Home
ಸುದ್ದಿಜಾಲ

ವಿವೋ x50 ಪ್ರೊ ಸ್ಮಾರ್ಟ್‌ಫೋನ್‌ ಬಿಡುಗಡೆಗೆ ಸಿದ್ದತೆ!

ಟೆಕ್‌ ವಲಯದಲ್ಲಿ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿರುವ ವಿವೋ ತನ್ನ ವಿಶೇಷ ಫೀಚರ್ಸ್‌ಗಳಿಂದಲೇ ಸೈ ಎನಿಸಿಕೊಂಡಿದೆ. ಈಗಾಗಲೇ ಹಲವು ಮಾದರಿಯ ಸ್ಮಾರ್ಟ್‌ಫೊನ್‌ಗಳನ್ನ ಬಿಡುಗಡೆ ಮಾಡಿ ಸ್ಮಾರ್ಟ್‌ಫೋನ್‌ ಪ್ರಿಯರಿಂದ ಮೆಚ್ಚುಗೆ ಪಡೆದುಕೊಂಡಿರುವ ವಿವೋ ಇದೀಗ ತನ್ನ ಮತ್ತೊಂದು ಹೊಸ ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಲು ಸಿದ್ದತೆ ನಡೆಸಿದೆ.

ವಿವೋ X50

ಹೌದು, ಜನಪ್ರಿಯ ಸ್ಮಾರ್ಟ್‌ಫೋನ್‌ ತಯಾರಕ ವಿವೋ ತನ್ನ ಹೊಸ ವಿವೋ X50 ಪ್ರೊ ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಲು ಸಿದ್ದತೆ ನಡೆಸಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಮುಂದಿನ ತಿಂಗಳು ಜುಲೈ ಮಧ್ಯದಲ್ಲಿ ಭಾರತದಲ್ಲಿ ಬಿಡುಗಡೆಯಾಗಲಿದೆ ಎಂದು ವರದಿಯಾಗಿದೆ. ಇನ್ನು ವಿವೋ x50 ಪ್ರೊ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 765G SoC ಪ್ರೊಸೆಸರ್‌ ಅನ್ನು ಹೊಂದಿರಲಿದೆ ಎನ್ನಲಾಗ್ತಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್‌ ಕ್ವಾಡ್ ಕ್ಯಾಮೆರಾ ಸೆಟ್‌ಅಪ್ ಹೊಂದಿರಲಿದೆ ಎನ್ನಲಾಗ್ತಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ವಿಶೇಷತೆ ಹಾಗೂ ವಿನ್ಯಾಸ ಹೇಗಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ

ಡಿಸ್‌ಪ್ಲೇ

ವಿವೋ x50 ಪ್ರೊ ಸ್ಮಾರ್ಟ್‌ಫೋನ್‌ 1080x2376 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.56-ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನ ಹೊಂದಿದೆ. ಇನ್ನು ಈ ಡಿಸ್‌ಪ್ಲೇಯು ಅಮೋಲೆಡ್ ಬಾಗಿದ ಅಂಚಿನ ಡಿಸ್‌ಪ್ಲೇಯನ್ನ ಹೊಂದಿದೆ ಎಂದು ಅಂದಾಜಿಸಲಾಗಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 765G SoC ಪ್ರೊಸೆಸರ್‌ ವೇಗವನ್ನು ಪಡೆದುಕೊಂಡಿರಲಿದ್ದು, ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ ಎನ್ನಲಾಗ್ತಿದೆ. ಹಾಗೇಯೇ ಈ ಸ್ಮಾರ್ಟ್‌ಫೋನ್‌ 8GB RAM ಮತ್ತು 256GB ಆಂತರಿಕ ಸಾಮರ್ಥ್ಯವನ್ನ ಹೊಂದಿರಲಿದೆ ಎನ್ನಲಾಗ್ತಿದೆ.

ಕ್ಯಾಮೆರಾ ವಿನ್ಯಾಸ

ಕ್ಯಾಮೆರಾ ವಿನ್ಯಾಸ

ವಿವೋ x50 ಪ್ರೊ ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್‌, ಮೂರನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಟೆಲಿಫೋಟೋ ಸೆನ್ಸಾರ್‌, ಮತ್ತು ನಾಲ್ಕನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿರಲಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಇನ್ನು ಈ ಸ್ಮಾರ್ಟ್‌ಫೋನ್ 4,315mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಹೊಂದಿದ್ದು, 33W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಯುಎಸ್‌ಬಿ ಟೈಪ್-ಸಿ, ವೈ-ಫೈ, ಬ್ಲೂಟೂತ್ ವಿ 5.1 ಅನ್ನು ಬೆಂಬಲಿಸಲಿದೆ ಎಂದು ನಿರೀಕ್ಷಿಸಲಾಗಿದೆ. ಇದಲ್ಲದೆ ಇನ್-ಡಿಸ್‌ಪ್ಲೇ ಫಿಂಗರ್‌ಪ್ರಿಂಟ್‌ ಸ್ಕ್ಯಾನರ್ ಅನ್ನು ಹೊಂದಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ವಿವೋ x50 ಪ್ರೊ ಸ್ಮಾರ್ಟ್‌ಫೋನ್‌ ಚೀನಾದಲ್ಲಿ 8GB RAM + 128GB ಶೇಖರಣಾ ಆಯ್ಕೆಗೆ CNY 4,298 (ಸುಮಾರು ರೂ. 45,600) ಮತ್ತು 8GB RAM + 256GB ಶೇಖರಣಾ ಆಯ್ಕೆಗೆ CNY 4,698 (ಸುಮಾರು ರೂ. 49,800)ಬೆಲೆಯನ್ನ ಹೊಂದಿರಲಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ ಬ್ಲ್ಯಾಕ್ ಮಿರರ್ ಮತ್ತು ಲಿಕ್ವಿಡ್ ಆಕ್ಸಿಜನ್ ಕಲರ್ ಆಯ್ಕೆಗಳಲ್ಲಿ ಲಭ್ಯವಾಗಲಿದೆ ಎನ್ನಲಾಗ್ತಿದೆ.

Best Mobiles in India

English summary
Vivo X50 Pro is reported to launch in India sometime in middle of July.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+