Home
ಸುದ್ದಿಜಾಲ

ವಿವೋ X50 5G ಸ್ಮಾರ್ಟ್‌ಫೋನ್‌ ಅನಾವರಣ!..ಕ್ವಾಡ್‌ ಕ್ಯಾಮೆರಾ ವಿಶೇಷ!

ವಿವೋ ಮೊಬೈಲ್ ಕಂಪೆನಿಯು ಇತ್ತೀಗಷ್ಟೇ ವಿವೋ X50 ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿ ಗಮನ ಸೆಳೆದಿತ್ತು. ಇದೀಗ ವಿವೋ ಹೊಸದಾಗಿ ವಿವೋ X50 5G ಸ್ಮಾರ್ಟ್‌ಫೋನ್‌ ಅನ್ನು ಲಾಂಚ್ ಮಾಡಿದೆ. ಈ ಸ್ಮಾರ್ಟ್‌ಫೋನ್ ಕ್ವಾಡ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದಿದ್ದು, ಸ್ನ್ಯಾಪ್‌ಡ್ರಾಗನ್‌ 765G ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ.

ವಿವೋ X505G

ಹೌದು, ವಿವೋ ಸಂಸ್ಥೆಯು ವಿವೋ X505G ಸ್ಮಾರ್ಟ್‌ಫೋನ್‌ ಅನ್ನು ಯುರೋಪ್‌ನಲ್ಲಿ ಅನಾವರಣ ಮಾಡಿದೆ. ಫ್ಲ್ಯಾಟ್‌ ಅಲ್ಟ್ರಾ O ಸ್ಕ್ರೀನ್‌ ಹೊಂದಿದ್ದು, 90Hz ರೀಫ್ರೇಶ್‌ ರೇಟ್‌ ಅನ್ನು ಪಡೆದುಕೊಂಡಿದೆ. 8GB + 256GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆಯನ್ನು ಹೊಂದಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಬೆಲೆ ಎಷ್ಟು ಮತ್ತು ಯಾವೆಲ್ಲಾ ಫೀಚರ್ಸ್‌ ಹೊಂದಿದೆ ಎಂಬುದನ್ನು ಮುಂದಿನ ಸ್ಲೈಡರ್‌ಗಳಲ್ಲಿ ಓದಿರಿ.

ಡಿಸ್‌ಪ್ಲೇ ರಚನೆ

ಡಿಸ್‌ಪ್ಲೇ ರಚನೆ

ವಿವೋ X50 5G ಸ್ಮಾರ್ಟ್‌ಫೋನ್‌ 1080x2376 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯ ಹೊಂದಿರುವ 6.56 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನ ಹೊಂದಿದೆ. ಡಿಸ್‌ಪ್ಲೇಯು ಫ್ಲ್ಯಾಟ್‌ ಅಲ್ಟ್ರಾ O ಸ್ಕ್ರೀನ್‌ ರಚನೆಯನ್ನು ಪಡೆದಿದೆ. ಇನ್ನು ಡಿಸ್‌ಪ್ಲೇಯು 90Hz ರಿಫ್ರೆಶ್ ರೇಟ್‌ ಅನ್ನು ಹೊಂದಿದ್ದು, 180Hz ಟಚ್‌ ರೆಸ್ಪಾನ್ಸ್‌ ರೇಟ್ ಒಳಗೊಂಡಿದೆ. ಹಾಗೆಯೇ HDR 10+ ಸಪೋರ್ಟ್‌ ಸಹ ಪಡೆದುಕೊಂಡಿದೆ.

ಪ್ರೊಸೆಸರ್‌ ಕಾರ್ಯ

ಪ್ರೊಸೆಸರ್‌ ಕಾರ್ಯ

ವಿವೋ X50 5G ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನ್ಯಾಪ್‌ಡ್ರಾಗನ್ 765G SoC ಪ್ರೊಸೆಸರ್ ಹೊಂದಿದೆ. ಪೂರಕವಾಗಿ ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. 8GB RAM + 256GB ಆಂತರಿಕ ಸಂಗ್ರಹ ಸಾಮರ್ಥ್ಯ ಹೊಂದಿದೆ. ಎಸ್‌ಡಿ ಕಾರ್ಡ್‌ ಮೂಲಕ ಮೆಮೊರಿ ವಿಸ್ತರಿಸುವ ಆಯ್ಕೆ ಇಲ್ಲ.

ಕ್ವಾಡ್ ಕ್ಯಾಮೆರಾ

ಕ್ವಾಡ್ ಕ್ಯಾಮೆರಾ

ವಿವೋ X50 5G ಸ್ಮಾರ್ಟ್‌ಫೋನ್‌ ಕ್ವಾಡ್ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿದ್ದು. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೋನಿ IMX598 ಸೆನ್ಸಾರ್‌ ಪಡೆದಿದೆ. ಎರಡನೇ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೂಪರ್ ವೈಲ್ಡ್‌ ಆಂಗಲ್ ಲೆನ್ಸ್‌ ಹೊಂದಿದೆ. ಮೂರನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್ ಮತ್ತು ನಾಲ್ಕನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇನ್ನು ಸೆಲ್ಫಿ ಕ್ಯಾಮೆರಾ 32 ಮೆಗಾಪಿಕ್ಸೆಲ್ ಸೆನ್ಸಾರ್‌ ನೀಡಲಾಗಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ವಿವೋ X50 5G ಸ್ಮಾರ್ಟ್‌ಫೋನ್‌ 4,315mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಹೊಂದಿದ್ದು, ಇದು 33W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್, ಹಾಟ್‌ಸ್ಪಾಟ್‌, ವೈಫೈ, ಡಿಸ್‌ಪ್ಲೇಯಲ್ಲಿ ಫಿಂಗರ್‌ಪ್ರಿಂಟ್ ಸೆನ್ಸಾರ್, ಜಿಪಿಎಸ್‌, 3.5mm ಆಡಿಯೊ ಜ್ಯಾಕ್‌ಗೆ ಬೆಂಬಲ ನೀಡಲಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ವಿವೋ X50 5G ಸ್ಮಾರ್ಟ್‌ಫೋನ್‌ 8GB RAM + 256GB ವೇರಿಯಂಟ್ ಬೆಲೆಯು GBP 749 (ಅಂದಾಜು 71,900). ಅಲ್ಫಾ ಗ್ರೇ ಬಣ್ಣದ ಆಯ್ಕೆಯಲ್ಲಿ ಲಭ್ಯವಾಗಲಿದೆ. ಭಾರತೀಯ ಮಾರುಕಟ್ಟೆಯ ಲಭ್ಯತೆಯ ಬಗ್ಗೆ ಮಾಹಿತಿ ಹೊರಹಾಕಿಲ್ಲ.

Best Mobiles in India

English summary
Vivo X51 5G has been launched as the company's flagship 5G offering in the Europe.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+