ಇಂದು ಭಾರತದಲ್ಲಿ Vivo V50e ಲಾಂಚ್; ವಿಶೇಷತೆಗಳು ಬಹಿರಂಗ.. ಬೆಲೆಯೂ ಸೋರಿಕೆ.. ಲೈವ್ ವೀಕ್ಷಣೆ ಹೇಗೆ?
ವಿವೋ ಇಂದು ತನ್ನ ಹೊಸ ಮೊಬೈಲ್ ಅನ್ನು ಭಾರತದಲ್ಲಿ ಬಿಡುಗಡೆ ಮಾಡಲಿದೆ. ಇದು ವಿವೋ V50e (Vivo V50e) ಎಂಬ ಹೆಸರಿನೊಂದಿಗೆ ದೇಶೀಯ ಮಾರುಕಟ್ಟೆಗೆ ಎಂಟ್ರಿ ಕೊಡಲಿದೆ. ಹೌದು, ಕಂಪನಿಯು ಕಳೆದ ಫೆಬ್ರವರಿಯಲ್ಲಿ ವಿವೋ V50 (Vivo V50) ಫೋನನ್ನುಬಿಡುಗಡೆ ಮಾಡಿತ್ತು. ಪ್ರಸ್ತುತ, ಇದೇ ಸರಣಿಯಲ್ಲಿ ವಿವೋ V50e ಅನ್ನು ಪರಿಚಯಿಸುತ್ತಿದೆ. ಈಗಾಗಲೇ ಈ ಮೊಬೈಲ್‌ನ ಬೆಲೆಯೂ ಸೋರಿಕೆಯಾಗಿದೆ. ಬನ್ನಿ, ಈ ಮುಂಬರುವ 5G ಫೋನ್ ಬೆಲೆ ಎಷ್ಟು? ವಿಶೇಷತೆಗಳೇನು? ಮತ್ತು ಲಾಂಚ್ ಈವೆಂಟ್ ಲೈವ್ ವೀಕ್ಷಣೆ ಹೇಗೆ? ಎನ್ನುವುದನ್ನು ತಿಳಿಯೋಣ ಬನ್ನಿ.
ಕಂಪನಿಯು ವಿವೋ V50e ಫೋನಿನ ಫೋಟೋಗಳು ಮತ್ತು ಕ್ಯಾಮೆರಾ ವೈಶಿಷ್ಟ್ಯಗಳನ್ನು ಬಹಿರಂಗಪಡಿಸಿದೆ. ಈ 5G ಫೋನಿನ ಬೆಲೆ ಮತ್ತು ಸ್ಟೋರೇಜ್ ಆಯ್ಕೆಗಳ ವಿವರಗಳನ್ನು ಹಂಚಿಕೊಳ್ಳಲಾಗಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 7300 ಪ್ರೊಸೆಸರ್ ಹೊಂದಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಮುಖ್ಯ ಮತ್ತು 50 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಲಭ್ಯವಿದೆ. ಈ ಮೊಬೈಲ್ 6.77 ಇಂಚಿನ ಡಿಸ್ಪ್ಲೇ ಹೊಂದಿದೆ. ಇದರೊಂದಿಗೆ 5600mAh ಬ್ಯಾಟರಿ ಮತ್ತು 90W ವೇಗದ ಚಾರ್ಜಿಂಗ್ ಮತ್ತು ಸ್ಮಾರ್ಟ್ ಎಐ ವೈಶಿಷ್ಟ್ಯಗಳೊಂದಿಗೆ ಬಿಡುಗಡೆಯಾಗಲಿದೆ.

ವಿವೋ V50e ಬಿಡುಗಡೆ ವಿವರ
ಬಹುನಿರೀಕ್ಷಿತ ವಿವೋ V50e ಇಂದು (ಏಪ್ರಿಲ್ 10) ಭಾರತದಲ್ಲಿ ಬಿಡುಗಡೆಯಾಗಲಿದೆ. ಕಂಪನಿಯು ಇಂದು ಮಧ್ಯಾಹ್ನ 12 ಗಂಟೆಗೆ ಬಿಡುಗಡೆ ಸಮಾರಂಭವನ್ನು ಹಮ್ಮಿಕೊಂಡಿದೆ. ಈ ಈವೆಂಟ್‌ನಲ್ಲಿ ವಿವೋ V50e 5G ಫೋನ್ ಅಧಿಕೃತವಾಗಿ ಲಾಂಚ್ ಆಗಲಿದೆ. ನೀವು ಕಂಪನಿಯ ವೆಬ್‌ಸೈಟ್ ಮತ್ತು ವಿವೋ ಇಂಡಿಯಾದ ಎಲ್ಲಾ ಸೋಶಿಯಲ್ ಮೀಡಿಯಾ ವೇದಿಕೆಗಳಲ್ಲಿ ಈ ಸಮಾರಂಭವನ್ನು ನೇರಪ್ರಸಾರ ವೀಕ್ಷಿಸಬಹುದು. ಇದೇ ವೇದಿಕೆಯಲ್ಲಿ ನೂತನ ಫೋನಿನ ಬೆಲೆ ಮತ್ತು ಮಾರಾಟದ ವಿವರಗಳನ್ನು ಬಹಿರಂಗಪಡಿಸಲಾಗುತ್ತದೆ. ಈ ಫೋನಿನ ಬೆಲೆ ಮತ್ತು ಇನ್ನಿತರ ವೈಶಿಷ್ಟ್ಯಗಳನ್ನು ತಿಳಿಯಲು ಮುಂದೆ ಓದಿ.
ವಿವೋ V50e ಬೆಲೆ (ನಿರೀಕ್ಷಿತ)
ವಿವೋ V50e ಮೊಬೈಲ್ ಎರಡು ಸ್ಟೋರೇಜ್ ಆಯ್ಕೆಗಳಲ್ಲಿ ಬರುತ್ತದೆ. ಇದು 8GB RAM ನೊಂದಿಗೆ ಬಿಡುಗಡೆಯಾಗಲಿದೆ. ಈ ಫೋನಿನ 8GB RAM + 128GB ಸ್ಟೋರೇಜ್ ಬೆಲೆ 28,999 ರೂ. ಆಗಿದೆ. ಇನ್ನು 8GB RAM + 256GB ಸ್ಟೋರೇಜ್ ರೂಪಾಂತರವು 30,999 ರೂ.ಗೆ ಬಿಡುಗಡೆಯಾಗಲಿದೆ. ಈ ವಿವೋ V50e ಮೊಬೈಲ್‌ನ ಬೆಲೆ ಆಫರ್‌ಗಳನ್ನು ಒಳಗೊಂಡಿದೆಯೇ ಅಥವಾ ಇಲ್ಲವೇ ಎಂಬುದು ಇನ್ನು ಸ್ಪಷ್ಟವಾಗಿಲ್ಲ. ಅಧಿಕೃತ ಬೆಲೆ ತಿಳಿಯಲು, ಸ್ವಲ್ಪ ಕಾಯಬೇಕಿದೆ.
ವಿವೋ V50e ಫೋನಿನ ವೈಶಿಷ್ಟ್ಯಗಳು
ಡಿಸ್ಪ್ಲೇ ವಿವರ
ವಿವೋ V50e ಮೊಬೈಲ್ 6.77 ಇಂಚಿನ ಅಮೋಲೆಡ್ ಡಿಸ್ಪ್ಲೇ ಹೊಂದಿದೆ. ಇದು 120Hz ರಿಫ್ರೆಶ್ ದರದ ಬೆಂಬಲ ಮತ್ತು 4500 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಬೆಂಬಲದೊಂದಿಗೆ ಬರುತ್ತದೆ. ಈ ಫೋನಿನ ಡಿಸ್ಪ್ಲೇ ಡೈಮಂಡ್ ಶೀಲ್ಡ್ ಗ್ಲಾಸ್ ರಕ್ಷಣೆ ಪಡೆದಿದೆ. ಇದು SGS ಫೈವ್ ಸ್ಟಾರ್ ಡ್ರಾಪ್ ರೆಸಿಸ್ಟೆನ್ಸ್ ಪ್ರಮಾಣೀಕರಣ ಹೊಂದಿದೆ.
ಪ್ರೊಸೆಸರ್ ಸಾಮರ್ಥ್ಯ
ವಿವೋ V50e ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್‌ನ ಡೈಮೆನ್ಸಿಟಿ 7300 ಪ್ರೊಸೆಸರ್ ಹೊಂದಿದೆ. ಇದು ಉತ್ತಮ ಕಾರ್ಯಕ್ಷಮತೆಯನ್ನು ನೀಡುವ ಸಾಮರ್ಥ್ಯವನ್ನು ಹೊಂದಿದೆ. ಈ ಫೋನ್ 8GB RAM + 8GB ವರ್ಚುವಲ್ RAM ಹೊಂದಿದೆ. ಇದರೊಂದಿಗೆ 128GB ಸ್ಟೋರೇಜ್ ಮತ್ತು 256GB ಸ್ಟೋರೇಜ್ ಹೊಂದಿದೆ.
ಕ್ಯಾಮೆರಾ ಸೆಟಪ್
ವಿವೋ V50e ಫೋನ್ 50 ಮೆಗಾಪಿಕ್ಸೆಲ್ ಸೋನಿ ಮುಖ್ಯ ಕ್ಯಾಮೆರಾ ಹೊಂದಿದೆ. ಇದರೊಂದಿಗೆ ಅಲ್ಟ್ರಾವೈಡ್ ಕ್ಯಾಮೆರಾ ಇರಲಿದೆ. ಈ ಫೋನ್ 50 ಮೆಗಾಪಿಕ್ಸೆಲ್ ಐ ಆಟೋಫೋಕಸ್ ಸೆಲ್ಫಿ ಕ್ಯಾಮೆರಾ ಹೊಂದಿದೆ. ವಿಶೇಷವೆಂದರೆ, ಈ ಫೋನಿನ ಮುಂಭಾಗ ಮತ್ತು ಹಿಂಭಾಗದ ಕ್ಯಾಮೆರಾಗಳಲ್ಲಿ 4K ವಿಡಿಯೋ ರೆಕಾರ್ಡಿಂಗ್ ಆಯ್ಕೆಯು ಲಭ್ಯವಿದೆ.
ಬ್ಯಾಟರಿ ಮತ್ತು ಚಾರ್ಜಿಂಗ್
ವಿವೋ V50e ಸ್ಮಾರ್ಟ್‌ಫೋನ್ 5600mAh ಸಾಮರ್ಥ್ಯದ ದೊಡ್ಡ ಬ್ಯಾಟರಿಯನ್ನು ಹೊಂದಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 90W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗುತ್ತದೆ. ಈ ವಿವೋ ಮೊಬೈಲ್ ಅಂಡರ್ ವಾಟರ್ ಫೋಟೋಗ್ರಫಿ ಹೊಂದಿದೆ. ಇದು ಸ್ಮಾರ್ಟ್ ಎಐ (AI) ವೈಶಿಷ್ಟ್ಯಗಳನ್ನು ಹೊಂದಿದೆ. ಎಐ ಟ್ರಾನ್ಸ್‌ಸ್ಕ್ರಿಪ್ಟ್ ಅಸಿಸ್ಟ್, ವಿವೋ ಲೈವ್ ಕಾಲ್ ಟ್ರಾನ್ಸ್‌ಲೇಷನ್, ಸರ್ಕಲ್ ಟು ಸರ್ಚ್ ಸೇರಿದಂತೆ ಹಲವು ಉತ್ತಮ ಎಐ ವೈಶಿಷ್ಟ್ಯಗಳನ್ನು ಒಳಗೊಂಡಿರುತ್ತದೆ. ಈ ಫೋನ್ ಧೂಳು ಮತ್ತು ನೀರಿನ ವಿರುದ್ಧ ರಕ್ಷಣೆಗಾಗಿ IP68 ಮತ್ತು IP69 ರೇಟಿಂಗ್‌ಗಳನ್ನು ಪಡೆದಿದೆ.


Click it and Unblock the Notifications








