ವಿವೋ ಎಕ್ಸ್ ನೋಟ್ ಸ್ಮಾರ್ಟ್‌ಫೋನ್ ಬಿಡುಗಡೆ
ಟೆಕ್ ಮಾರುಕಟ್ಟೆಯಲ್ಲಿ ವಿವೋ ಕಂಪೆನಿ ತನ್ನ ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳ ಮೂಲಕ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿದೆ. ಈಗಾಗಲೇ ಹಲವು ಸ್ಮಾರ್ಟ್‌ಫೋನ್ ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಇದೀಗ ವಿವೋ ಕಂಪೆನಿ ತನ್ನ ಹೊಸ ವಿವೋ ಎಕ್ಸ್ ನೋಟ್ ಅನ್ನು ಲಾಂಚ್ ಮಾಡಿದೆ. ಇದು ಒರಿಜನ್ ಒಎಸ್‌ನಲ್ಲಿ ಕಾರ್ಯನಿರ್ವಹಿಸಲಿದೆ.

ಹೌದು, ವಿವೋ ಕಂಪೆನಿ ತನ್ನ ಹೊಸ ವಿವೋ ಎಕ್ಸ್ ನೋಟ್ ಅನ್ನು ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ 7 ಇಂಚಿನ 2K+ ಸ್ಯಾಮ್‌ಸಂಗ್ E5 ಡಿಸ್‌ಪ್ಲೇಯನ್ನು ಹೊಂದಿದೆ. ಇದು ಸ್ನಾಪ್‌ಡ್ರಾಗನ್ 8 Gen 1 SoC ಪ್ರೊಸೆಸರ್ ಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ವಿಶೇಷತೆ ಹೊಂದಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ರಚನೆ
ವಿವೋ X ನೋಟ್ ಸ್ಮಾರ್ಟ್‌ಫೋನ್ 1,440x3,080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 7 ಇಂಚಿನ 2K+ ಸ್ಯಾಮ್‌ಸಂಗ್ E5 ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 21:10 ರಚನೆಯ ಅನುಪಾತವನ್ನು ಹೊಂದಿದೆ. ಇದು 120Hz ರಿಫ್ರೆಶ್ ರೇಟ್ ಹೊಂದಿದೆ.

ಪ್ರೊಸೆಸರ್ ಯಾವುದು?
ಈ ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8 Gen 1 SoC ಪ್ರೊಸೆಸರ್ ಹೊಂದಿದೆ. ಇದು ಆಂಡ್ರಾಯ್ಡ್ 12 ನಲ್ಲಿ OriginOS ನೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 12GB RAM ಮತ್ತು 512GB ಇಂಟರ್ ಸ್ಟೋರೇಜ್ ಹೊಂದಿದೆ.

ಕ್ಯಾಮೆರಾ ವಿಶೇಷ
ಇದು ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಎರಡನೇ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್ , ಮೂರನೇ ಕ್ಯಾಮೆರಾ 12 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ನಾಲ್ಕನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ
ವಿವೋ X ನೋಟ್ ಸ್ಮಾರ್ಟ್‌ಫೋನ್ 5,000mAh ಡ್ಯುಯಲ್-ಸೆಲ್ ಬ್ಯಾಟರಿಯನ್ನು ಹೊಂದಿದೆ. ಇದು 80W ವೇಗದ ವೈರ್ಡ್ ಚಾರ್ಜಿಂಗ್ ಮತ್ತು 50W ವೈರ್‌ಲೆಸ್ ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi, ಬ್ಲೂಟೂತ್ v5.2, GPS/ A-GPS/ NavIC, NFC, ಮತ್ತು USB ಟೈಪ್-C ಪೋರ್ಟ್ ಸೇರಿವೆ. ಇದಲ್ಲದೆ ಅಕ್ಸಿಲೆರೊಮೀಟರ್, ಆಂಬಿಯೆಂಟ್ ಲೈಟ್ ಸೆನ್ಸಾರ್, ಗೈರೊಸ್ಕೋಪ್, ಮ್ಯಾಗ್ನೆಟೋಮೀಟರ್ ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ
ವಿವೋ ಎಕ್ಸ್ ನೋಟ್ ಬೆಲೆಯು ಮೂಲ 8GB + 256GB ಮಾದರಿಗೆ CNY 5,999 (ಸುಮಾರು 71,400ರೂ) ಬೆಲೆ ಹೊಂದಿದೆ. ಈ ಫೋನ್ 12GB + 256GB ಆಯ್ಕೆಗೆ CNY 6,499 (ಸುಮಾರು 77,400ರೂ) ಬೆಲೆ ಹೊಂದಿದೆ.


Click it and Unblock the Notifications








