Home
ಸುದ್ದಿಜಾಲ

ಭಾರತಕ್ಕೆ ಎಂಟ್ರಿ ಕೊಟ್ಟ ವಿವೋ V27 ಪ್ರೊ! ಜಬರ್ದಸ್ತ್ ಕ್ಯಾಮೆರಾ ಫೀಚರ್ಸ್‌!

ವಿವೋ ಕಂಪೆನಿ ತನ್ನ ಬಹು ನಿರೀಕ್ಷಿತ ವಿವೋ V27 ಸರಣಿಯನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಈ ಸರಣಿಯಲ್ಲಿ ವಿವೋ V27 ಮತ್ತು ವಿವೋ V27 ಪ್ರೊ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿದೆ. ಇದರಲ್ಲಿ ವಿವೋ V27 ಪ್ರೊ ಮಾದರಿಯ ಅತ್ಯಾಕರ್ಷಕ ಫೀಚರ್ಸ್‌ಗಳಿಂದ ಗಮನಸೆಳೆದಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ.

ಹೌದು, ವಿವೋ V27 ಸರಣಿ ಭಾರತಕ್ಕೆ ಕಾಲಿಟ್ಟಿದೆ. ಈ ಸರಣಿಯ ಸ್ಮಾರ್ಟ್‌ಫೋನ್‌ಗಳು ಹೊಂದಿರುವ ಕ್ಯಾಮೆರಾ ಫೀಚರ್ಸ್‌ ಇದೀಗ ಎಲ್ಲೆಡೆ ಸಂಚಲನ ಮೂಡಿಸಿವೆ. ಅದರಲ್ಲೂ ವಿವೋ V27 ಪ್ರೊ ಸ್ಮಾರ್ಟ್‌ಫೋನ್‌ ತನ್ನ ಪ್ರೊಸೆಸರ್‌ ವೇಗ ಹಾಗೂ ಕಾರ್ಯವೈಖರಿ ಕಾರಣಕ್ಕೆ ಸದ್ದು ಮಾಡ್ತಿದೆ. ಹಾಗಾದ್ರೆ ವಿವೋ V27 ಪ್ರೊ ಸ್ಮಾರ್ಟ್‌ಫೋನ್‌ನ ವಿಶೇಷತೆ ಏನು? ಇದರ ಫೀಚರ್ಸ್‌ ಹೇಗಿದೆ? ಇದೆಲ್ಲದರ ಬಗ್ಗೆ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಭಾರತಕ್ಕೆ ಎಂಟ್ರಿ ಕೊಟ್ಟ ವಿವೋ V27 ಪ್ರೊ! ಜಬರ್ದಸ್ತ್ ಕ್ಯಾಮೆರಾ ಫೀಚರ್ಸ್‌!

ವಿವೋ V27 ಪ್ರೊ ಸ್ಮಾರ್ಟ್‌ಫೋನ್‌ ಫೀಚರ್ಸ್‌ ಹೇಗಿದೆ?
ವಿವೋ V27 ಪ್ರೊ ಸ್ಮಾರ್ಟ್‌ಫೋನ್‌ 6.78 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಡಿಸ್‌ಪ್ಲೇ 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿದೆ. ಇದು 120Hz ರಿಫ್ರೆಶ್‌ ರೇಟ್‌ ಬೆಂಬಲಿಸಲಿದೆ.

ವಿವೋ V27 ಪ್ರೊ ಸ್ಮಾರ್ಟ್‌ಫೋನ್‌ ಪ್ರೊಸೆಸರ್‌ ಯಾವುದು?
ವಿವೋ V27 ಪ್ರೊ ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 8200 SoC ಪ್ರೊಸೆಸರ್‌ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್‌ 13 ಆಧಾರಿತ ಫನ್‌ಟಚ್‌ OS 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇದು 12GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಅನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್‌ ಮೆಮೊರಿ ಕಾರ್ಡ್‌ ಅನ್ನು ಬೆಂಬಲಿಸುವುದಿಲ್ಲ ಎಂದು ಹೇಳಿದೆ.

ಭಾರತಕ್ಕೆ ಎಂಟ್ರಿ ಕೊಟ್ಟ ವಿವೋ V27 ಪ್ರೊ! ಜಬರ್ದಸ್ತ್ ಕ್ಯಾಮೆರಾ ಫೀಚರ್ಸ್‌!

ವಿವೋ V27 ಪ್ರೊ ಸ್ಮಾರ್ಟ್‌ಫೋನ್‌ ಕ್ಯಾಮೆರಾ ಸೆಟ್‌ಅಪ್‌ ಏನಿದೆ?
ವಿವೋ V27 ಪ್ರೊ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೋನಿ IMX766V ಸೆನ್ಸಾರ್‌ ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಅಲ್ಟ್ರಾ ವೈಡ್‌ ಲೆನ್ಸ್‌ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮೈಕ್ರೋ ಲೆನ್ಸ್‌ ಅನ್ನು ಒಳಗೊಂಡಿದೆ. ಇದಲ್ಲದೆ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದಿದೆ.

ವಿವೋ V27 ಪ್ರೊ ಸ್ಮಾರ್ಟ್‌ಫೋನ್‌ ಬ್ಯಾಟರಿ ಬ್ಯಾಕ್‌ಅಪ್‌ ಎಷ್ಟಿದೆ?
ವಿವೋ V27 ಪ್ರೊ ಸ್ಮಾರ್ಟ್‌ಫೋನ್‌ 4,600mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 66W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, Wi-Fi, ಬ್ಲೂಟೂತ್ v5.3, GPS, Beidu, Glonass, Galileo, Navic, ಮತ್ತು USB ಟೈಪ್-C ಪೋರ್ಟ್ ಅನ್ನು ಬೆಂಬಲಿಸಲಿದೆ. ಇದಲ್ಲದೆ ಆಕ್ಸಿಲೆರೋಮೀಟರ್‌, ಆಂಬಿಯೆಂಟ್‌ ಲೈಟ್‌ ಸೆನ್ಸಾರ್‌, ಇ-ಕಂಪಾಸ್‌, ಗೈರೊಸ್ಕೋಪ್ ಮತ್ತು ಪ್ರಾಕ್ಸಿಮಿಟಿ ಸೆನ್ಸಾರ್‌ ಅನ್ನು ಒಳಗೊಂಡಿದೆ.

ಭಾರತಕ್ಕೆ ಎಂಟ್ರಿ ಕೊಟ್ಟ ವಿವೋ V27 ಪ್ರೊ! ಜಬರ್ದಸ್ತ್ ಕ್ಯಾಮೆರಾ ಫೀಚರ್ಸ್‌!

ವಿವೋ V27 ಪ್ರೊ ಸ್ಮಾರ್ಟ್‌ಫೋನ್‌ ಬೆಲೆ ಮತ್ತು ಲಭ್ಯತೆ
ವಿವೋ V27 ಪ್ರೊ ಸ್ಮಾರ್ಟ್‌ಫೋನ್‌ ಭಾರತದಲ್ಲಿ 8GB RAM + 128GB ಸ್ಟೋರೇಜ್‌ ಆಯ್ಕೆಗೆ 37,999ರೂ. ಬೆಲೆ ಹೊಂದಿದೆ. ಇದರ 8GB RAM + 256GB ಸ್ಟೋರೇಜ್‌ ಆಯ್ಕೆಯು 39,999ರೂ. ಬೆಲೆಯನ್ನು ಹೊಂದಿದೆ. ಜೊತೆಗೆ 12GB RAM + 256GB ಸ್ಟೋರೇಜ್‌ ಆಯ್ಕೆಯು 42,999ರೂ. ಬೆಲೆಯನ್ನು ಪಡೆದಿದೆ. ಇನ್ನು ಸ್ಮಾರ್ಟ್‌ಫೋನ್‌ ಇದೇ ಮಾರ್ಚ್ 6 ರಂದು ಮಧ್ಯಾಹ್ನ 12 ಗಂಟೆಗೆ ಖರೀದಿಗೆ ಲಭ್ಯವಾಗಲಿದೆ.

Best Mobiles in India

English summary
Vivo V27 Pro is powered by a 4nm MediaTek Dimensity 8200 SoC, coupled with up to 12GB of LPDDR5 RAM.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+