Home
ಸುದ್ದಿಜಾಲ

ವಿವೋ X50e 5G ಸ್ಮಾರ್ಟ್‌ಫೋನ್ ಬಿಡುಗಡೆ!..ಕ್ವಾಡ್‌ ಕ್ಯಾಮೆರಾ!

ಜನಪ್ರಿಯ ವಿವೋ ಕಂಪನಿಯು ಈಗಾಗಲೇ ಭಿನ್ನ ಸರಣಿಯ ಸ್ಮಾರ್ಟ್‌ಫೋನ್‌ಗಳನ್ನು ಲಾಂಚ್ ಮಾಡಿ ಮಾರುಕಟ್ಟೆಯಲ್ಲಿ ಗುರುತಿಸಿಕೊಂಡಿದೆ. ಇತ್ತೀಚಿಗಷ್ಟೆ ವಿವೋ X50 ಸರಣಿಯನ್ನು ಬಿಡುಗಡೆ ಮಾಡಿರುವ ಸಂಸ್ಥೆಯು ಇದೀಗ ವಿವೋ X50e 5G ಸ್ಮಾರ್ಟ್‌ಫೋನ್ ಅನ್ನು ತೈವಾನ್‌ನಲ್ಲಿ ಅನಾವರಣ ಮಾಡಿದೆ.

ವಿವೋ X50e 5G

ಹೌದು, ವಿವೋ ಕಂಪನಿಯು ಹೊಸದಾಗಿ ವಿವೋ X50e 5G ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ ಸ್ನ್ಯಾಪ್‌ಡ್ರಾಗನ್ 765G SoC ಪ್ರೊಸೆಸರ್‌ ಅನ್ನು ಒಳಗೊಂಡಿದ್ದು, 8GB RAM ಸಾಮರ್ಥ್ಯದ ಆಯ್ಕೆಯನ್ನು ಹೊಂದಿದೆ. ಇದರೊಂದಿಗೆ ಕ್ವಾಡ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಸಹ ಪಡೆದಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನಿನ ಫೀಚರ್ಸ್‌ಗಳ ಬಗ್ಗೆ ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ರಚನೆ

ಡಿಸ್‌ಪ್ಲೇ ರಚನೆ

ವಿವೋ X50e 5G ಸ್ಮಾರ್ಟ್‌ಫೋನ್ 1080x2400 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.44 ಇಂಚಿನ ಸೂಪರ್ AMOLED ಡಿಸ್‌ಪ್ಲೇಯನ್ನು ಹೊಂದಿದ್ದು, ಡಿಸ್‌ಪ್ಲೇಯ ಅನುಪಾತವು 20:9 ಆಗಿದೆ.

ಪ್ರೊಸೆಸರ್‌ ಹೇಗಿದೆ

ಪ್ರೊಸೆಸರ್‌ ಹೇಗಿದೆ

ವಿವೋ X50e 5G ಸ್ಮಾರ್ಟ್‌ಫೋನ್ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 765G SoC ಪ್ರೊಸೆಸರ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 10 ಓಎಸ್‌ನ ಸಪೋರ್ಟ್‌ ಪಡೆದುಕೊಂಡಿದೆ. ಹಾಗೆಯೇ ಈ ಫೋನ್ 8GB RAM ಸಾಮರ್ಥ್ಯದ ವೇರಿಯಂಟ್‌ ಮಾದರಿಯನ್ನು ಹೊಂದಿದೆ.

ಕ್ಯಾಮೆರಾ ಸ್ಪೆಷಲ್

ಕ್ಯಾಮೆರಾ ಸ್ಪೆಷಲ್

ವಿವೋ X50e 5G ಸ್ಮಾರ್ಟ್‌ಫೋನ್ ಒಟ್ಟು ನಾಲ್ಕು ಕ್ಯಾಮೆರಾಗಳ ಸೆಟ್‌ ಅಪ್ ಹೊಂದಿದೆ. ಮುಖ್ಯ ಕ್ಯಾಮೆರಾವು 48ಎಂಪಿ ಸೆನ್ಸಾರ್‌ ಸಾಮರ್ಥ್ಯದಲ್ಲಿದೆ. ಸೆಕೆಂಡರಿ ಕ್ಯಾಮೆರಾವು 13ಎಂಪಿ ಸೆನ್ಸಾರ್‌ನಲ್ಲಿದೆ. ಉಳಿದಂತೆ ತೃತೀಯ ಹಾಗೂ ನಾಲ್ಕನೇ ಕ್ಯಾಮೆರಾಗಳು ಕ್ರಮವಾಗಿ 2ಎಂಪಿ ಸೆನ್ಸಾರ್‌ ಪಡೆದಿವೆ. ಇನ್ನು ಸೆಲ್ಫಿ ಕ್ಯಾಮೆರಾವು 32ಎಂಪಿ ಸೆನ್ಸಾರ್‌ನಲ್ಲಿದೆ.

ಬ್ಯಾಟರಿ ಪವರ್‌

ಬ್ಯಾಟರಿ ಪವರ್‌

ವಿವೋ X50e 5G ಸ್ಮಾರ್ಟ್‌ಫೋನ್ 4,350mAh ಸಾಮರ್ಥ್ಯದ ಬ್ಯಾಟರಿ ಬಾಳಿಕೆಯನ್ನು ಪಡೆದುಕೊಂಡಿದೆ. ಹಾಗೆಯೇ 33W ಫ್ಲ್ಯಾಶ್ ಚಾರ್ಜ್ ಫಾಸ್ಟ್ ಚಾರ್ಜಿಂಗ್‌ಗೆ ಬೆಂಬಲಿಸುತ್ತದೆ. 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಮತ್ತು ಎನ್‌ಎಫ್‌ಸಿ ಬೆಂಬಲವೂ ಇದೆ. ಇತರ ಸಂಪರ್ಕ ಆಯ್ಕೆಗಳಲ್ಲಿ ವೈ-ಫೈ 5, ಬ್ಲೂಟೂತ್ 5.1, ಮತ್ತು ಯುಎಸ್ಬಿ ಟೈಪ್-ಸಿ ಪೋರ್ಟ್ ಸೇರಿವೆ. ಇದು ಅಂಡರ್-ಡಿಸ್ಪ್ಲೇ ಫಿಂಗರ್ಪ್ರಿಂಟ್ ಸೆನ್ಸಾರ್‌ ಹೊಂದಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ವಿವೋ X50e 5G ಸ್ಮಾರ್ಟ್‌ಫೋನ್ 8GB + 128GB ವೇರಿಯಂಟ್ ದರವು ತೈವಾನ್‌ನಲ್ಲಿ TWD 13,990 ಆಗಿದೆ. (ಭಾರತದಲ್ಲಿ ಅಂದಾಜು 35,600ರೂ).

Best Mobiles in India

English summary
Vivo X50e 5G comes with a quad rear camera setup that comprises a 48-megapixel primary shooter.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+