Home
ಸುದ್ದಿಜಾಲ

ವಿವೋ ಸಂಸ್ಥೆಯ ಈ ಜನಪ್ರಿಯ ಮೊಬೈಲ್‌ ಬೆಲೆಯಲ್ಲಿ ಭಾರೀ ಇಳಿಕೆ; ಉಳಿತಾಯ ಖಚಿತ!

ಜನಪ್ರಿಯ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್ ಫೋನ್‌ಗಳಿಗೆ ಬೊಂಬಾಟ್‌ ರಿಯಾಯಿತಿ ನೀಡುವ ಮೂಲಕ ಗ್ರಾಹಕರನ್ನು ತನ್ನತ್ತ ಆಕರ್ಷಿಸುತ್ತದೆ. ಇದೀಗ ಫ್ಲಿಪ್‌ಕಾರ್ಟ್‌ ಪ್ಲಾಟ್‌ಫಾರ್ಮ್ ಆಯ್ದ ಕೆಲವು ಮೊಬೈಲ್‌ಗಳಿಗೆ ಭರ್ಜರಿ ಡಿಸ್ಕೌಂಟ್‌ ಲಭ್ಯ ಮಾಡಿದ್ದು, ಆ ಪೈಕಿ ವಿವೋದ ಜನಪ್ರಿಯ ಫೋನ್‌ಗಳಲ್ಲಿ ಒಂದಾದ ವಿವೋ V29e 5G ಸ್ಮಾರ್ಟ್‌ಫೋನ್‌ ಬಿಗ್ ಆಫರ್‌ ಪಡೆದಿದೆ. ಈ ಮೊಬೈಲ್‌ ಸ್ನ್ಯಾಪ್ಡ್ರ್ಯಾಗನ್ 695 SoC ಪ್ರೊಸೆಸರ್ ನಲ್ಲಿ ಕೆಲಸ ಮಾಡಲಿದ್ದು, ಜೊತೆಗೆ 50 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ರಚನೆಯನ್ನು ಪಡೆದುಕೊಂಡಿದೆ.

ಹೌದು, ಫ್ಲಿಪ್‌ಕಾರ್ಟ್‌ ತಾಣದಲ್ಲಿ ವಿವೋ V29e 5G ಸ್ಮಾರ್ಟ್‌ಫೋನ್‌ ಶೇ. 18% ರಷ್ಟು ನೇರ ಡಿಸ್ಕೌಂಟ್‌ ಅನ್ನು ಪಡೆದುಕೊಂಡಿದೆ. ಇನ್ನು ಈ ಫೋನಿನ 8 GB RAM + 128 GB ಸ್ಟೋರೇಜ್‌ ವೇರಿಯಂಟ್‌ 25,998ರೂ. ಗಳ ಡಿಸ್ಕೌಂಟ್‌ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಇದರ ಜೊತೆಗೆ ಇತರೆ ಕೆಲವು ಆಯ್ದ ಬ್ಯಾಂಕ್‌ ಕೊಡುಗೆಗಳು ಸಹ ಖರೀದಿದಾರರಿಗೆ ಲಭ್ಯ ಆಗಲಿವೆ.

ವಿವೋ ಸಂಸ್ಥೆಯ ಈ ಜನಪ್ರಿಯ ಮೊಬೈಲ್‌ ಬೆಲೆಯಲ್ಲಿ ಭಾರೀ ಇಳಿಕೆ; ಉಳಿತಾಯ ಖಚಿತ!

ಅಂದಹಾಗೆ ಈ ಫೋನ್‌ ಸ್ನ್ಯಾಪ್ಡ್ರ್ಯಾಗನ್ 695 SoC ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕಾರ್ಯ ಮಾಡಲಿದ್ದು, ಪೂರಕವಾಗಿ 5,000 mAh ಸಾಮರ್ಥ್ಯದ ಬ್ಯಾಟರಿ ಸಪೋರ್ಟ್‌ ಸಹ ಹೊಂದಿದೆ. ಹಾಗೆಯೇ ಈ ಫೋನ್‌ 8GB RAM ಜೊತೆಗೆ 128 GB ಮತ್ತು 256 GB ಸ್ಟೋರೇಜ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಹಾಗಾದರೇ ವಿವೋ V29e 5G ಫೋನ್‌ ಮೊಬೈಲ್‌ನ ಇತರೆ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ವಿವೋ V29e 5G ಫೀಚರ್ಸ್‌

ವಿವೋ V29e 5G ಸ್ಮಾರ್ಟ್‌ಫೋನ್‌ 6.73 ಇಂಚಿನ ಅಮೋಲೆಡ್‌ ಡಿಸ್‌ಪ್ಲೇ ಅನ್ನು ಪಡೆದಿದ್ದು, ಇದರ ಡಿಸ್‌ಪ್ಲೇಯು 2400 x 1080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್ ಸಾಮರ್ಥ್ಯ ಪಡೆದಿದೆ. ಸೆಲ್ಫಿ ಕ್ಯಾಮೆರಾ ಉದ್ದೇಶಕ್ಕಾಗಿ ಮುಂಭಾಗದಲ್ಲಿ ಪಂಚ್ ಹೋಲ್‌ ಕಟೌಟ್ ಒದಗಿಸಲಾಗಿದ್ದು, ಡಿಸ್‌ಪ್ಲೇ ಆಕರ್ಷಕ ಎನಿಸುತ್ತದೆ.

ವಿವೋ V29e 5G ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್ ಸ್ನ್ಯಾಪ್ಡ್ರ್ಯಾಗನ್ 695 SoC ಪ್ರೊಸೆಸರ್‌ ಪವರ್‌ನಲ್ಲಿ ಕಾರ್ಯ ನಿರ್ವಹಿಸಲಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 13 ಆಧಾರಿತ ಫನ್‌ಟಚ್‌ ಓಎಸ್‌ ಸಪೋರ್ಟ್‌ ಪಡೆದಿದೆ. ಇದರ ಜೊತೆಗೆ 128GB ಹಾಗೂ 256GB ಆಂತರೀಕ ಸ್ಟೋರೇಜ್ ಆಯ್ಕೆಯ ಜೊತೆಗೆ 8GB RAM ಸಪೋರ್ಟ್‌ ಪಡೆದಿದೆ.

ವಿವೋ V29e 5G ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್ ಕ್ಯಾಮೆರಾ ಆಯ್ಕೆ ಒಳಗೊಂಡಿದ್ದು, ಪ್ರಾಥಮಿಕ ಕ್ಯಾಮೆರಾವು 64 ಮೆಗಾ ಪಿಕ್ಸೆಲ್ OIS ಸೌಲಭ್ಯ ಪಡೆದಿದೆ. ಎರಡನೇ ಕ್ಯಾಮೆರಾವು 8 ಮೆಗಾ ಪಿಕ್ಸೆಲ್ ವೈಡ್-ಆಂಗಲ್ ಕ್ಯಾಮೆರಾ ಪಡೆದಿದೆ. ಇನ್ನು ಸೆಲ್ಫಿಗಾಗಿ 50 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ನೀಡಲಾಗಿದೆ. ಹಾಗೆಯೇ ಪೋರ್ಟ್ರೇಟ್, ಮೈಕ್ರೋ ಮೂವಿ, ಹೈ-ರೆಸಲ್ಯೂಶನ್, ಪ್ಯಾನೋ, ಸ್ಲೋ ಮೋಷನ್, ಡಬಲ್ ಎಕ್ಸ್‌ಪೋಸರ್, ಡ್ಯುಯಲ್ ವ್ಯೂ, ಸೂಪರ್‌ಮೂನ್ ಮತ್ತು ಲೈಟ್ ಎಫೆಕ್ಟ್‌ ಆಯ್ಕೆ ಕಾಣಬಹುದು.

ವಿವೋ V29e 5G ಸ್ಮಾರ್ಟ್‌ಫೋನ್‌ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಪಡೆದಿದ್ದು, ಅದಕ್ಕೆ ಪೂರಕವಾಗಿ 44W ಫಾಸ್ಟ್‌ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಹಾಗೆಯೇ ಇದು 5G, ಟೈಪ್ ಟಿ ಚಾರ್ಜಿಂಗ್ ಪೋರ್ಟ್, ಡ್ಯುಯಲ್-ಸಿಮ್ ಕಾರ್ಡ್ ಸ್ಲಾಟ್, ಇನ್-ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಸೇರಿದಂತೆ, ಅಗತ್ಯ ಕನೆಕ್ಟಿವಿಟಿ ಫೀಚರ್ಸ್‌ ಆಯ್ಕೆ ಒಳಗೊಂಡಿದೆ. ವಿವೋದ ಈ ಮೊಬೈಲ್‌ 8GB RAM ಜೊತೆಗೆ 128 GB ಮತ್ತು 256 GB ಆಂತರೀಕ ಸ್ಟೋರೇಜ್‌ ವೇರಿಯಂಟ್‌ಗಳನ್ನು ಪಡೆದಿದೆ.

Best Mobiles in India

English summary
Vivo V29e 5G Received Biggest price drop on flipkart. check offer price and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+