ವಿವೋ V30 ಪ್ರೊ ಫೋನಿನ ಕ್ಯಾಮೆರಾ ಫೀಚರ್ಸ್ ಕೇಳಿದ್ರೆ ಶಾಕ್ ಆಗಿ ಬಿಡ್ತೀರಾ
ವಿವೋ ಕಂಪೆನಿಯ ಸ್ಮಾರ್ಟ್‌ಫೋನ್‌ಗಳಿಗೆ ಭಾರತದ ಮಾರುಕಟ್ಟೆಯಲ್ಲಿ ಸಾಕಷ್ಟು ಬೇಡಿಕೆಯಿದೆ. ಇದಕ್ಕೆ ತಕ್ಕಂತೆ ಹಲವು ಸ್ಮಾರ್ಟ್‌ಫೋನ್‌ಗಳು ಭಾರತದಲ್ಲಿ ಸಿಕ್ಕಾಪಟ್ಟೆ ಸೌಂಡ್ ಮಾಡಿವೆ. ಇದೀಗ ಹೊಸ ವಿವೋ V30 ಸ್ಮಾರ್ಟ್‌ಫೋನ್ ಸರಣಿಯು ಬಿಡುಗಡೆಗೆ ತಯಾರಿ ನಡೆಸಿದೆ. ಈ ಸರಣಿಯು ಇದೇ ಮಾರ್ಚ್ 7 ರಂದು ಭಾರತೀಯ ಮಾರುಕಟ್ಟೆಗೆ ಎಂಟ್ರಿ ನೀಡಲಿದೆ.
ಹೌದು, Vivo V30 ಸರಣಿಯು ಭಾರತಕ್ಕೆ ಶೀಘ್ರದಲ್ಲೇ ಎಂಟ್ರಿ ನೀಡಲಿದೆ. ಈ ಸರಣಿಯಲ್ಲಿ Vivo V30 ಮತ್ತು Vivo V30 Pro ಸ್ಮಾರ್ಟ್‌ಫೋನ್‌ಗಳು ಬರಲಿವೆ. ಇದರಲ್ಲಿ ವಿವೋ V30 ಪ್ರೊ ಸ್ಮಾರ್ಟ್‌ಫೋನ್ ಸಾಕಷ್ಟು ಗಮನಸೆಳೆದಿದೆ. ಇದು ZEISS ಆಪ್ಟಿಕ್ಸ್ ಅನ್ನು ಒಳಗೊಂಡಿರುವ ವಿವೋದ ಮೊದಲ V- ಸರಣಿಯ ಸ್ಮಾರ್ಟ್‌ಫೋನ್ ಆಗಿರುತ್ತದೆ. ಹಾಗಾದರೆ Vivo V30 Pro ಫೋನ್‌ನ ಫೀಚರ್ಸ್ ಏನಿರಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ವಿವೋ V30 ಪ್ರೊ ಸ್ಮಾರ್ಟ್‌ಫೋನ್ 2024 ರ ಅತ್ಯಂತ ಸ್ಲಿಮ್ ಫೋನ್ ಆಗಿರುತ್ತದೆ ಎಂದು ಕಂಪನಿಯು ಸೂಚಿಸುತ್ತದೆ. ಇನ್ನು ವಿ-ಸರಣಿಯ ಸ್ಮಾರ್ಟ್‌ಫೋನ್‌ಗಳನ್ನು ಭಾರತದಲ್ಲಿ ಫ್ಲಿಪ್‌ಕಾರ್ಟ್ ಮೂಲಕ ಮಾರಾಟ ಮಾಡಲಾಗುತ್ತದೆ ಎಂದು ವಿವೋ ಹೇಳಿದೆ. ಅಲ್ಲದೆ Vivo V30 ಸರಣಿಯ ಸ್ಮಾರ್ಟ್‌ಫೋನ್‌ಗಳು OIS (ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್) ಮತ್ತು ಔರಾ ಲೈಟ್ ಫ್ಲ್ಯಾಷ್‌ನೊಂದಿಗೆ ಟ್ರಿಪಲ್-ರಿಯರ್ ಕ್ಯಾಮೆರಾ ಸೆಟಪ್ ಅನ್ನು ಒಳಗೊಂಡಿರುತ್ತವೆ ಎಂದು ವರದಿಯಾಗಿದೆ.
ಇದರಲ್ಲಿ ವಿವೋ V30 ಪ್ರೊ ಸ್ಮಾರ್ಟ್‌ಫೋನ್ ZEISS ಸಹ-ಬ್ರಾಂಡಿಂಗ್ ಅನ್ನು ಹೊಂದಿರುತ್ತದೆ. ಬಯೋಟಾರ್ ಶೈಲಿಯ ಬೊಕೆ, ಸೋನಾರ್ ಶೈಲಿಯ ಬೊಕೆ, ಸಿನಿಮೀಯ ಶೈಲಿಯ ಬೊಕೆ, ಪ್ಲ್ಯಾನರ್ ಶೈಲಿಯ ಬೊಕೆ, ಡಿಸ್ಟಗನ್ ಶೈಲಿಯ ಬೊಕೆ ಮತ್ತು ಸಿನಿ-ಫ್ಲೇರ್ ಭಾವಚಿತ್ರವನ್ನು ಒಳಗೊಂಡಿರುವ ಝೈಸ್-ಶೈಲಿಯ ಭಾವಚಿತ್ರಗಳನ್ನು ನೀಡುತ್ತದೆ. ಈ ಫೋನ್ ಅಂಡಮಾನ್ ಬ್ಲೂ, ಪೀಕಾಕ್ ಗ್ರೀನ್ ಮತ್ತು ಕ್ಲಾಸಿಕ್ ಬ್ಲಾಕ್ ಕಲರ್ ಆಯ್ಕೆಯಲ್ಲಿ ಬರಲಿದೆ.
ವಿವೋ V30 ಪ್ರೊ ಸ್ಮಾರ್ಟ್‌ಫೋನ್ ಫೀಚರ್ಸ್ ನಿರೀಕ್ಷೆ ಏನು?
ವಿವೋ V30 ಪ್ರೊ ಸ್ಮಾರ್ಟ್‌ಫೋನ್ 6.78 ಇಂಚಿನ ಪುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇಯು 1260 x 2800 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದಲ್ಲಿದೆ. ಜೊತೆಗೆ ಡಿಸ್‌ಪ್ಲೇ 89.9% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಪಡೆದಿದ್ದು, 20:9 ರಚನೆಯ ಅನುಪಾತದಲ್ಲಿ ಬರಲಿದೆ.
ವಿವೋ V30 ಪ್ರೊ ಸ್ಮಾರ್ಟ್‌ಫೋನ್ ಪ್ರೊಸೆಸರ್ ಯಾವುದು?
ವಿವೋ V30 ಪ್ರೊ ಸ್ಮಾರ್ಟ್‌ಫೋನ್ ಮೀಡಿಯಾಟೆಕ್ ಡೈಮೆನ್ಸಿಟಿ 8200 (4 nm) ಪ್ರೊಸೆಸರ್ ವೇಗವನ್ನು ಹೊಂದಿರಲಿದೆ. ಇದು CPU ಆಕ್ಟಾ-ಕೋರ್ GPU ಮಾಲಿ-G610 MC6 ಸಪೋರ್ಟ್ ಪಡೆದಿದೆ. ಈ ಫೋನ್ ಆಂಡ್ರಾಯ್ಡ್ 14 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 12GB RAM ಮತ್ತು 256GB ಇಂಟರ್ ಸ್ಟೋರೇಜ್ ಸಾಮರ್ಥ್ಯದಲ್ಲಿ ಬರಲಿದೆ.

ವಿವೋ V30 ಪ್ರೊ ಸ್ಮಾರ್ಟ್‌ಫೋನ್ ಕ್ಯಾಮೆರಾ ವಿಶೇಷ
ವಿವೋ V30 ಪ್ರೊ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾದೊಂದಿಗೆ ಬರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 50 ಮೆಗಾಪಿಕ್ಸೆಲ್ ಟೆಲಿಫೋಟೋ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಅಲ್ಟ್ರಾವೈಡ್ ಲೆನ್ಸ್ ಅನ್ನು ಪಡೆದಿದೆ. ಇದಲ್ಲದೆ 50 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ನಿರೀಕ್ಷಿಸಲಾಗಿದೆ.
ವಿವೋ V30 ಪ್ರೊ ಸ್ಮಾರ್ಟ್‌ಫೋನ್ ಬ್ಯಾಟರಿ ಮತ್ತು ಇತರೆ
ವಿವೋ V30 ಪ್ರೊ ಸ್ಮಾರ್ಟ್‌ಫೋನ್ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿರಲಿದೆ. ಇದು 80W ವೈರ್ಡ್, PD ಚಾರ್ಜ್ ಮಾಡಲಾಗುತ್ತಿದೆ. ಇನ್ನು ಕನೆಕ್ಟಿವಿಟಿ ಅಯ್ಕೆಗಳಲ್ಲಿ ವೈಫೈ, ಯುಎಸ್‌ಬಿ ಟೈಪ್ ಸಿ ಪೋರ್ಟ್, ಹೆಡ್‌ಫೋನ್ ಜ್ಯಾಕ್, ಬ್ಲೂಟೂತ್ ಅನ್ನು ಬೆಂಬಲಿಸಲಿದೆ.


Click it and Unblock the Notifications








