Home
ಸುದ್ದಿಜಾಲ

ಭಾರತಕ್ಕೆ ಎಂಟ್ರಿ ಕೊಟ್ಟ ವಿವೋ V25 ಪ್ರೊ ಸ್ಮಾರ್ಟ್‌ಫೋನ್‌! ಬೆಲೆ ಎಷ್ಟು?

ವಿವೋ ಕಂಪೆನಿಯ ಸ್ಮಾರ್ಟ್‌ಫೋನ್‌ಗಳಿಗೆ ಭಾರತದ ಮಾರುಕಟ್ಟೆಯಲ್ಲಿ ಒಳ್ಳೆಯ ಬೇಡಿಕೆ ಇದೆ. ಅತ್ಯುತ್ತಮ ಕ್ಯಾಮೆರಾ ಫೀಚರ್ಸ್‌ಗಳಿಂದಾಗಿ ವಿವೋ ಸ್ಮಾರ್ಟ್‌ಫೋನ್‌ ಸಾಕಷ್ಟು ಗಮನಸೆಳೆಯುತ್ತಿವೆ. ಇದೇ ಕಾರಣಕ್ಕೆ ವಿವೋ ಕಂಪೆನಿ ಕೂಡ ಕ್ಯಾಮೆರಾ ಕೇಂದ್ರಿತ ಫೀಚರ್ಸ್‌ಗಳನ್ನು ಒಳಗೊಂಡ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸುತ್ತಾ ಬಂದಿದೆ. ಇದೀಗ ತನ್ನ ಬಹುನಿರೀಕ್ಷಿತ ವಿವೋ V25 ಸರಣಿಯನ್ನು ಭಾರತದಲ್ಲಿ ಪರಿಚಯಿಸಿದೆ. ಈ ಸರಣಿಯಲ್ಲಿ ವಿವೋ V25, ವಿವೋ V25e ಮತ್ತು ವಿವೋ V25 ಪ್ರೊ ಸ್ಮಾರ್ಟ್‌ಫೋನ್‌ಗಳು ಸೇರಿವೆ.

ವಿವೋ V25

ಹೌದು, ವಿವೋ ಕಂಪೆನಿ ಭಾರತದಲ್ಲಿ ವಿವೋ V25 ಸರಣಿಯನ್ನು ಅನಾವರಣ ಮಾಡಿದೆ. ಇದರಲ್ಲಿ ವಿವೋ V25 ಪ್ರೊ ಸ್ಮಾರ್ಟ್‌ಫೋನ್‌ ತನ್ನ ಆಕರ್ಷಕ ಫೀಚರ್ಸ್‌ಗಳಿಂದ ಗಮನಸೆಳೆದಿದೆ. ಇನ್ನು ವಿವೋ V25 ಪ್ರೊ ಸ್ಮಾರ್ಟ್‌ಫೋನ್‌ ಮೀಡಿಯಾಟೆಕ್‌ ಡೈಮೆನ್ಸಿಟಿ 1300 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಒಳಗೊಂಡಿದೆ. ಜೊತೆಗೆ 4,830mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಏನೆಲ್ಲಾ ಫೀಚರ್ಸ್‌ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ವಿನ್ಯಾಸ ಹೇಗಿದೆ?

ಡಿಸ್‌ಪ್ಲೇ ವಿನ್ಯಾಸ ಹೇಗಿದೆ?

ವಿವೋ V25ಪ್ರೊ ಸ್ಮಾರ್ಟ್‌ಫೋನ್‌ 6.56-ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 2,376x1,080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಹೊಂದಿದೆ. ಇದು ಹೆಚ್ಚು ಪ್ರೀಮಿಯಂ ಅನುಭವಕ್ಕಾಗಿ 3D ಕರ್ವ್ಡ್‌ ಸ್ಕ್ರೀನ್‌ ಹೊಂದಿದೆ. ಈ ಡಿಸ್‌ಪ್ಲೇ 120Hz ರಿಫ್ರೆಶ್‌ ರೇಟ್‌ ಒಳಗೊಂಡಿದ್ದು,HDR 10+ ಪ್ರಮಾಣೀಕರಣವನ್ನು ಸಹ ಹೊಂದಿದೆ. ಇದು ಪಂಚ್‌ ಹೋಲ್‌ ಡಿಸ್‌ಪ್ಲೇ ವಿನ್ಯಾಸವನ್ನು ಪಡೆದಿದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ವಿವೋ V25ಪ್ರೊ ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 1300 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ ಫನ್‌ಟಚ್‌ OS 12 ಬೆಂಬಲವನ್ನು ಪಡೆದುಕೊಂಡಿದೆ. ಹಾಗೆಯೇ 12GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಅನ್ನು ಪಡೆದುಕೊಂಡಿದೆ. ಇದರಲ್ಲಿ RAM ವಿಸ್ತರಣೆ ಫೀಚರ್ಸ್‌ ಅನ್ನು ಬಳಸಿಕೊಂಡು RAM ಅನ್ನು 8GB ವರೆಗೆ ವಿಸ್ತರಿಸಿಕೊಳ್ಳಬಹುದಾಗಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ ಲಿಕ್ವಿಡ್‌ ಕೂಲಿಂಗ್‌ ವಿಸಿ ಸಿಸ್ಟಂ ಅನ್ನು ಕೂಡ ಅಳವಡಿಸಲಾಗಿದೆ.

ಕ್ಯಾಮೆರಾ ಸೆಟ್‌ಅಪ್‌ ಏನಿದೆ?

ಕ್ಯಾಮೆರಾ ಸೆಟ್‌ಅಪ್‌ ಏನಿದೆ?

ವಿವೋ V25ಪ್ರೊ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ವೈಡ್-ಆಂಗಲ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್‌ ಅನ್ನು ಒಳಗೊಂಡಿದೆ. ಇದಲ್ಲದೆ 32-ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇದು ಐ ಆಟೋಫೋಕಸ್ ಮತ್ತು f/2.45 ಲೆನ್ಸ್‌ ಅನ್ನು ಒಳಗೊಂಡಿದೆ.

ಬ್ಯಾಟರಿ ಬ್ಯಾಕ್‌ಅಪ್‌

ಬ್ಯಾಟರಿ ಬ್ಯಾಕ್‌ಅಪ್‌

ವಿವೋ V25ಪ್ರೊ ಸ್ಮಾರ್ಟ್‌ಫೋನ್‌ 66W ವೇಗದ ಚಾರ್ಜಿಂಗ್ ಬೆಂಬಲವನ್ನು ಹೊಂದಿರುವ 4,830mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್-ಬ್ಯಾಂಡ್ Wi-Fi, ಬ್ಲೂಟೂತ್ v5.2, GPS ಮತ್ತು USB ಟೈಪ್-C ಪೋರ್ಟ್ ಅನ್ನು ಹೊಂದಿದೆ. ಇದಲ್ಲದೆ ಅಕ್ಸೆಲೆರೊಮೀಟರ್, ಆಂಬಿಯೆಂಟ್ ಲೈಟ್ ಸೆನ್ಸಾರ್‌, ಪ್ರಾಕ್ಸಿಮಿಟಿ ಸೆನ್ಸಾರ್‌ , ಇ-ದಿಕ್ಸೂಚಿ ಮತ್ತು ಗೈರೊಸ್ಕೋಪ್ ಅನ್ನು ಹೊಂದಿದೆ. ಸ್ಮಾರ್ಟ್‌ಫೋನ್‌ ಬಾಕ್ಸ್‌ನಲ್ಲಿ ವಿವೋ ಚಾರ್ಜಿಂಗ್ ಅಡಾಪ್ಟರ್, ಯುಎಸ್‌ಬಿ ಟೈಪ್-ಸಿ ಕೇಬಲ್, ಯುಎಸ್‌ಬಿ ಟೈಪ್-ಸಿ ಟು 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಅಡಾಪ್ಟರ್ ಮತ್ತು ಫೋನ್ ಕೇಸ್ ಅನ್ನು ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ವಿವೋ V25 ಪ್ರೊ ಸ್ಮಾರ್ಟ್‌ಫೋನ್‌ ಭಾರತದಲ್ಲಿ 8GB RAM + 128GB ಇಂಟರ್‌ ಸ್ಟೋರೇಜ್‌ ಬೇಸ್‌ ಮಾಡೆಲ್‌ ಆಯ್ಕೆಗೆ 35,999ರೂ. ಬೆಲೆ ಹೊಂದಿದೆ. ಇನ್ನು 12GB RAM + 256GB ಇಂಟರ್‌ಬಿಲ್ಟ್‌ ಸ್ಟೋರೇಜ್‌ ಸಾಮರ್ಥ್ಯದ ಟಾಪ್-ಎಂಡ್ ರೂಪಾಂತರದ ಆಯ್ಕೆಗೆ 39,999ರೂ. ಬೆಲೆಯನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್‌ ಫ್ಲಿಪ್‌ಕಾರ್ಟ್, ವಿವೊ ಆನ್‌ಲೈನ್ ಸ್ಟೋರ್ ಮತ್ತು ಇತರ ರೀಟೈಲ್ ಚಾನೆಲ್‌ಗಳ ಮೂಲಕ ಇದೇ ಆಗಸ್ಟ್ 25 ರಿಂದ ಸೇಲ್‌ ಆಗಲಿದೆ. ಇದು ಪ್ಯೂರ್ ಬ್ಲಾಕ್ ಮತ್ತು ಸೇಲಿಂಗ್ ಬ್ಲೂ ಕಲರ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯವಾಗಲಿದೆ.

ಲಾಂಚ್‌ ಆಫರ್‌ ಏನಿದೆ?

ಲಾಂಚ್‌ ಆಫರ್‌ ಏನಿದೆ?

ವಿವೋ V25 ಪ್ರೊ ಸ್ಮಾರ್ಟ್‌ಫೋನ್‌ ಅನ್ನು ಪ್ರಿ ಬುಕ್ಕಿಂಗ್‌ ಮಾಡುವ ಗ್ರಾಹಕರು 3,500ರೂ. ರಿಯಾಯಿತಿ ಪಡೆದುಕೊಳ್ಳಬಹುದಾಗಿದೆ. ಇದು HDFC ಬ್ಯಾಂಕ್ ಕ್ರೆಡಿಟ್/ಡೆಬಿಟ್ ಕಾರ್ಡ್ ಮತ್ತು EMI ವಹಿವಾಟುಗಳಲ್ಲಿ ಲಭ್ಯವಾಗಲಿದೆ. ಇದಲ್ಲದೆ 3,000ರೂ. ವರೆಗೆ ಹೆಚ್ಚುವರಿ ಎಕ್ಸ್‌ಚೇಂಜ್‌ ಆಫರ್‌ ಅನ್ನು ಕೂಡ ಪಡೆದುಕೊಳ್ಳಬಹುದಾಗಿದೆ.

Best Mobiles in India

English summary
The smartphone is powered by the MediaTek Dimensity 1300 SoC, coupled with up to 12GB of RAM.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+