Home
ಸುದ್ದಿಜಾಲ

ಫ್ಲಿಪ್‌ಕಾರ್ಟ್‌ನಲ್ಲಿ 'ವಿವೋ V25 ಪ್ರೊ' ಫೋನಿಗೆ ಭಾರೀ ರಿಯಾಯಿತಿ!

ವಿವೋ ಮೊಬೈಲ್ ಸಂಸ್ಥೆಯು V ಸರಣಿಯಲ್ಲಿ ಇತ್ತೀಚಿಗೆ ಬಿಡುಗಡೆ ಮಾಡಿರುವ ವಿವೋ V25 ಪ್ರೊ ಸ್ಮಾರ್ಟ್‌ಫೋನ್ ಆಕರ್ಷಕ ಫೀಚರ್ಸ್‌ಗಳಿಂದ ಈಗಾಗಲೇ ಮಾರುಕಟ್ಟೆಯಲ್ಲಿ ಗಮನ ಸೆಳೆದಿದೆ. ಇದೀಗ ಈ ಫೋನ್ ಫ್ಲಿಪ್‌ಕಾರ್ಟ್‌ನಲ್ಲಿ ಬ್ಯಾಂಕ್‌ ರಿಯಾಯಿತಿಯಲ್ಲಿ ಕಾಣಿಸಿಕೊಂಡಿದ್ದು, ಈ ಮೂಲಕ ಮತ್ತಷ್ಟು ಗ್ರಾಹಕರನ್ನು ಆಕರ್ಷಿಸಿದೆ.

ಫ್ಲಿಪ್‌ಕಾರ್ಟ್

ಹೌದು, ಗ್ರಾಹಕರು ಫ್ಲಿಪ್‌ಕಾರ್ಟ್ ತಾಣದಲ್ಲಿ ಹೆಚ್‌ಡಿಎಫ್‌ಸಿ ಕ್ರೆಡಿಟ್‌ ಕಾರ್ಡ್‌ ಬಳಸಿ ವಿವೋ V20 ಸ್ಮಾರ್ಟ್‌ಫೋನ್‌ ಅನ್ನು ಖರೀದಿಸಿದರೆ, 3,500ರೂ.ವರೆಗೂ ಡಿಸ್ಕೌಂಟ್‌ ಸಿಗಲಿದೆ. ಶೇ 10% ವರೆಗೂ ರಿಯಾಯಿತಿ ತಿಳಿಸಿವೆ. ಈ ಕೊಡುಗೆ ಮೂಲಕ ಗ್ರಾಹಕರು ವಿವೋ V25 ಪ್ರೊ ಸ್ಮಾರ್ಟ್‌ಫೋನ್ ಅನ್ನು ರಿಯಾಯಿತಿ ದರದಲ್ಲಿ ಪಡೆಯಬಹುದು. ಇನ್ನು ಈ ಫೋನ್ 8GB RAM + 128GB ಇಂಟರ್‌ ಸ್ಟೋರೇಜ್‌ ಬೇಸ್‌ ಮಾಡೆಲ್‌ ಆಯ್ಕೆಗೆ 35,999ರೂ. ಬೆಲೆ ಹೊಂದಿದೆ. ಇನ್ನುಳಿದಂತೆ ಈ ಫೋನಿನ ಫೀಚರ್ಸ್‌ಗಳ ಬಗ್ಗೆ ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ವಿನ್ಯಾಸ ಮತ್ತು ರಚನೆ

ಡಿಸ್‌ಪ್ಲೇ ವಿನ್ಯಾಸ ಮತ್ತು ರಚನೆ

ವಿವೋ V25 ಪ್ರೊ ಸ್ಮಾರ್ಟ್‌ಫೋನ್‌ 6.56 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 2,376x1,080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಹೊಂದಿದೆ. ಇದು ಹೆಚ್ಚು ಪ್ರೀಮಿಯಂ ಅನುಭವಕ್ಕಾಗಿ 3D ಕರ್ವ್ಡ್‌ ಸ್ಕ್ರೀನ್‌ ಹೊಂದಿದೆ. ಈ ಡಿಸ್‌ಪ್ಲೇ 120Hz ರಿಫ್ರೆಶ್‌ ರೇಟ್‌ ಒಳಗೊಂಡಿದ್ದು,HDR 10+ ಪ್ರಮಾಣೀಕರಣವನ್ನು ಸಹ ಹೊಂದಿದೆ. ಇದು ಪಂಚ್‌ ಹೋಲ್‌ ಡಿಸ್‌ಪ್ಲೇ ವಿನ್ಯಾಸವನ್ನು ಪಡೆದಿದೆ.

ಪ್ರೊಸೆಸರ್‌ ಯಾವುದು

ಪ್ರೊಸೆಸರ್‌ ಯಾವುದು

ವಿವೋ V25 ಪ್ರೊ ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 1300 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ ಫನ್‌ಟಚ್‌ OS 12 ಬೆಂಬಲವನ್ನು ಪಡೆದುಕೊಂಡಿದೆ. ಹಾಗೆಯೇ 12GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಅನ್ನು ಪಡೆದುಕೊಂಡಿದೆ. ಇದರಲ್ಲಿ RAM ವಿಸ್ತರಣೆ ಫೀಚರ್ಸ್‌ ಅನ್ನು ಬಳಸಿಕೊಂಡು RAM ಅನ್ನು 8GB ವರೆಗೆ ವಿಸ್ತರಿಸಿಕೊಳ್ಳಬಹುದಾಗಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ ಲಿಕ್ವಿಡ್‌ ಕೂಲಿಂಗ್‌ ವಿಸಿ ಸಿಸ್ಟಂ ಅನ್ನು ಕೂಡ ಅಳವಡಿಸಲಾಗಿದೆ.

ಕ್ಯಾಮೆರಾ ಸೆಟ್‌ಅಪ್‌ ಏನಿದೆ?

ಕ್ಯಾಮೆರಾ ಸೆಟ್‌ಅಪ್‌ ಏನಿದೆ?

ವಿವೋ V25ಪ್ರೊ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ವೈಡ್-ಆಂಗಲ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್‌ ಅನ್ನು ಒಳಗೊಂಡಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇದು ಐ ಆಟೋಫೋಕಸ್ ಮತ್ತು f/2.45 ಲೆನ್ಸ್‌ ಅನ್ನು ಒಳಗೊಂಡಿದೆ.

ಬ್ಯಾಟರಿ ಬ್ಯಾಕ್‌ಅಪ್‌

ಬ್ಯಾಟರಿ ಬ್ಯಾಕ್‌ಅಪ್‌

ವಿವೋ V25 ಪ್ರೊ ಸ್ಮಾರ್ಟ್‌ಫೋನ್‌ 66W ವೇಗದ ಚಾರ್ಜಿಂಗ್ ಬೆಂಬಲವನ್ನು ಹೊಂದಿರುವ 4,830 mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್-ಬ್ಯಾಂಡ್ Wi-Fi, ಬ್ಲೂಟೂತ್ v5.2, GPS ಮತ್ತು USB ಟೈಪ್-C ಪೋರ್ಟ್ ಅನ್ನು ಹೊಂದಿದೆ. ಇದಲ್ಲದೆ ಅಕ್ಸೆಲೆರೊಮೀಟರ್, ಆಂಬಿಯೆಂಟ್ ಲೈಟ್ ಸೆನ್ಸಾರ್‌, ಪ್ರಾಕ್ಸಿಮಿಟಿ ಸೆನ್ಸಾರ್‌ , ಇ ದಿಕ್ಸೂಚಿ ಮತ್ತು ಗೈರೊಸ್ಕೋಪ್ ಅನ್ನು ಹೊಂದಿದೆ. ಸ್ಮಾರ್ಟ್‌ಫೋನ್‌ ಬಾಕ್ಸ್‌ನಲ್ಲಿ ವಿವೋ ಚಾರ್ಜಿಂಗ್ ಅಡಾಪ್ಟರ್, ಯುಎಸ್‌ಬಿ ಟೈಪ್-ಸಿ ಕೇಬಲ್, ಯುಎಸ್‌ಬಿ ಟೈಪ್-ಸಿ ಟು 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಅಡಾಪ್ಟರ್ ಮತ್ತು ಫೋನ್ ಕೇಸ್ ಅನ್ನು ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ವಿವೋ V25 ಪ್ರೊ ಸ್ಮಾರ್ಟ್‌ಫೋನ್‌ ಭಾರತದಲ್ಲಿ 8GB RAM + 128GB ಇಂಟರ್‌ ಸ್ಟೋರೇಜ್‌ ಬೇಸ್‌ ಮಾಡೆಲ್‌ ಆಯ್ಕೆಗೆ 35,999ರೂ. ಬೆಲೆ ಹೊಂದಿದೆ. ಇನ್ನು 12GB RAM + 256GB ಇಂಟರ್‌ಬಿಲ್ಟ್‌ ಸ್ಟೋರೇಜ್‌ ಸಾಮರ್ಥ್ಯದ ಟಾಪ್-ಎಂಡ್ ರೂಪಾಂತರದ ಆಯ್ಕೆಗೆ 39,999ರೂ. ಬೆಲೆಯನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್‌ ಫ್ಲಿಪ್‌ಕಾರ್ಟ್, ವಿವೊ ಆನ್‌ಲೈನ್ ಸ್ಟೋರ್ ಮತ್ತು ಇತರ ರೀಟೈಲ್ ಚಾನೆಲ್‌ಗಳ ಮೂಲಕ ಖರೀದಿಸಬಹುದು. ಇದು ಪ್ಯೂರ್ ಬ್ಲಾಕ್ ಮತ್ತು ಸೇಲಿಂಗ್ ಬ್ಲೂ ಕಲರ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯವಾಗಲಿದೆ.

Best Mobiles in India

English summary
Vivo V25 Pro available on discount Price on Flipkart: Details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+