ಗ್ಲೋಬಲ್ ಮಾರುಕಟ್ಟೆಗೆ ವಿವೋ X100 ಪ್ರೊ ಅಬ್ಬರದ ಎಂಟ್ರಿ! ಸೆಲ್ಫಿ ಪ್ರಿಯರಿಗೆ ಬೆಸ್ಟ್ ಆಯ್ಕೆ!
ಸಾಕಷ್ಟು ಸದ್ದು ಮಾಡುತ್ತಿರುವ ವಿವೋ X100 ಪ್ರೊ ಸ್ಮಾರ್ಟ್‌ಫೋನ್ ಇದೀಗ ಗ್ಲೋಬಲ್ ಮಾರುಕಟ್ಟೆಗೆ ಎಂಟ್ರಿ ನೀಡಿದೆ. ಈ ಮೂಲಕ ಜಾಗತಿಕವಾಗಿ ವಿವೋ X100 ಪ್ರೊ ಸ್ಮಾರ್ಟ್‌ಫೋನ್ ಅಬ್ಬರ ಶುರುವಾಗಿದೆ. ಇದು 4nm ಮೀಡಿಯಾ ಟೆಕ್ ಡೈಮೆನ್ಸಿಟಿ 9300 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಜೊತೆಗೆ 5,400mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ.
ಹೌದು, ವಿವೋ X100 ಪ್ರೊ ಸ್ಮಾರ್ಟ್‌ಫೋನ್ ಜಾಗತಿಕ ವಲಯದಲ್ಲಿ ಅನಾವರಣಗೊಂಡಿದೆ. ಬಿಡುಗಡೆ ಆದ ಕ್ಷಣದಿಂದಲೇ ಟೆಕ್ ವಲಯದಲ್ಲಿ ಹಲ್‌ಚಲ್ ಎಬ್ಬಿಸಿದೆ. ಅದರಲ್ಲೂ ಸ್ಮಾರ್ಟ್‌ಫೋನ್‌ನ ಕ್ಯಾಮೆರಾ ಡಿಸೈನ್ ಎಲ್ಲರ ಕಣ್ಣುಕುಕ್ಕುವಂತೆ ಮಾಡಿದೆ. ಇದು ಪ್ರಮುಖವಾಗಿ ಹೊಸ V3 ಇಮೇಜಿಂಗ್ ಚಿಪ್ ಅನ್ನು ಪಡೆದಿದೆ. ಹಾಗಾದ್ರೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ವಿವೋ X100 ಪ್ರೊ ಡಿಸ್‌ಪ್ಲೇ ಮತ್ತು ರಚನೆ
ವಿವೋ X100 ಪ್ರೊ ಸ್ಮಾರ್ಟ್‌ಫೋನ್ 6.78 ಇಂಚಿನ LTPO AMOLED ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇಯು 1,260 x 2,800 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಹೊಂದಿದೆ. ಇದು 120Hz ರಿಫ್ರೆಶ್ ರೇಟ್ ಅನ್ನು ಹೊಂದಿದ್ದು, 3000 ನಿಟ್ಸ್ ಬ್ರೈಟ್‌ನೆಸ್ ಹೊಂದಿದೆ. ಇದಲ್ಲದೆ ಡಿಸ್‌ಪ್ಲೇ 89.8% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಪಡೆದಿದ್ದು, 20:9 ರಚನೆಯ ಅನುಪಾತದಲ್ಲಿದೆ.
ವಿವೋ X100 ಪ್ರೊ ಪ್ರೊಸೆಸರ್ ಯಾವುದು?
ವಿವೋ X100 ಪ್ರೊ ಸ್ಮಾರ್ಟ್‌ಫೋನ್ 4nm ಮೀಡಿಯಾ ಟೆಕ್ ಡೈಮೆನ್ಸಿಟಿ 9300 SoC ಪ್ರೊಸೆಸರ್ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್ 14 ಬೆಂಬಲದೊಂದಿಗೆ ರನ್ ಆಗಲಿದೆ. ಹಾಗೆಯೇ 16GB + 512GB RAM ಇಂಟರ್ ಸ್ಟೋರೇಜ್ ಸಾಮರ್ಥ್ಯದೊಂದಿಗೆ ಬರಲಿದೆ. ಈ ಸ್ಮಾರ್ಟ್‌ಫೋನ್ ಮೆಮೊರಿ ಕಾರ್ಡ್ ಬೆಂಬಲಿಸುವುದಿಲ್ಲ ಎನ್ನಲಾಗಿದೆ.

ವಿವೋ X100 ಪ್ರೊ ಕ್ಯಾಮೆರಾ ಸೆಟ್‌ಅಪ್ ಏನಿದೆ?
ವಿವೋ X100 ಪ್ರೊ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಲೆನ್ಸ್, ಎರಡನೇ ಕ್ಯಾಮೆರಾ 50 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್-ಆಂಗಲ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 50 ಮೆಗಾಪಿಕ್ಸೆಲ್ Zeiss APO ಸೂಪರ್-ಟೆಲಿಫೋಟೋ ಲೆನ್ಸ್ ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ.
ವಿವೋ X100 ಪ್ರೊ ಬ್ಯಾಟರಿ ಮತ್ತು ಇತರೆ
ವಿವೋ X100 ಪ್ರೊ ಸ್ಮಾರ್ಟ್‌ಫೋನ್ 5,400mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 100W ವೈರ್ಡ್ ಚಾರ್ಜಿಂಗ್ ಮತ್ತು 50W ವಾಯರ್‌ಲೆಸ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್, ವೈಫೈ, ಯುಎಸ್‌ಬಿ ಸಿ ಪೋರ್ಟ್, ಹೆಡ್‌ಫೋನ್ ಜ್ಯಾಕ್ ಅನ್ನು ಒಳಗೊಂಡಿದೆ. ಇದರೊಂದಿಗೆ ಫಿಂಗರ್‌ಪ್ರಿಂಟ್, ಅಕ್ಸಿಲೆರೊಮೀಟರ್, ಗೈರೊ, ಪ್ರಾಕ್ಸಿಮಿಟಿ ಸೆನ್ಸಾರ್, ಕಂಪಾಸ್ ಆಯ್ಕೆಗಳನ್ನು ಹೊಂದಿದೆ.

ವಿವೋ X100 ಪ್ರೊ ಬೆಲೆ ಮತ್ತು ಲಭ್ಯತೆ
ವಿವೋ X100 ಪ್ರೊ ಸ್ಮಾರ್ಟ್‌ಫೋನ್ 16GB + 512GB RAM ಸ್ಟೋರೇಜ್ ಆಯ್ಕೆಯು ಪ್ರಸ್ತುತ ಹಾಕಾಂಗ್‌ನಲ್ಲಿ HK$7,998 (ಸುಮಾರು 85,224ರೂ) ಬೆಲೆಗೆ ಲಭ್ಯವಾಗಲಿದೆ. ಆದರೆ ಭಾರತದಲ್ಲಿ ಈ ಫೋನ್ ಅನಾವರಣಗೊಂಡಾಂಗ ಇದರ ಸ್ಟೋರೇಜ್ ವೇರಿಯೆಂಟ್ ಆಯ್ಕೆಗಳು ಬದಲಾಗುವ ಸಾದ್ಯತೆಯಿದೆ. ಪ್ರಸ್ತುತ ಇದು ಮುಖ್ಯವಾಗಿ ಯುರೋಪ್ ಮತ್ತು ಆಗ್ನೇಯ ಏಷ್ಯಾದ ಮಾರುಕಟ್ಟೆಗಳನ್ನು ಒಳಗೊಂಡಿದೆ. ಸದ್ಯ ಇದು ಭಾರತದಲ್ಲಿ ಯಾವ ಬೆಲೆಗೆ ಬರಲಿದೆ ಅನ್ನೊದು ಸದ್ಯದಲ್ಲೆ ಅನಾವರಣಗೊಳ್ಳಲಿದೆ.


Click it and Unblock the Notifications








