ವಿವೋ V25e ಸ್ಮಾರ್ಟ್‌ಫೋನ್ ಬಿಡುಗಡೆ! 44W ಫ್ಲ್ಯಾಷ್ ಚಾರ್ಜಿಂಗ್ ವಿಶೇಷ!
ವಿವೋ ಕಂಪೆನಿ ಪ್ರತಿಷ್ಠಿತ ಸ್ಮಾರ್ಟ್‌ಫೋನ್ ಬ್ರ್ಯಾಂಡ್‌ಗಳಲ್ಲಿ ಒಂದಾಗಿದೆ. ತನ್ನ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳ ಮೂಲಕ ತನ್ನ ಸ್ಥಾನವನ್ನು ಭದ್ರಪಡಿಸಿಕೊಂಡಿದೆ. ಸದ್ಯ ಇದೀಗ ವಿವೋ ಕಂಪೆನಿ ತನ್ನ ಹೊಸ ವಿವೋ V25e ಸ್ಮಾರ್ಟ್‌ಫೋನ್ ಲಾಂಚ್ ಮಾಡಿದೆ. ಇದು ಮೀಡಿಯಾಟೆಕ್ ಹಿಲಿಯೋ G99 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಈ ಸ್ಮಾರ್ಟ್‌ಫೋನ್ ವಾಟರ್‌ಡ್ರಾಪ್-ಶೈಲಿಯ ಡಿಸ್‌ಪ್ಲೇ ನಾಚ್ ಅನ್ನು ಒಳಗೊಂಡಿದೆ.

ಹೌದು, ವಿವೋ ಕಂಪೆನಿ ಹೊಸ ವಿವೋ V25e ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ. ವಿವೋ V25e ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದು 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 44W ಫ್ಲ್ಯಾಷ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಈ ಸ್ಮಾರ್ಟ್‌ಫೋನ್ ಡೈಮಂಡ್ ಬ್ಲಾಕ್ ಮತ್ತು ಸನ್‌ರೈಸ್ ಗೋಲ್ಡ್ ಬಣ್ಣ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ವಿವೋ V25e ಸ್ಮಾರ್ಟ್‌ಫೋನ್ 6.44 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1,080 x 2,404 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿದೆ. ಈ ಡಿಸ್‌ಪ್ಲೇ ವಾಟರ್‌ಡ್ರಾಪ್-ಶೈಲಿಯ ನಾಚ್ ಕಟೌಟ್ ಅನ್ನು ಹೊಂದಿದೆ. ಇದು 20:9 ರಚನೆಯ ಅನುಪಾತವನ್ನು ಹೊಂದಿದ್ದು, 410 ಪಿಪಿಐ ಪಿಕ್ಸೆಲ್ ಸಾಂದ್ರತೆಯನ್ನು ಪಡೆದಿದೆ. ಇನ್ನು ಈ ಡಿಸ್‌ಪ್ಲೇ 84.77 % ಸ್ಕ್ರೀನ್ ಟು ಬಾಡಿ ಅನುಪಾತವನ್ನು ಹೊಂದಿದೆ.

ಪ್ರೊಸೆಸರ್ ಯಾವುದು?
ವಿವೋ V25e ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ Helio G99 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 12-ಆಧಾರಿತ ಫನ್‌ಟಚ್ OS 12 ಬೆಂಬಲಿಸಲಿದೆ. ಹಾಗೆಯೇ 8GB RAM + 256GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ಸೆಟ್‌ಅಪ್ ಎಷ್ಟಿದೆ?
ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಬೊಕೆ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಅನ್ನು ಒಳಗೊಂಡಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ
ವಿವೋ V25e ಸ್ಮಾರ್ಟ್‌ಫೋನ್ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 44W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ Wi-Fi, ಬ್ಲೂಟೂತ್ v5.2, GPS, 3.5mm ಆಡಿಯೋ ಜ್ಯಾಕ್ ಮತ್ತು USB ಟೈಪ್-C ಪೋರ್ಟ್ ಅನ್ನು ಒಳಗೊಂಡಿವೆ. ಇದಲ್ಲದೆ ಅಕ್ಸಿಲೆರೊಮೀಟರ್, ಇ-ದಿಕ್ಸೂಚಿ, ಆಂಬಿಯೆಂಟ್ ಲೈಟ್ ಸೆನ್ಸಾರ್, ಗೈರೊಸ್ಕೋಪ್ ಮತ್ತು ಪ್ರಾಕ್ಸಿಮಿಟಿ ಸೆನ್ಸಾರ್ ಅನ್ನು ಒಳಗೊಂಡಿದೆ. ಇದಲ್ಲದೆ, ಇನ್-ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್ ಅನ್ನು ಹೊಂದಿದೆ.

ಬೆಲೆ ಮತ್ತು ಲಭ್ಯತೆ
ಈ ಸ್ಮಾರ್ಟ್‌ಫೋನ್ ಸದ್ಯ ಮಲೇಷ್ಯಾದಲ್ಲಿ ಬಿಡುಗಡೆಯಾಗಿದೆ. ಈ ಸ್ಮಾರ್ಟ್‌ಫೋನಿನ 8GB RAM + 256GB ಸ್ಟೋರೇಜ್ ರೂಪಾಂತರದ ಆಯ್ಕೆಗೆ MYR 1,399 (ಸುಮಾರು 24,900ರೂ)ಬೆಲೆ ಗೆ ನಿಗದಿಪಡಿಸಲಾಗಿದೆ. ಇದು ಪ್ರಸ್ತುತ ಮಲೇಷ್ಯಾದಲ್ಲಿನ Vivo ನ ಆನ್‌ಲೈನ್ ಸ್ಟೋರ್‌ನಲ್ಲಿ ಪಟ್ಟಿಮಾಡಲಾಗಿದೆ. ಈ ಫೋನ್ ಡೈಮಂಡ್ ಬ್ಲಾಕ್ ಮತ್ತು ಸನ್‌ರೈಸ್ ಗೋಲ್ಡ್ ಬಣ್ಣ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಇತರ ಮಾರುಕಟ್ಟೆಗಳಲ್ಲಿ ಈ ಸ್ಮಾರ್ಟ್‌ಫೋನ್ ಲಾಂಚ್ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

ಇದಲ್ಲದೆ ವಿವೋ ಕಂಪೆನಿ ಇತ್ತೀಚಿಗೆ ಭಾರತದಲ್ಲಿ ತನ್ನ ಹೊಸ ವಿವೋ Y35 ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ. ಈ ಮೂಲಕ ತನ್ನ Y ಸರಣಿಯ ಸ್ಮಾರ್ಟ್‌ಫೋನ್ ಪೋರ್ಟ್‌ಫೋಲಿಯೊವನ್ನು ವಿಸ್ತರಿಸಿದೆ. ಈ ಸ್ಮಾರ್ಟ್‌ಫೋನ್ ಪ್ರೀಮಿಯಂ ವಿನ್ಯಾಸ ಮತ್ತು ಲುಕ್ ಅನ್ನು ಒಳಗೊಂಡಿದೆ. ಇದು ಸ್ನಾಪ್‌ಡ್ರಾಗನ್ 680 ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಜೊತೆಗೆ 44W ಫ್ಲ್ಯಾಷ್ ಚಾರ್ಜ್ ಬೆಂಬಲಿಸುವ 5000mAh ಸಾಮರ್ಥ್ಯದ ಬ್ಯಾಟರಿ ಒಳಗೊಂಡಿದೆ. ಇದು ವಿಸ್ತೃತ 8GB RAM ಅನ್ನು ಹೊಂದಿದೆ. ಎಲೆಕ್ಟ್ರಾನಿಕ್ ಇಮೇಜ್ ಸ್ಟೆಬಿಲೈಸೇಶನ್ ನೊಂದಿಗೆ ಸೆಟ್ ಮಾಡಲಾದ 50MP ಸೂಪರ್ ನೈಟ್ ಕ್ಯಾಮೆರಾವನ್ನು ಹೊಂದಿದೆ.


Click it and Unblock the Notifications








