ಎಲಿಗಂಟ್‌ ಬ್ಲಾಕ್‌ ಕಲರ್‌ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಈ ಫೋನ್‌ ಫ್ಲಿಪ್‌ಕಾರ್ಟ್ ಮತ್ತು ವಿವೋ ಆನ್‌ಲೈನ್ ಸ್ಟೋರ್ ಮೂಲಕ ಮಾರಾಟವಾಗಲಿದೆ.

ಆಫರ್‌ ಏನಿದೆ?

ಆಫರ್‌ ಏನಿದೆ?

ವಿವೋ V25 ಸ್ಮಾರ್ಟ್‌ಫೋನ್‌ ಫ್ಲಿಪ್‌ಕಾರ್ಟ್ ಮತ್ತು Vivo.com/in ಮೂಲಕ ಪ್ರೀ ಆರ್ಡರ್‌ ಬುಕ್ಕಿಂಗ್‌ಗೆ ಲಭ್ಯವಿದೆ. ಇದನ್ನು ರಿಲಯನ್ಸ್ ಡಿಜಿಟಲ್, ಕ್ರೋಮಾ, ವಿಜಯ್ ಸೇಲ್ಸ್, ಪೂರ್ವಿಕಾ, ಸಂಗೀತಾ ಸ್ಟೋರ್‌ನಲ್ಲಿ ಆಫ್‌ಲೈನ್‌ ಮೂಲಕ ಪ್ರೀ ಬುಕ್ಕಿಂಗ್‌ ಮಾಡಬಹುದಾಗಿದೆ. ಪ್ರೀ ಆರ್ಡರ್‌ ಬುಕ್ಕಿಂಗ್‌ ಮಾಡುವ ಗ್ರಾಹಕರು ICICI ಬ್ಯಾಂಕ್ ಅಥವಾ SBI ಬ್ಯಾಂಕ್ ಕಾರ್ಡ್‌ಗಳನ್ನು ಬಳಸಿಕೊಂಡು 10% ಕ್ಯಾಶ್‌ಬ್ಯಾಕ್ ಮತ್ತು 2,000ರೂ. ಎಕ್ಸ್‌ಚೇಂಜ್‌ ಬೋನಸ್‌ ಅನ್ನು ಪಡೆಯುವುದಕ್ಕೆ ಸಾಧ್ಯವಾಗಲಿದೆ.

Best Mobiles in India

English summary
Vivo V25 5G With 50-Megapixel Selfie Camera Launched in India

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X