ಬಿಡುಗಡೆ ಮುನ್ನವೇ ಸದ್ದು ಮಾಡ್ತಿದೆ ವಿವೋ V27 ಸರಣಿ! ಡಿಸೈನ್ ಹೇಗಿರಲಿದೆ?
ವಿವೋ ಕಂಪೆನಿಯ ಸ್ಮಾರ್ಟ್‌ಫೋನ್‌ಗಳಿಗೆ ಇಡೀ ಟೆಕ್ ವಲಯವೇ ಕಾತುರದಿಂದ ಕಾಯುತ್ತಿರುತ್ತದೆ. ಪ್ರತಿ ಸ್ಮಾರ್ಟ್‌ಫೋನ್‌ನಲ್ಲಿಯೂ ವಿಶೇಷ ಕ್ಯಾಮೆರಾ ಫೀಚರ್ಸ್‌ಗಳನ್ನು ನೀಡುವ ವಿವೋ ಸ್ಮಾರ್ಟ್‌ಫೋನ್ ಪ್ರಿಯರ ನೆಚ್ಚಿನ ಅಯ್ಕೆಗಳಲ್ಲಿ ಒಂದೆನಿಸಿಕೊಂಡಿದೆ. ಸದ್ಯ ಇದೀಗ ಜಾಗತಿಕ ಮಾರುಕಟ್ಟೆಯಲ್ಲಿ ವಿವೋ V27 ಸ್ಮಾರ್ಟ್‌ಫೋನ್ ಸರಣಿಯನ್ನು ಬಿಡುಗಡೆ ಮಾಡಲು ತಯಾರಿ ನಡೆಸಿದೆ. ಇನ್ನು ಈ ಸ್ಮಾರ್ಟ್‌ಫೋನ್ ಮಾರ್ಚ್ 1 ಅಥವಾ ಫೆಬ್ರವರಿ 28 ರಂದು ಬಿಡುಗಡೆಯಾಗುವ ನಿರೀಕ್ಷೆಯಿದೆ.

ಹೌದು, ವಿವೋ ಕಂಪೆನಿ ಜಾಗತಿಕವಾಗಿ ವಿವೋ V27 ಸರಣಿಯನ್ನು ಪರಿಚಯಿಸಲು ಸಿದ್ಧತೆ ನಡೆಸಿದೆ. ಈ ಸ್ಮಾರ್ಟ್‌ಫೋನ್ ಸರಣಿಯಲ್ಲಿ ವಿವೋ V27, ವಿವೋ V27 ಪ್ರೊ ಮತ್ತು ವಿವೋ V27e ಸ್ಮಾರ್ಟ್‌ಫೋನ್ ಅನ್ನು ಒಳಗೊಂಡಿರುತ್ತದೆ ಎಂದು ನಿರೀಕ್ಷಿಸಲಾಗಿದೆ. ಇದಲ್ಲದೆ ಈ ಸರಣಿಯ ಸ್ಮಾರ್ಟ್‌ಫೋನ್‌ಗಳು 120Hz ರಿಫ್ರೆಶ್ ರೇಟ್ ಒಳಗೊಂಡ ಡಿಸ್‌ಪ್ಲೇ ಹೊಂದಿರಲಿದೆ ಎಂದು ಅಂದಾಜಿಸಲಾಗಿದೆ. ಇನ್ನುಳಿದಂತೆ ವಿವೋ V27 ಸರಣಿಯಲ್ಲಿ ನಿರೀಕ್ಷಿಸಬಹುದಾದ ಫೀಚರ್ಸ್‌ಗಳೇನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.
ವಿವೋ V27 ಸರಣಿ ನಿರೀಕ್ಷೆ ಏನು?
ವಿವೋ V27 ಸರಣಿ ಸ್ಮಾರ್ಟ್‌ಫೋನ್ 6.78 ಇಂಚಿನ ಫುಲ್ ಹೆಚ್‌ಡಿ ಡಿಸ್‌ಪ್ಲೇ ಹೊಂದಿರುವ ಸಾಧ್ಯತೆಯಿದೆ. ಈ ಡಿಸ್‌ಪ್ಲೇ 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿರಲಿದೆ. ಇನ್ನು ಡಿಸ್‌ಪ್ಲೇ 90.4% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಹೊಂದಿರಲಿದ್ದು, 20:9 ರಚನೆಯ ಅನುಪಾತವನ್ನು ಒಳಗೊಂಡಿರಲಿದೆ. ಇದಲ್ಲದೆ ಡಿಸ್‌ಪ್ಲೇ 388 ppi ಪಿಕ್ಸೆಲ್ ಸಾಂದ್ರತೆಯನ್ನು ಹೊಂದಿರುವ ನಿರೀಕ್ಷೆಯಿದೆ.

ಇನ್ನು ಈ ಸ್ಮಾರ್ಟ್‌ಫೋನ್ ಪ್ರೊಸೆಸರ್ ವಿವರ ಇನ್ನು ಬಹಿರಂಗವಾಗಿಲ್ಲ. ಆದರೆ ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿರಲಿದೆ ಎಂಬ ನಿರೀಕ್ಷೆಯಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿರಲಿದೆ ಎನ್ನಲಾಗಿದೆ. ಇದಲ್ಲದೆ 50 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ನಿರೀಕ್ಷಿಸಲಾಗಿದೆ. ಈ ಸ್ಮಾರ್ಟ್‌ಫೋನ್‌ನ ಸ್ಟೊರೇಜ್ ವೇರಿಯೆಂಟ್ ಆಯ್ಕೆಯ ವಿವರಗಳು ಕೂಡ ಲಭ್ಯವಾಗಿಲ್ಲ.
ಇದರೊಂದಿಗೆ ಈ ಸ್ಮಾರ್ಟ್‌ಫೊನ್ 4600 mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿರಲಿದ್ದು, 66W ವೈರ್ಡ್ ಚಾರ್ಜಿಂಗ್ ಬೆಂಬಲಿಸಬಹುದು ಎಂಬ ವರದಿಯಿದೆ. ಇದರಿಂದ ಈ ಸ್ಮಾರ್ಟ್‌ಫೋನ್ ಅನ್ನು 19 ನಿಮಿಷಗಳಲ್ಲಿ 50% ಚಾರ್ಜಿಂಗ್ ಮಾಡಬಹುದು ಎನ್ನಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್ ಸರಣಿಯು ಜಾಗತಿಕ ಮಾರುಕಟ್ಟೆಗಳಲ್ಲಿ ಎಮರಾಲ್ಡ್ ಗ್ರೀನ್, ಮ್ಯಾಜಿಕ್ ಬ್ಲೂ, ನೋಬಲ್ ಬ್ಲಾಕ್ ಮತ್ತು ಫ್ಲೋಯಿಂಗ್ ಗೋಲ್ಡ್ ಬಣ್ಣದ ಆಯ್ಕೆಗಳಲ್ಲಿ ಬಿಡುಗಡೆ ಮಾಡುವ ಸಾಧ್ಯತೆಯಿದೆ.

ಇದಲ್ಲದೆ ವಿವೋ ಕಂಪೆನಿ ಭಾರತದಲ್ಲಿ ಇದೀಗ ತನ್ನ ಹೊಸ ವಿವೋ Y100 5G ಸ್ಮಾರ್ಟ್‌ಫೋನ್ ಲಾಂಚ್ ಮಾಡಿದೆ. ಈ ಸ್ಮಾರ್ಟ್‌ಫೋನ್ 6.38 ಇಂಚಿನ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 900 SoC ಪ್ರೊಸೆಸರ್ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್ 13 ಆಧಾರಿತ ಫನ್‌ಟಚ್ OS 13 ನಲ್ಲಿ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇನ್ನು ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯವನ್ನು ಪಡೆದಿದೆ. ಜೊತೆಗೆ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 44W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ.


Click it and Unblock the Notifications








