Home
ಸುದ್ದಿಜಾಲ

ನಾಳೆ Vivo V50 ಲಾಂಚ್; 6000mAh ಬ್ಯಾಟರಿ.. 50MP + 50MP + 50MP ಕ್ಯಾಮೆರಾಗಳು.. ಬೆಲೆ ಇಷ್ಟೆನಾ?

ಬಹುನಿರೀಕ್ಷಿತ ವಿವೋ V50 5G (Vivo V50 5G) ಸ್ಮಾರ್ಟ್‌ಫೋನ್ ಭಾರತದಲ್ಲಿ ಬಿಡುಗಡೆಯಾಗಲು ಸಿದ್ಧವಾಗಿದೆ. ಕಂಪನಿಯು ನಾಳೆ (ಫೆಬ್ರವರಿ 17) ಈ ಹೊಸ 5G ಫೋನನ್ನು ಅಧಿಕೃತವಾಗಿದೆ ಅನಾವರಣಗೊಳಿಸಲಿದೆ. ಈಗಾಗಲೇ ಪ್ರಿ-ಬುಕಿಂಗ್ ಆಫರ್‌ ಘೋಷಿಸಲಾಗಿದೆ. ನೀವು ಈ ಮೊಬೈಲ್ ಅನ್ನು ಆನ್‌ಲೈನ್ ಶಾಪಿಂಗ್ ಸೈಟ್ ಫ್ಲಿಪ್‌ಕಾರ್ಟ್, ಅಮೆಜಾನ್ ಮತ್ತು ವಿವೋ ಅಧಿಕೃತ ವೆಬ್‌ಸೈಟ್ ಮೂಲಕ ಖರೀದಿಸಬಹುದು. ಈಗಾಗಲೇ ಆನ್‌ಲೈನ್‌ನಲ್ಲಿ ಈ ಸ್ಮಾರ್ಟ್‌ಫೋನ್ ಬೆಲೆ ಮತ್ತು ಪ್ರಮುಖ ವೈಶಿಷ್ಟ್ಯಗಳು ಸೋರಿಕೆಯಾಗಿವೆ. ಬನ್ನಿ, ಈ ಫೋನ್ ಯಾವೆಲ್ಲಾ ವಿಶೇಷತೆಗಳನ್ನು ಹೊಂದಿದೆ ತಿಳಿಯೋಣ.

ಫ್ಲಿಪ್‌ಕಾರ್ಟ್ ಮೈಕ್ರೋ ಸೈಟ್ ಮೂಲಕ ವಿವೋ V50 5G ಫೋನಿನ ಫೀಚರ್ಸ್‌ಗಳನ್ನು ಬಹಿರಂಗಪಡಿಸಲಾಗಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಮುಖ್ಯ ಮತ್ತು 50 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಲಭ್ಯವಿದೆ. ಇದು ಕ್ವಾಲ್ಕಾಮ್‌ನ ಸ್ನಾಪ್‌ಡ್ರಾಗನ್ 7 ಜೆನ್ 3 ಪ್ರೊಸೆಸರ್‌ನೊಂದಿಗೆ ಕೆಲಸ ಮಾಡುತ್ತದೆ. ಈ ಮೊಬೈಲ್ 6000mAh ಸಾಮರ್ಥ್ಯದ ದೊಡ್ಡ ಬ್ಯಾಟರಿ ಒಳಗೊಂಡಿರಲಿದೆ. ಇದು 6.78 ಇಂಚಿನ ದೊಡ್ಡ ಡಿಸ್ಪ್ಲೇ ಹೊಂದಿದೆ. ಹಾಗೆಯೇ 256GB ಸ್ಟೋರೇಜ್, 80W ವೇಗದ ಚಾರ್ಜಿಂಗ್ ಸೇರಿದಂತೆ ಹಲವು ಅತ್ಯಾಕರ್ಷಕ ಫೀಚರ್ಸ್‌ ಒಳಗೊಂಡಿದೆ.

ನಾಳೆ Vivo V50 ಲಾಂಚ್; ಫೀಚರ್ಸ್‌, ಬೆಲೆ ಸೋರಿಕೆ.. ಇಷ್ಟೆನಾ?

ವಿವೋ V50 5G ಬೆಲೆ

ವಿವೋ V50 5G ಸ್ಮಾರ್ಟ್‌ಫೋನ್ ಮೂರು ಸ್ಟೋರೇಜ್ ಆಯ್ಕೆಗಳಲ್ಲಿ ಬಿಡುಗಡೆಯಾಗಲಿದೆ. ಈ ಫೋನಿನ 8GB RAM + 128GB ಸ್ಟೋರೇಜ್ ರೂಪಾಂತರವು 34,999 ರೂ. ಬೆಲೆಯನ್ನು ಹೊಂದಿರುತ್ತದೆ. 8GB RAM + 256GB ಸ್ಟೋರೇಜ್ ಆಯ್ಕೆಯು 36,999 ರೂ.ಗೆ ಬರುವ ನಿರೀಕ್ಷೆಯಿದೆ. ಮತ್ತು 12GB RAM + 256GB ಸ್ಟೋರೇಜ್ ವೇರಿಯಂಟ್ 40,999 ರೂ.ಗೆ ಲಾಂಚ್ ಆಗಲಿದೆ ಎಂದು ವರದಿಯಾಗಿದೆ.

ವಿವೋ V50 5G ವೈಶಿಷ್ಟ್ಯಗಳು

ಡಿಸ್ಪ್ಲೇ ವಿವರ

ವಿವೋ V50 5G ಮೊಬೈಲ್ 6.78 ಇಂಚಿನ ಡಿಸ್ಪ್ಲೇ ಹೊಂದಿರಲಿದೆ. ಇದು ಮೈಕ್ರೋ ಕ್ವಾಡ್ ಕರ್ವ್ಡ್ ಓಎಲ್‌ಇಡಿ ಡಿಸ್ಪ್ಲೇ ಆಗಿರುತ್ತದೆ. ಈ ಡಿಸ್ಪ್ಲೇಯು 2,800 × 1,260 ಪಿಕ್ಸೆಲ್ ರೆಸಲ್ಯೂಶನ್‌ ಬೆಂಬಲದೊಂದಿಗೆ ಬರುತ್ತದೆ. ಹಾಗೆಯೇ 120Hz ರಿಫ್ರೆಶ್ ದರದ ಬೆಂಬಲ ಪಡೆದಿದೆ.

ಪ್ರೊಸೆಸರ್ ಸಾಮರ್ಥ್ಯ

ವಿವೋ V50 5G ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ನ ಸ್ನಾಪ್‌ಡ್ರಾಗನ್ 7 ಜೆನ್ 3 ಆಕ್ಟಾಕೋರ್ ಪ್ರೊಸೆಸರ್‌ ಹೊಂದಿರುತ್ತದೆ. ಈ ಪ್ರೊಸೆಸರ್‌ ಅನ್ನು 4 ನ್ಯಾನೋಮೀಟರ್ ಫ್ಯಾಬ್ರಿಕೇಶನ್‌ಗಳಲ್ಲಿ ತಯಾರಿಸಲಾಗಿದೆ. ಈ ಮೊಬೈಲ್‌ ಆಂಡ್ರಾಯ್ಡ್ 15 ಆಧಾರಿತ ಓಎಸ್ 15 ಜೊತೆಗೆ ಕೆಲಸ ಮಾಡುತ್ತದೆ. ಈ ವಿವೋ ಸ್ಮಾರ್ಟ್‌ಫೋನ್‌ 8GB RAM ಮತ್ತು 12GB RAM ಹೊಂದಿದೆ. ಇದಕ್ಕೆ ಪೂರಕವಾಗಿ 128GB ಸ್ಟೋರೇಜ್ ಮತ್ತು 256GB ಸ್ಟೋರೇಜ್ ಆಯ್ಕೆ ಲಭ್ಯವಿರುತ್ತದೆ. ನೀವು ಮೈಕ್ರೋ ಎಸ್‌ಡಿ ಕಾರ್ಡ್‌ ಮೂಲಕ ಸ್ಟೋರೇಜ್ ವಿಸ್ತರಿಸಬಹುದು.

ನಾಳೆ Vivo V50 ಲಾಂಚ್; ಫೀಚರ್ಸ್‌, ಬೆಲೆ ಸೋರಿಕೆ.. ಇಷ್ಟೆನಾ?

ಕ್ಯಾಮೆರಾ ಸೆಟಪ್

ವಿವೋ V50 5G ಮೊಬೈಲ್ ಡ್ಯುಯಲ್ ಕ್ಯಾಮೆರಾ ಸೆಟಪ್‌ ಹೊಂದಿರುತ್ತದೆ. ಈ ಫೋನಿನಲ್ಲಿ OIS ಬೆಂಬಲದೊಂದಿಗೆ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಲಭ್ಯವಿದೆ. ಹಾಗೆಯೇ ಔರಾ ಲೈಟ್ ಎಲ್‌ಇಡಿ ಫ್ಲ್ಯಾಷ್‌ನೊಂದಿಗೆ 50 ಮೆಗಾಪಿಕ್ಸೆಲ್ ದ್ವಿತೀಯ (ZEISS ಕ್ಯಾಮೆರಾ ಸಿಸ್ಟಮ್) ಕ್ಯಾಮೆರಾ ಇರುತ್ತದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಫೋನ್ ಆಟೋಫೋಕಸ್ ಬೆಂಬಲದೊಂದಿಗೆ 50 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಹೊಂದಿರಲಿದೆ.

ಬ್ಯಾಟರಿ ಮತ್ತು ಚಾರ್ಜಿಂಗ್

ವಿವೋ V50 5G ಫೋನ್ 6000mAh ಸಾಮರ್ಥ್ಯದ ಬ್ಯಾಟರಿ ಹೊಂದಿರುತ್ತದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 90W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗುತ್ತದೆ. ಇದು ದೊಡ್ಡ ಬ್ಯಾಟರಿಯನ್ನು ಹೊಂದಿರುವ ವಿಭಾಗದಲ್ಲಿ ಅತ್ಯಂತ ತೆಳ್ಳಗಿನ ಸ್ಮಾರ್ಟ್‌ಫೋನ್ ಆಗಿರಲಿದೆ.

ಇತರೆ ವೈಶಿಷ್ಟ್ಯಗಳು

ವಿವೋ V50 5G ಸ್ಮಾರ್ಟ್‌ಫೋನ್ ಹಲವು ಎಐ ಫೀಚರ್ಸ್‌ ಹೊಂದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಈ ಮೊಬೈಲ್ ಡ್ಯುಯಲ್ 4G VoLTE, 5G, ವೈ-ಫೈ, ಜಿಪಿಎಸ್‌, ಬ್ಲೂಟೂತ್, ಯುಎಸ್‌ಬಿ ಟೈಪ್ ಸಿ ಪೋರ್ಟ್‌ ಸೇರಿದಂತೆ ಹಲವು ಸೌಲಭ್ಯಗಳನ್ನು ಒಳಗೊಂಡಿದೆ.

Best Mobiles in India

English summary
vivo V50 launching in India Tomorrow: check price, specification and more details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+