Home
ಸುದ್ದಿಜಾಲ

ವಿವೋ X50 ಸರಣಿಯ ಮೂರು ಹೊಸ ಸ್ಮಾರ್ಟ್‌ಫೋನ್‌ ಲಾಂಚ್‌!

ಟೆಕ್‌ ವಲಯದಲ್ಲಿ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿರುವ ವಿವೋ ಕಂಪೆನಿ ತನ್ನ ಹೊಸ ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿದೆ. ಸದ್ಯ ಬಹು ನಿರೀಕ್ಷಿತ ವಿವೋ x50 ಸರಣಿಯ ಸ್ಮಾರ್ಟ್‌ಫೋನ್‌ಗಳನ್ನ ಬಿಡುಗಡೆ ಮಾಡಿದೆ. ಸದ್ಯ ವಿವೋ ಕಂಪೆನಿ ತನ್ನ ವಿವೋ X50 ಪ್ರೊ +, ವಿವೊ X50 ಪ್ರೊ ಮತ್ತು ವಿವೋ X50 ಫೋನ್‌ಗಳನ್ನ ಅಧಿಕೃತವಾಗಿ ಬಿಡುಗಡೆ ಮಾಡಿದೆ. ಇನ್ನು ಮೂರು ಹೊಸ ವಿವೋ ಫೋನ್‌ಗಳು 5G ನೆಟ್‌ವರ್ಕ್‌ ಅನ್ನು ಬೆಂಬಲಿಸುತ್ತವೆ ಎನ್ನಲಾಗ್ತಿದೆ.

ವಿವೊ X50

ಹೌದು, ಚೀನಾದ ಜನಪ್ರಿಯ ಸ್ಮಾರ್ಟ್‌ಫೋನ್‌ ತಯಾರಕ ವಿವೋ ಕಂಪೆನಿ ತನ್ನ x50 ಸರಣಿಯಲ್ಲಿ ಮೂರು ಹೊಸ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿದೆ. ಇನ್ನು ಈ ಸ್ಮಾರ್ಟ್‌ಫೋನ್‌ಗಳು ಪಂಚ್‌ ಹೋಲ್‌ ಡಿಸ್‌ಪ್ಲೇ ವಿನ್ಯಾಸವನ್ನ ಹೊಂದಿವೆ. ಇದರಲ್ಲಿ ವಿವೊ X50 ಪ್ರೊ + ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 865 SoC ಪ್ರೊಸೆಸರ್‌ ಹೊಂದಿದೆ, ಆದರೆ ವಿವೋ X50 ಮತ್ತು ವಿವೊ X50 ಪ್ರೊ ಸ್ಮಾರ್ಟ್‌ಫೋನ್‌ಗಳು ಸ್ನಾಪ್‌ಡ್ರಾಗನ್ 765G SoC ಪ್ರೊಸೆಸರ್‌ ವೇಗವನ್ನ ಪಡೆದುಕೊಂಡಿವೆ. ಇನ್ನು ಈ ಸ್ಮಾರ್ಟ್‌ಫೋನ್‌ಗಳ ವಿನ್ಯಾಸ ಹಾಗೂ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ವಿವೋ X50 ಸ್ಮಾರ್ಟ್‌ಫೋನ್‌

ವಿವೋ X50 ಸ್ಮಾರ್ಟ್‌ಫೋನ್‌

ವಿವೋ X50 ಸ್ಮಾರ್ಟ್‌ಫೋನ್‌ 1,080x2,376 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.56-ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇಯನ್ನ ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 765 G SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್ 10 ಆಧಾರಿತ ಫಂಟೌಚ್ ಓಎಸ್ 10.5 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೇಯೇ 8GB RAM ಮತ್ತು 256GB ಇಂಟರ್‌ ಸ್ಟೊರೇಜ್‌ ಸಾಮರ್ಥ್ಯವನ್ನ ಹೊಂದಿರಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಡ್ ರಿಯರ್‌ ಕ್ಯಾಮೆರಾ ಸೆಟ್‌ಅಪ್ ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಎರಡನೇ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್‌, ಮೂರನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ವೈಡ್-ಆಂಗಲ್ ಸೆನ್ಸಾರ್‌ ಮತ್ತು ನಾಲ್ಕನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಮ್ಯಾಕ್ರೋ ಕ್ಯಾಮೆರಾ ಸೆನ್ಸಾರ್‌ ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ. ಇನ್ನು 4,200mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಹೊಂದಿದ್ದು, ಇದು 33W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.

ವಿವೋ X50 ಪ್ರೊ ಸ್ಮಾರ್ಟ್‌ಫೋನ್‌

ವಿವೋ X50 ಪ್ರೊ ಸ್ಮಾರ್ಟ್‌ಫೋನ್‌

ವಿವೋ ಎಕ್ಸ್ 50 ಪ್ರೊ ಸ್ಮಾರ್ಟ್‌ಫೋನ್‌ 6.56-ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇಯನ್ನ ಹೊಂದಿದ್ದು, 92.6% ಸ್ಕ್ರೀನ್-ಟು-ಬಾಡಿ ಅನುಪಾತವನ್ನ ಹೊಂದಿದೆ. ಅಲ್ಲದೆ ಇದು ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 765G SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್ 10 ಆಧಾರಿತ ಫಂಟೌಚ್ ಓಎಸ್ 10.5 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 8GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನ ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಡ್ ರಿಯರ್‌ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್‌, ಮೂರನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಟೆಲಿಫೋಟೋ ಸೆನ್ಸಾರ್‌, ಮತ್ತು ನಾಲ್ಕನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್‌ ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 4,315mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದ್ದು, ಇದು 33W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.

ವಿವೊ X50 ಪ್ರೊ + ಸ್ಮಾರ್ಟ್‌ಫೋನ್‌

ವಿವೊ X50 ಪ್ರೊ + ಸ್ಮಾರ್ಟ್‌ಫೋನ್‌

ವಿವೊ X50 ಪ್ರೊ + ಸ್ಮಾರ್ಟ್‌ಫೋನ್‌ 6.56 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 865 SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್ 10 ಆಧಾರಿತ ಫಂಟೌಚ್ ಓಎಸ್ 10.5 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಇದು ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್‌, ಮೂರನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್‌, ನಾಲ್ಕನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯವನ್ನ ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ. 4315mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದೆ. ಅಲ್ಲದೆ ಇದು 44W ವೇಗದ ಚಾರ್ಜಿಂಗ್ ಅನ್ನು ಸಹ ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ವಿವೊ X50 ಸ್ಮಾರ್ಟ್‌ಫೋನ್‌ 8GB RAM + 128GB ಶೇಖರಣಾ ಆಯ್ಕೆಗೆ CNY 3,498 (ಸುಮಾರು ರೂ. 37,100), ಮತ್ತು 8GB RAM + 256GB ಆಯ್ಕೆಗೆ CNY 3,898 (ಸುಮಾರು ರೂ. 41,300) ಬೆಲೆಯನ್ನ ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಬ್ಲ್ಯಾಕ್ ಮಿರರ್, ಲಿಕ್ವಿಡ್ ಆಕ್ಸಿಜನ್ ಕಲರ್‌ ಆಯ್ಕೆಗಳಲ್ಲಿ ಲಬ್ಯವಾಗಲಿದ್ದು, ಇದೇ ಜೂನ್ 6 ರಿಂದ ಮಾರಾಟವಾಗಲಿದೆ.

ವಿವೋ X50 ಪ್ರೊ ಸ್ಮಾರ್ಟ್‌ಫೋನ್‌ 8GB RAM + 128GB ಶೇಖರಣಾ ಆಯ್ಕೆಗೆ CNY 4,298 (ಸುಮಾರು ರೂ. 45,600) ಮತ್ತು 8GB RAM + 256GB ಶೇಖರಣಾ ಆಯ್ಕೆಗೆ CNY 4,698 (ಸುಮಾರು ರೂ. 49,800) ಬೆಲೆಯನ್ನ ನಿಗದಿ ಪಡಿಸಲಾಗಿದೆ. ಈ ಸ್ಮಾರ್ಟ್‌ಫೋನ್ ಬ್ಲ್ಯಾಕ್ ಮಿರರ್ ಮತ್ತು ಲಿಕ್ವಿಡ್ ಆಕ್ಸಿಜನ್ ಕಲರ್ ಆಯ್ಕೆಯಲ್ಲಿ ಲಭ್ಯವಿರಲಿದೆ. ಇದು ಜೂನ್ 12 ರಿಂದ ಮಾರಾಟವಾಗಲಿದೆ.

ವಿವೊ X50 ಪ್ರೊ + ಸ್ಮಾರ್ಟ್‌ಫೋನ್‌ 8GB RAM + 128GB ಶೇಖರಣಾ ಆಯ್ಕೆಗೆ CNY 4,998 (ಸುಮಾರು ರೂ. 53,000), 8GB RAM+ 256GB ಶೇಖರಣಾ ಆಯ್ಕೆಗೆ CNY 5,498 (ಸರಿಸುಮಾರು 58,300 ರೂ.) ಮತ್ತು12GB + 256GB ಶೇಖರಣಾ ಆಯ್ಕೆಗೆ CNY 5,998 (ಸರಿಸುಮಾರು ರೂ. 63,300) ಬೆಲೆಯನ್ನ ಹೊಂದಿದೆ.

Best Mobiles in India

English summary
Vivo X50 Pro + is powered by the Snapdragon 865 SoC, whereas the Vivo X50 and Vivo X50 Pro phones use Snapdragon 765G SoC.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+