Home
ಸುದ್ದಿಜಾಲ

ಇಂದು ಗ್ರ್ಯಾಂಡ್‌ ಎಂಟ್ರಿ ಕೊಡಲಿದೆ ವಿವೋದ ಈ ಹೊಸ ಸ್ಮಾರ್ಟ್‌ಫೋನ್‌!

ಜನಪ್ರಿಯ ವಿವೋ ಕಂಪೆನಿಯ ಈಗಾಗಲೇ ಕೆಲವು ದೈತ್ಯ ಮಾದರಿಯ ಫೋನ್‌ಗಳನ್ನು ಮಾರುಕಟ್ಟೆಗೆ ಪರಿಚಯಿಸಿ ಸೈ ಎನಿಸಿಕೊಂಡಿದೆ. ಸಂಸ್ಥೆಯು ಅದರ ಮುಂದುವರಿದ ಭಾಗವಾಗಿ ಇದೀಗ ವಿವೋ X100 ಸರಣಿ ಬಿಡುಗಡೆ ಮಾಡಲು ಸಜ್ಜಾಗಿದೆ. ಈ ಬಹುನಿರೀಕ್ಷಿತ ಫೋನ್‌ ಸರಣಿಯು ಇಂದು (ಜ. 4 ರಂದು) ಅಧಿಕೃತವಾಗಿ ಮಾರುಕ್ಟೆಗೆ ಲಗ್ಗೆ ಇಡಲಿದೆ.

ಹೌದು, ಚೀನಾ ಮೂಲದ ವಿವೋ ಸಂಸ್ಥೆಯು ತನ್ನ ನೂತನ ವಿವೋ X100 ಸ್ಮಾರ್ಟ್‌ಫೋನ್‌ ಸರಣಿಯನ್ನು ಇಂದು ಭಾರತೀಯ ಹಾಗೂ ಗ್ಲೋಬಲ್‌ ಮಾರಕಟ್ಟೆಗೆ ಲಾಂಚ್ ಮಾಡಲಿದೆ. ಇನ್ನು ಈ ಸರಣಿಯು ವಿವೋ X100 ಹಾಗೂ ವಿವೋ X100 ಪ್ರೊ ಮಾಡೆಲ್‌ಗಳನ್ನು ಒಳಗೊಂಡಿರುವ ಸಾಧ್ಯತೆಗಳು ಇವೆ. ಆ ಪೈಕಿ ವಿವೋ X100 ಫೋನ್‌ ಈಗಾಗಲೇ ಗ್ರಾಹಕರನ್ನು ಸೆಳೆದಿದೆ.

ಇಂದು ಗ್ರ್ಯಾಂಡ್‌ ಎಂಟ್ರಿ ಕೊಡಲಿದೆ ವಿವೋದ ಈ ಹೊಸ ಸ್ಮಾರ್ಟ್‌ಫೋನ್‌!

ಇನ್ನು ಈ ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 9300SoC ಪ್ರೊಸೆಸರ್‌ ಸಾಮರ್ಥ್ಯವನ್ನು ಪಡೆದಿದ್ದು, ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಪಡೆದಿರಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ ಒಳಗೊಂಡಿರಲಿದೆ ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ವಿವೋ X100 ಫೋನ್‌ - ಫೀಚರ್ಸ್‌

ವಿವೋ X100 ಮೊಬೈಲ್‌ 6.82 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಅನ್ನು ಪಡೆದಿರಲಿದ್ದು, ಈ ಡಿಸ್‌ಪ್ಲೇ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದಲ್ಲಿ ಬರುವ ನಿರೀಕ್ಷೆಯಿದೆ. ಹಾಗೆಯೇ ಇದು 386 ಪಿಪಿಐ ಪಿಕ್ಸೆಲ್ ಸಾಂದ್ರತೆ ಅನ್ನು ಒಳಗೊಂಡಿರಲಿದೆ ಎನ್ನಲಾಗಿದೆ. ಇನ್ನು ಡಿಸ್‌ಪ್ಲೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ v5 ಸ್ಕ್ರೀನ್ ಪ್ರೊಟೆಕ್ಷನ್‌ನಲ್ಲಿ ಬರುವ ನಿರೀಕ್ಷೆಯಿದೆ. ಇದಲ್ಲದೆ ಡಿಸ್‌ಪ್ಲೇ 120 Hz ರಿಫ್ರೆಶ್‌ ರೇಟ್‌ನೊಂದಿಗೆ ಬರಲಿದೆ ಎಂದು ತಿಳಿದು ಬಂದಿದೆ.

ಇಂದು ಗ್ರ್ಯಾಂಡ್‌ ಎಂಟ್ರಿ ಕೊಡಲಿದೆ ವಿವೋದ ಈ ಹೊಸ ಸ್ಮಾರ್ಟ್‌ಫೋನ್‌!

ಹಾಗೆಯೇ ವಿವೋ X100 ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 9300SoC ಪ್ರೊಸೆಸರ್‌ ಪವರ್‌ ಅನ್ನು ಹೊಂದಿರಲಿದ್ದು, ಇದು ಆಂಡ್ರಾಯ್ಡ್‌ 14 ಓಎಸ್‌ ಸಪೋರ್ಟ್‌ನಲ್ಲಿ ಕೆಲಸ ಮಾಡಲಿದೆ. ಅಲ್ಲದೇ ಇದು 12GB RAM ಮತ್ತು 256GB ಆಂತರೀಕ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿರಲಿದೆ ಎಂದು ಹೇಳಲಾಗಿದೆ. ಈ ಸ್ಮಾರ್ಟ್‌ಫೋನ್‌ ಮೆಮೊರಿ ಕಾರ್ಡ್‌ ಬೆಂಬಲಿಸುವುದಿಲ್ಲ ಎನ್ನಲಾಗಿದೆ.

ವಿವೋ X100 ಮೊಬೈಲ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ರಚನೆ ಅನ್ನು ಪಡೆದಿರಲಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್‌ ಸೆನ್ಸಾರ್‌ ಇರಲಿದೆ. ದ್ವಿತೀಯ ಕ್ಯಾಮೆರಾ 12 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಅಲ್ಟ್ರಾ ವೈಡ್ ಆಂಗಲ್ ಕ್ಯಾಮೆರಾ ಮತ್ತು ತೃತೀಯ ಕ್ಯಾಮೆರಾ 12 ಮೆಗಾ ಪಿಕ್ಸೆಲ್‌ ಟೆಲಿಫೋಟೋ ಲೆನ್ಸ್‌ ಹೊಂದಿದೆ ಎನ್ನಲಾಗಿದೆ. ಇದಲ್ಲದೆ 32 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಪಡೆದಿರುವ ನಿರೀಕ್ಷೆ ಇದೆ.

ಇಂದು ಗ್ರ್ಯಾಂಡ್‌ ಎಂಟ್ರಿ ಕೊಡಲಿದೆ ವಿವೋದ ಈ ಹೊಸ ಸ್ಮಾರ್ಟ್‌ಫೋನ್‌!

ವಿವೋ X100 ಫೋನ್‌ 5000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಕೂಡಾ ಪಡೆದಿದ್ದು, ಇದು 120W ಫಾಸ್ಟ್‌ ಚಾರ್ಜಿಂಗ್ ಅನ್ನು ಸಪೋರ್ಟ್ ಮಾಡುತ್ತದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ, ಯುಎಸ್‌ಬಿ ಸಿ ಪೋರ್ಟ್‌, ಹೆಡ್‌ಫೋನ್‌ ಜ್ಯಾಕ್‌ ಅನ್ನು ಹೊಂದಿರಲಿದೆ ಎಂದು ಹೇಳಲಾಗಿದೆ.

ಲಾಂಚ್ ಡೇಟ್‌ ಹಾಗೂ ಲಭ್ಯತೆ

ಹಾಗೆಯೇ ಈ ನೂತನ ಫೋನ್‌ ಲೈಟ್‌ ಸೆನ್ಸಾರ್‌, ಪ್ರಾಕ್ಸಿಮಿಟಿ ಸೆನ್ಸಾರ್‌, ಅಕ್ಸಿಲೆರೋಮೀಟರ್‌, ಕಂಪಾಸ್‌, ಗೈರೋಸ್ಕೋಪ್‌ ಅನ್ನು ಹೊಂದಿರುವ ನಿರೀಕ್ಷೆ ಇದೆ. ಈ ಮೊಬೈಲ್‌ ಇಂದು ಜನೆವರಿ 4 ರಂದು ಮಾರುಕಟ್ಟೆಗೆ ಬಿಡುಗಡೆ ಆಗಲಿದೆ. ಫ್ಲಿಪ್‌ಕಾರ್ಟ್‌ ತಾಣದಲ್ಲಿ ಖರೀದಿಗೆ ಲಭ್ಯ ಆಗಲಿದೆ.

Best Mobiles in India

English summary
Vivo X100 series India launch today. specifications and all details here.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+