ವಿವೋ X ನೋಟ್ ಸ್ಮಾರ್ಟ್‌ಫೋನ್ ಫೀಚರ್ಸ್ ಬಹಿರಂಗ! 7 ಇಂಚಿನ ಡಿಸ್‌ಪ್ಲೇ ವಿಶೇಷ!
ವಿವೋ ಕಂಪೆನಿ ತನ್ನ ಆಕರ್ಷಕ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿದೆ. ಸದ್ಯ ಇದೀಗ ಹೊಸ ವಿವೋ X ನೋಟ್ ಸ್ಮಾರ್ಟ್‌ಫೋನ್ ಪರಿಚಯಿಸಲು ಸಿದ್ಧತೆ ನಡೆಸಿದೆ. ಈ ಸ್ಮಾರ್ಟ್‌ಫೋನ್ ಮುಂದಿನ ತಿಂಗಳು(ಮಾರ್ಚ್) ಭಾರತದಲ್ಲಿ ಬಿಡುಗಡೆ ಆಗಲಿದೆ ಎಂದು ಹೇಳಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್ ವಿಶೇಷತೆ ಏನು ಅನ್ನೊದು ಈಗಾಗಲೇ ಆನ್‌ಲೈನ್‌ನಲ್ಲಿ ಸೋರಿಕೆಯಾಗಿದೆ. ಇದು ಕ್ವಾಲ್‌ಕಾಮ್ ಸ್ನಾಪ್‌ಡ್ರಾಗನ್ 8 Gen 1 SoC ಪ್ರೊಸೆಸರ್ ಹೊಂದಿರಲಿದೆ ಎಂದು ಅಂದಾಜಿಸಲಾಗಿದೆ.

ಹೌದು, ವಿವೋ ಕಂಪೆನಿ ತನ್ನ ಹೊಸ ವಿವೋ X ನೋಟ್ ಸ್ಮಾರ್ಟ್‌ಫೋನ್ ಲಾಂಚ್ ಮಾಡಲು ಸಿದ್ಧತೆ ನಡೆಸಿದೆ. ಇದು 7 ಇಂಚಿನ ಅಮೋಲೆಡ್ ಡಿಸ್‌ಪ್ಲೇ ಹೊಂದಿರಲಿದೆ. ಇನ್ನು ಈ ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್‌ನೊಂದಿಗೆ ಬರಲಿದೆ ಎಂದು ಹೇಳಲಾಗಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿರಲಿದೆ ಎಂದು ನಿರೀಕ್ಷಿಸಲಾಗಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ
ವಿವೋ X ನೋಟ್ ಸ್ಮಾರ್ಟ್‌ಫೋನ್ ಬೃಹತ್ 7 ಇಂಚಿನ ಸ್ಯಾಮ್‌ಸಂಗ್ E5 ಅಮೋಲೆಡ್ ಡಿಸ್‌ಪ್ಲೇ ಹೊಂದಿರಲಿದೆ. ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಹೊಂದಿರುವ ಸಾದ್ಯತೆಯಿದೆ. ಅಲ್ಲದೆ ಇದು ಕ್ವಾಡ್ HD+ ರೆಸಲ್ಯೂಶನ್ ಪಡೆದಿರಲಿದೆ ಎನ್ನಲಾಗಿದೆ. ಇದಲ್ಲದೆ ಪಂಚ್-ಹೋಲ್ ಹೌಸಿಂಗ್ ಡಿಸ್‌ಪ್ಲೇ ವಿನ್ಯಾಸವನ್ನು ಒಳಗೊಂಡಿರಲಿದೆ.

ಪ್ರೊಸೆಸರ್
ಇನ್ನು ವಿವೋ X ನೋಟ್ ಸ್ಮಾರ್ಟ್‌ಫೋನ್ ಸ್ನಾಪ್‌ಡ್ರಾಗನ್ 8 Gen 1 SoC ಪ್ರೊಸೆಸರ್ ಬಲವನ್ನು ಪಡೆದಿದೆ. ಇದು ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ ಎನ್ನಲಾಗಿದೆ. ಹಾಗೆಯೇ 12GB RAM ಮತ್ತು 256GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿರುವ ನಿರೀಕ್ಷೆಯಿದೆ.

ಕ್ಯಾಮೆರಾ ವಿಶೇಷ
ವಿವೋ X ನೋಟ್ ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್ S5KGN1 ಸೆನ್ಸಾರ್, ಎರಡನೇ ಕ್ಯಾಮೆರಾ 48MP ಸೋನಿ IMX598 ಲೆನ್ಸ್, ಮೂರನೇ ಕ್ಯಾಮೆರಾ 12MP ಸೋನಿ IMX663 ಲೆನ್ಸ್ ಮತ್ತು ನಾಲ್ಕನೇ ಕ್ಯಾಮೆರಾ 8MP ಸೆನ್ಸಾರ್ 5x ಜೂಮ್ ಹೊಂದಿದೆ. ಇದಲ್ಲದೆ 16 MP ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಕೂಡ ಹೊಂದಿದೆ.

ಬ್ಯಾಟರಿ ಮತ್ತು ಇತರೆ
ವಿವೋ X ನೋಟ್ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ ಇದು 80W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ ಎಂದು ಅಂದಾಜಿಸಲಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ಬ್ಲೂಟೂತ್, ವೈಫೈಯನ್ನು ಬೆಂಬಲಿಸಲಿದೆ. ಈ ಸ್ಮಾರ್ಟ್‌ಫೋನ್ ಮುಂದಿನ ತಿಂಗಳು ಭಾರತದಲ್ಲಿ ಬಿಡುಗಡೆಯಾಗಲಿದೆ. ಇದರ ಬೆಲೆ ಹಾಗೂ ಕಲರ್ ಆಯ್ಕೆಯ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

ಇದಲ್ಲದೆ ವಿವೋ ಕಂಪೆನಿ ಭಾರತದಲ್ಲಿ ಇತ್ತೀಚಿಗೆ ಹೊಸ ವಿವೋ Y15s (2021) ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ. ವಿವೋ Y15s (2021) ಸ್ಮಾರ್ಟ್‌ಫೋನ್ 6.51 ಇಂಚಿನ HD+ ಡಿಸ್‌ಪ್ಲೇಯನ್ನು ಒಳಗೊಂಡಿದೆ. ಇದು ಆಕ್ಟಾ-ಕೋರ್ ಮೀಡಿಯಾಟೆಕ್ ಹಿಲಿಯೋ P35 SoC ಪ್ರೊಸೆಸರ್ ಬಲವನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಪ್ರೈಮೆರಿ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್ f/2.2 ಲೆನ್ಸ್ ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ 3GB RAM + 32GB ಸ್ಟೋರೇಜ್ ಆಯ್ಕೆ ಹೊಂದಿದೆ. ಇದು ಮಿಸ್ಟಿಕ್ ಬ್ಲೂ ಮತ್ತು ವೇವ್ ಗ್ರೀನ್ ಬಣ್ಣಗಳಲ್ಲಿ ಲಭ್ಯವಾಗಲಿದೆ.


Click it and Unblock the Notifications








