ವಿವೋ X50 ಸ್ಮಾರ್ಟ್‌ಫೋನ್‌ ಲಾಂಚ್!..ಬೆಲೆ ಎಷ್ಟು?..ಫೀಚರ್ಸ್‌ ಏನು?

|

ವಿವೋ ಮೊಬೈಲ್ ಕಂಪೆನಿಯ ಬಹುನಿರೀಕ್ಷಿತ ವಿವೋ X50 ಸ್ಮಾರ್ಟ್‌ಫೋನ್‌ ಸರಣಿ ಇದೀಗ ಭಾರತದಲ್ಲಿ ಬಿಡುಗಡೆ ಆಗಿದೆ. ಈ ಸರಣಿಯು ವಿವೋ X50 ಮತ್ತು ವಿವೊ X50 ಪ್ರೊ ಫ್ಲ್ಯಾಗ್‌ಶಿಪ್‌ ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನು ಒಳಗೊಂಡಿದೆ. ಈ ಎರಡು ಸ್ಮಾರ್ಟ್‌ಫೋನ್‌ಗಳು ಅಧಿಕ RAM, ವೇಗದ ಪ್ರೊಸೆಸರ್‌ ಸಾಮರ್ಥ್ಯ ಮತ್ತು ಕ್ಯಾಮೆರಾ ಫೀಚರ್ಸ್‌ಗಳಿಂದ ಗಮನ ಸೆಳೆದಿವೆ. ಹಾಗೆಯೇ ಕರ್ವ್ ಡಿಸ್‌ಪ್ಲೇ ಮತ್ತೊಂದು ಆಕರ್ಷಣೆ ಎನಿಸಿದೆ.

ವಿವೋ X50

ಹೌದು, ವಿವೋ ಸಂಸ್ಥೆಯು ತನ್ನ ವಿವೋ X50 ಮತ್ತು ವಿವೋ X50 ಪ್ರೊ ಸ್ಮಾರ್ಟ್‌ಫೋನ್‌ಗಳನ್ನ ಬಿಡುಗಡೆ ಮಾಡಿದೆ. ಅವುಗಳಲ್ಲಿ ವಿವೋ X50 ಸ್ಮಾರ್ಟ್‌ಫೋನ್‌ ಫ್ಲ್ಯಾಟ್‌ ಅಲ್ಟ್ರಾ O ಸ್ಕ್ರೀನ್‌ ಹೊಂದಿದೆ. ಸ್ನ್ಯಾಪ್‌ಡ್ರಾಗನ್ 765G SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದ್ದು, ಅದಕ್ಕೆ ಪೂರಕವಾಗಿ ಆಂಡ್ರಾಯ್ಡ್ 10 ಓಎಸ್‌ ಹೊಂದಿದೆ. ಫ್ರಾಸ್ಟ್ ಬ್ಲೂ ಮತ್ತು ಗ್ಲ್ಯಾಂಜ್ ಬ್ಲ್ಯಾಕ್ ಬಣ್ಣಗಳ ಆಯ್ಕೆಯನ್ನು ಪಡೆದಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಬೆಲೆ ಎಷ್ಟು ಮತ್ತು ಯಾವೆಲ್ಲಾ ಫೀಚರ್ಸ್‌ ಹೊಂದಿದೆ ಎಂಬುದನ್ನು ಮುಂದಿನ ಸ್ಲೈಡರ್‌ಗಳಲ್ಲಿ ಓದಿರಿ.

ಡಿಸ್‌ಪ್ಲೇ ರಚನೆ

ಡಿಸ್‌ಪ್ಲೇ ರಚನೆ

ವಿವೋ X50 ಸ್ಮಾರ್ಟ್‌ಫೋನ್‌ 1080x2376 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯ ಹೊಂದಿರುವ 6.56 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನ ಹೊಂದಿದೆ. ಡಿಸ್‌ಪ್ಲೇಯು ಫ್ಲ್ಯಾಟ್‌ ಅಲ್ಟ್ರಾ O ಸ್ಕ್ರೀನ್‌ ರಚನೆಯನ್ನು ಪಡೆದಿದೆ. ಇನ್ನು ಡಿಸ್‌ಪ್ಲೇಯು 90Hz ರಿಫ್ರೆಶ್ ರೇಟ್‌ ಅನ್ನು ಹೊಂದಿದ್ದು, 180Hz ಟಚ್‌ ರೆಸ್ಪಾನ್ಸ್‌ ರೇಟ್ ಒಳಗೊಂಡಿದೆ. ಹಾಗೆಯೇ HDR 10+ ಸಪೋರ್ಟ್‌ ಸಹ ಪಡೆದುಕೊಂಡಿದೆ.

ಪ್ರೊಸೆಸರ್‌ ಕಾರ್ಯ

ಪ್ರೊಸೆಸರ್‌ ಕಾರ್ಯ

ವಿವೋ X50 ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನ್ಯಾಪ್‌ಡ್ರಾಗನ್ 765G SoC ಪ್ರೊಸೆಸರ್ ಹೊಂದಿದೆ. ಪೂರಕವಾಗಿ ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. 8GB RAM + 128GB ಮತ್ತು 8GB RAM + 256GB ಆಂತರಿಕ ಸಂಗ್ರಹ ಸಾಮರ್ಥ್ಯ ಹೊಂದಿರುವ ಎರಡು ವೇರಿಯೆಂಟ್‌ ಆಯ್ಕೆಯನ್ನ ಹೊಂದಿದೆ. ಎಸ್‌ಡಿ ಕಾರ್ಡ್‌ ಮೂಲಕ ಮೆಮೊರಿ ವಿಸ್ತರಿಸುವ ಆಯ್ಕೆ ಇಲ್ಲ.

ಕ್ವಾಡ್ ಕ್ಯಾಮೆರಾ

ಕ್ವಾಡ್ ಕ್ಯಾಮೆರಾ

ವಿವೋ X50 ಸ್ಮಾರ್ಟ್‌ಫೋನ್‌ ಕ್ವಾಡ್ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿದ್ದು. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೋನಿ IMX598 ಸೆನ್ಸಾರ್‌ ಪಡೆದಿದೆ. ಎರಡನೇ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೂಪರ್ ವೈಲ್ಡ್‌ ಆಂಗಲ್ ಲೆನ್ಸ್‌ ಹೊಂದಿದೆ. ಮೂರನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್ ಮತ್ತು ನಾಲ್ಕನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇನ್ನು ಸೆಲ್ಫಿ ಕ್ಯಾಮೆರಾ 32 ಮೆಗಾಪಿಕ್ಸೆಲ್ ಸೆನ್ಸಾರ್‌ ನೀಡಲಾಗಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ವಿವೋ X50 ಸ್ಮಾರ್ಟ್‌ಫೋನ್‌ 4,315mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಹೊಂದಿದ್ದು, ಇದು 33W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್, ಹಾಟ್‌ಸ್ಪಾಟ್‌, ವೈಫೈ, ಡಿಸ್‌ಪ್ಲೇಯಲ್ಲಿ ಫಿಂಗರ್‌ಪ್ರಿಂಟ್ ಸೆನ್ಸಾರ್, ಜಿಪಿಎಸ್‌, 3.5mm ಆಡಿಯೊ ಜ್ಯಾಕ್‌ಗೆ ಬೆಂಬಲ ನೀಡಲಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ವಿವೋ X50 ಸ್ಮಾರ್ಟ್‌ಫೋನ್‌ 8GB RAM + 128GB ವೇರಿಯಂಟ್ ಬೆಲೆಯು 34,990ರೂ. ಮತ್ತು 8GB RAM + 256GB ವೇರಿಯಂಟ್ ಬೆಲೆಯು 37,990ರೂ.ಗಳಾಗಿದೆ. ಇಂದನಿಂದ ಪ್ರಿ-ಆರ್ಡರ್ ಮಾಡಬಹುದಾಗಿದ್ದು, ಇದೇ ಜುಲೈ 24 ಆನ್‌ಲೈನ್‌-ಆಫ್‌ಲೈನ್‌ ಮೂಲಕ ಖರೀದಿಗೆ ಲಭ್ಯವಾಗಲಿದೆ. ಹಾಗೆಯೇ ರಿಲಾಯನ್ಸ್‌ ಡಿಜಿಟಲ್ ಸೇರಿದಂತೆ ಕ್ರೋಮಾ, ಫ್ಲಿಪ್‌ಕಾರ್ಟ್, ಅಮೆಜಾನ್, ವಿಜಯ್ ಸೇಲ್ಸ್, ಪೇಟಿಎಂ ಮಾಲ್, ಮತ್ತು ಟಾಟಾ ಕ್ಲಿಕ್ ತಾಣಗಳಲ್ಲಿಯೂ ಲಭ್ಯ.

Most Read Articles
Best Mobiles in India

English summary
Vivo X50 Has been launched in India as the company's latest flagship smartphone.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X