Home
ಸುದ್ದಿಜಾಲ

ಇಂದು ಭಾರತದಲ್ಲಿ Vivo V50 ಬಿಡುಗಡೆ; ಬಿಗ್ ಬ್ಯಾಟರಿ.. ಮೂರು 50MP ಕ್ಯಾಮೆರಾಗಳು.. ಬಜೆಟ್ ಬೆಲೆ!

ಬಹುನಿರೀಕ್ಷಿತ ವಿವೋ V50 (Vivo V50) ಮೊಬೈಲ್ ಇಂದು ಭಾರತದಲ್ಲಿ ಬಿಡುಗಡೆಯಾಗಲಿದೆ. ಕಂಪನಿಯು 2025 ರಲ್ಲಿ ಪರಿಚಯಿಸುತ್ತಿರುವ 'V' ಸರಣಿಯ ಮೊದಲ ಸ್ಮಾರ್ಟ್‌ಫೋನ್ ಆಗಿದೆ. ಇದು ಪ್ರೀಮಿಯಂ ಮಧ್ಯಮ ಶ್ರೇಣಿಯ ಸ್ಮಾರ್ಟ್‌ಫೋನ್ ಆಗಿ ಬಿಡುಗಡೆಯಾಗಲಿದೆ. ಈ ಫೋನ್ ಸ್ಲಿಮ್ ವಿನ್ಯಾಸ, ಜೈಸ್ ಕ್ಯಾಮೆರಾ, ಕ್ವಾಡ್ ಕವರ್ಡ್ ಡಿಸ್ಪ್ಲೇ ಮತ್ತು ದೊಡ್ಡ ಬ್ಯಾಟರಿ ಸೇರಿದಂತೆ ಹಲವು ಅತ್ಯುತ್ತಮ ವೈಶಿಷ್ಟ್ಯಗಳನ್ನು ಹೊಂದಿದೆ. ಬನ್ನಿ, ಈ ವಿವೋ V50 ಫೋನಿನ ಲೈವ್‌ಸ್ಟ್ರೀಮ್ ವೀಕ್ಷಣೆ ಮತ್ತು ಇನ್ನಿತರ ವಿವರಗಳನ್ನು ತಿಳಿಯೋಣ.

ವಿವೋ V50 ಮೊಬೈಲ್ ಕಳೆದ ವರ್ಷ ನವೆಂಬರ್ ತಿಂಗಳಲ್ಲಿ ಬಿಡುಗಡೆಯಾಗಿದ್ದ Vivo S20 ಮರುಬ್ರಾಂಡೆಡ್ ಆಗಿದೆ. ಕಂಪನಿಯು ಕೆಲವು ಸಣ್ಣ ಬದಲಾವಣೆಗಳೊಂದಿಗೆ ಪರಿಚಯಿಸುತ್ತಿದೆ. ಇದು ಕ್ವಾಲ್ಕಾಮ್‌ನ ಸ್ನಾಪ್‌ಡ್ರಾಗನ್ 7 ಜೆನ್ 3 ಪ್ರೊಸೆಸರ್‌ ಹೊಂದಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಮುಖ್ಯ ಮತ್ತು 50 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಇದೆ. ಈ ಮೊಬೈಲ್ 6000mAh ಸಾಮರ್ಥ್ಯದ ಬಿಗ್ ಬ್ಯಾಟರಿ ಒಳಗೊಂಡಿದೆ. ಜೊತೆಗೆ 6.78 ಇಂಚಿನ ಡಿಸ್ಪ್ಲೇ, 256GB ಸ್ಟೋರೇಜ್ ಮತ್ತು 80W ವೇಗದ ಚಾರ್ಜಿಂಗ್ ಹೊಂದಿದೆ.

ಇಂದು Vivo V50 ಲಾಂಚ್; ಬಿಗ್ ಬ್ಯಾಟರಿ.. ಮೂರು 50MP ಕ್ಯಾಮೆರಾಗಳು.. ಬೆಲೆ ನೋಡಿ

ವಿವೋ V50 ಬಿಡುಗಡೆ ವಿವರ

ವಿವೋ V50 ಬಿಡುಗಡೆ ಕಾರ್ಯಕ್ರಮ ಇಂದು ಮಧ್ಯಾಹ್ನ 12 ಗಂಟೆಗೆ ನಡೆಯಲಿದೆ. ನೀವು ಕಂಪನಿಯ ಅಧಿಕೃತ ಯೂಟ್ಯೂಬ್ ಚಾನೆಲ್ ಮೂಲಕ ಲೈವ್ ವೀಕ್ಷಿಸಬಹುದು. ಬಿಡುಗಡೆಯಾದ ಬಳಿಕ, ಈ ವಿವೋ ಮೊಬೈಲ್ ಫ್ಲಿಪ್‌ಕಾರ್ಟ್ ಮತ್ತು ಕಂಪನಿಯ ಅಧಿಕೃತ ಇ-ಸ್ಟೋರ್ ಮೂಲಕ ಖರೀದಿಗೆ ಲಭ್ಯವಿರಲಿದೆ. ಕಂಪನಿಯು ವಿವೋ V50 ಫೋನನ್ನು 35,000 ರೂ. ಬೆಲೆಯಲ್ಲಿ ಬಿಡುಗಡೆಯಾಗುವ ನಿರೀಕ್ಷೆಯಿದೆ. ನೀವು, ಈ ಕೆಳಗೆ ಲಿಂಕ್ ಮೂಲಕ ಬಿಡುಗಡೆ ಸಮಾರಂಭದ ಲೈವ್‌ಸ್ಟ್ರೀಮ್ ವೀಕ್ಷಿಸಬಹುದು.

ವಿವೋ V50 5G ವೈಶಿಷ್ಟ್ಯಗಳು

ಡಿಸ್ಪ್ಲೇ ವಿವರ

ವಿವೋ V50 5G ಮೊಬೈಲ್ 6.78 ಇಂಚಿನ ಡಿಸ್ಪ್ಲೇ ಹೊಂದಿರಲಿದೆ. ಇದು ಮೈಕ್ರೋ ಕ್ವಾಡ್ ಕರ್ವ್ಡ್ ಓಎಲ್‌ಇಡಿ ಡಿಸ್ಪ್ಲೇ ಆಗಿರುತ್ತದೆ. ಈ ಡಿಸ್ಪ್ಲೇಯು 2,800 × 1,260 ಪಿಕ್ಸೆಲ್ ರೆಸಲ್ಯೂಶನ್‌ ಬೆಂಬಲದೊಂದಿಗೆ ಬರುತ್ತದೆ. ಹಾಗೆಯೇ 120Hz ರಿಫ್ರೆಶ್ ದರದ ಬೆಂಬಲ ಪಡೆದಿದೆ.

ಪ್ರೊಸೆಸರ್ ಸಾಮರ್ಥ್ಯ

ವಿವೋ V50 5G ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ನ ಸ್ನಾಪ್‌ಡ್ರಾಗನ್ 7 ಜೆನ್ 3 ಆಕ್ಟಾಕೋರ್ ಪ್ರೊಸೆಸರ್‌ ಹೊಂದಿರುತ್ತದೆ. ಈ ಪ್ರೊಸೆಸರ್‌ ಅನ್ನು 4 ನ್ಯಾನೋಮೀಟರ್ ಫ್ಯಾಬ್ರಿಕೇಶನ್‌ಗಳಲ್ಲಿ ತಯಾರಿಸಲಾಗಿದೆ. ಈ ಮೊಬೈಲ್‌ ಆಂಡ್ರಾಯ್ಡ್ 15 ಆಧಾರಿತ ಓಎಸ್ 15 ಜೊತೆಗೆ ಕೆಲಸ ಮಾಡುತ್ತದೆ. ಈ ವಿವೋ ಸ್ಮಾರ್ಟ್‌ಫೋನ್‌ 8GB RAM ಮತ್ತು 12GB RAM ಹೊಂದಿದೆ. ಇದಕ್ಕೆ ಪೂರಕವಾಗಿ 128GB ಸ್ಟೋರೇಜ್ ಮತ್ತು 256GB ಸ್ಟೋರೇಜ್ ಆಯ್ಕೆ ಲಭ್ಯವಿರುತ್ತದೆ. ನೀವು ಮೈಕ್ರೋ ಎಸ್‌ಡಿ ಕಾರ್ಡ್‌ ಮೂಲಕ ಸ್ಟೋರೇಜ್ ವಿಸ್ತರಿಸಬಹುದು.

ಇಂದು Vivo V50 ಲಾಂಚ್; ಬಿಗ್ ಬ್ಯಾಟರಿ.. ಮೂರು 50MP ಕ್ಯಾಮೆರಾಗಳು.. ಬೆಲೆ ನೋಡಿ

ಕ್ಯಾಮೆರಾ ಸೆಟಪ್

ವಿವೋ V50 5G ಮೊಬೈಲ್ ಡ್ಯುಯಲ್ ಕ್ಯಾಮೆರಾ ಸೆಟಪ್‌ ಹೊಂದಿರುತ್ತದೆ. ಈ ಫೋನಿನಲ್ಲಿ OIS ಬೆಂಬಲದೊಂದಿಗೆ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಲಭ್ಯವಿದೆ. ಹಾಗೆಯೇ ಔರಾ ಲೈಟ್ ಎಲ್‌ಇಡಿ ಫ್ಲ್ಯಾಷ್‌ನೊಂದಿಗೆ 50 ಮೆಗಾಪಿಕ್ಸೆಲ್ ದ್ವಿತೀಯ (ZEISS ಕ್ಯಾಮೆರಾ ಸಿಸ್ಟಮ್) ಕ್ಯಾಮೆರಾ ಇರುತ್ತದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಫೋನ್ ಆಟೋಫೋಕಸ್ ಬೆಂಬಲದೊಂದಿಗೆ 50 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಹೊಂದಿರಲಿದೆ.

ಬ್ಯಾಟರಿ ಮತ್ತು ಚಾರ್ಜಿಂಗ್

ವಿವೋ V50 5G ಫೋನ್ 6000mAh ಸಾಮರ್ಥ್ಯದ ಬ್ಯಾಟರಿ ಹೊಂದಿರುತ್ತದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 90W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗುತ್ತದೆ. ಇದು ದೊಡ್ಡ ಬ್ಯಾಟರಿಯನ್ನು ಹೊಂದಿರುವ ವಿಭಾಗದಲ್ಲಿ ಅತ್ಯಂತ ತೆಳ್ಳಗಿನ ಸ್ಮಾರ್ಟ್‌ಫೋನ್ ಆಗಿರಲಿದೆ.

ಇತರೆ ವೈಶಿಷ್ಟ್ಯಗಳು

ವಿವೋ V50 5G ಸ್ಮಾರ್ಟ್‌ಫೋನ್ ಹಲವು ಎಐ ಫೀಚರ್ಸ್‌ ಹೊಂದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಈ ಮೊಬೈಲ್ ಡ್ಯುಯಲ್ 4G VoLTE, 5G, ವೈ-ಫೈ, ಜಿಪಿಎಸ್‌, ಬ್ಲೂಟೂತ್, ಯುಎಸ್‌ಬಿ ಟೈಪ್ ಸಿ ಪೋರ್ಟ್‌ ಸೇರಿದಂತೆ ಹಲವು ಸೌಲಭ್ಯಗಳನ್ನು ಒಳಗೊಂಡಿದೆ.

Best Mobiles in India

English summary
vivo V50 launching in India Today: how to watch livestream and what to expect
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+