Home
ಸುದ್ದಿಜಾಲ

ಪ್ರತಿಸ್ಫರ್ಧಿಗಳ ಎದೆಬಡಿತ ಜೋರಾಗುವಂತೆ ಮಾಡಿದ ವಿವೋ X100! ಲಾಂಚ್‌ ಯಾವಾಗ?

ವಿವೋ ಕಂಪೆನಿಯ ಮತ್ತೊಂದು ಸ್ಮಾರ್ಟ್‌ಫೋನ್‌ ವಿವೋ X100 ಬಿಡುಗಡೆ ಮುನ್ನವೇ ಭಾರಿ ಸದ್ದು ಮಾಡುತ್ತಿದೆ. ಈ ಸ್ಮಾರ್ಟ್‌ಫೋನ್‌ನ ನಿರೀಕ್ಷಿತ ಫೀಚರ್ಸ್‌ಗಳು ಆನ್‌ಲೈನ್‌ನಲ್ಲಿ ಬಹಿರಂಗವಾದಾಗಿನಿಂದ ಸಂಚಲನ ಸೃಷ್ಟಿಸಿದೆ. ಇದೀಗ ಈ ಫೋನ್‌ನ ಬಿಡುಗಡೆ ದಿನಾಂಕ ಕೂಡ ಬಹಿರಂಗವಾಗಿದ್ದು, ಪ್ರತಿಸ್ಫರ್ಧಿ ಮೊಬೈಲ್‌ ಬ್ರ್ಯಾಂಡ್‌ಗಳಿಗೆ ಎದೆ ಬಡಿತ ಜೋರಾಗುವಂತೆ ಮಾಡಿದೆ.

ಹೌದು, ವಿವೋ X100 ಸ್ಮಾರ್ಟ್‌ಫೋನ್‌ ಮೊಬೈಲ್‌ ಮಾರುಕಟ್ಟೆಯಲ್ಲಿ ಹೊಸ ದಾಖಲೆ ಬರೆಯುವ ಸೂಚನೆ ನೀಡಿದೆ. ಈ ಫೋನ್‌ ನವೆಂಬರ್‌ 13ಕ್ಕೆ ಬಿಡುಗಡೆ ಆಗಲಿದೆ ಎಂಬ ಸುದ್ದಿ ಬಹಿರಂಗವಾಗ್ತಿದ್ದ ಹಾಗೇ ಭಾರಿ ಹಲ್‌ಚಲ್‌ ಸೃಷ್ಟಿಯಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 9300SoC ಪ್ರೊಸೆಸರ್‌ ವೇಗವನ್ನು ಹೊಂದಿರಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ ಒಳಗೊಂಡಿರಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಪ್ರತಿಸ್ಫರ್ಧಿಗಳ ಎದೆಬಡಿತ ಜೋರಾಗುವಂತೆ ಮಾಡಿದ ವಿವೋ X100! ಲಾಂಚ್‌ ಯಾವಾಗ?

ವಿವೋ X100 ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ವಿವೋ X100 ಸ್ಮಾರ್ಟ್‌ಫೋನ್‌ 6.82 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿರಲಿದೆ. ಈ ಡಿಸ್‌ಪ್ಲೇ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದಲ್ಲಿ ಬರುವ ನಿರೀಕ್ಷೆಯಿದೆ. ಇದು 386 ಪಿಪಿಐ ಪಿಕ್ಸೆಲ್ ಸಾಂದ್ರತೆಯನ್ನು ಒಳಗೊಂಡಿರಲಿದೆ ಎನ್ನಲಾಗಿದೆ. ಇನ್ನು ಡಿಸ್‌ಪ್ಲೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ v5 ಸ್ಕ್ರೀನ್ ಪ್ರೊಟೆಕ್ಷನ್‌ನಲ್ಲಿ ಬರುವ ನಿರೀಕ್ಷೆಯಿದೆ. ಇದಲ್ಲದೆ ಡಿಸ್‌ಪ್ಲೇ 120 Hz ರಿಫ್ರೆಶ್‌ ರೇಟ್‌ನೊಂದಿಗೆ ಬರಲಿದೆ ಎಂದು ಹೇಳಲಾಗಿದೆ.

ವಿವೋ X100 ಪ್ರೊಸೆಸರ್‌ ಯಾವುದು?
ವಿವೋ X100 ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 9300SoC ಪ್ರೊಸೆಸರ್‌ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್‌ 14 ನಲ್ಲಿ ರನ್ ಆಗಲಿದೆ, ಆದರೆ ಚೀನಾದಲ್ಲಿ ಹೊಸ ಮೂಲ OS 4 ನಲ್ಲಿ ರನ್ ಆಗುವ ನಿರೀಕ್ಷೆಯಿದೆ. ಹಾಗೆಯೇ 12GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿರಲಿದೆ ಎಂದು ಹೇಳಲಾಗಿದೆ. ಈ ಸ್ಮಾರ್ಟ್‌ಫೋನ್‌ ಮೆಮೊರಿ ಕಾರ್ಡ್‌ ಬೆಂಬಲಿಸುವುದಿಲ್ಲ ಎನ್ನಲಾಗಿದೆ.

ಪ್ರತಿಸ್ಫರ್ಧಿಗಳ ಎದೆಬಡಿತ ಜೋರಾಗುವಂತೆ ಮಾಡಿದ ವಿವೋ X100! ಲಾಂಚ್‌ ಯಾವಾಗ?

ವಿವೋ X100 ಕ್ಯಾಮೆರಾ ಸೆಟ್‌ಅಪ್‌ ಏನಿದೆ?
ವಿವೋ X100 ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್‌ ಸೆನ್ಸಾರ್‌ ಇರಲಿದೆ. ಎರಡನೇ ಕ್ಯಾಮೆರಾ 12 ಮೆಗಾಪಿಕ್ಸೆಲ್‌ ಸೆನ್ಸಾರ್‌ ಅಲ್ಟ್ರಾ-ವೈಡ್ ಆಂಗಲ್ ಕ್ಯಾಮೆರಾ ಮತ್ತು ಮೂರನೇ ಕ್ಯಾಮೆರಾ 12ಮೆಗಾಪಿಕ್ಸೆಲ್‌ ಟೆಲಿಫೋಟೋ ಲೆನ್ಸ್‌ ಹೊಂದಿದೆ ಎನ್ನಲಾಗಿದೆ. ಇದಲ್ಲದೆ 32 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿರುವ ನಿರೀಕ್ಷೆ ಇಡಲಾಗಿದೆ.

ವಿವೋ X100 ಬ್ಯಾಟರಿ ಮತ್ತು ಇತರೆ ಸೌಲಭ್ಯ
ವಿವೋ X100 ಸ್ಮಾರ್ಟ್‌ಫೋನ್‌ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 120W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ, ಯುಎಸ್‌ಬಿ ಸಿ ಪೋರ್ಟ್‌, ಹೆಡ್‌ಫೋನ್‌ ಜ್ಯಾಕ್‌ ಅನ್ನು ಹೊಂದಿರಲಿದೆ ಎಂದು ಹೇಳಲಾಗಿದೆ. ಇದಲ್ಲದೆ ಲೈಟ್‌ ಸೆನ್ಸಾರ್‌, ಪ್ರಾಕ್ಸಿಮಿಟಿ ಸೆನ್ಸಾರ್‌, ಅಕ್ಸಿಲೆರೋಮೀಟರ್‌, ಕಂಪಾಸ್‌, ಗೈರೋಸ್ಕೋಪ್‌ ಅನ್ನು ಹೊಂದಿರುವ ನಿರೀಕ್ಷೆಯಿದೆ.

ಪ್ರತಿಸ್ಫರ್ಧಿಗಳ ಎದೆಬಡಿತ ಜೋರಾಗುವಂತೆ ಮಾಡಿದ ವಿವೋ X100! ಲಾಂಚ್‌ ಯಾವಾಗ?

ವಿವೋ X100 ಬೆಲೆ ಮತ್ತು ಲಭ್ಯತೆ
ಈ ಸ್ಮಾರ್ಟ್‌ಫೋನ್‌ ನವೆಂಬರ್ 13 ರಂದು ಮೊದಲಿಗೆ ಚೀನಾದಲ್ಲಿ ಬಿಡುಗಡೆ ಆಗಲಿದೆ ಎನ್ನಲಾಗಿದೆ. ಇನ್ನು ಇದರ ಬೆಲೆ ವಿವರಗಳ ಬಗ್ಗೆ ಯಾವುದೇ ಮಾಹಿತಿ ಬಹಿರಂಗವಾಗಿಲ್ಲ. ಈ ಸ್ಮಾರ್ಟ್‌ಫೋನ್‌ ಕಲರ್‌ ಆಯ್ಕೆಗಳ ಬಗ್ಗೆ ಕೂಡ ಯಾವುದೇ ಮಾಹಿತಿಯಿಲ್ಲ. ಜೊತೆಗೆ ಭಾರತಕ್ಕೆ ಎಂಟ್ರಿ ನೀಡುವ ಬಗ್ಗೆ ಸಹ ಮಾಹಿತಿಯನ್ನು ಬಹಿರಂಗಪಡಿಸಿಲ್ಲ.

Best Mobiles in India

English summary
Vivo X100 Smartphone Launch Date Revealed: Expected Details in kannada
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+