ವಿವೋ X60 ಸ್ಮಾರ್ಟ್‌ಫೋನ್ ಬೆಲೆಯಲ್ಲಿ ಭರ್ಜರಿ ಇಳಿಕೆ!
ವಿವೋ ಕಂಪೆನಿ ಇತ್ತೀಚಿಗಷ್ಟೆ ಬಿಡುಗಡೆ ಮಾಡಿರುವ ವಿವೋ X60 ಸ್ಮಾರ್ಟ್‌ಫೋನ್ ಆಕರ್ಷಕ ಫೀಚರ್ಸ್‌ಗಳಿಂದ ಗ್ರಾಹಕರನ್ನು ಸೆಳೆದಿದೆ. ಇದೀಗ ಈ ಸ್ಮಾರ್ಟ್‌ಫೋನ್ ಬೆಲೆಯಲ್ಲಿ ಭರ್ಜರಿ ಇಳಿಕೆ ಆಗಿದ್ದು, ಗ್ರಾಹಕರನ್ನು ಆಕರ್ಷಿಸಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದ್ದು, ಮುಖ್ಯ ಕ್ಯಾಮೆರಾವು 48ಎಂಪಿ ಸೆನ್ಸಾರ್‌ನಲ್ಲಿದೆ. ಹಾಗೆಯೇ ಸ್ನ್ಯಾಪ್‌ಡ್ರಾಗನ್ 870 SoC ನಲ್ಲಿ ಕಾರ್ಯನಿರ್ವಹಿಸಲಿದೆ.

ಹೌದು, ವಿವೋ ಸ್ಮಾರ್ಟ್‌ಫೋನ್ ಕಂಪೆನಿ ತನ್ನ ವಿವೋ X60 ಸ್ಮಾರ್ಟ್‌ಫೋನ್ ಬೆಲೆಯಲ್ಲಿ 3,000ರೂ. ಕಡಿತವಾಗಿದೆ. ಈ ಪೋನಿನ 8GB RAM + 128GB ವೇರಿಯಂಟ್ ದರವು 37,990ರೂ. ಆಗಿತ್ತು. ಆದರೆ ಬೆಲೆ ಇಳಿಕೆಯಿಂದ ಇದೀಗ 34,990ರೂ.ಗಳಿಗೆ ಇಳಿಕೆ ಕಂಡಿದೆ. ಹಾಗೆಯೇ 8GB RAM ಮತ್ತು 256GB ವೇರಿಯಂಟ್ ಫೋನ್ ಬೆಲೆ ಇಳಿಕೆ ಕಂಡಿದ್ದು, 39,990ರೂ.ಗಳಿಗೆ ಲಭ್ಯವಾಗಲಿದೆ. ಹಾಗಾದರೇ ವಿವೋ X60 ಸ್ಮಾರ್ಟ್‌ಫೋನಿನ ಇತರೆ ಫೀಚರ್ಸ್‌ಗಳೆನು ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ವಿವೋ X60- ಡಿಸ್‌ಪ್ಲೇ
ವಿವೋ X60 ಫೋನ್ 1,080x2,376 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.56 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್ AMOLED ಡಿಸ್‌ಪ್ಲೇ ಹೊಂದಿದೆ. ಡಿಸ್‌ಪ್ಲೇಯ ಅನುಪಾತವು 19.8:9 ಆಗಿದ್ದು, ಡಿಸ್‌ಪ್ಲೇಯು 120Hz ರೀಫ್ರೇಶ್ ರೇಟ್ ಪಡೆದಿದೆ.

ವಿವೋ X60- ಪ್ರೊಸೆಸರ್
ವಿವೋ X60 ಫೋನ್ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 870 SoC ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ ಓಎಸ್ ಸಪೋರ್ಟ್ ಪಡೆದಿದೆ. ಇದರೊಂದಿಗೆ 8GB + 128GB ಮತ್ತು 12GB RAM + 256GB ವೇರಿಯಂಟ್ ಆಯ್ಕೆಯನ್ನು ಒಳಗೊಂಡಿದೆ.

ವಿವೋ X60- ಕ್ಯಾಮೆರಾ
ವಿವೋ X60 ಫೋನ್ ಟ್ರಿಪಲ್ ಕ್ಯಾಮೆರಾ ರಚನೆಯನ್ನು ಪಡೆದಿದ್ದು, ಮುಖ್ಯ ಕ್ಯಾಮೆರಾವು 48 ಎಂಪಿ ಸೆನ್ಸಾರ್‌ನಲ್ಲಿದೆ. ಸೆಕೆಂಡರಿ ಹಾಗೂ ತೃತೀಯ ಕ್ಯಾಮೆರಾಗಳು ಕ್ರಮವಾಗಿ 13 ಎಂಪಿ ಸೆನ್ಸಾರ್ ಸಾಮರ್ಥ್ಯವನ್ನು ಪಡೆದಿವೆ. ಇನ್ನು ಸೆಲ್ಫಿ ಕ್ಯಾಮೆರಾವು 32 ಎಂಪಿ ಸೆನ್ಸಾರ್ ಸಾಮರ್ಥ್ಯವನ್ನು ಒಳಗೊಂಡಿದೆ.

ವಿವೋ X60- ಬ್ಯಾಟರಿ
ವಿವೋ X60 ಫೋನ್ 4,300mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಪಡೆದುಕೊಂಡಿದೆ. ಇದಕ್ಕೆ ಪೂರಕವಾಗಿ 33W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ವ್ಯವಸ್ಥೆಯನ್ನು ಒಳಗೊಂಡಿದೆ.

ಬೆಲೆ ಎಷ್ಟು?
ವಿವೋ X60 ಫೋನಿನ ಬೆಲೆಯಲ್ಲಿ 3,000ರೂ. ಇಳಿಕೆ ಆಗಿದೆ. 8GB + 128GB ವೇರಿಯಂಟ್ ಫೋನಿನ ಬೆಲೆಯು ಭಾರತದಲ್ಲಿ 34,990 ರೂ. ಆಗಿದೆ. ಇನ್ನು 12GB + 256GB ವೇರಿಯಂಟ್ ದರವು 39,990.ರೂ. ಆಗಿದೆ.


Click it and Unblock the Notifications



