ಶೀಘ್ರದಲ್ಲೇ ವಿವೋ V29 ಸರಣಿ ಎಂಟ್ರಿ! ಇಡೀ ಟೆಕ್ ವಲಯವೇ ಈ ಫೋನ್‌ಗಾಗಿ ಕಾದಿರೋದ್ಯಾಕೆ?
ಜನಪ್ರಿಯ ಸ್ಮಾರ್ಟ್‌ಫೋನ್ ತಯಾರಕ ವಿವೋ ಕಂಪೆನಿ ಶೀಘ್ರದಲ್ಲೇ ಹೊಸ ವಿವೋ V29 ಸರಣಿ ಬಿಡುಗಡೆಗೆ ತಯಾರಿ ನಡೆಸಿದೆ. ಈ ಸರಣಿಯಲ್ಲಿ ವಿವೋ V29, ವಿವೋ V29 ಪ್ರೊ ಸ್ಮಾರ್ಟ್‌ಫೋನ್ ಲಾಂಚ್ ಆಗುವ ನಿರೀಕ್ಷೆಯಿದೆ. ಆಗಸ್ಟ್ ತಿಂಗಳ ಆರಂಭದಲ್ಲಿ ಲಾಂಚ್ ಆಗಲಿರುವ ಈ ಸರಣಿಯ ಫೀಚರ್ಸ್ ಇದೀಗ ಆನ್‌ಲೈನ್‌ನಲ್ಲಿ ಬಹಿರಂಗವಾಗಿದೆ.
ಹೌದು, ವಿವೋ V29 ಸರಣಿ ಸ್ಮಾರ್ಟ್‌ಫೋನ್‌ಗಳ ಫೀಚರ್ಸ್ ಆನ್‌ಲೈನ್‌ನಲ್ಲಿ ಸೋರಿಕೆಯಾಗಿದೆ. ಈ ಮೂಲಕ ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ಹೊಸ ಅಲೆಯನ್ನೆ ಎಬ್ಬಿಸಿದೆ. ಅದರಂತೆ ಈ ಸರಣಿ ಸ್ಮಾರ್ಟ್‌ಫೋನ್‌ಗಳಲ್ಲಿ ವಿವೋ V29 ಪ್ರೊ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದುಕೊಂಡಿದೆ ಎನ್ನಲಾಗಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ಗಳ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ವಿವೋ V29 ಸ್ಮಾರ್ಟ್‌ಫೋನ್
ವಿವೋ V29 ಸ್ಮಾರ್ಟ್‌ಫೋನ್ 6.78 ಇಂಚಿನ ಅಮೋಲೆಡ್ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 120Hz ಸ್ಕ್ರೀನ್ ಅನ್ನು ಪಡೆದುಕೊಂಡಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 778G ಪ್ಲಸ್ ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 12GB RAM ಮತ್ತು 256 GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಒಳಗೊಂಡಿರಲಿದೆ.
ಇನ್ನು ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದಿದೆ. ಇದರ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್ ಇರಲಿದೆ. ಇದಲ್ಲದೆ 50 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಒಳಗೊಂಡಿದೆ. ಜೊತೆಗೆ ಸ್ಮಾರ್ಟ್‌ಫೋನ್ 4,505mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿರಲಿದ್ದು, 80W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ ಎಂದು ಅಂದಾಜಿಸಲಾಗಿದೆ.

ವಿವೋ V29 ಪ್ರೊ ಸ್ಮಾರ್ಟ್‌ಫೋನ್
ವಿವೋ V29 ಪ್ರೊ ಸ್ಮಾರ್ಟ್‌ಫೋನ್ 6.7 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದು 120 Hz ರಿಫ್ರೆಶ್ ರೇಟ್ ಬೆಂಬಲಿಸಲಿದೆ ಎಂದು ಅಂದಾಜಿಸಲಾಗಿದೆ.
ಇನ್ನು ವಿವೋ V29 ಸ್ಮಾರ್ಟ್‌ಫೋನ್ ಮೀಡಿಯಾಟೆಕ್ ಡೈಮೆನ್ಸಿಟಿ 8200SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 12GB RAM ಮತ್ತು 512GB ಇಂಟರ್ ಸ್ಟೋರೇಜ್ ಸಾಮರ್ಥ್ಯದಲ್ಲಿ ಬರಲಿದೆ. ಇನ್ನು ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 12 ಮೆಗಾಪಿಕ್ಸೆಲ್ ಟೆಲಿಫೋಟೋ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಲೆನ್ಸ್ ಅನ್ನು ಒಳಗೊಂಡಿದೆ
ಇದಲ್ಲದೆ ಈ ಸ್ಮಾರ್ಟ್‌ಫೋನ್ 80W ವೇಗದ ಚಾರ್ಜಿಂಗ್ ಬೆಂಬಲಿಸುವ 4,600mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿರಬಹುದು ಎಂದು ಅಂದಾಜಿಸಲಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಈ ಎರಡು ಸ್ಮಾರ್ಟ್‌ಫೋನ್‌ಗಳು ಕೂಡ ಹಾಟ್‌ಸ್ಪಾಟ್,ಬ್ಲೂಟೂತ್, ವೈಫೈ, ಯುಎಸ್‌ಬಿ ಸಿ ಪೋರ್ಟ್ ಹಾಗೂ ಹೆಡ್‌ಫೋನ್ ಜ್ಯಾಕ್ ಅನ್ನು ಬೆಂಬಲಿಸಲಿದೆ ಎಂದು ವರದಿಯಾಗಿದೆ.
ಇನ್ನು ವಿವೋ ಕಂಪೆನಿ ತನ್ನ X ಸರಣಿಯಲ್ಲಿ ನೂತನವಾಗಿ ವಿವೋ X100 5G ಮೊಬೈಲ್ ಅನ್ನು ಬಿಡುಗಡೆ ಮಾಡಲು ತಯಾರಿ ಕೂಡ ನಡೆಸಿದೆ. ಈ ಸ್ಮಾರ್ಟ್‌ಫೋನ್ ಕೂಡ ಸರ್ವ ರೀತಿಯಲ್ಲೂ ಸಿದ್ಧವಾಗಿದ್ದು, ಲಾಂಚ್ ಈವೆಂಟ್ ಡೇಟ್ ಫಿಕ್ಸ್‌ಗಾಗಿ ಕಾದು ನಿಂತಿದೆ. ಇದರ ನಡುವೆ ಈ ಸ್ಮಾರ್ಟ್‌ಫೋನ್ ಫೀಚರ್ಸ್ ಲೀಕ್ ಆಗಿದ್ದು, ಮಾರುಕಟ್ಟೆಯಲ್ಲಿ ಹೊಸ ಸಂಚಲನ ಸೃಷ್ಟಿಸಿದೆ. ಅದರಲ್ಲೂ ಈ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 9300 SoC ಪ್ರೊಸೆಸರ್ ಹೊಂದಿರಲಿದೆ ಅನ್ನೊದು ಹಾಟ್ ಟಾಪಿಕ್ ಆಗಿದೆ.


Click it and Unblock the Notifications








