ವಿವೋ ಕಂಪೆನಿಯಿಂದ ಹೊಸ ಫೋಲ್ಡೇಬಲ್‌ ಸ್ಮಾರ್ಟ್‌ಫೋನ್‌ ಲಾಂಚ್‌! ಆಕರ್ಷಕ ಕ್ಯಾಮೆರಾ!

|

ಸ್ಮಾರ್ಟ್‌ಫೋನ್‌ ಪ್ರಿಯರ ನೆಚ್ಚಿನ ಬ್ರ್ಯಾಂಡ್‌ಗಳಲ್ಲಿ ವಿವೋ ಕಂಪನೆ ಕೂಡ ಒಂದು. ತನ್ನ ಆಕರ್ಷಕ ಕ್ಯಾಮೆರಾ ಫೀಚರ್ಸ್‌ ಮತ್ತು ಡಿಸ್‌ಪ್ಲೇ ವಿನ್ಯಾಸ ಒಳಗೊಂಡ ಸ್ಮಾರ್ಟ್‌ಫೋನ್‌ಗಳಿಂದ ಗಮನಸೆಳೆದಿದೆ. ಅಲ್ಲದೆ ಫೋಲ್ಡ್‌ ಸ್ಮಾರ್ಟ್‌ಫೊನ್‌ ವಿಭಾಗದಲ್ಲಿಯೂ ಕೂಡ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ತನ್ನ ಹೊಸ ವಿವೋ X ಫೋಲ್ಡ್‌ ಪ್ಲಸ್‌ ಸ್ಮಾರ್ಟ್‌ಫೋನ್‌ ಲಾಂಚ್‌ ಮಾಡಿದೆ. ಇದು ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 8+ Gen 1 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ.

ವಿವೋ

ಹೌದು, ವಿವೋ ಕಂಪೆನಿ ಹೊಸ ವಿವೋ X ಫೋಲ್ಡ್‌ ಪ್ಲಸ್‌ ಸ್ಮಾರ್ಟ್‌ಫೋನ್‌ ಪರಿಚಯಿಸಿದೆ. ಇದು 8.03 ಇಂಚಿನ ಅಮೋಲೆಡ್‌ ಇನರ್‌ ಡಿಸ್‌ಪ್ಲೇ ಮತ್ತು 6.53 ಇಂಚಿನ ಅಮೋಲೆಡ್‌ ಕವರ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 80W ವೈರ್ಡ್ ಫಾಸ್ಟ್ ಚಾರ್ಜಿಂಗ್ ಮತ್ತು 50W ವಾಯರ್‌ಲೆಸ್ ಫಾಸ್ಟ್ ಚಾರ್ಜಿಂಗ್ ಬೆಂಬಲಿಸುವ 4,730mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ವಿಶೇಷತೆ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ವಿವೋ X ಫೋಲ್ಡ್‌ ಪ್ಲಸ್‌ ಫೋಲ್ಡೇಬಲ್‌ ಸ್ಮಾರ್ಟ್‌ಫೋನ್‌ 8.03-ಇಂಚಿನ ಇನರ್‌ ಡಿಸ್‌ಪ್ಲೇ ಹೊಂದಿದೆ. ಇದು 1,916x2,160 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್ ಮತ್ತು 120Hz ರಿಫ್ರೆಶ್ ರೇಟ್‌ ಹೊಂದಿದೆ. ಅಲ್ಲದೆ 1,080x2,520 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.53 ಇಂಚಿನ ಕವರ್‌ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ ಗೇಮ್ ಮೋಡ್‌ನಲ್ಲಿ 140Hz ಮತ್ತು 240Hz ವರೆಗೆ ಟಚ್‌ ಸ್ಯಾಪ್ಲಿಂಗ್‌ ರೇಟ್‌ ನೀಡಲಿದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ಈ ಫೋಲ್ಡಬಲ್ ಸ್ಮಾರ್ಟ್‌ಫೋನ್ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 8+ Gen 1 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದನ್ನು ಅಡ್ರಿನೋ 730 ಜೊತೆಗೆ ಜೋಡಿಸಲಾಗಿದೆ. ಇದಕ್ಕದೆ ಪೂರಕವಾಗಿ ಆಂಡ್ರಾಯ್ಡ್‌ 12ನಲ್ಲಿ ರನ್‌ ಆಗಲಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್‌ 12GB RAM ಮತ್ತು 512GB ಇಂಟರ್‌ ಸ್ಟೋರೇಜ್‌ ಅನ್ನು ಒಳಗೊಂಡಿದೆ. ಇದು ಮೆಮೊರಿ ಕಾರ್ಡ್‌ ಬೆಂಬಲಿಸುವುದರ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

ಕ್ಯಾಮೆರಾ ಸೆಟ್‌ಅಪ್‌

ಕ್ಯಾಮೆರಾ ಸೆಟ್‌ಅಪ್‌

ವಿವೋ X ಫೋಲ್ಡ್‌ ಪ್ಲಸ್‌ ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ, ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 48 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಸೆನ್ಸಾರ್‌, ಮೂರನೇ ಕ್ಯಾಮೆರಾ 12 ಮೆಗಾಪಿಕ್ಸೆಲ್ ಪೋರ್ಟ್ರೇಟ್ ಶೂಟರ್ ಮತ್ತು ನಾಲ್ಕನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಪೆರಿಸ್ಕೋಪ್ ಲೆನ್ಸ್‌ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಈ ಸ್ಮಾರ್ಟ್‌ಫೋನ್‌ 4,730mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 80W ವೈರ್ಡ್ ಮತ್ತು 50W ವಾಯರ್‌ಲೆಸ್ ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G ಸಂಪರ್ಕ, 2.4GHz ಮತ್ತು 5GHz ಡ್ಯುಯಲ್-ಬ್ಯಾಂಡ್ Wi-Fi, ಬ್ಲೂಟೂತ್ v5.2 ಮತ್ತು NFC ಬೆಂಬಲಿಸಲಿದೆ.

ಬೆಲೆ ಮತ್ತ ಲಭ್ಯತೆ

ಬೆಲೆ ಮತ್ತ ಲಭ್ಯತೆ

ವಿವೋ X ಫೋಲ್ಡ್‌ ಪ್ಲಸ್‌ ಸ್ಮಾರ್ಟ್‌ಫೋನ್‌ ಪ್ರಸ್ತುತ ಚೀನಾದಲ್ಲಿ ಮಾತ್ರ ಬಿಡುಗಡೆಯಾಗಿದೆ. ಇದರಲ್ಲಿ 12GB RAM + 256GB ಸ್ಟೋರೇಜ್‌ ಮಾದರಿಯ ಆಯ್ಕೆಗೆ CNY 9,999 (ಸುಮಾರು 1,15,000ರೂ) ಹಾಗೂ 12GB RAM + 512GB ಸ್ಟೋರೇಜ್‌ ಸಾಮರ್ಥ್ಯದ ಆಯ್ಕೆಗೆ CNY 10,999 (ಅಂದಾಜು 1,25,000ರೂ) ಬೆಲೆಯನ್ನು ಪಡೆದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಕಪ್ಪು, ನೀಲಿ ಮತ್ತು ಕೆಂಪು ಬಣ್ಣದ ಆಯ್ಕೆಗಳಲ್ಲಿ ಬರಲಿದೆ.

Best Mobiles in India

English summary
Vivo X Fold+ With 80W Fast Charging Launched:Specifications

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X