ನಾಳೆ Vivo X200 5G ಫಸ್ಟ್ ಸೇಲ್; ಮೊದಲ ದಿನ ಖರೀದಿಸಿದ್ರೆ 7,200 ಡಿಸ್ಕೌಂಟ್! ಬೆಲೆ ಎಷ್ಟು?
ವಿವೋ ಪ್ರಿಯರಿಗೆ ಸಿಹಿಸುದ್ದಿ ಇದೆ. ನಾಳೆ ಹೊಸ ವಿವೋ ಫೋನ್ ಅಧಿಕೃತವಾಗಿ ಗ್ರಾಹಕರ ಕೈ ಸೇರಲಿದೆ. ಹೌದು, ಕಂಪನಿಯು ಇತ್ತೀಚೆಗೆ ವಿವೋ X200 ಸರಣಿಯನ್ನು ದೇಶಿಯ ಮಾರುಕಟ್ಟೆಗೆ ಪರಿಚಯಿಸಿದೆ. ಈ ಸರಣಿಯಲ್ಲಿ ಬಹುನಿರೀಕ್ಷಿತ ವಿವೋ X200 5G (Vivo X200 5G) ಫೋನ್ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ಅಂದಹಾಗೆ, ಈ ಮೊಬೈಲ್ ನಾಳೆಯಿಂದ (ಡಿಸೆಂಬರ್ 19) ತನ್ನ ಮೊದಲ ಮಾರಾಟವನ್ನು ಪ್ರಾರಂಭಿಸಲಿದೆ. ಬನ್ನಿ, ಈ ಫೋನಿನ ಬೆಲೆ, ಆಫರ್‌ಗಳು ಮತ್ತು ವಿಶೇಷತೆಗಳನ್ನು ತಿಳಿಯೋಣ.
ವಿವೋ X200 5G ಸ್ಮಾರ್ಟ್‌ಫೋನ್ ಎರಡು ಸ್ಟೋರೇಜ್ ಆಯ್ಕೆಗಳಲ್ಲಿ ಮಾರಾಟವಾಗಲಿದೆ. ನೀವು, ಕಾಸ್ಮೊಸ್ ಬ್ಲಾಕ್ ಮತ್ತು ನ್ಯಾಚುರಲ್ ಗ್ರೀನ್ ಬಣ್ಣಗಳಲ್ಲಿ ಖರೀದಿಸಬಹುದು. ಈ ಫೋನ್ 50 ಮೆಗಾಪಿಕ್ಸೆಲ್ ಟ್ರಿಪಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದು ಮೀಡಿಯಾಟೆಕ್ ಡೈಮೆನ್ಸಿಟಿ 9400 ಪ್ರೊಸೆಸರ್‌ನಲ್ಲಿ ಕೆಲಸ ನಿರ್ವಹಿಸುತ್ತದೆ. ಫೋನಿನಲ್ಲಿ 6.67 ಇಂಚಿನ ಡಿಸ್ಪ್ಲೇ ಲಭ್ಯವಿದೆ. ಹಾಗೆಯೇ 16GB + 512GB ಸ್ಟೋರೇಜ್, 5800mAh ಬ್ಯಾಟರಿ ಮತ್ತು 90W ಫಾಸ್ಟ್ ಚಾರ್ಜಿಂಗ್ ಸೇರಿದಂತೆ ಹಲವು ವೈಶಿಷ್ಟ್ಯಗಳೊಂದಿಗೆ ಮಾರಾಟಕ್ಕೆ ಸಜ್ಜಾಗಿದೆ.

ವಿವೋ X200 5G ಫೋನಿನ ಬೆಲೆ ಮತ್ತು ಆಫರ್‌ಗಳು
ವಿವೋ X200 5G ಫೋನಿನ 12GB+256GB ಸ್ಟೋರೇಜ್ ರೂಪಾಂತರವನ್ನು 65,999 ರೂ.ಗೆ ಮಾರಾಟ ಮಾಡಲಿದೆ. ಹಾಗೆಯೇ 16GB+512GB ಸ್ಟೋರೇಜ್ ಆಯ್ಕೆಯ ಬೆಲೆ ಬರೋಬ್ಬರಿ 71,999 ರೂ. ಇದೆ. ನೀವು, ಹೆಚ್‌ಡಿಎಫ್‌ಸಿ ಬ್ಯಾಂಕ್, ಎಸ್‌ಬಿಐ ಮತ್ತು ಫ್ಲಿಪ್‌ಕಾರ್ಟ್ ಆಕ್ಸಿಸ್ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಪಾವತಿ ಮೇಲೆ 7,200 ರೂ.ಗಳ ಡಿಸ್ಕೌಂಟ್ ಪಡೆಯಬಹುದು. ಕಂಪನಿಯು ಈಗಾಗಲೇ, ಮುಂಗಡ ಬುಕಿಂಗ್‌ಗೆ ಅವಕಾಶ ಕಲ್ಪಿಸಿದೆ. ಈ ಫೋನ್ ನಾಳೆ (ಡಿಸೆಂಬರ್ 19) ಅಮೆಜಾನ್ ಮತ್ತು ವಿವೋ ಇಂಡಿಯಾ ಇ-ಸ್ಟೋರ್ ಮೂಲಕ ಮಾರಾಟವಾಗಲಿದೆ.
ವಿವೋ X200 5G ವೈಶಿಷ್ಟ್ಯಗಳು
ಡಿಸ್ಪ್ಲೇ ಹೇಗಿದೆ
ವಿವೋ X200 5G ಮೊಬೈಲ್ 6.67 ಇಂಚಿನ ಡಿಸ್ಪ್ಲೇ ಹೊಂದಿದೆ. ಇದು 120Hz ರಿಫ್ರೆಶ್ ದರ ಮತ್ತು 4500 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಪಡೆದಿದೆ. ಹಾಗೆಯೇ ಆಪ್ಟಿಕಲ್ ಇನ್ ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸಂವೇದಕ ಹೊಂದಿದೆ.
ಪ್ರೊಸೆಸರ್ ಯಾವುದು?
ಕಂಪನಿಯು ವಿವೋ X200 5G ಫೋನನ್ನು ಮೀಡಿಯಾಟೆಕ್ ಡೈಮೆನ್ಸಿಟಿ 9400 ಪ್ರೊಸೆಸರ್‌ನೊಂದಿಗೆ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ ಆಂಡ್ರಾಯ್ಡ್ 15 ಆಧಾರಿತ FunTouch ಆಪರೇಟಿಂಗ್ ಸಿಸ್ಟಮ್‌ನಲ್ಲಿ ಕೆಲಸ ಮಾಡುತ್ತದೆ. ಇದು 16GB RAM ಮತ್ತು 512GB ಸ್ಟೋರೇಜ್ ಆಯ್ಕೆ ಹೊಂದಿದೆ.

ಟ್ರಿಪಲ್ ಕ್ಯಾಮೆರಾ ಸೆಟಪ್
ಹೊಸ ವಿವೋ X200 5G ಸ್ಮಾರ್ಟ್‌ಫೋನ್ ಟ್ರಿಪಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ OIS ಬೆಂಬಲದೊಂದಿಗೆ 50 ಮೆಗಾಪಿಕ್ಸೆಲ್ ಸೋನಿ ಮುಖ್ಯ ಕ್ಯಾಮೆರಾ ಇದೆ. ಜೊತೆಗೆ 50 ಮೆಗಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಮತ್ತು 50 ಮೆಗಾಪಿಕ್ಸೆಲ್ ತೃತೀಯ ಕ್ಯಾಮೆರಾ ಹೊಂದಿದೆ. ಈ ಫೋನಿನಲ್ಲಿ ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, 32 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಇದೆ.
ಬ್ಯಾಟರಿ ಮತ್ತು ಚಾರ್ಜಿಂಗ್
ನೂತನ ವಿವೋ X200 5G ಫೋನ್ 5800mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 90W ವೈರ್ಡ್ ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ.
ಇತರ ವೈಶಿಷ್ಟ್ಯಗಳು
ವಿವೋ X200 5G ಮೊಬೈಲ್ ನೀರು ಮತ್ತು ಧೂಳಿನ ವಿರುದ್ಧ ರಕ್ಷಣೆಗಾಗಿ IP68 + 69 ರೇಟಿಂಗ್ ಪಡೆದಿದೆ. ಇದು ಸರ್ಕಲ್ ಟು ಸರ್ಚ್, ಇನ್ ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸರ್, ಎನ್‌ಎಫ್‌ಸಿ, ವೈ-ಫೈ ಸೇರಿದಂತೆ ಹಲವು ಸೌಲಭ್ಯಗಳನ್ನು ಒಳಗೊಂಡಿದೆ.


Click it and Unblock the Notifications








