ಇಂದು ವಿವೋ V27 ಪ್ರೊ ಫಸ್ಟ್ ಸೇಲ್; ಭರ್ಜರಿ ಆಫರ್, ಜಬರ್ದಸ್ತ್ ಫೀಚರ್ಸ್!
ವಿವೋ ಕಂಪನಿಯು ಇತ್ತೀಚಿಗೆ ಹೊಸದಾಗಿ 'ವಿವೋ V27 ಪ್ರೊ' ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದ್ದು, ಭಿನ್ನ ಫೀಚರ್ಸ್‌ಗಳಿಂದ ಗ್ರಾಹಕರನ್ನು ಆಕರ್ಷಿಸಿದೆ. ಈ ಫೋನ್ ಇಂದು (ಮಾ. 6) ಫ್ಲಿಪ್‌ಕಾರ್ಟ್ ಇ ಕಾಮರ್ಸ್ ಮತ್ತು ವಿವೋ ಸ್ಟೋರ್ ಮೂಲಕ ಭಾರತದಲ್ಲಿ ಮೊದಲ ಮಾರಾಟ ಪ್ರಾರಂಭಿಸಿದೆ. ಈ ಫೋನ್ 8GB RAM + 28GB ಸ್ಟೋರೇಜ್‌ನಲ್ಲಿ ಲಭ್ಯ.
ಹೌದು, ವಿವೋ ಸಂಸ್ಥೆಯ ವಿವೋ V27 ಪ್ರೊ ಫೋನಿನ ಫಸ್ಟ್ ಸೇಲ್ ಇಂದು ಫ್ಲಿಪ್‌ಕಾರ್ಟ್ ಇ ಕಾಮರ್ಸ್ ಮತ್ತು ವಿವೋ ಸ್ಟೋರ್ ಶುರುವಾಗಿದೆ. ಇನ್ನು ಈ ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 8200 SoC ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 13 ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ ಈ ಫೋನಿನ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿದೆ.

ಹಾಗೆಯೇ 4,600mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 66W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಜೊತೆಗೆ ಇದು 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದಿದೆ. ಇನ್ನುಳಿದಂತೆ ವಿವೋ V27 ಪ್ರೊ ಫೋನಿನ ಇತರೆ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ವಿವೋ V27 ಪ್ರೊ ಸ್ಮಾರ್ಟ್‌ಫೋನ್ ಫೀಚರ್ಸ್ ಹೇಗಿದೆ?
ವಿವೋ V27 ಪ್ರೊ ಸ್ಮಾರ್ಟ್‌ಫೋನ್ 6.78 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಡಿಸ್‌ಪ್ಲೇ 1,080 x 2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿದೆ. ಇದು 120Hz ರಿಫ್ರೆಶ್ ರೇಟ್ ಬೆಂಬಲಿಸಲಿದೆ.

ವಿವೋ V27 ಪ್ರೊ ಸ್ಮಾರ್ಟ್‌ಫೋನ್ ಪ್ರೊಸೆಸರ್ ಯಾವುದು?
ವಿವೋ V27 ಪ್ರೊ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 8200 SoC ಪ್ರೊಸೆಸರ್ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್ 13 ಆಧಾರಿತ ಫನ್‌ಟಚ್ OS 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇದು 12GB RAM ಮತ್ತು 256GB ಇಂಟರ್ ಸ್ಟೋರೇಜ್ ಅನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್ ಮೆಮೊರಿ ಕಾರ್ಡ್ ಅನ್ನು ಬೆಂಬಲಿಸುವುದಿಲ್ಲ ಎಂದು ಹೇಳಿದೆ.
ವಿವೋ V27 ಪ್ರೊ ಸ್ಮಾರ್ಟ್‌ಫೋನ್ ಕ್ಯಾಮೆರಾ ಸೆಟ್‌ಅಪ್ ಏನಿದೆ?
ವಿವೋ V27 ಪ್ರೊ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೋನಿ IMX766V ಸೆನ್ಸಾರ್ ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಸೆನ್ಸಾರ್ ಅಲ್ಟ್ರಾ ವೈಡ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಮೈಕ್ರೋ ಲೆನ್ಸ್ ಅನ್ನು ಒಳಗೊಂಡಿದೆ. ಇದಲ್ಲದೆ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದಿದೆ.
ವಿವೋ V27 ಪ್ರೊ ಸ್ಮಾರ್ಟ್‌ಫೋನ್ ಬ್ಯಾಟರಿ ಬ್ಯಾಕ್‌ಅಪ್ ಎಷ್ಟಿದೆ?
ವಿವೋ V27 ಪ್ರೊ ಸ್ಮಾರ್ಟ್‌ಫೋನ್ 4,600mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 66W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, Wi-Fi, ಬ್ಲೂಟೂತ್ v5.3, GPS, Beidu, Glonass, Galileo, Navic, ಮತ್ತು USB ಟೈಪ್-C ಪೋರ್ಟ್ ಅನ್ನು ಬೆಂಬಲಿಸಲಿದೆ. ಇದಲ್ಲದೆ ಆಕ್ಸಿಲೆರೋಮೀಟರ್, ಆಂಬಿಯೆಂಟ್ ಲೈಟ್ ಸೆನ್ಸಾರ್, ಇ-ಕಂಪಾಸ್, ಗೈರೊಸ್ಕೋಪ್ ಮತ್ತು ಪ್ರಾಕ್ಸಿಮಿಟಿ ಸೆನ್ಸಾರ್ ಅನ್ನು ಒಳಗೊಂಡಿದೆ.

ವಿವೋ V27 ಪ್ರೊ ಸ್ಮಾರ್ಟ್‌ಫೋನ್ ಬೆಲೆ ಮತ್ತು ಲಭ್ಯತೆ
ವಿವೋ V27 ಪ್ರೊ ಸ್ಮಾರ್ಟ್‌ಫೋನ್ ಭಾರತದಲ್ಲಿ 8GB RAM + 128GB ಸ್ಟೋರೇಜ್ ಆಯ್ಕೆಗೆ 37,999ರೂ. ಬೆಲೆ ಹೊಂದಿದೆ. ಇದರ 8GB RAM + 256GB ಸ್ಟೋರೇಜ್ ಆಯ್ಕೆಯು 39,999ರೂ. ಬೆಲೆಯನ್ನು ಹೊಂದಿದೆ. ಜೊತೆಗೆ 12GB RAM + 256GB ಸ್ಟೋರೇಜ್ ಆಯ್ಕೆಯು 42,999ರೂ. ಬೆಲೆಯನ್ನು ಪಡೆದಿದೆ. ಇನ್ನು ಸ್ಮಾರ್ಟ್‌ಫೋನ್ ಇದೇ ಮಾರ್ಚ್ 6 ರಂದು ಮಧ್ಯಾಹ್ನ 12 ಗಂಟೆಗೆ ಖರೀದಿಗೆ ಲಭ್ಯವಾಗಲಿದೆ.


Click it and Unblock the Notifications








