Home
ಸುದ್ದಿಜಾಲ

ಹೊಸ ವಿವೋ ಸ್ಮಾರ್ಟ್‌ಫೋನ್‌ ಖರೀದಿಸಬೇಕೆ?..ಹಾಗಿದ್ರೆ, ಈ ಆಫರ್‌ ಬೆಸ್ಟ್‌!

ವಿವೋ ಸಂಸ್ಥೆಯ ಇತ್ತೀಚಿನ ಜನಪ್ರಿಯ ಸ್ಮಾರ್ಟ್‌ಫೋನ್‌ಗಳಲ್ಲಿ ಒಂದಾದ ವಿವೋ V29e 5G ಮೊಬೈಲ್‌ ಹೈ ಎಂಡ್‌ ಫೀಚರ್ಸ್‌ಗಳಿಂದ ಗ್ರಾಹಕರ ಗಮನ ಸೆಳೆದಿದೆ. ಇನ್ನು ಈ ಫೋನ್‌ ಖರೀದಿಸುವ ಗ್ರಾಹಕರಿಗೆ ವಿವೋ ಸಂಸ್ಥೆಯು ಈಗ ಭರ್ಜರಿ ಸಿಹಿಸುದ್ದಿ ನೀಡಿದೆ. ಸಂಸ್ಥೆಯು ವಿವೋ V29e 5G ಫೋನ್‌ ಬೆಲೆಯಲ್ಲಿ ಇದೀಗ ಶಾಶ್ವತವಾಗಿ ಬೆಲೆ ಇಳಿಕೆ ಘೋಷಿಸಿದೆ.

ಹೌದು, ವಿವೋ ಸಂಸ್ಥೆ ತನ್ನ ವಿವೋ V29e 5G ಸ್ಮಾರ್ಟ್‌ಫೋನ್‌ ಬೆಲೆಯಲ್ಲಿ 1,000 ರೂ. ಇಳಿಕೆ ತಿಳಿಸಿದೆ. ಅಂದಹಾಗೆ ಈ ಫೋನ್‌ ಸ್ನ್ಯಾಪ್ ಡ್ರ್ಯಾಗನ್ 695 SoC ಪ್ರೊಸೆಸರ್‌ ಕಾರ್ಯ ನಿರ್ವಹಿಸುತ್ತದೆ. ಹಾಗೆಯೇ ಡ್ಯುಯಲ್‌ ರಿಯರ್ ಕ್ಯಾಮೆರಾ ಆಯ್ಕೆಯನ್ನು ಒಳಗೊಂಡಿದ್ದು, ಇದರ ಪ್ರಾಥಮಿಕ ಕ್ಯಾಮೆರಾವು 64 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ.

ಹೊಸ ವಿವೋ ಸ್ಮಾರ್ಟ್‌ಫೋನ್‌ ಖರೀದಿಸಬೇಕೆ?..ಹಾಗಿದ್ರೆ, ಈ ಆಫರ್‌ ಬೆಸ್ಟ್‌!

ಬೆಲೆ ಇಳಿಕೆಯಿಂದಾಗಿ ಈ ಫೋನಿನ 8GB + 128 GB ವೇರಿಯಂಟ್‌ 25,999ರೂ. ಬೆಲೆಯಲ್ಲಿ ಲಭ್ಯ. ಹಾಗೆಯೇ 8GB + 256 GB ವೇರಿಯಂಟ್‌ 27,999ರೂ. ಗಳ ಪ್ರೈಸ್‌ ಟ್ಯಾಗ್‌ನಲ್ಲಿ ಖರೀದಿಗೆ ಲಭ್ಯ. ಹಾಗೆಯೇ ಇತರೆ ಆಯ್ದ ಬ್ಯಾಂಕ್‌ಗಳಿಂದ ಇನ್‌ಸ್ಟಂಟ್‌ ಡಿಸ್ಕೌಂಟ್‌ ಸಹ ಸಿಗಲಿದೆ. ಇನ್ನುಳಿದಂತೆ ವಿವೋ V29e 5G ಫೋನಿನ ಇತರೆ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ವಿವೋ V29e 5G ಸ್ಮಾರ್ಟ್‌ಫೋನ್‌

ವಿವೋ V29e 5G ಸ್ಮಾರ್ಟ್‌ ಫೋನ್‌ 6.73 ಇಂಚಿನ ಅಮೋಲೆಡ್‌ ಡಿಸ್‌ಪ್ಲೇ ಅನ್ನು ಪಡೆದಿದ್ದು, ಇದರ ಡಿಸ್‌ಪ್ಲೇಯು 2400 x 1080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್ ಸಾಮರ್ಥ್ಯ ಒಳಗೊಂಡಿದೆ. ಸೆಲ್ಫಿ ಕ್ಯಾಮೆರಾ ಉದ್ದೇಶಕ್ಕಾಗಿ ಮುಂಭಾಗದಲ್ಲಿ ಪಂಚ್ ಹೋಲ್‌ ಕಟೌಟ್ ನೀಡಲಾಗಿದ್ದು, ಡಿಸ್‌ಪ್ಲೇ ಹೆಚ್ಚು ಆಕರ್ಷಕ ಎನಿಸುತ್ತದೆ.

ಹೊಸ ವಿವೋ ಸ್ಮಾರ್ಟ್‌ಫೋನ್‌ ಖರೀದಿಸಬೇಕೆ?..ಹಾಗಿದ್ರೆ, ಈ ಆಫರ್‌ ಬೆಸ್ಟ್‌!

ವಿವೋದ ಈ ವಿವೋ V29e 5G ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್ ಸ್ನ್ಯಾಪ್ ಡ್ರ್ಯಾಗನ್ 695 SoC ಪ್ರೊಸೆಸರ್‌ ಪವರ್‌ನಲ್ಲಿ ಕಾರ್ಯ ನಿರ್ವಹಿಸಲಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 13 ಆಧಾರಿತ ಫನ್‌ಟಚ್‌ ಓಎಸ್‌ ಸಪೋರ್ಟ್‌ ಪಡೆದಿದೆ. ಅಲ್ಲದೇ ಇದರೊಂದಿಗೆ 8 GB + 128 GB ಹಾಗೂ 8GB + 256 GB ಆಂತರೀಕ ಸ್ಟೋರೇಜ್ ಆಯ್ಕೆ ಪಡೆದಿದೆ. ಇದು ಅಲ್ಲದೇ 8GB RAM ವರ್ಷುವಲ್ ಸಪೋರ್ಟ್‌ ಪಡೆದಿದೆ.

ವಿವೋ V29e 5G ಮೊಬೈಲ್‌ ಡ್ಯುಯಲ್‌ ರಿಯರ್ ಕ್ಯಾಮೆರಾ ಆಯ್ಕೆ ಒಳಗೊಂಡಿದ್ದು, ಇದರ ಪ್ರಾಥಮಿಕ ಕ್ಯಾಮೆರಾವು 64 ಮೆಗಾ ಪಿಕ್ಸೆಲ್ OIS ಸೌಲಭ್ಯ ಪಡೆದಿದೆ. ಎರಡನೇ ಕ್ಯಾಮೆರಾವು 8 ಮೆಗಾ ಪಿಕ್ಸೆಲ್ ವೈಡ್-ಆಂಗಲ್ ಕ್ಯಾಮೆರಾ ಪಡೆದಿದೆ. ಇನ್ನು ಸೆಲ್ಫಿಗಾಗಿ 50 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಒದಗಿಸಲಾಗಿದೆ.

ಹಾಗೆಯೇ ವಿವೋ V29e 5G ಮೊಬೈಲ್‌ ಪೋರ್ಟ್ರೇಟ್, ಮೈಕ್ರೋ ಮೂವಿ, ಹೈ-ರೆಸಲ್ಯೂಶನ್, ಪ್ಯಾನೋ, ಸ್ಲೋ ಮೋಷನ್, ಡಬಲ್ ಎಕ್ಸ್‌ಪೋಸರ್, ಡ್ಯುಯಲ್ ವ್ಯೂ, ಸೂಪರ್‌ಮೂನ್ ಮತ್ತು ಲೈಟ್ ಎಫೆಕ್ಟ್‌ ನಂತಹ ಫೀಚರ್ಸ್‌ ಗಳನ್ನು ಒಳಗೊಂಡಿರುವುದನ್ನು ಕಾಣಬಹುದು.

ವಿವೋ V29e 5G ಮೊಬೈಲ್‌ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಅನ್ನು ಪಡೆದಿದ್ದು, ಅದಕ್ಕೆ ಪೂರಕವಾಗಿ 44W ಫಾಸ್ಟ್‌ ಚಾರ್ಜಿಂಗ್ ಅನ್ನು ಸಪೋರ್ಟ್‌ ಮಾಡಲಿದೆ. ಹಾಗೆಯೇ ಇದು 5G, ಟೈಪ್ ಟಿ ಚಾರ್ಜಿಂಗ್ ಪೋರ್ಟ್, ಡ್ಯುಯಲ್ ಸಿಮ್ ಕಾರ್ಡ್ ಸ್ಲಾಟ್, ಇನ್ ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಸೇರಿದಂತೆ, ಅಗತ್ಯ ಕನೆಕ್ಟಿವಿಟಿ ಫೀಚರ್ಸ್‌ ಆಯ್ಕೆ ಒಳಗೊಂಡಿದೆ.

Best Mobiles in India

English summary
Vivo V29e 5G gets a permanent price cut in India. offer price and more details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+