ಜಾಗತಿಕ ಮಾರುಕಟ್ಟೆಯಲ್ಲಿ ವಿವೋ X100 ಸರಣಿ ಬಿಡುಗಡೆ ದಿನಾಂಕ ಬಹಿರಂಗ!
ಕಳೆದ ತಿಂಗಳು ಟೆಕ್ ವಲಯದಲ್ಲಿ ಧೂಳೆಬ್ಬಿಸಿದ್ದ ವಿವೋ X100 ಸರಣಿ ಇದೀಗ ಜಾಗತಿಕ ಮಾರುಕಟ್ಟೆಗೆ ಎಂಟ್ರಿ ನೀಡಲು ಸಿದ್ಧವಾಗಲಿದೆ. ಮೊಬೈಲ್ ಮಾರುಕಟ್ಟೆಯ ವರದಿಯಂತೆ ಈ ಸರಣಿಯು ಇದೇ ಡಿಸೆಂಬರ್ 14 ಜಾಗತಿಕ ವಲಯದಲ್ಲಿ ಅನಾವರಣಗೊಳ್ಳಲಿದೆ. ಇನ್ನು ಸರಣಿಯಲ್ಲಿ ವಿವೋ X100 ಮತ್ತು ವಿವೋ X100 ಪ್ರೊ ಫೋನ್‌ಗಳು ಬರಲಿವೆ.
ಹೌದು, ವಿವೋ X100 ಸರಣಿ ಜಾಗತಿಕ ಮಾರುಕಟ್ಟೆಯಲ್ಲಿ ಬಿಡುಗಡೆ ಆಗುವ ದಿನಾಂಕ ಬಹಿರಂಗವಾಗಿದೆ. ಇದರಲ್ಲಿ ವಿವೋ X100 ಪ್ರೊ ಸ್ಮಾರ್ಟ್‌ಫೋನ್ ಸಾಕಷ್ಟು ಗಮನಸೆಳೆದಿದೆ. ಈ ಸ್ಮಾರ್ಟ್‌ಫೋನ್ 120W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಒಳಗೊಂಡಿದೆ. ಜೊತೆಗೆ 5000mAh ಸಾಮರ್ಥ್ಯವನ್ನು ಪಡೆದುಕೊಂಡಿದೆ. ಹಾಗಾದ್ರೆ ಈ ಸ್ಮಾರ್ಟ್‌ಫೋನ್ ಫೀಚರ್ಸ್ ಏನಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ವಿವೋ X100 ಪ್ರೊ ಸ್ಮಾರ್ಟ್‌ಫೋನ್ ಡಿಸ್‌ಪ್ಲೇ ರಚನೆ
ವಿವೋ X100 ಪ್ರೊ ಸ್ಮಾರ್ಟ್‌ಫೋನ್ 6.78 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು 120Hz ರಿಫ್ರೆಶ್ ರೇಟ್ ಪಡೆದಿದ್ದು, ಇನ್-ಸ್ಕ್ರೀನ್‌ಫಿಂಗರ್‌ಫ್ರಿಂಟ್ ಸ್ಕ್ಯಾನರ್ ಸೌಲಭ್ಯ ಪಡೆದಿದೆ.
ವಿವೋ X100 ಪ್ರೊ ಸ್ಮಾರ್ಟ್‌ಫೋನ್ ಪ್ರೊಸೆಸರ್ ಯಾವುದು?
ವಿವೋ X100 ಪ್ರೊ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 9300SoC ಪ್ರೊಸೆಸರ್ ಕಾರ್ಯ ವೈಖರಿ ಪಡೆದುಕೊಂಡಿದೆ. ಇದು ಆಂಡ್ರಾಯ್ಡ್ 14-ಆಧಾರಿತ OriginOS 4 ನಲ್ಲಿ ರನ್ ಆಗಲಿದೆ. ಇದಲ್ಲದೆ 16GB RAM ಮತ್ತು 1TB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದಲ್ಲದೆ ಮೆಮೊರಿ ಕಾರ್ಡ್ ಬೆಂಬಲದೊಂದಿಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.
ವಿವೋ X100 ಪ್ರೊ ಸ್ಮಾರ್ಟ್‌ಫೋನ್ ಕ್ಯಾಮೆರಾ ಸೆಟಪ್
ವಿವೋ X100 ಪ್ರೊ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ರಚನೆ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್, ಮತ್ತು 64 ಮೆಗಾಪಿಕ್ಸೆಲ್ ಟೆಲಿಫೋಟೋ ಲೆನ್ಸ್ ಜೊತೆಗೆ 3x ಆಪ್ಟಿಕಲ್ ಮತ್ತು 100x ಡಿಗ್ಟಿಯಲ್ ಹೊಂದಿದೆ. ಜೊತೆಗೆ 4K ವಿಡಿಯೋ ಸಪೋರ್ಟ್ ಕೂಡಾ ಒಳಗೊಂಡಿದೆ. ಇದರೊಂದಿಗೆ 32 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.
ವಿವೋ X100 ಪ್ರೊ ಸ್ಮಾರ್ಟ್‌ಫೋನ್ ಬ್ಯಾಟರಿ ಮತ್ತು ಇತರೆ
ವಿವೋ X100 ಪ್ರೊ ಸ್ಮಾರ್ಟ್‌ಫೋನ್ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 120W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ಬ್ಲೂಟೂತ್, ವೈಫೈ, ಯುಎಸ್‌ಬಿ ಸಿ ಪೋರ್ಟ್ ಅನ್ನು ಒಳಗೊಂಡಿದೆ. ಈ ಫೋನ್ ಸ್ಟಾರ್ ಟ್ರಯಲ್ ಬ್ಲೂ, ಸನ್‌ಸೆಟ್ ಆರೆಂಜ್, ವೈಟ್ ಮೂನ್‌ಲೈಟ್ ಮತ್ತು ಚೆಯ್ನೆ ಬ್ಲಾಕ್ ಬಣ್ಣಗಳ ಆಯ್ಕೆಯಲ್ಲಿ ಖರೀದಿಗೆ ಲಭ್ಯವಾಗಲಿವೆ. ಇದರ ಬೆಲೆ ವಿವರಗಳು ಇನ್ನು ಬಹಿರಂಗವಾಗಿಲ್ಲ.

ವಿವೋ X100 ಫೀಚರ್ಸ್ ಹೇಗಿರಲಿದೆ?
ವಿವೋ X100 ಫೋನ್ 6.78 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಅನ್ನು ಪಡೆದಿದ್ದು, ಈ ಡಿಸ್‌ಪ್ಲೇ ಅಧಿಕ ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಪಡೆದಿದೆ. ಹಾಗೆಯೇ AMOLED ಮಾದರಿಯ ಸ್ಕ್ರೀನ್ ಪಡೆದಿದೆ. ಜೊತೆಗೆ ಈ ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 9300SoC ಪ್ರೊಸೆಸರ್ ಕಾರ್ಯ ವೈಖರಿ ಪಡೆದುಕೊಂಡಿದ್ದು, 12GB + 256GB, 16GB + 256GB, 16GB + 512GB ಮತ್ತು 16GB + 1TB ಸ್ಟೋರೇಜ್ ಆಯ್ಕೆ ಪಡೆದಿದೆ.
ಹಾಗೆಯೇ ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ರಚನೆ ಇದ್ದು, ಪ್ರಾಥಮಿಕ ಕ್ಯಾಮೆರಾ 50ಎಂಪಿ ಆಗಿದೆ. ಉಳಿದಂತೆ 50ಎಂಪಿ ಅಲ್ಟ್ರಾ-ವೈಡ್-ಆಂಗಲ್ ಯುನಿಟ್ ಮತ್ತು 64ಎಂಪಿ ಟೆಲಿಫೋಟೋ ಲೆನ್ಸ್ ಜೊತೆಗೆ 3x ಆಪ್ಟಿಕಲ್ ಮತ್ತು 100x ಡಿಗ್ಟಿಯಲ್ ಅನ್ನು ಒಳಗೊಂಡಿದೆ. ಇದರೊಂದಿಗೆ 32ಎಂಪಿ ಸೆಲ್ಫಿ ಸ್ನ್ಯಾಪರ್ ಇದೆ. ಹಾಗೆಯೇ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಇದು 120W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.


Click it and Unblock the Notifications








