Home
ಸುದ್ದಿಜಾಲ

ವಿವೋ ಕಂಪೆನಿಯಿಂದ ಹೊಸ ಸ್ಮಾರ್ಟ್‌ಫೋನ್‌ ಲಾಂಚ್‌! ಕ್ಯಾಮೆರಾದಲ್ಲಿದೆ ವಿಶೇಷ ಫೀಚರ್ಸ್‌!

ವಿವೋ ಕಂಪೆನಿ ಭಾರತದಲ್ಲಿ ಇತ್ತೀಚಿಗೆ ವಿವೋ V29e ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿತ್ತು. ಇದೀಗ ವಿವೋ V29e ಸ್ಮಾರ್ಟ್‌ಫೋನ್‌ ಜಾಗತಿಕ ಮಾರುಕಟ್ಟೆಯಲ್ಲಿ ಬಿಡುಗಡೆ ಆಗಿದೆ. ಭಾರತದಲ್ಲಿ ಬಿಡುಗಡೆಯಾದ ಮಾದರಿಗೆ ಹೋಲಿಸಿದರೆ ಗ್ಲೋಬಲ್‌ ರೂಪಾಂತರವು ವಿಭಿನ್ನ ವಿನ್ಯಾಸದೊಂದಿಗೆ ಎಂಟ್ರಿ ನೀಡಿದೆ.

ಹೌದು, ವಿವೋ V29e ಸ್ಮಾರ್ಟ್‌ಫೋನ್‌ ಗ್ಲೋಬಲ್‌ ಮಾರುಕಟ್ಟೆಯಲ್ಲಿ ಲಾಂಚ್‌ ಆಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 695 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಡ್ಯುಯಲ್ ರಿಯರ್‌ ಕ್ಯಾಮೆರಾ ಸೆಟಪ್ ಅನ್ನು ಒಳಗೊಂಡಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಹಾಗಾದ್ರೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ ಹೊಂದಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ವಿವೋ ಕಂಪೆನಿಯಿಂದ ಹೊಸ ಫೋನ್‌ ಲಾಂಚ್‌! ಕ್ಯಾಮೆರಾದಲ್ಲಿದೆ ವಿಶೇಷ ಫೀಚರ್ಸ್‌!

ವಿವೋ V29e ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ವಿವೋ V29e ಸ್ಮಾರ್ಟ್‌ಫೋನ್‌ 6.67 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್‌ ಅನ್ನು ಒಳಗೊಂಡಿದ್ದು, ಪ್ಯಾನೆಲ್ ಬಾಗಿದ ಅಂಚು ಮತ್ತು ಮಧ್ಯದಲ್ಲಿ ಪಂಚ್-ಹೋಲ್ ಕಟೌಟ್ ಅನ್ನು ಹೊಂದಿದೆ. 1150 ನೀಟ್ಸ್‌ ಗರಿಷ್ಠ ಬ್ರೈಟ್‌ನೆಸ್ ಹೊಂದಿದ್ದು, 394 PPI ಪಿಕ್ಸೆಲ್ ಸಾಂದ್ರತೆಯನ್ನು ಪಡೆದುಕೊಂಡಿದೆ.

ವಿವೋ V29e ಪ್ರೊಸೆಸರ್‌ ಯಾವುದು?
ವಿವೋ V29e ಸ್ಮಾರ್ಟ್‌ಫೋನ್‌ ಗ್ಲೋಬಲ್‌ ರೂಪಾಂತರವೂ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 695 SoC ಪ್ರೊಸೆಸರ್‌ ವೇಗವನ್ನು ಹೊಂದಿದ್ದು, ಆಂಡ್ರಾಯ್ಡ್‌ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದ ಆಯ್ಕೆಯಲ್ಲಿ ಲಭ್ಯವಾಗಲಿದೆ. ಇದು ಮೆಮೊರಿ ಕಾರ್ಡ್‌ ಬೆಂಬಲದೊಂದಿಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಅವಕಾಶವನ್ನು ನೀಡಲಿದೆ.

ವಿವೋ ಕಂಪೆನಿಯಿಂದ ಹೊಸ ಫೋನ್‌ ಲಾಂಚ್‌! ಕ್ಯಾಮೆರಾದಲ್ಲಿದೆ ವಿಶೇಷ ಫೀಚರ್ಸ್‌!

ವಿವೋ V29e ಕ್ಯಾಮೆರಾ ಸೆಟ್‌ಅಪ್‌ ಏನಿದೆ?
ವಿವೋ V29e ಸ್ಮಾರ್ಟ್‌ಫೋನ್‌ ಡ್ಯುಯಲ್ ರಿಯರ್‌ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್‌ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್‌ ಸೆನ್ಸಾರ್‌ ಅನ್ನು ಒಳಗೊಂಡಿದೆ. ಇದಲ್ಲದೆ 50 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ವಿವೋ V29e ಬ್ಯಾಟರಿ ಮತ್ತು ಇತರೆ
ವಿವೋ V29e ಸ್ಮಾರ್ಟ್‌ಫೋನ್‌ 4,800mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 44W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್-ಸಿಮ್ ಕಾರ್ಡ್ ಸ್ಲಾಟ್, 4G, 5G, USB ಟೈಪ್-C ಪೋರ್ಟ್, ವೈಫೈ, ಬ್ಲೂಟೂತ್‌ v5.1, OTGಯನ್ನು ಬೆಂಬಲಿಸಲಿದೆ. ಇದಲ್ಲದೆ ಸ್ಮಾರ್ಟ್‌ಫೋನ್‌ ಇನ್-ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್‌ ಹೊಂದಿದೆ.

ವಿವೋ ಕಂಪೆನಿಯಿಂದ ಹೊಸ ಫೋನ್‌ ಲಾಂಚ್‌! ಕ್ಯಾಮೆರಾದಲ್ಲಿದೆ ವಿಶೇಷ ಫೀಚರ್ಸ್‌!

ವಿವೋ V29e ಬೆಲೆ ಮತ್ತು ಲಭ್ಯತೆ
ವಿವೋ V29e ಸ್ಮಾರ್ಟ್‌ಫೋನ್‌ ಗ್ಲೋಬಲ್‌ ಮಾರುಕಟ್ಟೆಯಲ್ಲಿ ಲಾಂಚ್‌ ಆಗಿದೆ. ಪ್ರಸ್ತುತ ಥೈಲ್ಯಾಂಡ್ ಮತ್ತು ಬಾಂಗ್ಲಾದೇಶ ವೆಬ್‌ಸೈಟ್‌ಗಳಲ್ಲಿ ಪಟ್ಟಿ ಮಾಡಲಾಗಿದೆ. ಇದು ಬಾಂಗ್ಲಾದೇಶದಲ್ಲಿ BDT 36,999 (ಸುಮಾರು 27,900ರೂ) ಬೆಲೆಯನ್ನು ಹೊಂದಿದೆ. ಇದನ್ನು ಫಾರೆಸ್ಟ್ ಬ್ಲ್ಯಾಕ್ ಮತ್ತು ರೋಸ್ ಗೋಲ್ಡ್ ಬಣ್ಣದ ಆಯ್ಕೆಗಳಲ್ಲಿ ಖರೀದಿಸಬಹುದಾಗಿದೆ.

ಇದಲ್ಲದೆ ವಿವೋ ಕಂಪೆನಿ ಇತ್ತೀಚಿಗೆ ಭಾರತದಲ್ಲಿ ಹೊಸ ವಿವೋ Y200 5G (Vivo Y200 5G) ಸ್ಮಾರ್ಟ್‌ಫೋನ್‌ ಲಾಂಚ್ ಮಾಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ರಚನೆ ಅನ್ನು ಪಡೆದಿದೆ. ಇದರಲ್ಲಿ ಮೊದಲ ಕ್ಯಾಮೆರಾ 64 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯವನ್ನು ಪಡೆದಿದೆ. ಹಾಗೆಯೇ ಈ ಫೋನ್ 5000mAh ಸಾಮರ್ಥ್ಯದ ಬ್ಯಾಟರಿ ಪವರ್ ಕೂಡಾ ಒಳಗೊಂಡಿದೆ.

Best Mobiles in India

English summary
Vivo V29e With 5,000mAh Battery Launched in Global Market
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+