ಜನಪ್ರಿಯ Vivo V30 Pro 5G ಫೋನಿಗೆ ಈಗ ಬಿಗ್ ಡಿಸ್ಕೌಂಟ್; ಆಫರ್ ಬೆಲೆ ನೋಡಿ!
ಪ್ರಮುಖ ಇ ಕಾಮರ್ಸ್ ತಾಣ ಎನಿಸಿರುವ ಫ್ಲಿಪ್‌ಕಾರ್ಟ್‌ನಲ್ಲಿ ಪ್ರಸ್ತುತ ಬಿಗ್ ಬಿಲಿಯನ್ ಡೇಸ್ 2024 (Flipkart Big Billion Days Sale 2024) ಸೇಲ್ ಆಯೋಜಿಸಿದ್ದು, ಈ ಮಾರಾಟದಲ್ಲಿ ಮೊಬೈಲ್‌ಗಳು ಆಕರ್ಷಕ ಡಿಸ್ಕೌಂಟ್ ಬೆಲೆಯಲ್ಲಿ ಖರೀದಿಗೆ ಲಭ್ಯ ಇವೆ. ಇನ್ನು ಹೊಸ ಮೊಬೈಲ್ ಖರೀದಿಸುವ ಗ್ರಾಹಕರು ಲಭ್ಯ ಇರುವ ಆಯ್ದ ಬ್ಯಾಂಕ್ ಕೊಡುಗೆಗಳನ್ನು ಪಡೆದುಕೊಂಡರೆ, ಇನ್ನಷ್ಟು ರಿಯಾಯಿತಿ ಪಡೆಯಬಹುದು. ಇದೀಗ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ವೆಬ್‌ಸೈಟ್‌ನಲ್ಲಿ ವಿವೋ V30 ಪ್ರೊ ಸ್ಮಾರ್ಟ್‌ಫೋನ್ (Vivo V30 Pro 5G) ಮೊಬೈಲ್ ಅನ್ನು ಗ್ರಾಹಕರು ಬಿಗ್ ಡಿಸ್ಕೌಂಟ್ ದರದಲ್ಲಿ ಖರೀದಿ ಮಾಡಬಹುದು.
ಹೌದು, ಜನಪ್ರಿಯ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್‌ನಲ್ಲಿ ವಿವೋ V30 ಪ್ರೊ ಮೊಬೈಲ್ (Vivo V30 Pro 5G) ಮೊಬೈಲ್ ಶೇ. 15% ರಷ್ಟು ನೇರ ಡಿಸ್ಕೌಂಟ್ ಪಡೆದಿದೆ. ಈ ಫೋನಿನ 12 GB RAM + 512 GB ಸ್ಟೋರೇಜ್ ವೇರಿಯಂಟ್ ಅನ್ನು ಖರೀದಿದಾರರು 43,999ರೂ. ಗಳ ಕೊಡುಗೆಯ ಬೆಲೆಯಲ್ಲಿ ಖರೀದಿ ಮಾಡಬಹುದು. ಅಲ್ಲದೇ ಹೆಚ್ಚುವರಿಯಾಗಿ ಆಯ್ದ ಬ್ಯಾಂಕ್‌ಗಳ ಆಫರ್ ಪಡೆದುಕೊಂಡರೆ, ಇನ್ನಷ್ಟು ಕೊಡುಗೆ ಸಹ ಸಿಗಲಿದೆ.

ಇನ್ನು ವಿವೋ V30 ಪ್ರೊ ಮೊಬೈಲ್ 8GB RAM ಮತ್ತು 256GB ಹಾಗೂ 12GB RAM ಮತ್ತು 512 GB ಸ್ಟೋರೇಜ್ ಆಯ್ಕೆಗಳನ್ನು ಇದು ಒಳಗೊಂಡಿದೆ. ಹಾಗೆಯೇ ಇದು 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಪಡೆದಿದೆ. ಇನ್ನುಳಿದಂತೆ ವಿವೋ V30 ಪ್ರೊ ಸ್ಮಾರ್ಟ್‌ಫೋನ್ (Vivo V30 Pro 5G) ಮೊಬೈಲ್‌ನ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಪಡೆದುಕೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.
ವಿವೋ V30 ಪ್ರೊ - ಫೀಚರ್ಸ್ ಹೀಗಿವೆ
ವಿವೋ V30 ಪ್ರೊ ಸ್ಮಾರ್ಟ್‌ಫೋನ್ 6.78 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಕರ್ವ್ಡ್ ಡಿಸ್‌ಪ್ಲೇ ಅನ್ನು ಹೊಂದಿದೆ. ಇದು 120Hz ರಿಫ್ರೆಶ್ ರೇಟ್, 100% DCI-P3 ಬಣ್ಣದ ಹರವು, ಅಲ್ಲದೇ 2800 nits ವರೆಗೆ ಗರಿಷ್ಠ ಬ್ರೈಟ್‌ನೆಸ್ ಲೆವೆಲ್ ಸಹ ಹೊಂದಿದೆ.
ವಿವೋ V30 ಪ್ರೊ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 8200 4nm ಪ್ರೊಸೆಸರ್ ಪವರ್ ಅನ್ನು ಹೊಂದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 14 ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 256 GB ಹಾಗೂ 12GB RAM ಮತ್ತು 512 GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ.
ವಿವೋ V30 ಪ್ರೊ ಸ್ಮಾರ್ಟ್‌ಫೋನ್ (Vivo V30 Pro 5G) ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಪಡೆದಿದೆ. ಇದರಲ್ಲಿ ಪ್ರಾಥಮಿಕ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಅಲ್ಟ್ರಾ-ವೈಡ್ ಸೆನ್ಸಾರ್ ಮತ್ತು ತೃತೀಯ ಕ್ಯಾಮೆರಾ 50 ಮೆಗಾಪಿಕ್ಸೆಲ್ 2x ಟೆಲಿಫೋಟೋ ಪೋಟ್ರೇಟ್ ಲೆನ್ಸ್ ಅನ್ನು ಹೊಂದಿದೆ. ಇದಲ್ಲದೆ 50 ಮೆಗಾಪಿಕ್ಸೆಲ್ ಆಟೋಫೋಕಸ್ ಸೆಲ್ಫಿ ಕ್ಯಾಮರಾವನ್ನು ಒಳಗೊಂಡಿದೆ.
ವಿವೋ V30 ಪ್ರೊ ಸ್ಮಾರ್ಟ್‌ಫೋನ್ 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಪಡೆದಿದ್ದು, ಇದು 80W ವೇಗದ ಚಾರ್ಜಿಂಗ್ ಸೌಲಭ್ಯ ಪಡೆದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G SA/NSA, ಡ್ಯುಯಲ್ 4G VoLTE, Wi-Fi 6 802.11 ac (2.4GHz + 5GHz), ಬ್ಲೂಟೂತ್ 5.3, GPS, USB ಟೈಪ್-C, NFC ಸಪೋರ್ಟ್ ಜೊತೆಗೆ ಸಿಗಲಿದೆ.


Click it and Unblock the Notifications








