Home
ಸುದ್ದಿಜಾಲ

ಫೆ.17ಕ್ಕೆ Vivo V50 ಬರುತ್ತೆ! ಬೆಲೆ, ಫೀಚರ್ಸ್‌ ಬಹಿರಂಗ.. ಇಷ್ಟೊಂದು ದುಬಾರಿಯೇ?

ವಿವೋ ತನ್ನ ಬಹುನಿರೀಕ್ಷಿತ ವಿವೋ V50 5G (Vivo V50 5G) ಫೋನನ್ನು ಭಾರತದಲ್ಲಿ ಬಿಡುಗಡೆ ಮಾಡಲು ಸಜ್ಜಾಗಿದೆ. ಈ ಹೊಸ ವಿವೋ ಮೊಬೈಲ್ ಇದೇ ಫೆಬ್ರವರಿ 17 ರಂದು ಭಾರತದಲ್ಲಿ ಲೋಕಾರ್ಪಣೆಯಾಗಲಿದೆ. ಬಿಡುಗಡೆಯಾದ ಬಳಿಕ ಈ ಫೋನ್ ಫ್ಲಿಪ್‌ಕಾರ್ಟ್, ಅಮೆಜಾನ್ ಮತ್ತು ಕಂಪನಿಯ ಅಧಿಕೃತ ವೆಬ್‌ಸೈಟ್ ಮೂಲಕ ಮಾರಾಟವಾಗಲಿದೆ. ವಿಶೇಷವೆಂದರೆ, ಬಿಡುಗಡೆಯಾಗುವ ಮೊದಲೇ, ಈ ಸ್ಮಾರ್ಟ್‌ಫೋನ್ ಬೆಲೆ ಆನ್‌ಲೈನ್‌ನಲ್ಲಿ ಸೋರಿಕೆಯಾಗಿದೆ. ಕಂಪನಿಯು ಈಗಾಗಲೇ ಪ್ರಿ-ಬುಕಿಂಗ್ ಆಫರ್‌ ಘೋಷಿಸಿದೆ. ಈ ವಿವೋ ಫೋನಿನ ಬೆಲೆ ಮತ್ತು ವಿಶೇಷತೆಗಳನ್ನು ತಿಳಿಯಲು ಮುಂದೆ ಓದಿ.

ಮುಂಬರುವ ವಿವೋ V50 5G ಫೋನಿನ ಫೀಚರ್ಸ್‌ಗಳು ಫ್ಲಿಪ್‌ಕಾರ್ಟ್‌ ಮೈಕ್ರೋ ಸೈಟ್ ಮೂಲಕ ಬಹಿರಂಗವಾಗಿವೆ. ಅದರಂತೆ ಈ ಮೊಬೈಲ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 7 ಜೆನ್ 3 ಪ್ರೊಸೆಸರ್‌ನೊಂದಿಗೆ ಬಿಡುಗಡೆಯಾಗಲಿದೆ. ಇದು 6000mAh ಸಾಮರ್ಥ್ಯದ ದೊಡ್ಡ ಬ್ಯಾಟರಿಯೊಂದಿಗೆ ಬರಲಿದೆ. ಈ ಮೊಬೈಲ್ 6.78 ಇಂಚಿನ ದೊಡ್ಡ ಡಿಸ್ಪ್ಲೇ ಹೊಂದಿರಲಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಮುಖ್ಯ ಮತ್ತು 50 ಮೆಗಾಪಿಕ್ಸೆಲ್ ಸೆಕೆಂಡರಿ ಕ್ಯಾಮೆರಾ ಹೊಂದಿದೆ. ಜೊತೆಗೆ 256GB ಸ್ಟೋರೇಜ್, 80W ವೇಗದ ಚಾರ್ಜಿಂಗ್ ಸೇರಿದಂತೆ ಅನೇಕ ವೈಶಿಷ್ಟ್ಯಗಳೊಂದಿಗೆ ಬಿಡುಗಡೆಯಾಗಲಿದೆ.

ಫೆ.17ಕ್ಕೆ Vivo V50 ಬರುತ್ತೆ! ಬೆಲೆ, ಫೀಚರ್ಸ್‌ ಬಹಿರಂಗ.. ಇಷ್ಟೊಂದು ದುಬಾರಿಯೇ?

ವಿವೋ V50 5G ಬೆಲೆ (ಸಂಭಾವ್ಯ)

ವಿವೋ V50 5G ಫೋನಿನ 8GB RAM + 128GB ಸ್ಟೋರೇಜ್ ರೂಪಾಂತರವು 34,999 ರೂ.ಗಳ ಆರಂಭಿಕ ಬೆಲೆಗೆ ಬಿಡುಗಡೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. ಮತ್ತು 8GB RAM + 256GB ಸ್ಟೋರೇಜ್ ವೇರಿಯಂಟ್‌ 36,999 ರೂ. ಬೆಲೆ ಹೊಂದಿರುವ ನಿರೀಕ್ಷೆಯಿದೆ. ಹಾಗೆಯೇ 12GB RAM + 256GB ಸ್ಟೋರೇಜ್ ರೂಪಾಂತರವನ್ನು 40,999 ರೂ.ಗೆ ಬಿಡುಗಡೆ ಮಾಡಲಾಗುವುದು ಎಂದು ವರದಿಯಾಗಿದೆ.

ವಿವೋ V50 5G ಫೀಚರ್ಸ್

ಡಿಸ್ಪ್ಲೇ ವಿವರ

ವಿವೋ V50 5G ಫೋನ್ 6.78 ಇಂಚಿನ ಡಿಸ್ಪ್ಲೇ ಹೊಂದಿರುತ್ತದೆ. ಇದು ಮೈಕ್ರೋ ಕ್ವಾಡ್ ಕರ್ವ್ಡ್ ಓಎಲ್‌ಇಡಿ ಡಿಸ್ಪ್ಲೇ ಆಗಿದೆ. ಇದು 2800 × 1260 ಪಿಕ್ಸೆಲ್ ರೆಸಲ್ಯೂಶನ್‌ ಮತ್ತು 120Hz ರಿಫ್ರೆಶ್ ದರದ ಬೆಂಬಲ ಪಡೆದಿರಲಿದೆ.

ಪ್ರೊಸೆಸರ್ ಸಾಮರ್ಥ್ಯ

ವಿವೋ V50 5G ಮೊಬೈಲ್ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 7 ಜೆನ್ 3 ಆಕ್ಟಾಕೋರ್ ಪ್ರೊಸೆಸರ್‌ ಹೊಂದಿರಲಿದೆ. ಇದನ್ನು 4 ನ್ಯಾನೋಮೀಟರ್ ಫ್ಯಾಬ್ರಿಕೇಶನ್‌ಗಳಲ್ಲಿ ತಯಾರಿಸಲಾಗಿದೆ. ಈ ಮೊಬೈಲ್‌ ಆಂಡ್ರಾಯ್ಡ್ 15 ಆಧಾರಿತ ಓಎಸ್ 15 ನೊಂದಿಗೆ ಕೆಲಸ ನಿರ್ವಹಿಸುತ್ತದೆ.

ಫೆ.17ಕ್ಕೆ Vivo V50 ಬರುತ್ತೆ! ಬೆಲೆ, ಫೀಚರ್ಸ್‌ ಬಹಿರಂಗ.. ಇಷ್ಟೊಂದು ದುಬಾರಿಯೇ?

RAM ಮತ್ತು ಸ್ಟೊರೇಜ್‌

ವಿವೋ V50 5G ಸ್ಮಾರ್ಟ್‌ಫೋನ್‌ 8GB RAM ಮತ್ತು 12GB RAM ಹೊಂದಿರಲಿದೆ. ಇದು 128GB ಸ್ಟೋರೇಜ್ ಮತ್ತು 256GB ಸ್ಟೋರೇಜ್ ಆಯ್ಕೆ ಒಳಗೊಂಡಿದೆ. ಇದರೊಂದಿಗೆ ಮೈಕ್ರೋ ಎಸ್‌ಡಿ ಕಾರ್ಡ್‌ ಮೂಲಕ ಸ್ಟೋರೇಜ್ ವಿಸ್ತರಿಸಬಹುದು.

ಕ್ಯಾಮೆರಾ ಸೆಟಪ್

ವಿವೋ V50 5G ಫೋನ್ ಡ್ಯುಯಲ್ ಕ್ಯಾಮೆರಾ ಸೆಟಪ್‌ ಹೊಂದಿರುತ್ತದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಲಭ್ಯವಿದೆ. ಇದು OIS ಬೆಂಬಲದೊಂದಿಗೆ ಬರುತ್ತದೆ. ಹಾಗೆಯೇ 50 ಮೆಗಾಪಿಕ್ಸೆಲ್ ದ್ವಿತೀಯ (ZEISS ಕ್ಯಾಮೆರಾ ಸಿಸ್ಟಮ್) ಕ್ಯಾಮೆರಾ ಹೊಂದಿದೆ. ಇದು ಔರಾ ಲೈಟ್ ಎಲ್‌ಇಡಿ ಫ್ಲ್ಯಾಷ್‌ ಒಳಗೊಂಡಿದೆ. ಈ ಫೋನ್ ಆಟೋಫೋಕಸ್ ಬೆಂಬಲದೊಂದಿಗೆ 50 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಹೊಂದಿದೆ.

ಬ್ಯಾಟರಿ ಮತ್ತು ಚಾರ್ಜಿಂಗ್

ವಿವೋ V50 5G ಮೊಬೈಲ್ 6000mAh ಸಾಮರ್ಥ್ಯದ ಬ್ಯಾಟರಿ ಹೊಂದಿರುತ್ತದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 90W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗುತ್ತದೆ. ಇದು ದೊಡ್ಡ ಬ್ಯಾಟರಿಯನ್ನು ಹೊಂದಿರುವ ವಿಭಾಗದಲ್ಲಿ ಅತ್ಯಂತ ತೆಳ್ಳಗಿನ ಸ್ಮಾರ್ಟ್‌ಫೋನ್ ಆಗಿರಲಿದೆ. ಈ ಮೊಬೈಲ್ ಹಲವು ಎಐ ವೈಶಿಷ್ಟ್ಯಗಳನ್ನು ಹೊಂದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಇದು ಡ್ಯುಯಲ್ 4G VoLTE, 5G, ವೈ-ಫೈ, ಜಿಪಿಎಸ್‌, ಬ್ಲೂಟೂತ್, ಯುಎಸ್‌ಬಿ ಟೈಪ್ ಸಿ ಪೋರ್ಟ್‌ ಸೇರಿದಂತೆ ಹಲವು ಸೌಲಭ್ಯಗಳನ್ನು ಒಳಗೊಂಡಿರುತ್ತದೆ.

Best Mobiles in India

English summary
Vivo V50 5G Price Leaked Ahead of India Launch on February 17: check all details here
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+