ಸದ್ಯದಲ್ಲೇ ಬಿಡುಗಡೆಯಾಗಲಿದೆ ವಿವೋ V27 ಸರಣಿ! ಏನೆಲ್ಲಾ ನಿರೀಕ್ಷೆ?
ವಿವೋ ಕಂಪೆನಿಯ ಸ್ಮಾರ್ಟ್‌ಫೋನ್‌ಗಳಿಗೆ ಮಾರುಕಟ್ಟೆಯಲ್ಲಿ ಭಾರಿ ಬೇಡಿಕೆಯಿದೆ. ಇದಕ್ಕೆ ತಕ್ಕಂತೆ ವಿವೋ ಕಂಪೆನಿ ಕೂಡ ಅನೇಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿದೆ. ಸದ್ಯ ಇದೀಗ ವಿವೋ ಕಂಪೆನಿ ಶೀಘ್ರದಲ್ಲೇ ವಿವೋ V27 ಸರಣಿಯನ್ನು ಬಿಡುಗಡೆ ಮಾಡಲು ಸಿದ್ಧತೆ ನಡೆಸಿದೆ. ಇನ್ನು ಸರಣಿಯಲ್ಲಿ ವಿವೋ V27 ಮತ್ತು ವಿವೋ V27 ಪ್ರೊ ಸ್ಮಾರ್ಟ್‌ಫೋನ್ ಬರಲಿದೆ ಎಂದು ಹೇಳಲಾಗಿದೆ. ಇದರಲ್ಲಿ ವಿವೋ V27 ಪ್ರೊ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 8200 SoC ಪ್ರೊಸೆಸರ್ ಹೊಂದಿರಲಿದೆ ಎಂದು ಅಂದಾಜಿಸಲಾಗಿದೆ.

ಹೌದು, ವಿವೋ ಕಂಪೆನಿ ವಿವೋ V27 ಸರಣಿಯನ್ನು ಬಿಡುಗಡೆ ಮಾಡಲು ತಯಾರಿ ನಡೆಸಿದೆ ಎಂದು ವರದಿಯಾಗಿದೆ. ಈ ಸರಣಿಯ ಸ್ಮಾರ್ಟ್‌ಫೋನ್‌ಗಳ ಫೀಚರ್ಸ್ ಹಾಗೂ ಇಮೇಜ್‌ಗಳು ಆನ್‌ಲೈನ್‌ನಲ್ಲಿ ಸೋರಿಕೆಯಾಗಿವೆ. ಇದರಿಂದ ಈ ಸ್ಮಾರ್ಟ್‌ಫೋನ್ ಡಿಸೈನ್ ಹಾಗೂ ಫೀಚರ್ಸ್ ವಿವರಗಳು ಸಾಕಷ್ಟು ಸಂಚಲನ ಸೃಷ್ಟಿಸಿವೆ. ಇದರಲ್ಲಿ ವಿವೋ V27 ಸ್ಮಾರ್ಟ್‌ಫೋನ್ 35,000ರೂ. ಬೆಲೆಯಲ್ಲಿ ಬರಲಿದೆ ಎಂದು ನಿರೀಕ್ಷಿಸಲಾಗಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ಗಳು ಏನೆಲ್ಲಾ ಫೀಚರ್ಸ್ ಹೊಂದಿರಬಹುದು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.
ವಿವೋ V27 5G ಫೀಚರ್ಸ್ ಹೇಗಿದೆ?
ವಿವೋ V27 5G ಸ್ಮಾರ್ಟ್‌ಫೋನ್ 6.56 ಇಂಚಿನ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಹೊಂದಿರಲಿದ್ದು, HDR 10+ ಅನ್ನು ಬೆಂಬಲಿಸಲಿದೆ. ಇದಲ್ಲದೆ ಮೀಡಿಯಾಟೆಕ್ ಡೈಮೆನ್ಸಿಟಿ 7200 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ ಎಂದು ಅಂದಾಜಿಸಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿರಬಹುದು ಎನ್ನಲಾಗಿದೆ. ಇದರೊಂದಿಗೆ 50 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿರುವ ನಿರೀಕ್ಷೆಯಿದೆ. ಜೊತೆಗೆ 4700 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಪಡೆದಿರಬಹುದು. 67W ಫಾಸ್ಟ್ ಚಾರ್ಜಿಂಗ್ ಅನ್ನು ಒಳಗೊಂಡಿರುವ ಸಾಧ್ಯತೆಯಿದೆ.

ವಿವೋ V27 ಪ್ರೊ ಫೀಚರ್ಸ್ ಹೇಗಿದೆ?
ವಿವೋ V27 ಪ್ರೊ ಸ್ಮಾರ್ಟ್‌ಫೋನ್ 6.6 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿರಲಿದೆ. ಈ ಡಿಸ್‌ಪ್ಲೇ 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿರಬಹುದು ಎನ್ನಲಾಗಿದೆ. ಇದು ಮೀಡಿಯಾಟೆಕ್ ಡೈಮೆನ್ಸಿಟಿ 8200 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿರಲಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್ ಅಲ್ಟ್ರಾ-ವೈಡ್ ಆಂಗಲ್ ಲೆನ್ಸ್ ಹಾಗೂ ಮೂರನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಸೆನ್ಸಾರ್ ಮ್ಯಾಕ್ರೋ ಲೆನ್ಸ್ ಒಳಗೊಂಡಿದೆ. ಇದಲ್ಲದೆ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿರುವ ಸಾಧ್ಯತೆಯಿದೆ.

ವಿವೋ V27 ಸರಣಿಯ ಬೆಲೆ ನಿರೀಕ್ಷೆ ಏನು?
ವಿವೋ V27 5G ಸ್ಮಾರ್ಟ್‌ಫೋನ್ ಭಾರತದಲ್ಲಿ 35,000ರೂ. ಬೆಲೆಯಲ್ಲಿ ಬರಲಿದೆ. ವಿವೋ V27 ಪ್ರೊ ಸ್ಮಾರ್ಟ್‌ಫೋನ್ ಭಾರತದಲ್ಲಿ 40,000ರೂ. ಆರಂಭಿಕ ಬೆಲೆಯಲ್ಲಿ ಬರಲಿದೆ ಎಂದು ಅಂದಾಜಿಸಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್ ಬ್ಲ್ಯಾಕ್ ಮತ್ತು ಬ್ಲೂ ಬಣ್ಣದ ಆಯ್ಕೆಗಳಲ್ಲಿ ಬರುವ ನಿರೀಕ್ಷೆಯಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್ ಫ್ಲಿಪ್‌ಕಾರ್ಟ್, ವಿವೋ ಇ-ಸ್ಟೋರ್ ಮತ್ತು ಆಫ್‌ಲೈನ್ ಸ್ಟೋರ್‌ಗಳ ಮೂಲಕ ಪ್ರತ್ಯೇಕವಾಗಿ ಖರೀದಿಸಲು ಲಭ್ಯವಾಗಲಿದೆ ಎಂದು ಹೇಳಲಾಗಿದೆ. ಆದರೆ ಇದರ ಬಿಡುಗಡೆ ದಿನಾಂಕ ಅಧಿಕೃತವಾದ ನಂತರ ಸೇಲ್ ಡೇಟ್ ಅಧಿಕೃತವಾಗಲಿದೆ.


Click it and Unblock the Notifications








