ವಿವೋ V30 ಪ್ರೊ ಫೋನ್‌ನ ಕ್ಯಾಮೆರಾ ಫೀಚರ್ಸ್ ಬಹಿರಂಗ: ಹೇಗಿರಲಿದೆ ಕ್ಯಾಮೆರಾ ಡಿಸೈನ್!
ಭಾರತದ ಮಾರುಕಟ್ಟೆಯಲ್ಲಿ ವಿವೋ V30 ಪ್ರೊ ಸ್ಮಾರ್ಟ್‌ಫೋನ್ ಬಿಡುಗಡೆಗೆ ಸಕಲ ಸಿದ್ಧತೆ ನಡೆದಿದೆ. ಇದರ ನಡುವೆ ವಿವೋ V30 ಪ್ರೊ ಸ್ಮಾರ್ಟ್‌ಫೋನಿನ ಫೀಚರ್ಸ್ ಹಂತಹಂತವಾಗಿ ಆನ್‌ಲೈನ್‌ನಲ್ಲಿ ಬಹಿರಂಗವಾಗಿದೆ. ಇದೀಗ ವಿವೋ V30 ಪ್ರೊ ಸ್ಮಾರ್ಟ್‌ಫೋನ್‌ನ ಕ್ಯಾಮೆರಾ ಫೀಚರ್ಸ್ ಬಹಿರಂಗವಾಗಿದ್ದು, ಟೆಕ್ ವಲಯದಲ್ಲಿ ಸಂಚಲನ ಸೃಷ್ಟಿಸಿದೆ.
ಹೌದು, ವಿವೋ V30 ಪ್ರೊ ಸ್ಮಾರ್ಟ್‌ಫೋನ್ ಕ್ಯಾಮೆರಾ ಫೀಚರ್ಸ್ ಬಹಿರಂಗವಾಗಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಒಳಗೊಂಡಿದೆ ಎನ್ನಲಾಗಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ನೊಂದಿಗೆ ಬರಲಿದೆ ಎನ್ನಲಾಗಿದೆ. ಹಾಗಾದ್ರೆ ವಿವೋ V30 ಪ್ರೊ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್ ಹೊಂದಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

Vivo V30 Pro ಕ್ಯಾಮೆರಾ ರಚನೆ ಹೇಗಿದೆ?
ವಿವೋ V30 ಪ್ರೊ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ನಲ್ಲಿ ಬರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ನೊಂದಿಗೆ ಬರಲಿದೆ ಎನ್ನಲಾಗಿದೆ. ಎರಡನೇ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಹಾಗೂ ಮೂರನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಇನ್ನು ಈ ಫೋನ್ ಝೈಸ್ ಲೆನ್ಸ್‌ಗಳನ್ನು ಹೊಂದಿದ್ದು, ಉತ್ತಮ ಗುಣಮಟ್ಟದ ಫೋಟೋಗಳನ್ನು ನೀಡಲಿರುವ ನಿರೀಕ್ಷೆಗಳು ಇವೆ.
Vivo V30 Pro ಫೀಚರ್ಸ್ ಹೇಗಿದೆ?
Vivo V30 Pro ಸ್ಮಾರ್ಟ್‌ಫೋನ್ 6.78 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯೊಂದಿಗೆ ಬರಲಿದೆ. ಇದು 1260 x 2800 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಹೊಂದಿರಲಿದೆ. ಇನ್ನು ಡಿಸ್‌ಪ್ಲೇಯು 453 ಪಿಪಿಐ ಪಿಕ್ಸೆಲ್ ಸಾಂದ್ರತೆಯಲ್ಲಿರಲಿದೆ ಎನ್ನಲಾಗಿದೆ. ಈ ಡಿಸ್‌ಪ್ಲೇಯು HDR 10+, ಅಲ್ಟ್ರಾ ಸ್ಲಿಮ್ 3D ಕರ್ವ್ ಡಿಸ್‌ಪ್ಲೇ, 2160 Hz PWM ಅನ್ನು ಹೊಂದಿದೆ. ಜೊತೆಗೆ 2800 ನಿಟ್ಸ್ ಬ್ರೈಟ್‌ನೆಸ್‌ನಲ್ಲಿರಲಿದೆ ಎಂದು ಅಂದಾಜಿಸಲಾಗಿದೆ.
Vivo V30 Pro ಪ್ರೊಸೆಸರ್ ಯಾವುದು?
Vivo V30 Pro ಸ್ಮಾರ್ಟ್‌ಫೋನ್ ಮೀಡಿಯಾಟೆಕ್ ಡೈಮೆನ್ಸಿಟಿ 9200+ ಪ್ರೊಸೆಸರ್‌ನಲ್ಲಿ ಕೆಲಸ ನಿರ್ವಹಿಸಲಿದೆ ಎನ್ನಲಾಗಿದೆ. ಇದು ಆಂಡ್ರಾಯ್ಡ್ 14 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 12 GB RAM ಮತ್ತು 256 GB ಇಂಟರ್ ಸ್ಟೋರೇಜ್ ಸಾಮರ್ಥ್ಯದಲ್ಲಿ ಬರಲಿದೆ. ಈ ಸ್ಮಾರ್ಟ್‌ಫೋನ್ ಮೆಮೊರ ಕಾರ್ಡ್ ಬೆಂಬಲಿಸುವುದರ ಬಗ್ಗೆ ಯಾವುದೇ ಮಾಹಿತಿಯಿಲ್ಲ.
Vivo V30 Pro ಬ್ಯಾಟರಿ ಮತ್ತು ಇತರೆ ಫೀಚರ್ಸ್
Vivo V30 Pro ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯೊಂದಿಗೆ ಬರಲಿದೆ. ಇದು 80W ಫಾಸ್ಟ್ ಚಾರ್ಜಿಂಗ್ ಬೆಂಬಲವನ್ನು ಹೊಂದಿರಲಿದೆ ಎನ್ನಲಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ಬ್ಲೂಟೂತ್, ವೈಫೈ, ಯುಎಸ್‌ಬಿ ಟೈಪ್ ಸಿ ಪೋರ್ಟ್, ಹೆಡ್‌ಫೋನ್ ಜ್ಯಾಕ್ ಅನ್ನು ಬೆಂಬಲಿಸಲಿದೆ ಎನ್ನಲಾಗಿದೆ.
ಇನ್ನು ವಿವೋ ಕಂಪೆನಿ ಇತ್ತೀಚಿಗೆ Vivo Y100t 5G ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ 6.64 ಇಂಚಿನ ಫುಲ್ ಹೆಚ್‌ಡಿ ಪ್ಲಸ್ IPS LCD ಡಿಸ್‌ಪ್ಲೇಯನ್ನು ಹೊಂದಿದೆ. ಇದು 120Hz ರಿಫ್ರೆಶ್ ರೇಟ್ ಅನ್ನು ನೀಡಲಿದ್ದು, 1080x2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಜೊತೆಗೆ ಡಿಸ್‌ಪ್ಲೇಯು ಪ್ರತಿ ಇಂಚಿಗೆ 394 ಪಿಕ್ಸೆಲ್‌ಗಳ ಪಿಕ್ಸೆಲ್ ಸಾಂದ್ರತೆಯನ್ನು ಪಡೆದಿದೆ. ಈ ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದು ಸೈಡ್-ಫೇಸಿಂಗ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಮತ್ತು 3.5mm ಆಡಿಯೋ ಜ್ಯಾಕ್‌ನಂತಹ ಫೀಚರ್ಸ್‌ಗಳನ್ನು ಪಡೆದಿದೆ.


Click it and Unblock the Notifications








