Home
ಸುದ್ದಿಜಾಲ

ಅಬ್ಬರಿಸಲು ಬರ್ತಿದೆ Vivo V50 5G ಫೋನ್; 50MP ಸೆಲ್ಫಿ ಕ್ಯಾಮೆರಾ.. 6000mAh ಬ್ಯಾಟರಿ.. ಯಾವಾಗ ಲಾಂಚ್?

ವಿವೋ ಹೊಸ ಸರಣಿಯನ್ನು ಬಿಡುಗಡೆ ಮಾಡಲು ಸಜ್ಜಾಗಿದೆ. ಈ ಮೂಲಕ ತನ್ನ ಅಭಿಮಾನಿಗಳಿಗೆ ಬಿಗ್ ಸರ್ಪ್ರೈಸ್ ನೀಡಲಿದೆ. ಹೌದು, ವಿವೋ V50 (Vivo V50) ಸರಣಿಯು ಶೀಘ್ರದಲ್ಲೇ ಭಾರತದಲ್ಲಿ ಬಿಡುಗಡೆಯಾಗಲಿದೆ. ಮುಂಬರುವ ಫೋನ್ ಬಗ್ಗೆ ಕಂಪನಿಯು ಯಾವುದೇ ಮಾಹಿತಿ ಬಹಿರಂಗಪಡಿಸಿಲ್ಲ. ಆದರೆ, ಈ ಸರಣಿಯು ಈಗಾಗಲೇ ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿದೆ. ಇತ್ತೀಚೆಗೆ ವಿವೋ V50 5G (Vivo V50 5G) ಫೋನಿನ ಬಿಡುಗಡೆ ದಿನಾಂಕದ ಜೊತೆಗೆ, ವಿಶೇಷಣಗಳನ್ನು ಬಹಿರಂಗಪಡಿಸಲಾಗಿದೆ. ಇದೀಗ, ವಿವೋ ಮೊಬೈಲ್‌ನ ಫೋಟೋ ಕೂಡ ಬಹಿರಂಗವಾಗಿದೆ.

ಹೌದು, ಮುಂಬರುವ ವಿವೋ V50 5G ಫೋನಿನ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ, 50 ಮೆಗಾಪಿಕ್ಸೆಲ್ + 50 ಮೆಗಾಪಿಕ್ಸೆಲ್ ಕ್ಯಾಮೆರಾಗಳು ಲಭ್ಯವಿರುತ್ತವೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 7 ಜೆನ್ 3 ಪ್ರೊಸೆಸರ್‌ನಲ್ಲಿ ಕೆಲಸ ಮಾಡುತ್ತದೆ. ಈ ಮೊಬೈಲ್ 6.78 ಇಂಚಿನ ಡಿಸ್ಪ್ಲೇ ಹೊಂದಿದೆ. ಜೊತೆಗೆ 6000mAh ಬ್ಯಾಟರಿ ಮತ್ತು 80W ವೇಗದ ಚಾರ್ಜಿಂಗ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಬರಲಿದೆ Vivo V50 5G ; 50MP ಸೆಲ್ಫಿ ಕ್ಯಾಮೆರಾ, ಬಿಗ್ ಬ್ಯಾಟರಿ.. ಯಾವಾಗ?

ವಿವೋ V50 5G ಫೋನ್ ರೋಸ್ ರೆಡ್ ಬಣ್ಣದಲ್ಲಿ ಬರುತ್ತದೆ. ವರದಿಯ ಪ್ರಕಾರ, ಈ ಮೊಬೈಲ್ ಭಾರತೀಯ ಮಾರುಕಟ್ಟೆಯಲ್ಲಿ ಬೂದು, ನೀಲಿ ಮತ್ತು ಬಿಳಿ ಬಣ್ಣದ ಆಯ್ಕೆಗಳಲ್ಲಿ ಖರೀದಿಗೆ ಲಭ್ಯವಿರುತ್ತದೆ. ಈ ಫೋನ್ ಪಂಚ್ ಹೋಲ್ ಶೈಲಿಯ ಕ್ವಾಡ್ ಕರ್ವ್ಡ್ ಡಿಸ್ಪ್ಲೇ ಹೊಂದಿರುತ್ತದೆ. ಜೊತೆಗೆ 3D ಅಲ್ಟ್ರಾಸಾನಿಕ್ ಇನ್ ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್‌ ವೈಶಿಷ್ಟ್ಯ ಸಹ ಲಭ್ಯವಿರುತ್ತದೆ. ಈ ಫೋನಿನ ಬೆಲೆ ಮತ್ತು ವೈಶಿಷ್ಟ್ಯಗಳನ್ನು ತಿಳಿಯಲು ಮುಂದೆ ಓದಿ.

ಡಿಸ್ಪ್ಲೇ ವಿವರ

ವಿವೋ V50 5G ಫೋನಿನ ಡಿಸ್ಪ್ಲೇಯು Vivo X200 Pro ರೀತಿಯೇ ಇದೆ. ಈ ಸ್ಮಾರ್ಟ್‌ಫೋನ್ 6.78 ಇಂಚಿನ ಪೂರ್ಣ ಎಚ್‌ಡಿ ಪ್ಲಸ್ ಡಿಸ್ಪ್ಲೇ ಹೊಂದಿದೆ. ಇದು 2800 × 1260 ಪಿಕ್ಸೆಲ್ ರೆಸಲ್ಯೂಶನ್‌ನೊಂದಿಗೆ ಬರುತ್ತದೆ. ವಿವೋ X200 ಪ್ರೊ ಅಮೋಲೆಡ್ ಡಿಸ್ಪ್ಲೇ ಹೊಂದಿದೆ. ಇದು 4500 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್, 120Hz ರಿಫ್ರೆಶ್ ದರದ ಬೆಂಬಲ ಪಡೆದಿದೆ.

ಪ್ರೊಸೆಸರ್ ಸಾಮರ್ಥ್ಯ

ವಿವೋ V50 5G ಸ್ಮಾರ್ಟ್‌ಫೋನ್ ಕ್ವಾಲ್ಕಾಮ್‌ನ ಸ್ನಾಪ್‌ಡ್ರಾಗನ್ 7 ಜೆನ್ 3 ಆಕ್ಟಾಕೋರ್ ಪ್ರೊಸೆಸರ್‌ ಹೊಂದಿರುತ್ತದೆ. ಇದನ್ನು 4 ನ್ಯಾನೋಮೀಟರ್ ಫ್ಯಾಬ್ರಿಕೇಶನ್‌ಗಳಲ್ಲಿ ನಿರ್ಮಿಸಲಾಗಿದೆ.

ಕ್ಯಾಮೆರಾ ಸೆಟಪ್

ವಿವೋ V50 5G ಮೊಬೈಲ್‌ ಫೋಟೋಗ್ರಫಿ ಪ್ರಿಯರಿಗೆ ಹಬ್ಬವೇ ಸರಿ. ಮಾಹಿತಿಯ ಪ್ರಕಾರ, ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಇರುತ್ತದೆ. ಈ ಫೋನ್‌ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್‌ ಹೊಂದಿರಲಿದೆ. ಇದು 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಮತ್ತು 50 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಒಳಗೊಂಡಿರುತ್ತದೆ.

ಬ್ಯಾಟರಿ ಮತ್ತು ಚಾರ್ಜಿಂಗ್

ವಿವೋ V50 5G ಫೋನ್‌ 6000mAh ಸಾಮರ್ಥ್ಯದ ಬ್ಯಾಟರಿಯೊಂದಿಗೆ ಬಿಡುಗಡೆಯಾಗುವ ಸಾಧ್ಯತೆಯಿದೆ. ಈ ದೊಡ್ಡ ಬ್ಯಾಟರಿಯನ್ನು ಹೊಂದಿರುವ ವಿಭಾಗದಲ್ಲಿ ಇದು ಅತ್ಯಂತ ತೆಳ್ಳಗಿನ ಮೊಬೈಲ್ ಎಂದು ಹೇಳಲಾಗಿದೆ. Vivo V40 5G ಸ್ಮಾರ್ಟ್‌ಫೋನ್ 5500mAh ಬ್ಯಾಟರಿ ಮತ್ತು 80W ವೇಗದ ಚಾರ್ಜಿಂಗ್ ಸೌಲಭ್ಯ ಹೊಂದಿದೆ.

ವಿವೋ V50 5G ಬೆಲೆ (ನಿರೀಕ್ಷಿತ)

ವಿವೋ V50 5G ಫೋನಿನ ಬೆಲೆ ಬಗ್ಗೆ ಕಂಪನಿಯು ಮಾಹಿತಿ ನೀಡಿಲ್ಲ. ಆದರೆ, ವಿವೋ V40 5G ಮೊಬೈಲ್ ಭಾರತದಲ್ಲಿ 34,999 ರೂ.ಗೆ ಬಿಡುಗಡೆಯಾಗಿದೆ. ಅದರಂತೆ ವಿವೋ V50 5G ಫೋನಿನ ಬೆಲೆ ಇದೇ ರೀತಿ ಇರಬಹುದು. Vivo S20 ಫೋನನ್ನು ಚೀನಾದಲ್ಲಿ 27,500 ರೂ.ಗೆ ಪರಿಚಯಿಸಲಾಗಿದೆ. ಹೀಗಾಗಿ, ವಿವೋ V50 5G ಸ್ಮಾರ್ಟ್‌ಫೋನ್ ಭಾರತದಲ್ಲಿ 30,000 ರೂ. ಮತ್ತು 35,000 ರೂ.ಗಳ ಬಜೆಟ್‌ನಲ್ಲಿ ಬಿಡುಗಡೆಯಾಗುವ ಸಾಧ್ಯತೆಯಿದೆ.

Best Mobiles in India

English summary
Vivo V50 5G image leaked Online, design revealed with specifications: know details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+