ವಿವೋ V25 ಪ್ರೊ 5G ಬೆಲೆಯಲ್ಲಿ ಭಾರೀ ಇಳಿಕೆ!..ಫೋನ್ ಖರೀದಿಸೋಕೆ ಇದು ಸಕಾಲ!
ಮೊಬೈಲ್ ಮಾರುಕಟ್ಟೆಯಲ್ಲಿ ವಿವೋ ಕಂಪನಿಯು ಭಿನ್ನ ಫೋನ್ ಶ್ರೇನಿಗಳ ಮೂಲಕ ಗುರುತಿಸಿಕೊಂಡಿದೆ. ಅವುಗಳಲ್ಲಿ V ಸರಣಿಯಲ್ಲಿ ವಿವೋ V25 ಪ್ರೊ 5G ಸ್ಮಾರ್ಟ್‌ಫೋನ್ ಫ್ಲ್ಯಾಗ್‌ಶಿಪ್ ಮಾದರಿಯಂತಹ ಫೀಚರ್ಸ್‌ಗಳಿಂದ ಗ್ರಾಹಕರ ಗಮನ ಸೆಳೆದಿದೆ. ಈ ಫೋನ್ ಇದೀಗ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ನಲ್ಲಿ ಬೊಂಬಾಟ್ ರಿಯಾಯಿತಿ ಬೆಲೆಯಲ್ಲಿ ಕಾಣಿಸಿಕೊಂಡಿದ್ದು, ಗ್ರಾಹಕರು ಅಚ್ಚರಿ ಪಡುವಂತೆ ಮಾಡಿದೆ.
ಹೌದು, ಫ್ಲಿಪ್‌ಕಾರ್ಟ್ ತಾಣದಲ್ಲಿ ವಿವೋ V25 ಪ್ರೊ 5G ಮೊಬೈಲ್ 10% ರಷ್ಟು ರಿಯಾಯಿತಿ ಅನ್ನು ಪಡೆದಿದೆ. 8GB RAM + 128GB ಸ್ಟೋರೇಜ್ ವೇರಿಯಂಟ್ ಆಯ್ಕೆಯ ವಿವೋ V25 ಪ್ರೊ 5G ಬೆಲೆಯು 39,999ರೂ. ಆಗಿದ್ದು, ಡಿಸ್ಕೌಂಟ್‌ನಲ್ಲಿ 35,999ರೂ. ಗಳಿಗೆ ಖರೀದಿ ಮಾಡಬಹುದಾಗಿದೆ. ಇದರೊಂದಿಗೆ ಗ್ರಾಹಕರಿಗೆ ಆಯ್ದ ಬ್ಯಾಂಕ್ ಆಫರ್ ಕೊಡುಗೆಗಳು ಸಹ ದೊರೆಯುತ್ತವೆ.

ಅಂದಹಾಗೆ ವಿವೋ V25 ಪ್ರೊ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 1300 SoC ಪ್ರೊಸೆಸರ್ ಪವರ್‌ನಲ್ಲಿ ಕೆಲಸ ಮಾಡಲಿದ್ದು, ಆಂಡ್ರಾಯ್ಡ್ 12 ಓಎಸ್ ಸಪೋರ್ಟ್ ಒಳಗೊಂಡಿದೆ. ಇದರ ಜೊತೆಗೆ 64ಎಂಪಿ ಪ್ರಾಥಮಿಕ ಕ್ಯಾಮೆರಾ ಸೆನ್ಸಾರ್ ಇದ್ದು, 32ಎಂಪಿ ಸೆನ್ಸಾರ್‌ನ ಸೆಲ್ಫಿ ಕ್ಯಾಮೆರಾ ಪಡೆದುಕೊಂಡಿದೆ. ಇನ್ನುಳಿದಂತೆ ವಿವೋ V25 ಪ್ರೊ ಸ್ಮಾರ್ಟ್‌ಫೋನಿನ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಡಿಸ್‌ಪ್ಲೇ ವಿನ್ಯಾಸ ಮತ್ತು ರಚನೆ ಹೇಗಿದೆ : ವಿವೋ V25 ಪ್ರೊ ಮೊಬೈಲ್ 6.56 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಅಮೋಲೆಡ್ ಡಿಸ್‌ಪ್ಲೇ ಅನ್ನು ಹೊಂದಿದೆ. ಈ ಡಿಸ್‌ಪ್ಲೇ 2,376 x 1,080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿದ್ದು, ಹಾಗೆಯೇ 3D ಕರ್ವ್ಡ್ ಸ್ಕ್ರೀನ್ ಹೊಂದಿದೆ. ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಒಳಗೊಂಡಿದ್ದು, HDR 10+ ಪ್ರಮಾಣೀಕರಣವನ್ನು ಸಹ ಹೊಂದಿದೆ. ಅಲ್ಲದೇ ಪಂಚ್ ಹೋಲ್ ಡಿಸ್‌ಪ್ಲೇ ವಿನ್ಯಾಸವನ್ನು ಸಹ ಪಡೆದಿದೆ.
ಪ್ರೊಸೆಸರ್ ಪವರ್ ಯಾವುದು : ವಿವೋ V25 ಪ್ರೊ ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 1300 SoC ಪ್ರೊಸೆಸರ್‌ನಲ್ಲಿ ಕೆಲಸ ಮಾಡಲಿದೆ. ಇದಕ್ಕೆ ಪೂರಕವಾಗಿ ಫನ್‌ಟಚ್ OS 12 ಬೆಂಬಲವನ್ನು ಪಡೆದುಕೊಂಡಿದೆ. ಹಾಗೆಯೇ 12GB RAM ಮತ್ತು 256GB ಆಂತರೀಕ ಸ್ಟೋರೇಜ್ ಆಯ್ಕೆ ಪಡೆದುಕೊಂಡಿದೆ. ಇದರಲ್ಲಿ RAM ವಿಸ್ತರಣೆ ಫೀಚರ್ಸ್ ಅನ್ನು ಬಳಸಿಕೊಂಡು RAM ಅನ್ನು 8GB ವರೆಗೆ ವಿಸ್ತರಿಸಿಕೊಳ್ಳಬಹುದಾಗಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್ ಲಿಕ್ವಿಡ್ ಕೂಲಿಂಗ್ ವಿಸಿ ಸಿಸ್ಟಂ ಅನ್ನು ಕೂಡ ಅಳವಡಿಸಲಾಗಿದೆ.
ಕ್ಯಾಮೆರಾ ಸೆನ್ಸಾರ್ ರಚನೆ : ವಿವೋ V25 ಪ್ರೊ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಪಡೆದಿದೆ. ಇದರಲ್ಲಿ ಪ್ರಾಥಮಿಕ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ವೈಡ್-ಆಂಗಲ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಅನ್ನು ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಅನ್ನು ಹೊಂದಿದೆ. ಇದು ಐ ಆಟೋಫೋಕಸ್ ಮತ್ತು f/2.45 ಲೆನ್ಸ್ ಅನ್ನು ಹೊಂದಿದೆ.
ಬ್ಯಾಟರಿ ಬ್ಯಾಕ್‌ಅಪ್ ಎಷ್ಟಿದೆ : ವಿವೋ V25 ಪ್ರೊ ಸ್ಮಾರ್ಟ್‌ಫೋನ್ 66W ವೇಗದ ಚಾರ್ಜಿಂಗ್ ಬೆಂಬಲವನ್ನು ಹೊಂದಿರುವ 4,830 mAh ಸಾಮರ್ಥ್ಯದ ಬ್ಯಾಟರಿಯನ್ನು ಪಡೆದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್-ಬ್ಯಾಂಡ್ Wi-Fi, ಬ್ಲೂಟೂತ್ v5.2, GPS ಮತ್ತು USB ಟೈಪ್-C ಪೋರ್ಟ್ ಅನ್ನು ಪಡೆದಿದೆ. ಇದಲ್ಲದೆ ಅಕ್ಸೆಲೆರೊಮೀಟರ್, ಆಂಬಿಯೆಂಟ್ ಲೈಟ್ ಸೆನ್ಸಾರ್, ಪ್ರಾಕ್ಸಿಮಿಟಿ ಸೆನ್ಸಾರ್ , ಇ ದಿಕ್ಸೂಚಿ ಮತ್ತು ಗೈರೊಸ್ಕೋಪ್ ಅನ್ನು ಹೊಂದಿದೆ.
ಕಲರ್ ಆಯ್ಕೆ ಮತ್ತು ಮೆಮೊರಿ : ವಿವೋ V25 ಪ್ರೊ ಸ್ಮಾರ್ಟ್‌ಫೋನ್ ಭಾರತದಲ್ಲಿ 8GB RAM + 128GB ಆಂತರೀಕ ಸ್ಟೋರೇಜ್ ಹಾಗೂ 12GB RAM + 256GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಪಡೆದಿದೆ. ಇನ್ನು ಈ ಫೋನ್ ಪ್ಯೂರ್ ಬ್ಲಾಕ್ ಮತ್ತು ಸೇಲಿಂಗ್ ಬ್ಲೂ ಕಲರ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯವಾಗಲಿದೆ.


Click it and Unblock the Notifications








