ಎಂಟ್ರಿ ಕೊಡ್ತು ವಿವೋದ ಮತ್ತೊಂದು 5G ಸ್ಮಾರ್ಟ್‌ಫೋನ್!..ಏನಿದರ ಹೈಲೈಟ್ಸ್!
ಜನಪ್ರಿಯ ಸ್ಮಾರ್ಟ್‌ಫೋನ್ ತಯಾರಕ ಬ್ರ್ಯಾಂಡ್‌ಗಳಲ್ಲಿ ಚೀನಾ ಮೂಲದ ವಿವೋ ಕಂಪೆನಿ ಕೂಡ ಒಂದಾಗಿದೆ. ವಿವೋ ಸಂಸ್ಥೆಯು ಇದೀಗ ನೂತನವಾಗಿ ತನ್ನ V ಸರಣಿಯಲ್ಲಿ ವಿವೋ V29 ಲೈಟ್ 5G ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡಿದೆ. ಈ ಫೋನ್ ಸ್ನಾಪ್‌ಡ್ರಾಗನ್ 695 SoC ಪ್ರೊಸೆಸರ್ ಪವರ್ ಅನ್ನು ಒಳಗೊಂಡಿದೆ.
ಹೌದು, ವಿವೋ ನೂತನವಾಗಿ ವಿವೋ V29 ಲೈಟ್ 5G (Vivo V29 Lite 5G) ಸ್ಮಾರ್ಟ್‌ಫೋನ್ ಅನ್ನು ಮಾರುಕಟ್ಟೆಯಲ್ಲಿ ಲಾಂಚ್ ಮಾಡಿದೆ. ಈ ಫೋನ್‌ಗಳು ಅಮೋಲೆಡ್ ಡಿಸ್‌ಪ್ಲೇ ಹೊಂದಿದ್ದು, 120Hz ರಿಫ್ರೆಶ್ ರೇಟ್ ಪಡೆದಿವೆ. ಜೊತೆಗೆ 5,000mAh ಬ್ಯಾಟರಿ ಸಾಮರ್ಥ್ಯದೊಂದಿಗೆ 44W ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ಪಡೆದಿರುವುದು ಪ್ಲಸ್ ಪಾಯಿಂಟ್ ಆಗಿ ಕಾಣಿಸಿಕೊಂಡಿದೆ.

ಇದರೊಂದಿಗೆ ಹಿಂಬದಿಯಲ್ಲಿ ಟ್ರಿಪಲ್ ಕ್ಯಾಮೆರಾ ಅನ್ನು ಒಳಗೊಂಡಿದ್ದು, ಪ್ರಾಥಮಿಕ ಕ್ಯಾಮೆರಾ 64 ಮೆಗಾಪಿಕ್ಸಲ್ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಇನ್ನು ಸೆಲ್ಫಿ ಕ್ಯಾಮೆರಾವು 16 ಮೆಗಾಪಿಕ್ಸಲ್ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಇನ್ನುಳಿದಂತೆ ವಿವೋ V29 ಲೈಟ್ 5G ಸ್ಮಾರ್ಟ್‌ಫೋನ್ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.
ಡಿಸ್‌ಪ್ಲೇ ರಚನೆ : ವಿವೋ V29 ಲೈಟ್ 5G ಸ್ಮಾರ್ಟ್‌ಫೋನ್ 6.78 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಡಿಸ್‌ಪ್ಲೇ 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಬೆಂಬಲಿಸಲಿದೆ. ಜೊತೆಗೆ ಡಿಸ್‌ಪ್ಲೇ 20:9 ಸ್ಕ್ರೀನ್ ಟು ಬಾಡಿ ನಡುವಿನ ಅನುಪಾತವನ್ನು ಹೊಂದಿದ್ದು, 1,300 nits ಬ್ರೈಟ್ನೆಸ್ ಅನ್ನು ಪಡೆದಿದೆ. ಅಲ್ಲದೆ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಬೆಂಬಲಿಸಲಿದೆ.
ಪ್ರೊಸೆಸರ್ ಪವರ್ : ವಿವೋ V29 ಲೈಟ್ 5G ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 695 SoC ಪ್ರೊಸೆಸರ್‌ನಲ್ಲಿ ಕಾರ್ಯ ನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 13 ಓಎಸ್ ಬೆಂಬಲಿಸಲಿದೆ. ಇದರೊಂದಿಗೆ ಅಡ್ರಿನೊ 619 GPU ಬೆಂಬಲ ಸಹ ಇದೆ. ಹಾಗೆಯೆ ಈ ಫೋನ್ 8GB RAM ಮತ್ತು 128 GB ಇಂಟರ್ ಸ್ಟೋರೇಜ್ ಸಾಮರ್ಥ್ಯದ ಆಯ್ಕೆ ಪಡೆದಿದೆ.
ಟ್ರಿಪಲ್ ಕ್ಯಾಮೆರಾ : ವಿವೋ V29 ಲೈಟ್ 5G ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಪಡೆದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಒದಗಿಸಲಾಗಿದೆ.
ಬ್ಯಾಟರಿ ಬ್ಯಾಕ್‌ಅಪ್ : ವಿವೋ V29 ಲೈಟ್ 5G ಸ್ಮಾರ್ಟ್‌ಫೋನ್ 5,000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದಕ್ಕೆ ಪೂರಕವಾಗಿ 44W ಫಾಸ್ಟ್ ಚಾರ್ಜಿಂಗ್‌ಗೆ ಬೆಂಬಲ ನೀಡಲಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹೈಬ್ರಿಡ್ ಎಸ್‌ಡಿ ಕಾರ್ಡ್ ಸ್ಲಾಟ್, ಬ್ಲೂಟೂತ್ 5.1 ಮತ್ತು ವೈಫೈ ಹೊಂದಾಣಿಕೆ ಮತ್ತು ಯುಎಸ್‌ಬಿ ಟೈಪ್-ಸಿ ಚಾರ್ಜಿಂಗ್ ಪೋರ್ಟ್ ಅನ್ನು ಬೆಂಬಲಿಸಲಿದೆ.
ಬೆಲೆ ಮತ್ತು ಲಭ್ಯತೆ : ವಿವೋ V29 ಲೈಟ್ 5G ಸ್ಮಾರ್ಟ್‌ಫೋನ್ ಇನ್ನು ಈ ಫೋನ್ ಬ್ಲ್ಯಾಕ್ ಹಾಗೂ ಸಮ್ಮರ್ ಗೋಲ್ಡ್ ಬಣ್ಣಗಳ ಆಯ್ಕೆಯಲ್ಲಿ ಲಭ್ಯವಾಗಲಿದೆ. ಈ ಫೋನಿನ ಜಾಗತಿಕ ಮತ್ತು ಭಾರತೀಯ ಲಭ್ಯತೆಯ ವಿವರಗಳನ್ನು ಇನ್ನೂ ಬಹಿರಂಗಪಡಿಸಿಲ್ಲ.


Click it and Unblock the Notifications








