Home
ಸುದ್ದಿಜಾಲ

ಸದ್ಯದಲ್ಲೇ ಬರಲಿದೆ ವಿವೋ V30 ಲೈಟ್‌ ಸ್ಮಾರ್ಟ್‌ಫೋನ್‌! ಏನೆಲ್ಲಾ ನಿರೀಕ್ಷೆ?

ಸ್ಮಾರ್ಟ್‌ಫೋನ್‌ ಪ್ರಿಯರ ನೆಚ್ಚಿನ ಬ್ರ್ಯಾಂಡ್‌ ವಿವೋ ಮತ್ತೊಂದು ಸ್ಮಾರ್ಟ್‌ಫೋನ್‌ನಲ್ಲಿ ಕಾರ್ಯನಿರ್ವಹಿಸುತ್ತಿದೆ. ಇದನ್ನು ವಿವೋ V30 ಲೈಟ್‌ ಎಂದು ಹೆಸರಿಸಲಾಗಿದ್ದು, ಶೀಘ್ರದಲ್ಲೇ ಬಿಡುಗಡೆ ಆಗಲಿದೆ ಎನ್ನಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಎಂಟ್ರಿ ಲೆವೆಲ್‌ ಸ್ಮಾರ್ಟ್‌ಫೋನ್‌ ಆಗಿ ಬರಲಿದೆ ಎಂದು ವರದಿಯಾಗಿದೆ.

ಹೌದು, ವಿವೋ V30 ಲೈಟ್‌ ಸ್ಮಾರ್ಟ್‌ಫೋನ್‌ ಶೀಗ್ರದಲ್ಲೇ ಎಂಟ್ರಿ ನೀಡುವ ಸಾಧ್ಯತೆಯಿದೆ. ಈ ಸ್ಮಾರ್ಟ್‌ಫೋನ್‌ ಸ್ನಾಪ್‌ಡ್ರಾಗನ್ 695 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ ಎಂದು ನಿರೀಕ್ಷಿಸಲಾಗಿದೆ. ಇದಲ್ಲದೆ ಸ್ಮಾರ್ಟ್‌ಫೋನ್‌ 44W ವೈರ್ಡ್ ಫಾಸ್ಟ್ ಚಾರ್ಜಿಂಗ್ ಬೆಂಬಲಿಸಲಿದೆ ಎಂದು ಅಂದಾಜಿಸಲಾಗಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ನೊಂದಿಗೆ ಬರಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಸದ್ಯದಲ್ಲೇ ಬರಲಿದೆ ವಿವೋ V30 ಲೈಟ್‌ ಸ್ಮಾರ್ಟ್‌ಫೋನ್‌! ಏನೆಲ್ಲಾ ನಿರೀಕ್ಷೆ?

ವಿವೋ V30 ಲೈಟ್‌ ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ವಿವೋ V30 ಲೈಟ್‌ ಸ್ಮಾರ್ಟ್‌ಫೋನ್‌ 6.67 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯೊಂದಿಗೆ ಬರಲಿದೆ. ಈ ಡಿಸ್‌ಪ್ಲೇ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಜೊತೆಗೆ ಡಿಸ್‌ಪ್ಲೇ 20:9 ರಚನೆಯ ಅನುಪಾತದಲ್ಲಿ ಬರಲಿದೆ. ಇನ್ನು ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಬೆಂಬಲಿಸಲಿದೆ ಎನ್ನಲಾಗಿದೆ.

ವಿವೋ V30 ಲೈಟ್‌ ಪ್ರೊಸೆಸರ್‌ ನಿರೀಕ್ಷೆ ಏನು?
ವಿವೋ V30 ಲೈಟ್‌ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 695 SoC ಪ್ರೊಸೆಸರ್‌ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್‌ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM + 256GB ಇಂಟರ್‌ ಸ್ಟೋರೇಜ್‌ ಆಯ್ಕೆಯಲ್ಲಿ ಲಭ್ಯವಾಗುವ ನಿರೀಕ್ಷೆ ಇಡಲಾಗಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಬೆಂಬಲದೊಂದಿಗೆ ಸಂಗ್ರಹ ಸಾಮರ್ಥ್ಯವನ್ನು ಸಹ ವಿಸ್ತರಿಸುವುದಕ್ಕೆ ಅವಕಾಶ ನೀಡಲಾಗಿದೆ.

ಸದ್ಯದಲ್ಲೇ ಬರಲಿದೆ ವಿವೋ V30 ಲೈಟ್‌ ಸ್ಮಾರ್ಟ್‌ಫೋನ್‌! ಏನೆಲ್ಲಾ ನಿರೀಕ್ಷೆ?

ವಿವೋ V30 ಲೈಟ್‌ ಕ್ಯಾಮೆರಾ ಸೆಟ್‌ಅಪ್‌ ಏನಿದೆ?
ವಿವೋ V30 ಲೈಟ್‌ ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್‌ ಸೆನ್ಸಾರ್‌ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್‌ ಸೆನ್ಸಾರ್‌ ಒಳಗೊಂಡಿದೆ. ಇದಲ್ಲದೆ 50 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ.

ವಿವೋ V30 ಲೈಟ್‌ ಬ್ಯಾಟರಿ ಮತ್ತು ಇತರೆ ಸೌಲಭ್ಯ
ವಿವೋ V30 ಲೈಟ್‌ ಸ್ಮಾರ್ಟ್‌ಫೋನ್‌ 4,800mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 44W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ಯುಎಸ್‌ಬಿ ಸಿ ಪೋರ್ಟ್‌, ಡ್ಯುಯಲ್-ಬ್ಯಾಂಡ್ Wi-Fi, GPS ಅನ್ನು ಹೊಂದಿರಲಿದೆ. ಇದಲ್ಲದೆ ಫೋನ್ ಭದ್ರತೆಗಾಗಿ ಇನ್-ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್‌ನೊಂದಿಗೆ ಬರಲಿದೆ ಎಂದು ವರದಿಯಾಗಿದೆ.

ಸದ್ಯದಲ್ಲೇ ಬರಲಿದೆ ವಿವೋ V30 ಲೈಟ್‌ ಸ್ಮಾರ್ಟ್‌ಫೋನ್‌! ಏನೆಲ್ಲಾ ನಿರೀಕ್ಷೆ?

ವಿವೋ V30 ಲೈಟ್‌ ಬೆಲೆ ಮತ್ತು ಲಭ್ಯತೆ ನಿರೀಕ್ಷೆ?
ವಿವೋ V30 ಲೈಟ್‌ ಸ್ಮಾರ್ಟ್‌ಫೋನ್‌ ಬೆಲೆ ಮತ್ತು ಲಭ್ಯತೆ ವಿವರಗಳು ಬಹಿರಂಗವಾಗಿಲ್ಲ. ಆದರೆ ಈ ಸ್ಮಾರ್ಟ್‌ಫೋನ್‌ ಶೀಘ್ರದಲ್ಲೇ ಬಿಡುಗಡೆ ಆಗಲಿದೆ ಎಂದು ವರದಿಯಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಮೊದಲು ಚೀನಾದಲ್ಲಿ ಬಿಡುಗಡೆ ಆಗುವ ನಿರೀಕ್ಷೆ ಇಡಲಾಗಿದೆ. ನಂತರದ ದಿನಗಳಲ್ಲಿ ಭಾರತಕ್ಕೆ ಎಂಟ್ರಿ ನೀಡಬಹುದು ಎಂದು ಅಂದಾಜಿಸಲಾಗಿದೆ.

ಇನ್ನು ಇತ್ತೀಚಿಗೆ ವಿವೋ ಕಂಪೆನಿ ವಿವೋ ವಾಚ್ 3 ಸ್ಮಾರ್ಟ್‌ವಾಚ್‌ ಅನ್ನು ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ವಾಚ್‌ 1.43 ಇಂಚಿನ ವೃತ್ತಾಕಾರದ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಡಿಸ್‌ಪ್ಲೇ ಮೇಲ್ಭಾಗದಲ್ಲಿ 3D ಕರ್ವ್ಡ್‌ ಗ್ಲಾಸ್‌ ಅನ್ನು ಹೊಂದಿದೆ. ಜೊತೆಗೆ ಈ ಸ್ಮಾರ್ಟ್ ವಾಚ್ 5 ಮೀಟರ್ ವರೆಗೆ ನೀರು ನಿರೋಧಕ ವ್ಯವಸ್ಥೆಯನ್ನು ಪಡೆದಿದೆ. ವಿವೋ ವಾಚ್ 3 ಇಂಟರ್‌ಫೇಸ್, ಫಂಕ್ಷನ್‌ಗಳನ್ನು ನ್ಯಾವಿಗೇಟ್ ಮಾಡಲು ಡಿವೈಸ್‌ನ ಬಲಭಾಗದಲ್ಲಿ ಮೇಲ್ಭಾಗದಲ್ಲಿ ಸ್ಟೇನ್ಲೆಸ್ ಸ್ಟೀಲ್ ತಿರುಗುವ ಕಿರೀಟವನ್ನು ಹೊಂದಿದೆ.

ಇದಲ್ಲದೆ ಸ್ಮಾರ್ಟ್‌ವಾಚ್‌ ಕೆಳಭಾಗದಲ್ಲಿ ಫಿಸಿಕಲ್‌ ಬಟನ್ ಪಡೆದಿದೆ. ಜೊತೆಗೆ ಸ್ಮಾರ್ಟ್‌ವಾಚ್‌ ಹೆಲ್ತ್‌ ಮತ್ತು ಫಿಟ್‌ನೆಸ್‌ಗೆ ಸಂಬಂಧಿಸಿದಂತೆ ಹಲವು ಆಕರ್ಷಕ ಫೀಚರ್ಸ್‌ಗಳನ್ನು ಪಡೆದಿದೆ. ಇದರಲ್ಲಿ ಪ್ರಮುಖವಾಗಿ ಹೃದಯ ಬಡಿತ ಮಾನಿಟರ್, SpO2 ಸೆನ್ಸಾರ್‌ ಪಡೆದಿದೆ. ಇದಲ್ಲದೆ ಅಸಹಜ ಏರಿಳಿತಗಳು ಕಂಡುಬಂದಾಗ ಬಳಕೆದಾರರಿಗೆ ಎಚ್ಚರಿಕೆ ನೀಡುವ ಫೀಚರ್ಸ್‌ ಕೂಡ ನೀಡಲಾಗಿದೆ.

Best Mobiles in India

English summary
Vivo V30 Lite with 4,700mAh battery launches soon
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+