Home
ಸುದ್ದಿಜಾಲ

ವಿವೋ V40 5G ಫೋನ್‌ ಖರೀದಿಗೆ ಇದುವೇ ಬೆಸ್ಟ್‌ ಟೈಮ್‌; ಭರ್ಜರಿ ಡಿಸ್ಕೌಂಟ್‌!

ಮೊಬೈಲ್ ಮಾರುಕಟ್ಟೆಯಲ್ಲಿ ವಿವೋ ಸಂಸ್ಥೆಯ ಫೋನ್‌ಗಳಿಗೆ ಉತ್ತಮ ಬೇಡಿಕೆ ಇದೆ. ಆ ಪೈಕಿ ಕಂಪನಿಯ ದೈತ್ಯ ವಿವೋ V40 5G (vivo V40 5G) ಮೊಬೈಲ್‌ ಕ್ಯಾಮೆರಾ, ಪ್ರೊಸೆಸರ್‌ ಹಾಗೂ ಕೆಲವು ಆಕರ್ಷಕ ಫೀಚರ್ಸ್‌ಗಳಿಂದ ಗಮನ ಸೆಳೆದಿದೆ. ಅಂದಹಾಗೆ ಈ ಮೊಬೈಲ್‌ ಈಗ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ವೆಬ್‌ಸೈಟ್‌ನಲ್ಲಿ ಸದ್ಯ ಭರ್ಜರಿ ಬೆಲೆ ಇಳಿಕೆ ದರದಲ್ಲಿ ಕಾಣಿಸಿಕೊಂಡಿದೆ.

ಹೌದು, ಫ್ಲಿಪ್‌ಕಾರ್ಟ್‌ ( Flipkart ) ವೆಬ್‌ಸೈಟ್‌ನಲ್ಲಿ ಇದೀಗ ವಿವೋ V40 5G (vivo V40 5G) ಸ್ಮಾರ್ಟ್‌ಫೋನ್‌ ಶೇ. 13% ರಷ್ಟು ನೇರ ಡಿಸ್ಕೌಂಟ್‌ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಈ ಫೋನಿನ 8GB RAM + 256 GB ವೇರಿಯಂಟ್‌ 36,999ರೂ. ಗಳ ಆಫರ್‌ ರಿಯಾಯಿತಿ ದರದಲ್ಲಿ ಖರೀದಿಗೆ ಲಭ್ಯ ಇದೆ. ಇದರ ಜೊತೆಗೆ ಎಕ್ಸ್‌ಚೇಂಜ್ ರಿಯಾಯಿತಿ ಸಹ ಪಡೆದುಕೊಂಡರೆ, ಇನ್ನಷ್ಟು ರಿಯಾಯಿತಿ ಪ್ರೈಸ್‌ನಲ್ಲಿ ಖರೀದಿ ಮಾಡಬಹುದು.

ವಿವೋ V40 5G ಫೋನ್‌ ಖರೀದಿಗೆ ಇದುವೇ ಬೆಸ್ಟ್‌ ಟೈಮ್‌; ಭರ್ಜರಿ ಡಿಸ್ಕೌಂಟ್‌!

ವಿವೋ V40 5G ಮೊಬೈಲ್‌ನ ಮೊದಲ ಕ್ಯಾಮೆರಾವು 50 ಮೆಗಾ ಪಿಕ್ಸಲ್‌ ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ. ಅಲ್ಲದೇ 50 ಮೆಗಾ ಪಿಕ್ಸಲ್‌ ಸೆಲ್ಫಿ ಕ್ಯಾಮೆರಾ ಸೌಲಭ್ಯ ಸಹ ಹೊಂದಿದೆ. ಹಾಗೆಯೇ ಇದು 128 GB, 256 GB ಹಾಗೂ 512 GB ಆಂತರೀಕ ಸ್ಟೋರೇಜ್‌ ವೇರಿಯಂಟ್‌ ಆಯ್ಕೆ ಪಡೆದಿದೆ. ಇನ್ನುಳಿದಂತೆ ವಿವೋ V40 5G ಮೊಬೈಲ್‌ ಇತರೆ ಫೀಚರ್ಸ್‌ ಯಾವುವು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ವಿವೋ V40 5G ಫೀಚರ್ಸ್‌ ಮಾಹಿತಿ

ವಿವೋ V40 5G ಸ್ಮಾರ್ಟ್‌ಫೋನ್‌ 6.78 ಇಂಚಿನ ಕರ್ವ್ಡ್‌ AMOLED ಡಿಸ್‌ಪ್ಲೇ ಸೌಲಭ್ಯ ಅನ್ನು ಪಡೆದಿದೆ. ಇದು 1.5K ರೆಸಲ್ಯೂಶನ್, 120Hz ನ ರಿಫ್ರೆಶ್ ದರ, 480Hz ನ ಸ್ಪರ್ಶ ಮಾದರಿ ದರ ಮತ್ತು 4500 ನಿಟ್‌ಗಳ ಗರಿಷ್ಠ ಬ್ರೈಟ್‌ನೆಸ್‌ ಪಡೆದಿದೆ. ಇದರ ಡಿಸ್‌ಪ್ಲೇಯು HDR10+ ಅನ್ನು ಬೆಂಬಲ ಮಾಡುತ್ತದೆ.

ವಿವೋ V40 5G ಸ್ಮಾರ್ಟ್‌ಫೋನ್‌ ಕ್ವಾಲ್ಕಮ್‌ ನ Snapdragon 7 Gen 3 ಚಿಪ್‌ಸೆಟ್‌ ಪ್ರೊಸೆಸರ್ ಬಲವನ್ನು ಪಡೆದಿದೆ. ಅಲ್ಲದೇ Adreno 720 GPU ಮತ್ತು 512GB ವರೆಗಿನ ಆಂತರೀಕ ಸ್ಟೋರೇಜ್ ಒಳಗೊಂಡಿದೆ. ಈ ದೈತ್ಯ ಮೊಬೈಲ್‌ 12GB RAM ಅನ್ನು ಪಡೆದಿದ್ದು, ಜೊತೆಗೆ ಆಂಡ್ರಾಯ್ಡ್ 14 ಆಧಾರಿತ ಆಪರೇಟಿಂಗ್ ಸಿಸ್ಟಮ್‌ನಲ್ಲಿ ಕಾರ್ಯ ನಿರ್ವಹಿಸುತ್ತದೆ.

ವಿವೋ V40 5G ಸ್ಮಾರ್ಟ್‌ಫೋನ್‌ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್‌ ಸೌಲಭ್ಯ ಅನ್ನು ಒಳಗೊಂಡಿದೆ. ಈ ಫೋನ್ 50ಎಂಪಿ ಮೊದಲ ಕ್ಯಾಮೆರಾ ಹಾಗೂ 50ಎಂಪಿ ಅಲ್ಟ್ರಾ ವೈಡ್ ಆಂಗಲ್ ಲೆನ್ಸ್ ಅನ್ನು ಒಳಗೊಂಡಿದೆ. ಇದರ ಜೊತೆಗೆ ಸೆಲ್ಫಿ ಮತ್ತು ವಿಡಿಯೋ ಕರೆಗಳಿಗಾಗಿ 50ಎಂಪಿ ಫ್ರಂಟ್ ಕ್ಯಾಮೆರಾವನ್ನು ಪಡೆದಿದೆ.

ವಿವೋ V40 5G ಫೋನ್ 5500 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಅನ್ನು ಪಡೆದಿದ್ದು, ಇದಕ್ಕೆ ಪೂರಕವಾಗಿ 80W ಫಾಸ್ಟ್‌ ಚಾರ್ಜಿಂಗ್ ಸೌಲಭ್ಯ ಅನ್ನು ಸಪೋರ್ಟ್‌ ಮಾಡುತ್ತದೆ. ಹಾಗೆಯೇ ಈ ಫೋನ್‌ 190 ಗ್ರಾಂ ತೂಕ ಹೊಂದಿದ್ದು, IP68 ರೇಟಿಂಗ್ ಪಡೆದಿದೆ.

ವಿವೋ V40 5G ಸ್ಮಾರ್ಟ್‌ಫೋನ್‌ ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್ 4G ವೋಲ್ಟ್, 5G, Wi-Fi, GPS, ಬ್ಲೂಟೂತ್, USB ಟೈಪ್-ಸಿ ಪೋರ್ಟ್‌ ನಂತಹ ಸೌಲಭ್ಯಗಳನ್ನು ಪಡೆದುಕೊಂಡಿದೆ. ಈ ನೂತನ ಸ್ಮಾರ್ಟ್‌ಫೋನ್‌ ಫೇಸ್ ಅನ್ಲಾಕ್‌ನೊಂದಿಗೆ ಫಿಂಗರ್‌ಪ್ರಿಂಟ್ ಸೆನ್ಸಾರ್‌ ಅನ್ನು ಪಡೆದಿದೆ.

Best Mobiles in India

English summary
Vivo V40 5G Receives Major Price Cut on Flipkart. Check offer, Price, Specifications and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+