ವಿವೋ V25 ಪ್ರೊ ಫಸ್ಟ್‌ ಸೇಲ್‌ ಪ್ರಾರಂಭ!..ಈ ಫೋನ್‌ ಬಣ್ಣ ಬದಲಿಸುತ್ತೆ!

|

ವಿವೋ ಕಂಪನಿಯು ಇತ್ತೀಚಿಗೆ ಹೊಸದಾಗಿ 'ವಿವೋ V25 ಪ್ರೊ ಸ್ಮಾರ್ಟ್‌ಫೋನ್‌' ಬಿಡುಗಡೆ ಮಾಡಿದ್ದು, ಈ ಫೋನ್‌ ಕೆಲವು ಆಕರ್ಷಕ ಫೀಚರ್ಸ್‌ಗಳಿಂದ ಗ್ರಾಹಕರನ್ನು ಆಕರ್ಷಿಸಿದೆ. ಈ ಫೋನ್ ಇಂದು (ಆಗಷ್ಟ್‌ 25) ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ಮತ್ತು ವಿವೋ ಸ್ಟೋರ್‌ ಮೂಲಕ ಭಾರತದಲ್ಲಿ ಮೊದಲ ಮಾರಾಟ ಪ್ರಾರಂಭಿಸಿದೆ. ಈ ಫೋನಿನ ಆರಂಭಿಕ 8GB + 128GB ಸ್ಟೋರೇಜ್ ವೇರಿಯಂಟ್‌ನ ಬೆಲೆಯು 35,999 ರೂ. ಆಗಿದೆ. ವಿಶೇ‍ಷ ಅಂದ್ರೆ ಈ ಫೋನ್‌ ಬಣ್ಣ ಬದಲಿಸುತ್ತೆ!!.

ಪ್ರಾರಂಭವಾಗಿದೆ

ಫ್ಲಿಪ್‌ಕಾರ್ಟ್‌ ತಾಣದಲ್ಲಿ ವಿವೋ ಸಂಸ್ಥೆಯ ನೂತನ ವಿವೋ V25 ಪ್ರೊ ಸ್ಮಾರ್ಟ್‌ಫೋನ್‌ ಮಾರಾಟ ಪ್ರಾರಂಭವಾಗಿದೆ. ಈ ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 1300 ಪ್ರೊಸೆಸರ್‌ ಸಾಮರ್ಥ್ಯವನ್ನು ಒಳಗೊಂಡಿದ್ದು, ಜೊತೆಗೆ 4,830mAh ಸಾಮರ್ಥ್ಯದ ಬ್ಯಾಟರಿಯನ್ನು ಪಡೆದಿದೆ. ಹಾಗೆಯೇ ಈ ಫೋನ್‌ ಪ್ಯೂರ್‌ ಬ್ಲ್ಯಾಕ್‌ ಮತ್ತು ಸೇಲಿಂಗ್ ಬ್ಲೂ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ ಇದೆ.

ಬದಲಾಯಿಸುವ

ವಿಶೇ‍ಷ ಅಂದ್ರೆ ಈ ಸ್ಮಾರ್ಟ್‌ಫೋನ್ ಬಣ್ಣ ಬದಲಾಯಿಸುವ ಫ್ಲೋರೈಟ್ ಎಜಿ ಗ್ಲಾಸ್ ವಿನ್ಯಾಸವನ್ನು ಹೊಂದಿದೆ. ಇದು ಯುವಿ ಬೆಳಕು ಅದರ ಮೇಲೆ ಬೀಳುತ್ತಿದ್ದಂತೆ ಹಿಂಭಾಗದ ಫಲಕವನ್ನು ಅದರ ಬಣ್ಣವನ್ನು ಬದಲಾಯಿಸುತ್ತದೆ. ಇನ್ನು ಈ ಫೋನ್‌ ಹಿಂಬದಿಯಲ್ಲಿ ಟ್ರಿಪಲ್‌ ಕ್ಯಾಮೆರಾ ರಚನೆಯನ್ನು ಒಳಗೊಂಡಿದ್ದು, ಮುಖ್ಯ ಕ್ಯಾಮೆರಾವು 64 ಮೆಗಾ ಪಿಕ್ಸಲ್‌ ಸೆನ್ಸಾರ್‌ ಸಾಮರ್ಥ್ಯದಲ್ಲಿದೆ. ಹಾಗಾದರೆ ವಿವೋ V25 ಪ್ರೊ ಸ್ಮಾರ್ಟ್‌ಫೋನಿನ ಇತರೆ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ವಿನ್ಯಾಸ ಹೇಗಿದೆ?

ಡಿಸ್‌ಪ್ಲೇ ವಿನ್ಯಾಸ ಹೇಗಿದೆ?

ವಿವೋ V25ಪ್ರೊ ಸ್ಮಾರ್ಟ್‌ಫೋನ್‌ 6.56-ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 2,376x1,080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಹೊಂದಿದೆ. ಇದು ಹೆಚ್ಚು ಪ್ರೀಮಿಯಂ ಅನುಭವಕ್ಕಾಗಿ 3D ಕರ್ವ್ಡ್‌ ಸ್ಕ್ರೀನ್‌ ಹೊಂದಿದೆ. ಈ ಡಿಸ್‌ಪ್ಲೇ 120Hz ರಿಫ್ರೆಶ್‌ ರೇಟ್‌ ಒಳಗೊಂಡಿದ್ದು,HDR 10+ ಪ್ರಮಾಣೀಕರಣವನ್ನು ಸಹ ಹೊಂದಿದೆ. ಇದು ಪಂಚ್‌ ಹೋಲ್‌ ಡಿಸ್‌ಪ್ಲೇ ವಿನ್ಯಾಸವನ್ನು ಪಡೆದಿದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ವಿವೋ V25 ಪ್ರೊ ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 1300 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ ಫನ್‌ಟಚ್‌ OS 12 ಬೆಂಬಲವನ್ನು ಪಡೆದುಕೊಂಡಿದೆ. ಹಾಗೆಯೇ 12GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಅನ್ನು ಪಡೆದುಕೊಂಡಿದೆ. ಇದರಲ್ಲಿ RAM ವಿಸ್ತರಣೆ ಫೀಚರ್ಸ್‌ ಅನ್ನು ಬಳಸಿಕೊಂಡು RAM ಅನ್ನು 8GB ವರೆಗೆ ವಿಸ್ತರಿಸಿಕೊಳ್ಳಬಹುದಾಗಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ ಲಿಕ್ವಿಡ್‌ ಕೂಲಿಂಗ್‌ ವಿಸಿ ಸಿಸ್ಟಂ ಅನ್ನು ಕೂಡ ಅಳವಡಿಸಲಾಗಿದೆ.

ಕ್ಯಾಮೆರಾ ಸೆಟ್‌ಅಪ್‌ ಏನಿದೆ?

ಕ್ಯಾಮೆರಾ ಸೆಟ್‌ಅಪ್‌ ಏನಿದೆ?

ವಿವೋ V25ಪ್ರೊ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ವೈಡ್-ಆಂಗಲ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್‌ ಅನ್ನು ಒಳಗೊಂಡಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇದು ಐ ಆಟೋಫೋಕಸ್ ಮತ್ತು f/2.45 ಲೆನ್ಸ್‌ ಅನ್ನು ಒಳಗೊಂಡಿದೆ.

ಬ್ಯಾಟರಿ ಬ್ಯಾಕ್‌ಅಪ್‌

ಬ್ಯಾಟರಿ ಬ್ಯಾಕ್‌ಅಪ್‌

ವಿವೋ V25ಪ್ರೊ ಸ್ಮಾರ್ಟ್‌ಫೋನ್‌ 66W ವೇಗದ ಚಾರ್ಜಿಂಗ್ ಬೆಂಬಲವನ್ನು ಹೊಂದಿರುವ 4,830mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್-ಬ್ಯಾಂಡ್ Wi-Fi, ಬ್ಲೂಟೂತ್ v5.2, GPS ಮತ್ತು USB ಟೈಪ್-C ಪೋರ್ಟ್ ಅನ್ನು ಹೊಂದಿದೆ. ಇದಲ್ಲದೆ ಅಕ್ಸೆಲೆರೊಮೀಟರ್, ಆಂಬಿಯೆಂಟ್ ಲೈಟ್ ಸೆನ್ಸಾರ್‌, ಪ್ರಾಕ್ಸಿಮಿಟಿ ಸೆನ್ಸಾರ್‌ , ಇ-ದಿಕ್ಸೂಚಿ ಮತ್ತು ಗೈರೊಸ್ಕೋಪ್ ಅನ್ನು ಹೊಂದಿದೆ. ಸ್ಮಾರ್ಟ್‌ಫೋನ್‌ ಬಾಕ್ಸ್‌ನಲ್ಲಿ ವಿವೋ ಚಾರ್ಜಿಂಗ್ ಅಡಾಪ್ಟರ್, ಯುಎಸ್‌ಬಿ ಟೈಪ್-ಸಿ ಕೇಬಲ್, ಯುಎಸ್‌ಬಿ ಟೈಪ್-ಸಿ ಟು 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಅಡಾಪ್ಟರ್ ಮತ್ತು ಫೋನ್ ಕೇಸ್ ಅನ್ನು ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ವಿವೋ V25 ಪ್ರೊ ಸ್ಮಾರ್ಟ್‌ಫೋನ್‌ ಭಾರತದಲ್ಲಿ 8GB RAM + 128GB ಇಂಟರ್‌ ಸ್ಟೋರೇಜ್‌ ಬೇಸ್‌ ಮಾಡೆಲ್‌ ಆಯ್ಕೆಗೆ 35,999ರೂ. ಬೆಲೆ ಹೊಂದಿದೆ. ಇನ್ನು 12GB RAM + 256GB ಇಂಟರ್‌ಬಿಲ್ಟ್‌ ಸ್ಟೋರೇಜ್‌ ಸಾಮರ್ಥ್ಯದ ಟಾಪ್-ಎಂಡ್ ರೂಪಾಂತರದ ಆಯ್ಕೆಗೆ 39,999ರೂ. ಬೆಲೆಯನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್‌ ಫ್ಲಿಪ್‌ಕಾರ್ಟ್, ವಿವೊ ಆನ್‌ಲೈನ್ ಸ್ಟೋರ್ ಮತ್ತು ಇತರ ರೀಟೈಲ್ ಚಾನೆಲ್‌ಗಳ ಮೂಲಕ ಇದೇ ಆಗಸ್ಟ್ 25 ರಿಂದ ಸೇಲ್‌ ಆಗಲಿದೆ. ಇದು ಪ್ಯೂರ್ ಬ್ಲಾಕ್ ಮತ್ತು ಸೇಲಿಂಗ್ ಬ್ಲೂ ಕಲರ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯವಾಗಲಿದೆ.

Best Mobiles in India

English summary
The smartphone features colour changing fluorite AG glass design which makes the back panel change its colour as UV light falls on it.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X