ನಾಳೆ vivo V50 ಫಸ್ಟ್ ಸೇಲ್; ಬೆಲೆ ಎಷ್ಟು, ಆಫರ್ ಏನಿದೆ? ಇಲ್ಲಿವೆ ಟಾಪ್ 5 ಫೀಚರ್ಸ್
ಬಹುನಿರೀಕ್ಷಿತ ವಿವೋ V50 5G (Vivo V50) ಮೊಬೈಲ್ ದೇಶೀಯ ಮಾರುಕಟ್ಟೆಯಲ್ಲಿ ಬಿಡುಗೆಯಾಗಿದೆ. ಕಂಪನಿಯು ಇದನ್ನು ತನ್ನ 'V' ಸರಣಿಯ ಅಡಿಯಲ್ಲಿ ಪರಿಷಯಿಸಿದೆ. ವಿಶೇಷವೆಂದರೆ, ಇದು ಈ ವರ್ಷ ಬಿಡುಗಡೆಯಾದ ಮೊದಲ ವಿವೋ ಫೋನ್ ಆಗಿದೆ. ಇದು ಪ್ರೀಮಿಯಂ ಮಧ್ಯಮ ಶ್ರೇಣಿಯ ಸ್ಮಾರ್ಟ್‌ಫೋನ್ ಆಗಿದೆ. ಅಂದಹಾಗೆ, ನಾಳೆಯಿಂದ (ಫೆಬ್ರವರಿ 25) ಈ ಮೊಬೈಲ್ ತನ್ನ ಮೊದಲ ಮಾರಾಟವನ್ನು ಪ್ರಾರಂಭಿಸಲಿದೆ. ಇದರ ಲುಕ್ ಮತ್ತು ಫೀಚರ್ಸ್ ಈಗಾಗಲೇ ಮೊಬೈಲ್ ಪ್ರಿಯರ ಗಮನ ಸೆಳೆದಿದೆ. ಬನ್ನಿ, ಈ ಫೋನಿನ ಬೆಲೆ, ಆಫರ್‌ಗಳು ಮತ್ತು ಟಾಪ್ 5 ವೈಶಿಷ್ಟ್ಯಗಳನ್ನು ತಿಳಿಯೋಣ.
ವಿವೋ V50 5G ಫೋನ್ ಮೂರು ಸ್ಟೋರೇಜ್ ರೂಪಾಂತರಗಳಲ್ಲಿ ಮಾರಾಟವಾಗಲಿದೆ. ಈ ಫೋನಿನಲ್ಲಿ ಮೂರು 50 ಮೆಗಾಪಿಕ್ಸೆಲ್ ಕ್ಯಾಮೆರಾಗಳು ಲಭ್ಯವಿದೆ. ಇದು ಕ್ವಾಲ್ಕಾಮ್‌ನ ಸ್ನಾಪ್‌ಡ್ರಾಗನ್ 7 ಜೆನ್ 3 ಪ್ರೊಸೆಸರ್‌ನೊಂದಿಗೆ ಕೆಲಸ ಮಾಡುತ್ತದೆ. ಈ ಮೊಬೈಲ್ 6.77 ಇಂಚಿನ ದೊಡ್ಡ ಡಿಸ್ಪ್ಲೇಯನ್ನು ಹೊಂದಿದೆ. ಜೊತೆಗೆ 12GB RAM + 512GB ಸ್ಟೋರೇಜ್, 6000mAh ಬ್ಯಾಟರಿ ಮತ್ತು 90W ವೇಗದ ಚಾರ್ಜಿಂಗ್ ಸೇರಿದಂತೆ ಅನೇಕ ಅತ್ಯುತ್ತಮ ಫೀಚರ್ಸ್ ಒಳಗೊಂಡಿದೆ. ಇದು ಕಳೆದ ವರ್ಷ ನವೆಂಬರ್ ತಿಂಗಳಲ್ಲಿ ಬಿಡುಗಡೆಯಾಗಿದ್ದ Vivo S20 ಫೋನಿನ ಮರುಬ್ರಾಂಡೆಡ್ ಆಗಿದೆ.

ವಿವೋ V50 ಬೆಲೆ ಮತ್ತು ಆಫರ್‌ಗಳು
ವಿವೋ V50 5G ಫೋನಿನ 8GB RAM + 128GB ಸ್ಟೋರೇಜ್ ರೂಪಾಂತರದ ಬೆಲೆ 34,999 ರೂ. ಇದೆ. 8GB RAM + 256GB ಸ್ಟೋರೇಜ್ ವೇರಿಯಂಟ್ 36,999 ರೂ.ಗೆ ಮಾರಾಟವಾಗಲಿದೆ. ಮತ್ತು 12GB RAM + 256GB ಸ್ಟೋರೇಜ್ ರೂಪಾಂತರವನ್ನು 40,999 ರೂ. ಬೆಲೆಗೆ ಬಿಡುಗಡೆ ಮಾಡಲಾಗಿದೆ.
ವಿವೋ V50 5G ಫೋನ್ ರೋಸ್ ರೆಡ್, ಸ್ಟಾರಿ ಬ್ಲೂ ಮತ್ತು ಟೈಟಾನಿಯಂ ಗ್ರೇ ಬಣ್ಣಗಳ ಆಯ್ಕೆಯಲ್ಲಿ ಮಾರಾಟವಾಗಲಿದೆ. ಕಂಪನಿಯು ಮೊದಲ ಮಾರಾಟದ ಪ್ರಯುಕ್ತ ಕೆಲವು ಆಫರ್‌ಗಳನ್ನು ನೀಡುತ್ತಿದೆ. ಎಚ್‌ಡಿಎಫ್‌ಸಿ ಮತ್ತು ಎಸ್‌ಬಿಐ ಬ್ಯಾಂಕ್ ಕಾರ್ಡ್‌ಗಳನ್ನು ಬಳಿಸಿ ಈ ಮೊಬೈಲ್ ಖರೀದಿಸುವ ಗ್ರಾಹಕರಿಗೆ ಶೇ.10 ರಿಯಾಯಿತಿ ಲಭ್ಯವಿದೆ. ನಾಳೆ (ಫೆಬ್ರವರಿ 25) ಮಧ್ಯಾಹ್ನ 12 ಗಂಟೆಯಿಂದ ತನ್ನ ಮೊದಲ ಮಾರಾಟ ಪ್ರಾರಂಭಿಸಲಿದೆ.
ವಿವೋ V50: ಟಾಪ್ 5 ವೈಶಿಷ್ಟ್ಯಗಳು
ಡಿಸ್ಪ್ಲೇ ವಿವರ
ವಿವೋ V50 5G ಮೊಬೈಲ್ 6.77 ಇಂಚಿನ ಫುಲ್ ಎಚ್‌ಡಿ ಪ್ಲಸ್ ಅಮೋಲೆಡ್ ಡಿಸ್ಪ್ಲೇಯನ್ನು ಹೊಂದಿದೆ. ಇದು 2392 × 1080 ಪಿಕ್ಸೆಲ್ ರೆಸಲ್ಯೂಶನ್ ಬೆಂಬಲ ಪಡೆದಿದೆ. ಈ ಡಿಸ್ಪ್ಲೇಯು 120Hz ರಿಫ್ರೆಶ್ ದರ ಮತ್ತು 4500 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಹೊಂದಿದೆ. ಇದು ಇನ್ ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸರ್ ತಂತ್ರಜ್ಞಾನ ಸಹ ಒಳಗೊಂಡಿದೆ.
ಪ್ರೊಸೆಸರ್ ಸಾಮರ್ಥ್ಯ
ವಿವೋ V50 5G ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 7 ಜೆನ್ 3 ಆಕ್ಟಾ-ಕೋರ್ ಪ್ರೊಸೆಸರ್ ಹೊಂದಿದೆ. ಇದನ್ನು 4 ನ್ಯಾನೋಮೀಟರ್ ಫ್ಯಾಬ್ರಿಕೇಶನ್‌ಗಳಲ್ಲಿ ನಿರ್ಮಿಸಲಾಗಿದೆ. ಈ ಫೋನ್ ಆಂಡ್ರಾಯ್ಡ್ 15 ಆಧಾರಿತ Funtouch ಓಎಸ್ 15 ಜೊತೆಗೆ ಕೆಲಸ ಮಾಡುತ್ತದೆ. ಈ ಸ್ಮಾರ್ಟ್‌ಫೋನ್ 8GB RAM ಮತ್ತು 12GB RAM ಹೊಂದಿದೆ. ಇದಕ್ಕೆ ಪೂರಕವಾಗಿ 256GB ಸ್ಟೋರೇಜ್ ಆಯ್ಕೆ ಲಭ್ಯವಿದೆ.
ಕ್ಯಾಮೆರಾ ಸೆಟಪ್
ವಿವೋ V50 5G ಫೋನ್ ಡ್ಯುಯಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ OIS ಬೆಂಬಲದೊಂದಿಗೆ 50 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ ಇದೆ. ಹಾಗೆಯೇ ಔರಾ ಲೈಟ್ ಎಲ್‌ಇಡಿ ಫ್ಲ್ಯಾಷ್‌ನೊಂದಿಗೆ 50 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಲಭ್ಯವಿದೆ. ಈ ಮೊಬೈಲ್ ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, 50 ಮೆಗಾಪಿಕ್ಸೆಲ್ ಮುಂಭಾಗದ ಕ್ಯಾಮೆರಾ ಸಹ ಒಳಗೊಂಡಿದೆ.
ಬ್ಯಾಟರಿ ಬ್ಯಾಕಪ್ ಹೇಗಿದೆ
ವಿವೋ V50 5G ಮೊಬೈಲ್ 6000mAh ಸಾಮರ್ಥ್ಯದ ಬ್ಯಾಟರಿಯೊಂದಿಗೆ ಬಿಡುಗಡೆಯಾಗಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 90W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ. ಈ ಫೋನ್ ಧೂಳು ಮತ್ತು ನೀರಿನಿಂದ ರಕ್ಷಣೆಗೆ IP68 + IP69 ರೇಟಿಂಗ್ ಅನ್ನು ಪಡೆದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಈ ಫೋನ್ ಡ್ಯುಯಲ್ 4G VoLTE, 5G, ವೈ-ಫೈ, ಜಿಪಿಎಸ್, ಬ್ಲೂಟೂತ್, ಯುಎಸ್‌ಬಿ ಟೈಪ್ ಸಿ ಪೋರ್ಟ್ ಸೇರಿದಂತೆ ಹಲವು ಸೌಲಭ್ಯಗಳನ್ನು ಹೊಂದಿದೆ.


Click it and Unblock the Notifications







