ವಿವೋದ ಈ ಫಾಸ್ಟ್ ಚಾರ್ಜಿಂಗ್ ಫೋನ್ ಬೆಲೆಯಲ್ಲಿ ಭರ್ಜರಿ ಇಳಿಕೆ!
ಜನಪ್ರಿಯ ಇ ಕಾಮರ್ಸ್ ಫ್ಲಿಪ್‌ಕಾರ್ಟ್ ಪ್ಲಾಟ್‌ಫಾರ್ಮ್ ಗ್ರಾಹಕರನ್ನು ಸೆಳೆಯಲು ಮೊಬೈಲ್‌ಗಳಿಗೆ ವಿಶೇಷ ಆಫರ್ ಲಭ್ಯ ಮಾಡುತ್ತೆ. ಸದ್ಯ ಫ್ಲಿಪ್‌ಕಾರ್ಟ್ ವೆಬ್‌ಸೈಟ್‌ನಲ್ಲಿ ವಿವೋದ X100 ಸ್ಮಾರ್ಟ್‌ಫೋನ್ ಬೊಂಬಾಟ್ ಡಿಸ್ಕೌಂಟ್ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ.
ಹೌದು, ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತಾಣದಲ್ಲಿ ವಿವೋ X100 ಮೊಬೈಲ್ ಶೇ. 7% ರಷ್ಟು ನೇರ ರಿಯಾಯಿತಿ ನೀಡಲಾಗಿದೆ. ಈ ಫೋನಿನ 12 GB RAM + 256 GB ಸ್ಟೋರೇಜ್ ಮಾಡೆಲ್ 63,999ರೂ. ಗಳ ಆಫರ್‌ನಲ್ಲಿ ಬೆಲೆಯಲ್ಲಿ ಗ್ರಾಹಕರ ಖರೀದಿಗೆ ಲಭ್ಯ ಇದೆ. ಹಾಗೆಯೇ ವೆಬ್‌ಸೈಟ್‌ನಲ್ಲಿ ಲಭ್ಯ ಇರುವ ಇತರೆ ಡಿಸ್ಕೌಂಟ್ ಆಫರ್ ಪಡೆದುಕೊಂಡರೆ, ಈ ಫೋನ್ ಇನ್ನಷ್ಟು ಕಡಿಮೆ ಬೆಲೆಗೆ ಲಭ್ಯ.

ವಿವೋ ಸಂಸ್ಥೆಯ ಈ ದೈತ್ಯ ಫ್ಲ್ಯಾಗ್‌ಶಿಪ್ ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 9300SoC ಪ್ರೊಸೆಸರ್ ಪಡೆದಿದೆ. 5,000mAh ಸಾಮರ್ಥ್ಯದ ಬ್ಯಾಟರಿ ಜೊತೆಗೆ 120W ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ಒಳಗೊಂಡಿದೆ. ಇನ್ನು ಈ ಫೋನ್ ಟ್ರಿಪಲ್ ಕ್ಯಾಮೆರಾ ಪಡೆದಿದ್ದು, 50ಎಂಪಿ + 50ಎಂಪಿ + 64ಎಂಪಿ ಸೆನ್ಸಾರ್‌ನ ಒಳಗೊಂಡಿದೆ. ಇನ್ನುಳಿದಂತೆ ವಿವೋ X100 ಮೊಬೈಲ್‌ನ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.
ವಿವೋ X100 ಫೋನ್ - ಫೀಚರ್ಸ್ ಹೀಗಿವೆ
ವಿವೋ X100 ಫೋನ್ 6.78 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಅನ್ನು ಹೊಂದಿದ್ದು, ಈ ಡಿಸ್‌ಪ್ಲೇ 2800 x 1260 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯ ಪಡೆದಿದೆ. ಹಾಗೆಯೇ ಇದು 386 ಪಿಪಿಐ ಪಿಕ್ಸೆಲ್ ಸಾಂದ್ರತೆ ಅನ್ನು ಒಳಗೊಂಡಿದ್ದು, ಇನ್ನು ಡಿಸ್‌ಪ್ಲೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ v5 ಸ್ಕ್ರೀನ್ ಪ್ರೊಟೆಕ್ಷನ್‌ನಲ್ಲಿ ಸಹ ಪಡೆದಿದೆ. ಇದಲ್ಲದೆ ಡಿಸ್‌ಪ್ಲೇ 120 Hz ರಿಫ್ರೆಶ್ ರೇಟ್ ಸಪೋರ್ಟ್ ಪಡೆದಿದೆ.

ಅಲ್ಲದೇ ವಿವೋ X100 ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 9300SoC ಪ್ರೊಸೆಸರ್ ಸೌಲಬ್ಯದ ಪವರ್ ಅನ್ನು ಪಡೆದಿದ್ದು, ಇದಕ್ಕೆ ಅನುಗುಣವಾಗಿ ಆಂಡ್ರಾಯ್ಡ್ 14 ಓಎಸ್ ಸಪೋರ್ಟ್‌ನಲ್ಲಿ ಕೆಲಸ ಮಾಡಲಿದೆ. ಅಲ್ಲದೇ ಇದು 12GB RAM ಮತ್ತು 256GB ಆಂತರೀಕ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಹಾಗೆಯೇ ಇದು Funtouch OS 14 ಸಪೋರ್ಟ್ ಕೂಡಾ ಪಡೆದಿದೆ.
ವಿವೋ X100 ಫೋನ್ ಮೂರು ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಒಳಗೊಂಡಿದ್ದು, ಇದರಲ್ಲಿ ಪ್ರಾಥಮಿಕ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಆಗಿದೆ. ಎರಡನೇ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸೌಲಭ್ಯ ಪಡೆದಿದೆ ಮತ್ತು ಮೂರನೇ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಟೆಲಿಫೋಟೋ ಲೆನ್ಸ್ ಹೊಂದಿದೆ. ಇದಲ್ಲದೆ 32 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ.
ಇನ್ನು ವಿವೋ X100 ಸ್ಮಾರ್ಟ್‌ಫೋನ್ 5000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಕೂಡಾ ಪಡೆದಿದ್ದು, ಇದಕ್ಕೆ ಪೂರಕವಾಗಿ 120W ಫಾಸ್ಟ್ ಚಾರ್ಜಿಂಗ್ ಅನ್ನು ಸಪೋರ್ಟ್ ಮಾಡುತ್ತದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಹಾಟ್‌ಸ್ಪಾಟ್, ಬ್ಲೂಟೂತ್, ವೈಫೈ, ಯುಎಸ್‌ಬಿ ಸಿ ಪೋರ್ಟ್, ಹೆಡ್‌ಫೋನ್ ಜ್ಯಾಕ್ ಅನ್ನು ಪಡೆದುಕೊಂಡಿದೆ.
ವಿವೋ ಕಂಪನಿಯ ಈ ದೈತ್ಯ ಮೊಬೈಲ್ ಎರಡು ವೇರಿಯಂಟ್ ಮಾಡೆಲ್ ಆಯ್ಕೆ ಪಡೆದಿದ್ದು, ಅವುಗಳು ಕ್ರಮವಾಗಿ 12GB RAM ಮತ್ತು 256GB ಹಾಗೂ 16GB RAM+ 512GB ಆಂತರೀಕ ಸ್ಟೋರೇಜ್ ಆಗಿವೆ. ಇನ್ನು ಈ ಮೊಬೈಲ್ ಬ್ಲೂ ಹಾಗೂ ಬ್ಲ್ಯಾಕ್ ಕಲರ್ ಆಯ್ಕೆಯಲ್ಲಿ ಖರೀದಿಗೆ ಲಭ್ಯ ಇದೆ.


Click it and Unblock the Notifications








